Editor

ಹೇಮಾವತಿ ನದಿಗೆ ಬಿದ್ದ ಕಾರು|ಇಬ್ಬರು ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್: ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ನೇರವಾಗಿ ಬಿದ್ದಿದೆ. ಕಾರು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮಳೆಗೆ ತಿರುವು ಕಾಣದೇ ಕೆಳಕ್ಕೆ ಹಳ್ಳಕ್ಕೆ ಬಿದ್ದಿದೆ. ಈ ಹೆದ್ದಾರಿಯಲ್ಲಿ ನೀರು ನಿಲ್ಲುವುದರಿಂದ ಈ ವರೆಗೆ ಸುಮಾರು ಮೂರು ನಾಲ್ಕು ವಾಹನಗಳು ಅಪಘಾತಕ್ಕೀಡಾಗಿವೆ. ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನೀರು ನಿಂತು ಇಂತಹ ಘಟನೆ ಸಂಭವಿಸುತ್ತಿದೆ. […]

ಹೇಮಾವತಿ ನದಿಗೆ ಬಿದ್ದ ಕಾರು|ಇಬ್ಬರು ಪ್ರಾಣಾಪಾಯದಿಂದ ಪಾರು Read More »

ಉಪ್ಪಿನಂಗಡಿ: 108ರಲ್ಲಿ ಹೆಣ್ಮಗುವಿಗೆ ಜನ್ಮ ನೀಡಿದ ಮಹಿಳೆ

ಸಮಗ್ರ ನ್ಯೂಸ್: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು 108 ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಜೂ.27ರ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕು ಕಕ್ಕೆಪದವು ಪರಿಸರದ ಉಮೇಶ್ ಎಂಬುವರ ಪತ್ನಿ ಪವಿತ್ರಾ ಅವರು ಹೆರಿಗೆ ನೋವಿನಿಂದ ಬಳಲುತ್ತಿದ್ದಾಗ ಆಸ್ಪತ್ರೆಗೆ ಹೋಗಲು 108 ಆಂಬುಲೆನ್ಸ್ ಸೇವೆಗಾಗಿ ಕರೆ ಮಾಡಿದ್ದರು. ಈ ವೇಳೆ ಪರಿಸರದ ಎರಡೂ ಆಂಬುಲೆನ್ಸ್‌ಗಳು ಬೇರೆಡೆ ಇದ್ದ ಕಾರಣ, ಉಪ್ಪಿನಂಗಡಿಯಲ್ಲಿದ್ದ ಆಂಬುಲೆನ್ಸ್ ಅನ್ನು ಸೇವೆಗೆ ಕರೆಸಲಾಗಿತ್ತು. ಉಪ್ಪಿನಂಗಡಿಯಿಂದ ಕಕ್ಕೆಪದವಿಗೆ ಹೋಗಿ ಗರ್ಭಿಣಿಯನ್ನು

ಉಪ್ಪಿನಂಗಡಿ: 108ರಲ್ಲಿ ಹೆಣ್ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿ‌ ಜಮೀರ್ ಅಹಮದ್ ನೇಮಕ

ಸಮಗ್ರ ನ್ಯೂಸ್: ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಜಮೀರ್ ಅಹ್ಮದ್ ಖಾನ್, ಮಾನ್ಯ ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಹಾಗೂ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದಿದೆ.

ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿ‌ ಜಮೀರ್ ಅಹಮದ್ ನೇಮಕ Read More »

ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಪ್

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪೋಕ್ಸೋ ಪ್ರಕರಣ ಸಂಬಂಧ ಪ್ರಕರಣ ರದ್ದು ಕೋರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದೆ. ಹಾಗೂ ಪೋಕ್ಸೋ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎಸ್ ಪಿಪಿಗೆ ಕೋರ್ಟ್ ಸೂಚನೆ ನೀಡಿದೆ. ಕಳೆದ ವಾರ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು

ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಪ್ Read More »

