Editor

ಶೋಭಿತಾ ಜೊತೆ ನಾಗ ಚೈತನ್ಯ ಎಂಗೇಜ್ಮೆಂಟ್: ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಂಡ್ರಾ ನಟ..?

ಸಮಗ್ರ ನ್ಯೂಸ್: ಟಾಲಿವುಡ್ ನಟ ನಾಗ ಚೈತನ್ಯ ಅವರು ಇದೀಗ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇಷ್ಟು ದಿನ ಗುಟ್ಟಾಗಿ ಡೇಟಿಂಗ್ ಮಾಡುತ್ತಿದ್ದ ಶೋಭಿತಾ ಹಾಗೂ ನಾಗ ಚೈತನ್ಯ ಅವರು ಆಗಸ್ಟ್ 8ರಂದು ಎಂಗೇಜ್ ಆದರು. ಆ ಮೂಲಕ ನಾಗ ಚೈತನ್ಯ ಅವರು ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಈ ಮೊದಲು ಸಮಂತಾ ರುತ್ ಪ್ರಭು ಜೊತೆ ನಾಗ ಚೈತನ್ಯ ಮದುವೆ ಆಗಿದ್ದರು. ಆದರೆ ಸಂಸಾರದಲ್ಲಿ ಬಿರುಕು ಮೂಡಿದ್ದರಿಂದ ಅವರು ವಿಚ್ಛೇದನ ಪಡೆದರು. ಇವರಿಬ್ಬರೂ ಕೆಲ ವರ್ಷಗಳ ಹಿಂದೆ ‘ಏ […]

ಶೋಭಿತಾ ಜೊತೆ ನಾಗ ಚೈತನ್ಯ ಎಂಗೇಜ್ಮೆಂಟ್: ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಂಡ್ರಾ ನಟ..? Read More »

ಮದುವೆಗೆ ಮನೆಯಲ್ಲಿ ವಿರೋಧ: ನೇಣುಬಿಗಿದುಕೊಂಡ ಪ್ರೇಮಿಗಳು

ಸಮಗ್ರ ನ್ಯೂಸ್: ಮದುವೆಗೆ ಮನೆಯಲ್ಲಿ ಒಪ್ಪಲಿಲ್ಲವೆಂದು ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ನಡೆದಿದೆ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳು. ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಸಾವಿನ ಹಾದಿ ಹಿಡಿದಿದೆ. ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ

ಮದುವೆಗೆ ಮನೆಯಲ್ಲಿ ವಿರೋಧ: ನೇಣುಬಿಗಿದುಕೊಂಡ ಪ್ರೇಮಿಗಳು Read More »

ನಾಗರ ಪಂಚಮಿ ದಿನವೇ ಹಾವು ಕಚ್ಚಿ ಬಾಣಂತಿ ಸಾವು

ಸಮಗ್ರ ನ್ಯೂಸ್: ಇಂದು ನಾಗರ ಪಂಚಮಿ ಹಬ್ಬ ಆದರೆ ಈ ಹಬ್ಬದಂದೇ ಹಾವು ಕಚ್ಚಿ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಗದ್ದೆಯಲ್ಲಿ ಮೇವು ತರಲು ತೆರಳಿದ್ದ ವೇಳೆ ಹಾವು ಕಚ್ಚಿದ್ದರಿಂದ ಈ ದುರಂತ ಸಂಭವಿಸಿದೆ. ರಂಜಿತಾ (22) ಮೃತಪಟ್ಟ ಯುವತಿ. ಮೇವು ತರಲು ಹೋಗಿದ್ದ ವೇಳೆ ಪೊದೆಯಲ್ಲಿದ್ದ ಹಾವು, ಬಾಣಂತಿಗೆ ಕಚ್ಚಿದೆ. ಆದರೆ, ಈ ಬಗ್ಗೆ ಯುವತಿ ಗಮನಕ್ಕೆ ಬಂದಿಲ್ಲ. ಕೆಲಹೊತ್ತಿನ ಬಳಿಕ ಕುಟುಂಬಸ್ಥರು ನೋಡಿದಾಗ ಗದ್ದೆಯಲ್ಲಿ ರಂಜಿತಾ

ನಾಗರ ಪಂಚಮಿ ದಿನವೇ ಹಾವು ಕಚ್ಚಿ ಬಾಣಂತಿ ಸಾವು Read More »

ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು: ಬೆಳಗಾವಿ ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಗೋವಾದ ವಾಸ್ಕೋದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ 11 ಬೋಗಿಗಳು ನೆಲಕ್ಕುರುಳಿ ಕಲ್ಲಿದ್ದಲು ವ್ಯರ್ಥವಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಬೆಳಗಾವಿ, ಹುಬ್ಬಳ್ಳಿ ಮಾರ್ಗದ ರೈಲು ಸಂಚಾರ ಸಮಯ ಬದಲಾಗಿದೆ. ಗೋವಾ ಮೂಲಕ ಸಂಚರಿಸುವ ಎರಡು ಟ್ರೈನ್ ಗಳ ಸಂಚಾರ ಬಂದ್ ಆಗಿದೆ.

ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು: ಬೆಳಗಾವಿ ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ Read More »

ಉಡುಪಿ: ಪಂಚಮಿ ದಿನ ಜೀವಂತ ನಾಗನಿಗೆ ತನು ಎರೆದು ಪೂಜೆ

ಸಮಗ್ರ ನ್ಯೂಸ್: ಇಂದು ರಾಜ್ಯದೆಲ್ಲಡೆ ನಾಗರಪಂಚಮಿ ಸಂಭ್ರಮ, ನಾಗರಪಂಚಮಿಯಂದು ಕರಾವಳಿಯಲ್ಲಿ ನಾಗನ ಕಲ್ಲಿಗೆ ಹಾಲೆರೆದು ಪೂಜಿಸಲಾಗುತ್ತದೆ. ಕೆಲವು ಕಡೆಗಳಲ್ಲಿ ನಾಗನ ಹುತ್ತಕ್ಕೆ ಹಾಲೆರೆದು ನಾಗರಪಂಚಮಿಯನ್ನು ಆಚರಿಸುತ್ತಾರೆ ಆದರೆ. ಇಲ್ಲಿ ಕಾಪುವಿನ ಮಲ್ಲಾರು ನಿವಾಸಿ ಗೋವರ್ಧನ್ ಭಟ್ ಜೀವಂತ ಹಾವಿಗೆ ತನು ಎರೆಯುವುದರ ಮೂಲಕ ನಾಗರಪಂಚಮಿಯನ್ನು ಬಹಳ ವೈಶಿಷ್ಟ್ಯದಿಂದ ಆಚರಿಸಿ ತಮ್ಮ ಇಷ್ಟಾರ್ಥ ನೆರೆವೇರಿಸುವಂತೆ ಪ್ರಾರ್ಥನೆ ಸಲ್ಲಿಸುತ್ತಾರೆ. ಮಜೂರು ಮಲ್ಲಾರಿನ ಗೋವರ್ಧನ್ ಭಟ್ ಅವರು ಹಾವುಗಳ ರಕ್ಷಣೆ ಮಾಡುತ್ತಾರೆ. ಕಾಪು ಪರಿಸರದಲ್ಲಿ ಚಿರಪರಿಚಿತರು. ಈ ಪರಿಸರದಲ್ಲಿ ಎಲ್ಲೆ ಹಾವುಗಳೂ

ಉಡುಪಿ: ಪಂಚಮಿ ದಿನ ಜೀವಂತ ನಾಗನಿಗೆ ತನು ಎರೆದು ಪೂಜೆ Read More »

ಪುರುಷತ್ವ ಪ್ರದರ್ಶಿಸಿದರೆ 2.5 ಕೋಟಿ ನೀಡಲಾಗುವುದು| ಅನರ್ಹಗೊಂಡ ಪ್ರಾನ್ಸ್ ಅಥ್ಲೀಟ್ ಗೆ ಪೋರ್ನ್ ಕಂಪನಿ ಬಿಗ್ ಆಫರ್| ಅಷ್ಟಕ್ಕೂ ಅಂಥಾ‌ ಆಫರ್ ನೀಡಿದ್ಯಾಕೆ ಗೊತ್ತಾ?

