Editor

ಕಾಸರಗೋಡು: ಕ್ವಾರಿ ಹೊಂಡದಲ್ಲಿ ಮುಳುಗಿ‌ ಅವಳಿ ಬಾಲಕರು ದುರ್ಮರಣ

ಸಮಗ್ರ ನ್ಯೂಸ್: 11 ವರ್ಷದ ಅವಳಿ ಸಹೋದರರು ಕ್ವಾರಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಾಸರಗೋಡು ಜಿಲ್ಲೆಯ ಇಲ್ಲಿನ ಚೀಮೇನಿಯ ಕಣಿಯಾಂತೋಳ್ ಎಂಬಲ್ಲಿ ನಡೆದಿದೆ. ಮೃತರನ್ನು ಚೀಮೇನಿಯ ರಾಧಾಕೃಷ್ಣನ್ ಮತ್ತು ಪುಷ್ಪಾ ದಂಪತಿಯ ಅವಳಿ ಮಕ್ಕಳಾದ ಸುದೇವ್ ಮತ್ತು ಶ್ರೀದೇವ್ ಎಂದು ಗುರುತಿಸಲಾಗಿದೆ.‌‌ ಇಬ್ಬರೂ ಚೀಮೇನಿ ಹೈಯರ್ ಸೆಕೆಂಡರಿ ಶಾಲೆಯ ಐದನೇ ತರಗತಿ ವಿದ್ಯಾರ್ಥಿಗಳು. ಸೋಮವಾರ ಮಧ್ಯಾಹ್ನ ಮಕ್ಕಳು ಸೈಕಲ್ ಸಮೇತ ಹೊರಗೆ ಆಟವಾಡಲು ಮನೆಯಿಂದ ಹೊರಟಿದ್ದರು. ಸಂಜೆಯಾದರೂ ಇಬ್ಬರೂ ಮನೆಗೆ ಬಾರದೆ ಇದ್ದಾಗ ಅವರ […]

ಕಾಸರಗೋಡು: ಕ್ವಾರಿ ಹೊಂಡದಲ್ಲಿ ಮುಳುಗಿ‌ ಅವಳಿ ಬಾಲಕರು ದುರ್ಮರಣ Read More »

ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ರೇಸಿಂಗ್/ ಗ್ರೀನ್‌ ಸಿಗ್ನಲ್ ಕೊಟ್ಟ ಹೈಕೋರ್ಟ್

ಸಮಗ್ರ ನ್ಯೂಸ್: ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡಲು ಕರ್ನಾಟಕ ಹೈಕೋಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾ‌ರ್ ಅವರಿದ್ದ ಏಕಸದಸ್ಯ ಪೀಠ, ಮುಂದಿನ ಆದೇಶದವರೆಗೂ ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸಿಂಗ್, ಬೆಟ್ಟಿಂಗ್ ಚಟುವಟಿಕೆ ಮುಂದುವರಿಸುವಂತೆ ಮಧ್ಯಂತರ ಅನುಮತಿ ನೀಡಿ ಆದೇಶ ಹೊರಡಿಸಿದೆ. 2024-25ರ ಸಾಲಿನ ರೇಸಿಂಗ್ ಬೆಟ್ಟಿಂಗ್ ಚಟುವಟಿಕೆಗೆ ಅನುಮತಿ ನಿರಾಕರಿಸಲಾಗಿತ್ತು. ಬೆಟ್ಟಿಂಗ್ ಅವ್ಯವಹಾರಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿ ಆದೇಶಿಸಿತ್ತು. ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು

ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ರೇಸಿಂಗ್/ ಗ್ರೀನ್‌ ಸಿಗ್ನಲ್ ಕೊಟ್ಟ ಹೈಕೋರ್ಟ್ Read More »

ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ bc ಟ್ರಸ್ಟ್ ಪಾಲೇಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ದಿನಾಚರಣೆ

