Editor

ರಾಜಣ್ಣ ಬಳಿಕ ರಾಜುಕಾಗೆಗೆ ಶಾಕ್ ನೀಡಿದ ಹೈಕಮಾಂಡ್| ವಾ.ಕ. ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕೊಕ್

ಸಮಗ್ರ ನ್ಯೂಸ್: ಸಹಕಾರ ಸಚಿವರಾಗಿದ್ದ ಕೆಎನ್ ರಾಜಣ್ಣರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಮತ್ತೋರ್ವ ಹಿರಿಯ ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಸಿಎಂ […]

ರಾಜಣ್ಣ ಬಳಿಕ ರಾಜುಕಾಗೆಗೆ ಶಾಕ್ ನೀಡಿದ ಹೈಕಮಾಂಡ್| ವಾ.ಕ. ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕೊಕ್ Read More »

ಬೆಂಗಳೂರಿನಲ್ಲಿ ನ್ಯಾಯ ಸಮಾವೇಶ| ಧರ್ಮಸ್ಥಳ ಸುತ್ತಮುತ್ತ 20 ವರ್ಷಗಳಲ್ಲಿ ನಡೆದ ಎಲ್ಲಾ ಪ್ರಕರಣಗಳ ತನಿಖೆಗೆ ಒತ್ತಾಯ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತ 20 ವರ್ಷಗಳಲ್ಲಿ ನಡೆದಿರುವ ಅತ್ಯಾಚಾರ, ಅಸಹಜ ಸಾವು, ಕೊಲೆ ಪ್ರಕರಣಗಳನ್ನು ಎಸ್‌ಐಟಿ ರಚನೆಯ ಸಂಬಂಧ ಹೊರಡಿಸಲಾದ ಆದೇಶದಲ್ಲಿ ಇರುವಂತೆಯೇ ಪೂರ್ಣ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ನೇತೃತ್ವದಲ್ಲಿ ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ‘ನ್ಯಾಯ ಸಮಾವೇಶ’ ನಡೆಯಿತು. ಪದ್ಮಲತಾ, ವೇದವಲ್ಲಿ, ಮಾವುತ ನಾರಾಯಣ, ಯಮುನಾ, ಸೌಜನ್ಯ ಕೊಲೆ ಪ್ರಕರಣಗಳು, ಭೂಕಬಳಿಕೆ, ಮೈಕ್ರೊ ಫೈನಾನ್ಸ್ ದೌರ್ಜನ್ಯಗಳು, ದಲಿತರ ಮೀಸಲು ಭೂಮಿ ಕಬಳಿಕೆ, ಆರ್ಥಿಕ ಅಪರಾಧದ ಆರೋಪ ಪ್ರಕರಣಗಳನ್ನು ಈಗ

ಬೆಂಗಳೂರಿನಲ್ಲಿ ನ್ಯಾಯ ಸಮಾವೇಶ| ಧರ್ಮಸ್ಥಳ ಸುತ್ತಮುತ್ತ 20 ವರ್ಷಗಳಲ್ಲಿ ನಡೆದ ಎಲ್ಲಾ ಪ್ರಕರಣಗಳ ತನಿಖೆಗೆ ಒತ್ತಾಯ Read More »

ಮಹೇಶ್ ಶೆಟ್ಟಿ ತಿಮರೋಡಿಗೆ ಒಂದು ವರ್ಷ ಗಡೀಪಾರು

ಸಮಗ್ರ ನ್ಯೂಸ್: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿಗೆ 1 ತಿಂಗಳು ಗಡಿಪಾರು ಮಾಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ತಿಮರೋಡಿಯನ್ನ ಗಡಿಪಾರು ಮಾಡಿ ಪುತ್ತೂರು AC ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ತಿಮರೋಡಿ ವಿರುದ್ಧ 32 ಕೇಸ್​ ಇರೋ ಹಿನ್ನೆಲೆಯಲ್ಲಿ 1 ವರ್ಷದ ಅವಧಿಗೆ ಮಾನ್ವಿಗೆ ಗಡಿಪಾರು ಮಾಡಲಾಗಿದೆ. ಸದ್ಯ ಎಲ್ಲಾ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು, ದ. ಕನ್ನಡ ಪೊಲೀಸರು ಮಹೇಶ್‌ ತಿಮರೋಡಿ

ಮಹೇಶ್ ಶೆಟ್ಟಿ ತಿಮರೋಡಿಗೆ ಒಂದು ವರ್ಷ ಗಡೀಪಾರು Read More »

ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ ₹200 ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ಮಲ್ಟಿಪ್ಲೆಕ್ಸ್‌ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡುವ ಕುರಿತಂತೆ ಮನವಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ಏಕ ಸದಸ್ಯ ಪೀಠ ಇಂದು ಈ ಕುರಿತು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ರಾಜ್ಯ ಸರ್ಕಾರ 200 ರೂಪಾಯಿ ಟಿಕೆಟ್ ದರ ನಿಗದಿ ಮಾಡಿತ್ತು. ಇದೀಗ ರಾಜ ಸರ್ಕಾರದ

ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ ₹200 ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಇಡೀ ಬಂಗ್ಲಗುಡ್ಡದಲ್ಲಿ ಎಸ್ಐಟಿಯಿಂದ ಶೋಧ ಕಾರ್ಯಾಚರಣೆ ಆರಂಭ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶೇಷಗಳಿವೆ ಎಂಬ ಹೇಳಿಕೆಗಳ ಹಿನ್ನೆಲೆಯಲ್ಲಿ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ಐಟಿ ಮುಂದಾಗಿದೆ. ಸಾಕ್ಷಿ ದೂರುದಾರ ಚಿನ್ನಯ್ಯ ಹಾಜರುಪಡಿಸಿದ್ದ ತಲೆಬುರುಡೆ ಇದೇ ಬಂಗ್ಲೆಗುಡ್ಡದಿಂದ ತಂದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇದಕ್ಕೆ ಸಂಬಂಧಿಸಿ ಸ್ಥಳ ಮಹಜರು ನಡೆಸಲು ತೆರಳಿದ ವೇಳೆ ಹಲವಾರು ಮೃತದೇಹಗಳ ಅವಶೇಷಗಳು ಇಲ್ಲಿ ಕಂಡುಬಂದಿರುವುದಾಗಿ ಸೌಜನ್ಯಾಳ ಮಾವ ವಿಠಲ ಗೌಡ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ

ಧರ್ಮಸ್ಥಳ ಬುರುಡೆ ಪ್ರಕರಣ| ಇಡೀ ಬಂಗ್ಲಗುಡ್ಡದಲ್ಲಿ ಎಸ್ಐಟಿಯಿಂದ ಶೋಧ ಕಾರ್ಯಾಚರಣೆ ಆರಂಭ Read More »

ಬಾನು ಮುಷ್ತಾಕ್ ರಿಂದ‌ ದಸರಾ ಉದ್ಘಾಟನೆ ವಿಚಾರ| ಮಾಜಿ ಸಂಸದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸಿಜೆ ವಿಭು ಬಖ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಸಲ್ಲಿಸಿದ ಪಿಐಎಲ್ ವಜಾಗೊಳಿಸಿದ್ದಾರೆ. ಇಂದು ಹೈ

ಬಾನು ಮುಷ್ತಾಕ್ ರಿಂದ‌ ದಸರಾ ಉದ್ಘಾಟನೆ ವಿಚಾರ| ಮಾಜಿ ಸಂಸದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ Read More »

ಪುತ್ತೂರು: ಹಿಂದೂ ಕಾರ್ಯಕರ್ತನ‌ ಮೇಲೆ ಹಲ್ಲೆ ಪ್ರಕರಣ| ಪುತ್ತಿಲ ಪರಿವಾರದ ಕೈವಾಡವಿಲ್ಲ – ಹಿಂಜಾವೇ ಸ್ಪಷ್ಟನೆ

ಸಮಗ್ರ ನ್ಯೂಸ್: ಪುತ್ತೂರಿನ ದರ್ಬೆ ವೃತ್ತದ ಬಳಿ ಹಿಂದೂ ಜಾಗರಣ ವೇದಿಕೆ ಮುಖಂಡರೊಬ್ಬರಿಗೆ ಪುತ್ತಿಲ ಪರಿವಾರದ ಮುಖಂಡನಿಗೆ ಹಲ್ಲೆ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಿಂದೂ ಜಾಗರಣ ವೇದಿಕೆ ಮುಖಂಡರು ಸ್ಪಷ್ಟನೆ ನೀಡಿದ್ದಾರೆ. ಈ ಹಲ್ಲೆ ನಡೆದಿರುವ ಹಿಂದೆ ಬಿಜೆಪಿ ಮತ್ತು ಪುತ್ತಿಲ ಪರಿವಾರದ ಕೈವಾಡವಿಲ್ಲ ಎಂದಿದ್ದಾರೆ. ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಹಿಂದೂ ಜಾಗರಣ ವೇದಿಕೆ ಈ ಹಲ್ಲೆ ವೈಯುಕ್ತಿಕ ವಿಚಾರವಾಗಿ ನಡೆದಿದೆ ಎಂದು ಪುತ್ತಿಲ ಪರಿವಾರದ ಮುಖಂಡರಿಂದ ಸ್ಪಷ್ಟನೆ ನೀಡಿದ್ದಾರೆ. ವಾಟ್ಸಪ್ ಗ್ರೂಪ್ ಗಳಲ್ಲಿ ಹಿಂದೂ

