Editor

ಬಂಟ್ವಾಳ: ಬಿಜೆಪಿ ವಿಜಯೋತ್ಸವದ ಬಳಿಕ ಚಾಕು ಇರಿತ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ನಡೆದಿದೆ. ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್‌ಗೆ ಚೂರಿ ಇರಿಯಲಾಗಿದೆ. ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯಾರ್‌ನಲ್ಲಿ ವಿಜಯೋತ್ಸವ ಆಯೋಜಿಸವಾಗಿತ್ತು. ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಈ ವೇಳೆ ಬಂದ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಯುವಕರ ಮೇಲೆ ಅಟ್ಯಾಕ್ ನಡೆದಿದೆ. ಈ […]

ಬಂಟ್ವಾಳ: ಬಿಜೆಪಿ ವಿಜಯೋತ್ಸವದ ಬಳಿಕ ಚಾಕು ಇರಿತ; ಇಬ್ಬರು ಗಂಭೀರ Read More »

ಟಿ-20 ವಿಶ್ವಕಪ್| ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ಗಳ ರೋಚಕ ಜಯ

ಸಮಗ್ರ ನ್ಯೂಸ್: ನ್ಯೂಯಾರ್ಕ್ ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ T20 World Cup 2024ನ ರೋಚಕ ಪಂದ್ಯದಲ್ಲಿ ಭಾರತ ಆರು ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದೆ. ಇದರೊಂದಿಗೆ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದ ಟೀಂ ಇಂಡಿಯಾ 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಸತತ ಎರಡನೇ ಸೋಲು ಅನುಭವಿಸಿದ ಪಾಕ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲೇ ಉಳಿದುಕೊಂಡಿದ್ದು, ಈ ಸೋಲಿನ ನಂತರ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸುವ ಆತಂಕದಲ್ಲಿದೆ. ಮೊದಲು ಬ್ಯಾಟಿಂಗ್

ಟಿ-20 ವಿಶ್ವಕಪ್| ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ಗಳ ರೋಚಕ ಜಯ Read More »

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ 10 ಮಂದಿ ಸಾವು

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಇದರಿಂದ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ.ಇದರಲ್ಲಿ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ 10 ಮಂದಿ ಸಾವು Read More »

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಏಕೈಕ ಸಂಸದ

ಸಮಗ್ರ ನ್ಯೂಸ್: ಕೇರಳದಿಂದ ಆಯ್ಕೆಯಾದ ಬಿಜೆಪಿಯ ಏಕೈಕ ಸಂಸದ ಸುರೇಶ್ ಗೋಪಿ ಅವರಿಗೆ ಇಂದು ಮೋದಿ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಲು ಸಿದ್ಧರಾಗಿದ್ದಾರೆ. ಮೋದಿ ಮತ್ತು ನಂತರ ಅಮಿತ್ ಶಾ ಇಬ್ಬರೂ ಸುರೇಶ್ ಗೋಪಿ ಅವರಿಗೆ ಕರೆ ಮಾಡಿದ್ದಾರೆ. ಈ ಕುರಿತು ಖುಷಿ ಹಂಚಿಕೊಂಡ ಅವರು, ಮೋದಿಯವರ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಮತ್ತು ಅದನ್ನು ಪಾಲಿಸುತ್ತಿದ್ದೇನೆ, ನನಗೆ ಯಾವ ಹುದ್ದೆ ನೀಡುತ್ತಿದ್ದಾರೆ ಎಂದು ಗೊತ್ತಿಲ್ಲ ಎಂದು ಸುರೇಶ್ ಗೋಪಿ ತಿಳಿಸಿದರು.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಏಕೈಕ ಸಂಸದ Read More »

ಮೋದಿ ನೂತನ ಸರ್ಕಾರದಲ್ಲಿ 72 ಸಚಿವರಿಗೆ ಸ್ಥಾನ| ಯಾರಿಗೆಲ್ಲ ಸಿಕ್ತು ಪಟ್ಟ? ಇಲ್ಲಿದೆ ಸಂಪೂರ್ಣ ಪಟ್ಟಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ 293 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಅವಕಾಶ ಪಡೆದಿದ್ದ ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿಕೂಟ ಅಸ್ತಿತ್ವಕ್ಕೆ ಬಂದಿದ್ದು, ನೂತನ ಸರ್ಕಾರದ ನಾಯಕರಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಹಂತದಲ್ಲಿ 24 ರಾಜ್ಯಗಳ 72 ಜನರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟದಲ್ಲಿ ಏಳು ಮಾಜಿ ಮುಖ್ಯಮಂತ್ರಿಗಳು, ಏಳು ಮಹಿಳೆಯರು, 33 ಹೊಸ ಮುಖಗಳಿಗೆ ಮನ್ನಣೆ ನೀಡಲಾಗಿದೆ. ಇಲ್ಲಿದೆ ಕೇಂದ್ರ

ಮೋದಿ ನೂತನ ಸರ್ಕಾರದಲ್ಲಿ 72 ಸಚಿವರಿಗೆ ಸ್ಥಾನ| ಯಾರಿಗೆಲ್ಲ ಸಿಕ್ತು ಪಟ್ಟ? ಇಲ್ಲಿದೆ ಸಂಪೂರ್ಣ ಪಟ್ಟಿ Read More »

