Editor

SDPI ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ

ಸಮಗ್ರ ನ್ಯೂಸ್: ಜೂನ್ 21, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಸುಳ್ಯ ವಿಧಾನಸಭಾ ಕ್ಷೇತ್ರ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವೂ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ರವರ ಅಧ್ಯಕ್ಷತೆಯಲ್ಲಿ ಗ್ರೀನ್ ಲ್ಯಾಂಡ್ ಅರೇನಾ ಫುಟ್ಬಾಲ್ ಟರ್ಫ್ ಕೊಟ್ಯಾಡಿ ಪಳ್ಳತ್ತೂರು ಮೈದಾನದಲ್ಲಿ ನಡೆಯಿತು. ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಪಕ್ಷದ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ […]

SDPI ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ Read More »

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿಗೆ ಹಸ್ತಾಂತರ

ಸಮಗ್ರ ನ್ಯೂಸ್: ಜೆಡಿಎಸ್‌ ಪಕ್ಷದ‌ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಎಚ್‌ಡಿ ರೇವಣ್ಣ ಹಿರಿಯ ಪುತ್ರ ಸೂರಜ್ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೆಶಕರ ಕಚೇರಿಯಿಂದ ಆದೇಶ ಹೊರಡಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್ ಹಿತೇಂದ್ರ ಅವರು, ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಕ್ರೈಮ್ ನಂಬರ್ 92/2024 ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದ್ದು, ಈ

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿಗೆ ಹಸ್ತಾಂತರ Read More »

ಸಾಕಾನೆಯಿಂದಲೇ ದಾರುಣವಾಗಿ ಸಾವನ್ನಪ್ಪಿದ ಮಾವುತ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕೇರಳದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಾನು ಸಾಕಿದ ಆನೆಯಿಂದಲೇ ಮಾವುತನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇರಳದ ಕಲ್ಲಾರ್ ನ ಸಫಾರಿ ಕೇಂದ್ರದಲ್ಲಿ ಗುರುವಾರ ಈ ಘಟನೆ ನಡೆದಿದೆ. ಆನೆ ದೇವಾಲಯದ ಮಾವುತನನ್ನು ಕಾಲಿನಿಂದ ತುಳಿದು ಕೊಂದುಹಾಕಿದೆ. ಮೃತನ ಹೆಸರು ಬಾಲಕೃಷ್ಣನ್. ಅವರಿಗೆ 62 ವರ್ಷ ವಯಸ್ಸು. ಅವರು ನೀಲೇಶ್ವರಂ ಮೂಲದವರು. ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಅದನ್ನು ನೋಡಲು ಸಾಧ್ಯವಾಗುತ್ತಿಲ್ಲ.

ಸಾಕಾನೆಯಿಂದಲೇ ದಾರುಣವಾಗಿ ಸಾವನ್ನಪ್ಪಿದ ಮಾವುತ| ವಿಡಿಯೋ ವೈರಲ್ Read More »

ಸಂಪಾಜೆಯಲ್ಲಿ ಭೀಕರ ಕಾರು ಅಪಘಾತ| ಮಂಡ್ಯ ಮೂಲದ‌ ಯುವಕರು ಗಂಭೀರ

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಗು ಸಂಪಾಜೆಯ ಬಳಿ ತಡರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಮಂಡ್ಯ ಮೂಲದ ಯುವಕರು ಗಂಭೀರ ಗಾಯಗೊಂಡಿದ್ದಾರೆ. ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್‌ ಮಂಡ್ಯಕ್ಕೆ ಹೊರಟಿದ್ದರು. ರಾತ್ರಿ ಮೂರು ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್‌ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ

ಸಂಪಾಜೆಯಲ್ಲಿ ಭೀಕರ ಕಾರು ಅಪಘಾತ| ಮಂಡ್ಯ ಮೂಲದ‌ ಯುವಕರು ಗಂಭೀರ Read More »

ಪರೀಕ್ಷಾ ಅಕ್ರಮ/ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾ ನಿರ್ದೇಶಕರ‌ ವಜಾ

