ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಇಂದು(ಜು.18) ದ.ಕ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆಯೂ ವ್ಯಾಪಕ ಮಳೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ೫ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು ಸೇರಿದಂತೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, […]