ಸಮಗ್ರ ನ್ಯೂಸ್: ಶಾಲಾ ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬಂಧಿಸಿದ ಸ್ಪರ್ಧೆ, ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ bc ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯ ಪಾಲೇಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದಿನ ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಸ್ಪರ್ಧೆ ನಡೆಸಿ ಬಹುಮಾನ ವಿತರಣೆ ಮತ್ತು ಶಾಲೆಯಲ್ಲಿ ಗಿಡ ನಾಟಿ ಮಕ್ಕಳಿಗೆ ಗಿಡವಿತರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ಮಾನ್ಯ ಯೋಜನಾಧಿಕಾರಿ ಮಾಧವ ಗೌಡ

ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ bc ಟ್ರಸ್ಟ್ ಪಾಲೇಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ದಿನಾಚರಣೆ Read More »

ಸುಳ್ಯ: ಕಾರಿನಲ್ಲಿ ಹಿಂದೂ ಹುಡುಗಿ ಜೊತೆ‌ ಮುಸ್ಲಿಂ ಯುವಕ| ಪೊಲೀಸ್ ವಿಚಾರಣೆ ವೇಳೆ ಬಯಲಾಯ್ತು ಅಸಲಿ ಸತ್ಯ!!

ಸಮಗ್ರ ನ್ಯೂಸ್: ಕೇರಳ ಮೂಲದ ಅನ್ಯಕೋಮಿನ ಜೋಡಿಯೊಂದು ಸುಳ್ಯ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಿರುವ ವೇಳೆ ಹಿಂದೂ ಕಾರ್ಯಕರ್ತರು ಸುಳ್ಯದಲ್ಲಿ ತಡೆದು ನಿಲ್ಲಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಜೂ. 18 ರಂದು ಸಂಜೆ ನಡೆದಿದೆ. ಕೇರಳ ಮೂಲದ ಹಿಂದೂ ಹುಡುಗಿಯೊಬ್ಬಳು ಮನೆಯಲ್ಲಿ ಪೋಷಕರ ಜೊತೆ ಜಗಳವಾಡಿಕೊಂಡು ಅನ್ಯಕೋಮಿನ ಯುವಕನೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದಳು ಎಂದು ಭಾವಿಸಿ ಹಿಂದೂ ಕಾರ್ಯಕರ್ತರು ಸುಳ್ಯದಲ್ಲಿ ‌ತಡೆದು ಆ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದರು. ಪೊಲೀಸ್ ವಿಚಾರಣೆ ವೇಳೆ ಆ ಜೋಡಿ ಈ

ಸುಳ್ಯ: ಕಾರಿನಲ್ಲಿ ಹಿಂದೂ ಹುಡುಗಿ ಜೊತೆ‌ ಮುಸ್ಲಿಂ ಯುವಕ| ಪೊಲೀಸ್ ವಿಚಾರಣೆ ವೇಳೆ ಬಯಲಾಯ್ತು ಅಸಲಿ ಸತ್ಯ!! Read More »

ಮಧುರೈ-ಬೆಂಗಳೂರು ನಡುವೆ ವಂದೇ ಭಾರತ್/ ಪ್ರಾಯೋಗಿಕ ಸಂಚಾರ ಆರಂಭ

ಸಮಗ್ರ ನ್ಯೂಸ್:ರಾಜ್ಯದ ಎಂಟನೇ ವಂದೇ ಭಾರತ್‌ ರೈಲು ಮಧುರೈ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮೊದಲ ಪ್ರಾಯೋಗಿಕ ಸಂಚಾರ ನಡೆಸಿತು. ಸೋಮವಾರ ಬೆಳಗ್ಗೆ 5.15ಕ್ಕೆ ಮಧುರೈ ನಿಲ್ದಾಣದಿಂದ ಹೊರಟು ಬೆಂಗಳೂರನ್ನು ಮಧ್ಯಾಹ್ನ 2 ಗಂಟೆ ಸುಮಾರಿಗೆ ತಲುಪಿ ಪುನಃ ತೆರಳಿತು. ಎರಡು ನಗರಗಳನ್ನು ಸರಿಸುಮಾರು 6 ಗಂಟೆಗಳಲ್ಲಿ ಕ್ರಮಿಸುವ ನಿರೀಕ್ಷೆಯಿದೆ. ರೈಲಿನ ವೇಗ, ನಿಲುಗಡೆ ನಿಲ್ದಾಣ ನಿಗದಿ ಬಳಿಕ ರೈಲಿನ ವೇಳಾಪಟ್ಟಿ, ದರವನ್ನು ಪ್ರಕಟಿಸಿ, ವಾಣಿಜ್ಯ ಸಂಚಾರದ ದಿನಾಂಕ ಘೋಷಣೆ ಮಾಡಲಾಗುತ್ತದೆ. ಪ್ರಾಥಮಿಕ ಮಾಹಿತಿಯಂತೆ ಈ