ಸಮಗ್ರ ನ್ಯೂಸ್: ನೀಟ್-ಯುಜಿ ಪರೀಕ್ಷೆಯ ಅಕ್ರಮ ಆರೋಪ ಮತ್ತು ಯುಜಿಸಿ-ನೆಟ್ ಪರೀಕ್ಷೆ ಮುಂದೂಡಿಕೆ, ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳ ವಿವಾದಗಳ ನಡುವೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾನಿರ್ದೇಶಕರನ್ನು ವಜಾಗೊಳಿಸಲಾಗಿದೆ. ನೀಟ್-ಯುಜಿ ಪರೀಕ್ಷೆಯ ಅಕ್ರಮ ಮತ್ತು ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡುವುದರ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು. ಪರೀಕ್ಷೆಯಲ್ಲಿ ನಕಲು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳೂ ಆಕ್ರೋಶ ವ್ಯಕ್ತಪಡಿಸಿವೆ. ಎನ್‌ಟಿಎಯ ಮಹಾನಿರ್ದೇಶಕರಾಗಿದ್ದ ಸುಬೋದ್ ಕುಮಾ‌ರ್ ಸಿಂಗ್‌ ಅವರನ್ನು ತೆಗೆದುಹಾಕಲಾಗಿದೆ ಮತ್ತು ಅವರ ಉತ್ತರಾಧಿಕಾರಿಯಾಗಿ ಮಾಜಿ ಐಎಎಸ್ ಅಧಿಕಾರಿ

ಪರೀಕ್ಷಾ ಅಕ್ರಮ/ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾ ನಿರ್ದೇಶಕರ‌ ವಜಾ Read More »

ಜಿ ಎಸ್ ಟಿ ಕೌನ್ಸಿಲ್ ಸಭೆ/ ಹಲವು ಸೇವೆಗಳಿಗೆ ಜಿ ಎಸ್ ಟಿ ವಿನಾಯಿತಿ

ಸಮಗ್ರ ನ್ಯೂಸ್: ಸರಕು ಮತ್ತು ಸೇವಾ ತೆರಿಗೆ ಕೌನ್ಸಿಲ್ ಸಭೆಯು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆಯಿತು. ಭಾರತೀಯ ರೈಲ್ವೆಯು ಸಾಮಾನ್ಯ ಜನರಿಗೆ ಒದಗಿಸುವ ಸೇವೆಗಳು, ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟ, ಕೊಠಡಿಗಳ ಸೌಲಭ್ಯ, ಕ್ಲೋಕ್‌ರೂಮ್ ಸೇವೆಗಳು ಹಾಗೂ ಬ್ಯಾಟರಿ ಚಾಲಿತ ಕಾರು ಸೇವೆಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ಘೋಷಿಸಲಾಯಿತು. ಇದರ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಕೇಂದ್ರದ ಉದ್ದೇಶ ಸ್ಪಷ್ಟವಾಗಿದೆ. ಇಂಧನದ ಮೇಲಿನ ಜಿಎಸ್‌ಟಿ ದರವನ್ನು ನಿರ್ಧರಿಸಲು ರಾಜ್ಯಗಳಿಗೆ ಬಿಟ್ಟಿದೆ

ಜಿ ಎಸ್ ಟಿ ಕೌನ್ಸಿಲ್ ಸಭೆ/ ಹಲವು ಸೇವೆಗಳಿಗೆ ಜಿ ಎಸ್ ಟಿ ವಿನಾಯಿತಿ Read More »

ಹಾಸನ: ಸಲಿಂಗ ರತಿ ಆರೋಪ| ಎಂಎಲ್ ಸಿ ಸೂರಜ್‌ ರೇವಣ್ಣ ಅರೆಸ್ಟ್!?