ಪುತ್ತೂರು: ಹಿಂದೂ ಕಾರ್ಯಕರ್ತನ‌ ಮೇಲೆ ಹಲ್ಲೆ ಪ್ರಕರಣ| ಪುತ್ತಿಲ ಪರಿವಾರದ ಕೈವಾಡವಿಲ್ಲ – ಹಿಂಜಾವೇ ಸ್ಪಷ್ಟನೆ Read More »

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ| ಗೆಲುವನ್ನು ಪೆಹಲ್ಗಾಮ್ ಸಂತ್ರಸ್ತರಿಗೆ ಅರ್ಪಿಸಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಭಾರೀ ವಿರೋಧದ ನಡುವೆಯೂ ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಷ್ಯಾ ಕಪ್ 2025 ರ 6ನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವನ್ನು ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಹಲ್ಗಾಂ ಉಗ್ರರ ದಾಳಿಯ ಸಂತ್ರಸ್ತರು ಮತ್ತು ಭಾರತೀಯ ಸೇನೆಗೆ ಅರ್ಪಿಸಿದ್ದಾರೆ. 128 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಭಾರತ, ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 31 ರನ್ ಗಳಿಸುವುದರೊಂದಿಗೆ ಅಬ್ಬರದ ಆರಂಭವನ್ನು

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ| ಗೆಲುವನ್ನು ಪೆಹಲ್ಗಾಮ್ ಸಂತ್ರಸ್ತರಿಗೆ ಅರ್ಪಿಸಿದ ಟೀಂ ಇಂಡಿಯಾ Read More »

ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್| ಮಹೇಶ್ ವಿಕ್ರಂ ಹೆಗ್ಡೆ ಬಂಧನ

ಸಮಗ್ರ ನ್ಯೂಸ್: ಪೋಸ್ಟ್ ಕಾರ್ಡ್ ಸುದ್ದಿ ವಾಹಿನಿಯ ಸಂಸ್ಥಾಪಕರಾದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧನ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕೆ, ಮಹೇಶ್ ಅವರನ್ನು ಮೂಡಬಿದಿರೆ ಪೋಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಮೂಡಬಿದಿರೆ ಪಿಎಸ್‌ಐ ಕೃಷ್ಣಪ್ಪ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದ್ದು, ಸೋಮವಾರದವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಮಹೇಶ್ ಅವರು ಸಿಎಂ ಸಿದ್ದರಾಮಯ್ಯ ಅವರ ಫೋಟೋ ಹಾಕಿ ಎಡಿಟ್ ಮಾಡಿ, ಮಾನ್ಯ ಮುಖ್ಯಮಂತ್ರಿಗಳೇ 1

ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್| ಮಹೇಶ್ ವಿಕ್ರಂ ಹೆಗ್ಡೆ ಬಂಧನ Read More »

ಡಾ. ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಮರಣೋತ್ತರ ‌’ಕರ್ನಾಟಕ‌ ರತ್ನ’ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ಸಾಹಸ ಸಿಂಹ ದಿ.ವಿಷ್ಣುವರ್ಧನ್ ಅವರಿಗೆ ಹಾಗೂ ಅಭಿನಯ ಸರಸ್ವತಿ ದಿ.ನಟಿ ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ನಟ ವಿಷ್ಣು ವರ್ಧನ್ ಅವರಿಗೆ ಹಾಗೂ ನಟಿ ಬಿ,ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. ಇದೇ ವೇಳೆ

ಡಾ. ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಮರಣೋತ್ತರ ‌’ಕರ್ನಾಟಕ‌ ರತ್ನ’ ಪ್ರಶಸ್ತಿ ಘೋಷಣೆ Read More »