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ| ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಪ್ರೀತಮ್ ಗೌಡಗೆ ಬಿಗ್ ರಿಲೀಫ್ ಸಿಕ್ಕಿದೆ. ಹಾಗೂ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಲು ಎಸ್‌ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಮ್ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಪ್ರೀತಮ್ ಗೌಡ

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ| ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ Read More »

ಅಡ್ವಾಣಿ ಆರೋಗ್ಯದಲ್ಲಿ ಸುಧಾರಣೆ/ ಆಸ್ಪತ್ರೆಯಿಂದ ಬಿಡುಗಡೆ

ಸಮಗ್ರ ನ್ಯೂಸ್‌: ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ .ಅಡ್ವಾಣಿ ಅವರು ಅನಾರೋಗ್ಯ ಸಮಸ್ಯೆಯಿಂದ ನವದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯ ಸುಧಾರಣೆ ಕಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಿಕೊಡಲಾಗಿದೆ. ʼಅಡ್ವಾಣಿಯವರನ್ನು ವಯೋಸಹಜ ಕಾಯಿಲೆಯಿಂದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಿ ಅವರನ್ನು ಬಿಡುಗಡೆಗೊಳಿಸಲಾಗಿದೆ’ ಎಂದು ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದ್ದಾರೆ. ಮೂತ್ರಶಾಸ್ತ್ರ ಮತ್ತು ಜೆರಿಯಾಟ್ರಿಕ್ ವಿಭಾಗದ ವೈದ್ಯರು ಅಡ್ವಾಣಿ ಅವರ ಆರೋಗ್ಯವನ್ನು ಪರಿಶೀಲಿಸಿದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಗುರುವಾರ

ಅಡ್ವಾಣಿ ಆರೋಗ್ಯದಲ್ಲಿ ಸುಧಾರಣೆ/ ಆಸ್ಪತ್ರೆಯಿಂದ ಬಿಡುಗಡೆ Read More »

ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ/ ತಮಿಳುನಾಡು ಸರ್ಕಾರದಿಂದ ಘೋಷಣೆ

ಸಮಗ್ರ ನ್ಯೂಸ್‌: ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಆರಂಭಕ್ಕೆ ಸಿದ್ಧತೆ ಆರಂಭಿಸಿದ ಬೆನ್ನಲ್ಲೇ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ತಮಿಳುನಾಡು ಸರ್ಕಾರ ಮುಂದಾಗಿದ್ದು, ಈ ಕುರಿತ ಘೋಷಣೆ ಮಾಡಿದೆ. ತಮಿಳುನಾಡಿದ ಗಡಿ ಜಿಲ್ಲೆಗಳಾದ ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೈಗಾರಿಕಾ ಅಗತ್ಯಗಳನ್ನು ಪೂರೈಸಲು ಮತ್ತು ವರ್ಷಕ್ಕೆ 30 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದೊಂದಿಗೆ ಹೊಸೂರಿನಲ್ಲಿ 2 ಸಾವಿರ ಎಕರೆಯಲ್ಲಿ

ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ/ ತಮಿಳುನಾಡು ಸರ್ಕಾರದಿಂದ ಘೋಷಣೆ Read More »

ಸುಳ್ಯ: ಮುಖ ತೊಳೆಯಲು ಹೋದಾತ ಹೊಳೆಗೆ ಬಿದ್ದು ಸಾವು

ಸಮಗ್ರ ನ್ಯೂಸ್: ಮುಖ ತೊಳೆಯಲು ಮನೆ ಸಮೀಪದ ಹೊಳೆ ಬದಿಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅರಂತೋಡು ಎಂಬಲ್ಲಿಂದ ವರದಿಯಾಗಿದೆ. ಗ್ರಾಮದ ಬಾಜಿನಡ್ಕದ ಚನಿಯ(50) ಮೃತಪಟ್ಟ ದುರ್ದೈವಿ. ಶುಕ್ರವಾರ ಮುಂಜಾನೆ ಮನೆ ಸಮೀಪದ ಹೊಳೆ ಸಮೀಪ ಹೋಗಿದ್ದು ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನು ಗಮನಿಸಿ ಹತ್ತಿರದ ಮನೆಯವರು ಬೊಬ್ಬೆ ಹಾಕಿದ ವೇಳೆ ಸ್ಥಳೀಯರೊಬ್ಬರು ಓಡಿಬಂದು ನೀರಿಗಿಳಿದು ಮೇಲೆತ್ತಿದ್ದರಾದರೂ ಆಗಲೇ