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹಾಸನ ಸೆನ್‌ ಪೊಲೀಸ್‌ ಠಾಣೆಯ ಪೊಲೀಸರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್‌ ಸಿ ಸೂರಜ್‌ ರೇವಣ್ಣರನ್ನು ಅರೆಸ್ಟ್‌ ಮಾಡಲಾಗಿದೆ ಎನ್ನಲಾಗಿದೆ. ನಿನ್ನೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುಧೀರ್ಘ ವಿಚಾರಣೆ ನಡೆಸಿದ್ದಾರೆ. ಸೂರಜ್‌ ರೇವಣ್ಣ ಆಪ್ತ ಶಿವಕುಮಾರ್‌ ನೀಡಿದ್ದ ತಾಂತ್ರಿಕ ಸಾಕ್ಷ್ಯ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ಸಂತ್ರಸ್ತ ಯುವಕ ಹಣಕ್ಕಾಗಿ ಬ್ಲ್ಯಾಕ್‌‌ಮೇಲ್‌ ಮಾಡಿದ ಸಂಬಂಧದ ಆಡಿಯೋ ಗಳನ್ನು

ಹಾಸನ: ಸಲಿಂಗ ರತಿ ಆರೋಪ| ಎಂಎಲ್ ಸಿ ಸೂರಜ್‌ ರೇವಣ್ಣ ಅರೆಸ್ಟ್!? Read More »

ಹವಾಮಾನ ವರದಿ| ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ| ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಮುಂದಿನ ಮೂರು ದಿನ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ಅತೀ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು(ಜೂ.23)ರ ಭಾನುವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ 20 ಸೆಂ.ಮೀ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.ಉಳಿದಂತೆ ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಮೈಸೂರು, ಬೀದರ್ ಕಲಬುರಗಿ ಜಿಲ್ಲೆಗೆ ‘ಯಲ್ಲೋ ಅಲರ್ಟ್’

ಹವಾಮಾನ ವರದಿ| ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ| ರೆಡ್ ಅಲರ್ಟ್ ಘೋಷಣೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ರಾಶಿಗಳ ಗೋಚಾರಫಲ ತಿಳಿಯುವುದು‌ ದಿನಚರಿಗಳನ್ನು‌ ರೂಪಿಸಿಕೊಳ್ಳಲು ಸಹಾಯವಾಗುತ್ತದೆ. ಈ ವಾರ ದ್ವಾದಶ ರಾಶಿಗಳ ಗೋಚಾರಫಲ ಏನು? ಯಾರಿಗೆ ಲಾಭ? ಯಾರಿಗೆ ಶುಭ? ತಿಳಿಯೋಣ… ಮೇಷ ರಾಶಿ:ಈ ವಾರ ನಿಮಗೆ ಅನುಕೂಲಕರವಾಗಿದೆ. ಈ ಸಮಯದಲ್ಲಿ ಹೆಚ್ಚಿನ ಆರ್ಥಿಕ ಲಾಭ ಪಡೆಯುತ್ತೀರಿ, ಸಾಲ ತೀರಿಸಲು ಸಾಧ್ಯವಾಗುವುದು, ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗದಂತೆ ಜಾಗ್ರತೆವಹಿಸಿ. ಅನಗ್ಯತ ಒತ್ತಡ ಬೇಡ, ಸಮಯ ಬಂದಾಗ ಎಲ್ಲವೂ ಸರಿಯಾಗಲಿದೆ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ. ವೃಷಭ ರಾಶಿ:ವೃಷಭ ರಾಶಿಯವರು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕಾರ್ಕಳ: ಪರಶುರಾಮ ಮೂರ್ತಿ ಸ್ಥಾಪನೆಯಲ್ಲಿ ವಂಚನೆ ಆರೋಪ| ಪೊಲೀಸ್ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಮೂರ್ತಿ ಬದಲು ಪರಶುರಾಮನ ನಕಲಿ ಮೂರ್ತಿಯನ್ನು ಸ್ಥಾಪಿಸಿ ಸರಕಾರಕ್ಕೆ ಕೋಟ್ಯಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮೂಲಕ ಕೃಷ್ಣ ಎಂಬಾತ ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1,25,50,000 ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ನಂತರ ಆರೋಪಿ

ಕಾರ್ಕಳ: ಪರಶುರಾಮ ಮೂರ್ತಿ ಸ್ಥಾಪನೆಯಲ್ಲಿ ವಂಚನೆ ಆರೋಪ| ಪೊಲೀಸ್ ಪ್ರಕರಣ ದಾಖಲು Read More »