ಮಧುರೈ-ಬೆಂಗಳೂರು ನಡುವೆ ವಂದೇ ಭಾರತ್/ ಪ್ರಾಯೋಗಿಕ ಸಂಚಾರ ಆರಂಭ Read More »

ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ/ 9.26 ಕೋಟಿ ರೈತರ ಖಾತೆಗೆ ಬಿತ್ತು ಹಣ

ಸಮಗ್ರ ನ್ಯೂಸ್: ಪಿಎಂ ಕಿಸಾನ್ ಯೋಜನೆಯ 17 ನೇ ಕಂತನ್ನು ವಾರಣಾಸಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ ಬಿಡುಗಡೆ ಮಾಡಿದ್ದಾರೆ. ವಾರಣಾಸಿಯಲ್ಲಿ ಈ ಕಾರ್ಯಕ್ರಮವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಉತ್ತರ ಪ್ರದೇಶ ಸರ್ಕಾರದ ಸಮನ್ವಯದೊಂದಿಗೆ ಆಯೋಜಿಸಿದೆ.ಈ ಸಂದರ್ಭ, ಪಿಎಂ ಮೋದಿ 9.26 ಕೋಟಿ ಫಲಾನುಭವಿ ರೈತರಿಗೆ ಕಂತಿನ ಭಾಗವಾಗಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಕೇಂದ್ರ ಯೋಜನೆಯಾದ ಪಿಎಂ ಕಿಸಾನ್ ಯೋಜನೆ ಕೋಟ್ಯಂತರ ರೈತರಿಗೆ ವಾರ್ಷಿಕ 6,000 ರೂ.ಗಳ

ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ/ 9.26 ಕೋಟಿ ರೈತರ ಖಾತೆಗೆ ಬಿತ್ತು ಹಣ Read More »

ಜೂನ್ 27ಕ್ಕೆ ಕೆಂಪೇಗೌಡ ಜಯಂತಿ/ ಡಿ‌ ಕೆ‌ ಶಿವಕುಮಾರ್ ಹೇಳಿಕೆ

ಸಮಗ್ರ ನ್ಯೂಸ್: ಜೂನ್ 27ರಂದು ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಆಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಜಾಗದ ಸಮಸ್ಯೆ ಕಾರಣಕ್ಕೆ ಸ್ಟೇಡಿಯಂ ಅಥವಾ ಅರಮನೆ ಮೈದಾನದಲ್ಲಿ ಜಯಂತಿ ಮಾಡಲು ಸಲಹೆಗಳು ಬಂದಿದ್ದು, ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹೇಳಿದರು. ಸಂಘ, ಸಂಸ್ಥೆಗಳ ಮುಖಂಡರನ್ನು ಆಹ್ವಾನಿಸಿ ಚರ್ಚೆ ಮಾಡಿದ್ದೇವೆ. ಪಕ್ಷ, ಜಾತಿ, ಧರ್ಮ ದೂರವಿಟ್ಟು ಸಭೆ ಮಾಡಿದ್ದೇವೆ. ಜೂನ್ 27ರಂದು ಬೆಂಗಳೂರಿನಲ್ಲಿ ಜಯಂತಿ ಆಚರಣೆ ಆಗಲಿದೆ ಎಂದು ತಿಳಿಸಿದರು.