ಸಮಗ್ರ ನ್ಯೂಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡಿರುವ ಫ್ರಾನ್ಸ್ ಅಥ್ಲೀಟ್ ಅಂಥೋನಿ ಅಮ್ಮಿರತಿ ಪೋರ್ನ್ ವೆಬ್‌ಸೈಟ್ 2.09 ಕೋಟಿ ರೂಪಾಯಿ ಬಿಗ್ ಆಫರ್ ನೀಡಲಾಗಿದೆ ಎಂದು ವರದಿಯಾಗಿದೆ. ಅಂಥೋನಿ ಅಮ್ಮಿರತಿ ಪೋಲ್‌ವಾಲ್ಟ್ ಅಥ್ಲೀಟ್‌ ಆಗಿದ್ದು, ಕ್ವಾಲಿಫೈರ್‌ ಆಟದಲ್ಲಿ ಅನರ್ಹಗೊಂಡಿದ್ದಾರೆ. ಅಮ್ಮಿರತಿ ಆಟ ಆಡುವಾಗ ಪೋಲ್‌ ಬಾರ್‌ಗೆ ಅವರ ಗುಪ್ತಾಂಗ ತಾಗಿದ್ದರಿಂದ ಆಟದಿಂದ ಅನರ್ಹಗೊಂಡಿದ್ದರು. ಅಂಥೋನಿ ಅಮ್ಮಿರತಿ ಅನರ್ಹಗೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಈ ವಿಡಿಯೋ ವೈರಲ್ ಬೆನ್ನಲ್ಲೇ ಪೋರ್ನ್ ವೆಬ್‌ಸೈಟ್‌ನಿಂದ ಕೋಟಿ ಕೋಟಿಯ

ಪುರುಷತ್ವ ಪ್ರದರ್ಶಿಸಿದರೆ 2.5 ಕೋಟಿ ನೀಡಲಾಗುವುದು| ಅನರ್ಹಗೊಂಡ ಪ್ರಾನ್ಸ್ ಅಥ್ಲೀಟ್ ಗೆ ಪೋರ್ನ್ ಕಂಪನಿ ಬಿಗ್ ಆಫರ್| ಅಷ್ಟಕ್ಕೂ ಅಂಥಾ‌ ಆಫರ್ ನೀಡಿದ್ಯಾಕೆ ಗೊತ್ತಾ? Read More »

ಚಿಲ್ಲರೆ ಕೊಡದೆ ಪ್ರಯಾಣಿಕನ ಮೇಲೆ ಹಲ್ಲೆ.. ಕಂಡಕ್ಟರ್ ಸಸ್ಪೆಂಡ್

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರಿಗೆ 5 ರೂ. ಚಿಲ್ಲರೆ ಕೊಡದೆ, ಅವರ ಮೇಲೆಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಬಿಎಂಟಿಸಿ ಬಸ್‌ ಕಂಡಕ್ಟರ್‌ನನ್ನು ಅಮಾನತುಗೊಳಿಸಿದೆ. ಈ ಕುರಿತು ಬಿಎಂಟಿಸಿ ಆದೇಶ ಹೊರಡಿಸಿ ಪ್ರಕಟಣೆ ತಿಳಿಸಿದೆ. ಬಿಎಂಟಿಸಿ ಬಸ್‌ನಲ್ಲಿ ಅಭಿನವ್‌ ರಾಜ್‌ ಎಂಬ ಯುವಕ ಪ್ರಯಾಣಿಸುತ್ತಿದ್ದರು. ಅವರು 15 ರೂ. ಟಿಕೆಟ್‌ಗೆ 20 ರೂ. ನೀಡಿದ್ದರು. 5 ರೂ. ಚಿಲ್ಲರೆ ವಾಪಸ್‌ ಕೇಳಿದಾಗ ಪ್ರಯಾಣಿಕನ ಮೇಲೆ ಕಂಡಕ್ಟರ್‌ ರೇಗಾಡಿದ್ದಾರೆ.

ಚಿಲ್ಲರೆ ಕೊಡದೆ ಪ್ರಯಾಣಿಕನ ಮೇಲೆ ಹಲ್ಲೆ.. ಕಂಡಕ್ಟರ್ ಸಸ್ಪೆಂಡ್ Read More »

2025ರವರೆಗೆ ಬಾಹ್ಯಾಕಾಶದಲ್ಲೆ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌.. ನಾಸಾದಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರು ಬಾಹ್ಯಾಕಾಶದಲ್ಲೆ ಸಿಲುಕಿದ್ದಾರೆ ಎಂಬ ವರದಿಗಳು ಈ ಹಿಂದೆ ಬಂದಿತ್ತು. ಆದರೆ ಇದೀಗ ನಾಸಾ ಇನ್ನೊಂದು ಅಧೀಕೃತ ಮಾಹಿತಿಯೊಂದನ್ನು ನೀಡಿದೆ. ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಂಡ ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ ಅವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ ಎಂದು ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ (NASA) ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ

2025ರವರೆಗೆ ಬಾಹ್ಯಾಕಾಶದಲ್ಲೆ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌.. ನಾಸಾದಿಂದ ಸ್ಪಷ್ಟನೆ Read More »

ಸಹಕಾರ ಸಂಘಗಳ ಸಿಬ್ಬಂದಿ ನೇಮಕಾತಿ, ವರ್ಗಾವಣೆ ಪ್ರಕ್ರಿಯೆ ಸರ್ಕಾರದ ಕೈಲಿಲ್ಲ| ಹೈಕೋರ್ಟ್ ಮಹತ್ವದ ಆದೇಶ

ಸಮಗ್ರ ನ್ಯೂಸ್: ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿ, ವರ್ಗಾವಣೆ ಹಾಗೂ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಸಹಕಾರ ಸಂಘಗಳು ಹೊಂದಿದ್ದ ಅಧಿಕಾರ ಮೊಟಕುಗೊಳಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿಯನ್ನು ಅಸಂವಿಧಾನಿಕವೆಂದು ಘೋಷಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಿದ್ದುಪಡಿ ನಿಯಮ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಹಕಾರ ಕೃಷಿ ಸಂಸ್ಥೆಯ ಹಾಲಿ ಅಧ್ಯಕ್ಷ ಕೆ.ವಿ. ಪ್ರಸಾದ್ ಸೇರಿದಂತೆ 50ಕ್ಕೂ ಹೆಚ್ಚು ಸಹಕಾರ ಸಂಘಗಳು ಸಲ್ಲಿಸಿದ್ದ

ಸಹಕಾರ ಸಂಘಗಳ ಸಿಬ್ಬಂದಿ ನೇಮಕಾತಿ, ವರ್ಗಾವಣೆ ಪ್ರಕ್ರಿಯೆ ಸರ್ಕಾರದ ಕೈಲಿಲ್ಲ| ಹೈಕೋರ್ಟ್ ಮಹತ್ವದ ಆದೇಶ Read More »

12 ದಿನಗಳ ಬಳಿಕ ಮಂಗಳೂರು – ಬೆಂಗಳೂರು ರೈಲು ಸಂಚಾರ ಪುನರಾರಂಭ| ಪೂರ್ಣಗೊಂಡ ಮಾರ್ಗ ದುರಸ್ತಿ ಕಾರ್ಯ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರೈಲು ಮಾರ್ಗದ ಎಡಕುಮೇರಿ -ಕಡಗರವಳ್ಳಿ ನಡುವಣ ದೋಣಿಗಲ್‌ನಲ್ಲಿ ಭೂಕುಸಿತ ನಡೆದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಸುಮಾರು 12 ದಿನಗಳ ಬಳಿಕ ಗುರುವಾರದಿಂದ ರೈಲು ಸಂಚಾರ ಪುನರಾರಂಭಗೊಂಡಿದೆ. ಭಾರೀ ಮಳೆಯಿಂದಾಗಿ ಕಡಗರವಳ್ಳಿ ಮತ್ತು ಯಡಕುಮೇರಿ ನಡುವಿನ ರೈಲು ಮಾರ್ಗದ ಕೆಳಬದಿಯಲ್ಲಿ ಭೂಕುಸಿತವಾಗಿತ್ತು, ರೈಲ್ವೆ ಇಲಾಖೆ ನಿರಂತರ ಮಳೆಯ ನಡುವೆಯೂ ಕ್ರಿಬ್‌ ಗೋಡೆ, ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿದೆ. ಆಗಸ್ಟ್ 4 ರಂದು ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ರೈಲಿನ

12 ದಿನಗಳ ಬಳಿಕ ಮಂಗಳೂರು – ಬೆಂಗಳೂರು ರೈಲು ಸಂಚಾರ ಪುನರಾರಂಭ| ಪೂರ್ಣಗೊಂಡ ಮಾರ್ಗ ದುರಸ್ತಿ ಕಾರ್ಯ Read More »