ತಿರುವನಂತಪುರಂ ಅನಂತ ಪದ್ಮನಾಭ ದೇವಾಲಯದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ| ಬೆಳ್ತಂಗಡಿಯ ಕೊಕ್ಕಡ ಗ್ರಾಮದ ನಾಗೇಶರಿಗೆ ಒಲಿದ ಭಾಗ್ಯ
ಸಮಗ್ರ ನ್ಯೂಸ್: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ದಿ. ಸುಬ್ರಾಯ ತೋಡ್ತಿಲ್ಲಾಯ ಮತ್ತು ದಿ.ಯಶೋಧ ದಂಪತಿಗಳ ಪುತ್ರರಾಗಿದ್ದಾರೆ. ಹಿಂದೆ ಸುಬ್ರಾಯ ತೋಡ್ತಿಲ್ಲಾಯರು ಕೂಡ ಇದೇ ದೇವಸ್ಥಾನದಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ಅಜ್ಜ ದಿ.ನಾರಾಯಣ ತೋಡ್ತಿಲ್ಲಾಯರು […]