ಸುಳ್ಯ: ಮುಖ ತೊಳೆಯಲು ಹೋದಾತ ಹೊಳೆಗೆ ಬಿದ್ದು ಸಾವು Read More »

ಪಟ್ಲ ಬೆಟ್ಟಕ್ಕೆ ರಸ್ತೆ ನಿರ್ಮಿಸಿದ್ಯಾರು? | ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಆದೇಶ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಬಿಸಿಲೆ ಘಾಟ್ ನ ಪಟ್ಲ ಬೆಟ್ಟದಲ್ಲಿ ಇತ್ತಿಚೆಗೆ ಪ್ರವಾಸಿ ಬೈಕರ್ಸ್ ಮೇಲೆ ಸ್ಥಳೀಯ ಜೀಪು ಚಾಲಕರು ನಡೆಸಿದ ಹಲ್ಲೆಯ ನಂತರ ಮಹತ್ವದ ಬೆಳವಣಿಗೆ ನಡೆದಿದ್ದು, ಸ್ಥಳೀಯ ವ್ಯಕ್ತಿಗಳಿಗೆ ಬಿಸಿ‌ ಮುಟ್ಟುವ ಎಲ್ಲಾ ಲಕ್ಷಣಗಳೂ ಕಂಡುಬರುತ್ತಿದೆ. ಕಳೆದ ವಾರ ಘಟನೆ ನಡೆದಿದ್ದು, ಮಾಧ್ಯಮಗಳ ವರದಿ ಆಧರಿಸಿ ಕರ್ನಾಟಕ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ 3 ದಿನಗಳಲ್ಲಿ ಘಟನೆ ಕುರಿತ ಸಂಪೂರ್ಣ‌ವರದಿ ಒಪ್ಪಿಸುವಂತೆ ಆದೇಶ ಹೊರಡಿಸಿದ್ದಾರೆ. ಸಚಿವರ ಆದೇಶದಲ್ಲಿ ಏನಿದೆ..?ಹಾಸನ ಜಿಲ್ಲೆ ಸಕಲೇಶಪುರ

ಪಟ್ಲ ಬೆಟ್ಟಕ್ಕೆ ರಸ್ತೆ ನಿರ್ಮಿಸಿದ್ಯಾರು? | ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಆದೇಶ Read More »

ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ| ಶಾಸಕ‌ ಹರೀಶ್ ಪೂಂಜಾ ಮತ್ತು 65 ಮಂದಿಗೆ ಸಮನ್ಸ್ ಜಾರಿ

ಸಮಗ್ರ ನ್ಯೂಸ್: ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧಪಟ್ಟಂತೆ ಶಾಸಕ ಹರೀಶ್‌ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್‌ ಧರ್ಮಸ್ಥಳ ಸೇರಿದಂತೆ 65 ಮಂದಿ ವಿರುದ್ಧ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. ಪ್ರಥಮ ಕೇಸ್‌ನಲ್ಲಿ 28 ಮಂದಿ ಮತ್ತು 2ನೇ ಕೇಸ್‌ನಲ್ಲಿ 37 ಮಂದಿಗೆ ಸಮನ್ಸ್‌ ಜಾರಿ ಮಾಡಲಾಗಿದ್ದು,

ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ| ಶಾಸಕ‌ ಹರೀಶ್ ಪೂಂಜಾ ಮತ್ತು 65 ಮಂದಿಗೆ ಸಮನ್ಸ್ ಜಾರಿ Read More »