ಭಾರೀ ಮಳೆಗೆ ತತ್ತರಿಸಿದ ಕರಾವಳಿ, ಮಲೆನಾಡು| ಮಳೆ ಅನಾಹುತಕ್ಕೆ ಎರಡು ದಿನಗಳಲ್ಲಿ 7 ಮಂದಿ ಬಲಿ| ದ.ಕ ದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ಜೀವಗಳು ಅಪಾಯದಲ್ಲಿ ಸಿಲುಕುತ್ತಿದ್ದು ಜನರು ತತ್ತರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತಗಳಿಂದ ಎರಡೇ ದಿನಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಕುತ್ತಾರುವಿನ ಮದನಿನಗರದಲ್ಲಿ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದರೆ, ಮಂಗಳೂರು ನಗರದ ರೋಸಾರಿಯೊ ಶಾಲೆ ಹಿಂಭಾಗದಲ್ಲಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ […]