ಜೂನ್ 27ಕ್ಕೆ ಕೆಂಪೇಗೌಡ ಜಯಂತಿ/ ಡಿ‌ ಕೆ‌ ಶಿವಕುಮಾರ್ ಹೇಳಿಕೆ Read More »

ಕಾಣೆಯಾಗಿದ್ದ ದರ್ಶನ್ ಮ್ಯಾನೇಜರ್ ಶವವಾಗಿ ಪತ್ತೆ| ಆತ್ಮಹತ್ಯೆ ಮಾಡಿಕೊಂಡನಾ ದುರ್ದೈವಿ!?

ಸಮಗ್ರ ನ್ಯೂಸ್: ಕಾಣೆಯಾಗಿದ್ದ ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ ಎಂಬಾತನ ಶವ ಪತ್ತೆಯಾಗಿದ್ದು,‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ (35) ವಿಷ ಸೇವಿಸಿ ಏಪ್ರಿಲ್‌ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಇದೀಗ

ಕಾಣೆಯಾಗಿದ್ದ ದರ್ಶನ್ ಮ್ಯಾನೇಜರ್ ಶವವಾಗಿ ಪತ್ತೆ| ಆತ್ಮಹತ್ಯೆ ಮಾಡಿಕೊಂಡನಾ ದುರ್ದೈವಿ!? Read More »

ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್: ಭಯಭೀತರಾದ ಜನ

ಸಮಗ್ರ ನ್ಯೂಸ್: ಉಡುಪಿಯಲ್ಲಿ ಮೊನ್ನೆಯಷ್ಟೇ ಒಂದು ಗ್ಯಾಂಗ್ ವಾರ್ ನಡೆದಿತ್ತು, ಇದಾದ ಬಳಿಕ ಈಗ ಮತ್ತೊಂದು ಇದೇ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಜೂನ್ 15ರ ರಾತ್ರಿ ನಡೆದಿದೆ. ಪುತ್ತೂರಿನ ಸೆಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದಿದ್ದನು. ಈ ವಿಚಾರ ತಿಳಿದ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್ ನನ್ನು ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಬರಲು ತಿಳಿಸಿದರು. ಚರಣ್ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಆಗಮಿಸಿದ್ದನು. ಪ್ರವೀಣ್ ಆ್ಯಂಡ್

ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್: ಭಯಭೀತರಾದ ಜನ Read More »

ಹೊಸದಾಗಿ ಸಾವಿರ ಬಸ್ ರಸ್ತೆಗಿಳಿಸಲೂ ಕೆಎಸ್ಆರ್ಟಿಸಿ ಪ್ಲಾನ್

ಸಮಗ್ರ ನ್ಯೂಸ್: ಶಕ್ತಿ ಯೋಜನೆ ಆರಂಭವಾದಾಗಿನಿಂದ ಹಲವು ಮಾರ್ಗಗಳಲ್ಲಿ ಬಸ್‌ಗಳ ಕೊರತೆ ಉಂಟಾಗಿತ್ತು. ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ಬಸ್ ಸಮಸ್ಯೆ ಎದುರಾಗಿತ್ತು. ಇದರ ಮುಖಾಂತರ ಹೆಚ್ಚಿನ ಬಸ್ ಗೆ ಮನವಿ ಮಾಡಲಾಗಿತ್ತು. ಇದರಿಂದ 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಿರ್ಧಾರ ಮಾಡಿದೆ. ಶಾಲೆ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು KSRTC ಗುರುತಿಸಿ ಅಂತಹ ಭಾಗಗಳಿಗೆ ಹೆಚ್ಚುವರಿ ಅಥವಾ ಹೊಸದಾಗಿ ಬಸ್ ಸೇವೆ ಆರಂಭಿಸಲು ಸಿದ್ದತೆ ನಡೆಸಿದೆ.

ಹೊಸದಾಗಿ ಸಾವಿರ ಬಸ್ ರಸ್ತೆಗಿಳಿಸಲೂ ಕೆಎಸ್ಆರ್ಟಿಸಿ ಪ್ಲಾನ್ Read More »