ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಗಲಭೆಗಳಲ್ಲಿ ಭಾಗಿಯಾಗಿಲ್ಲವೆಂದು 13 ಮಂದಿಯಿಂದ ಕಲ್ಕುಡ ದೇವಸ್ಥಾನದಲ್ಲಿ ಪ್ರಾರ್ಥನೆ
ಸಮಗ್ರ ನ್ಯೂಸ್: ಎರಡು ವರ್ಷದ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ಅನಂತರದ ಯಾವುದೇ ಗಲಭೆಗಳಲ್ಲಿ ನಾವು ಭಾಗಿಯಾಗಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು 13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಜು. 22ರಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಂದಕುಮಾರ್, ಕಮಲಾಕ್ಷ, ಅರುಣ್ ರೈ, ಪದ್ಮನಾಭ ತಡಗಜೆ, ಪ್ರಶಾಂತ್, ಆನಂದ ಯು., ಧರ್ಮಪಾಲ, ಚಿದಾನಂದ ಬಾಳಿಲ, ಹರೀಶ್ ಬಾಳಿಲ, ಡಿಪಿನ್ ಎಡಮಂಗಲ, ಶಿವಾನಂದ, ಹರ್ಷಿತ್, ನಿತೀಶ್ ಕೆ. ಅವರ ಮೇಲೆ ಕೇಸು ದಾಖಲಿಸಲಾಗಿತ್ತು. […]