ನೆಹರು ಬಳಿಕ ಮೂರನೇ ಬಾರಿ ಪ್ರಧಾನಿಯಾದ ನಮೋ| ಇಂದಿನಿಂದ ಮೋದಿ 3.0 ಶಕೆ ಆರಂಭ

ಸಮಗ್ರ ನ್ಯೂಸ್: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ನೆಹರು ಮೊದಲ ಬಾರಿಗೆ ನೇಮಕವಾಗಿದ್ದು, ನಂತರ ಎರಡು ಬಾರಿ ಚುನಾಯಿತರಾಗಿದ್ದರು. ಮೋದಿ ಸತತ ಮೂರು ಬಾರಿಗೆ ಚುನಾಯಿತರಾಗಿ ಪ್ರಧಾನಿ ಹುದ್ದೆಗೇರಿದ್ದಾರೆ. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶ ವಿದೇಶಗಳ ಗಣ್ಯರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ನೆಹರು ಬಳಿಕ ಮೂರನೇ ಬಾರಿ ಪ್ರಧಾನಿಯಾದ ನಮೋ| ಇಂದಿನಿಂದ ಮೋದಿ 3.0 ಶಕೆ ಆರಂಭ Read More »

ಮೋದಿ 3.0/ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ

ಸಮಗ್ರ ನ್ಯೂಸ್: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರಾಗಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು.

ಮೋದಿ 3.0/ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ Read More »

ಮಹಿಳೆಯ ಕೊಲೆಗೈದು ಶವವನ್ನು ರೈಲಿನಲ್ಲಿಟ್ಟ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಮಹಿಳೆಯ ಹತ್ಯೆಗೈದು ಎರಡು ಚೀಲಗಳಲ್ಲಿ ತುಂಬಿ ರೈಲಿನಲ್ಲಿ ಇಟ್ಟು ಹೋದ ಪ್ರಕರಣ ಮಧ್ಯಪ್ರದೇಶದ ಇಂದೋರ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ದಿನಗಳ ಹಿಂದೆ ಮಹಿಳೆಯನ್ನು ಬೇರೆ ಸ್ಥಳದಲ್ಲಿ ಕೊಲೆ ಮಾಡಲಾಗಿದೆ. ಬಳಿಕ ಶವವನ್ನು ಕತ್ತರಿಸಿ ಬ್ಯಾಗ್‍ನಲ್ಲಿ ತುಂಬಿ ಶನಿವಾರ (ಜೂ.8) ರಾತ್ರಿ ರೈಲಿನಲ್ಲಿ ತಂದು ಇರಿಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಚೀಲದಲ್ಲಿ ಮಹಿಳೆಯ ಕೈ ಹಾಗೂ ಕಾಲುಗಳು ಪತ್ತೆಯಾಗಿಲ್ಲ. ಚೀಲಗಳನ್ನು ವಶಕ್ಕೆ ಪಡೆದು ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ರೈಲಿನ ಸ್ವಚ್ಛತಾ ಸಿಬ್ಬಂದಿ ಬೋಗಿಯ ಒಳಗೆ

ಮಹಿಳೆಯ ಕೊಲೆಗೈದು ಶವವನ್ನು ರೈಲಿನಲ್ಲಿಟ್ಟ ದುಷ್ಕರ್ಮಿಗಳು Read More »

ಮುಂಬೈ:ಒಂದೇ ರನ್‌ವೇಯಲ್ಲಿ ಲ್ಯಾಂಡಿಂಗ್‌, ಟೇಕಾಫ್‌| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ!!

ಸಮಗ್ರ ನ್ಯೂಸ್: ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ (ಜೂ.8) ಸಂಜೆ ಒಂದೇ ರನ್‌ವೇಯಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಫ್‌ ಆದರೆ ಇಂಡಿಗೋ ವಿಮಾನ ಲ್ಯಾಂಡಿಂಗ್‌ ಆಗಿದೆ. ಏರ್‌ ಇಂಡಿಯಾ ವಿಮಾನ ತಿರುವನಂತಪುರಂಗೆ ಟೇಕಾಫ್‌ ಆಗುತ್ತಿತ್ತು. ಈ ಸಂದರ್ಭದಲ್ಲಿ ಇಂದೋರ್‌ನಿಂದ ಆಗಮಿಸಿದ ಇಂಡಿಗೋ ವಿಮಾನಕ್ಕೆ ತಪ್ಪಾಗಿ ರನ್‌ವೇಯಲ್ಲಿ ಲ್ಯಾಂಡಿಂಗ್‌ ಮಾಡಲು ಅನುಮತಿ ಸಿಕ್ಕಿದೆ. ಅನುಮತಿ ಸಿಕ್ಕಿದ ಕಾರಣ ಪೈಲಟ್‌ ರನ್‌ವೇಯಲ್ಲಿ ಟಚ್‌ಡೌನ್‌ ಆಗುತ್ತಿದ್ದಾಗ ಏರ್‌ ಇಂಡಿಯಾ ಜಸ್ಟ್‌ ಟೇಕಾಫ್‌ ಆಗಿತ್ತು. ಒಂದು ವೇಳೆ ಏರ್‌ ಇಂಡಿಯಾ

ಮುಂಬೈ:ಒಂದೇ ರನ್‌ವೇಯಲ್ಲಿ ಲ್ಯಾಂಡಿಂಗ್‌, ಟೇಕಾಫ್‌| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ!! Read More »

‘ನಮೋ’ 3.0 ಸರ್ಕಾರದಲ್ಲಿ ರಾಜ್ಯದ ಐವರಿಗೆ ಮಂತ್ರಿ ಸ್ಥಾನ…!

ಸಮಗ್ರ ನ್ಯೂಸ್: ಇಂದು ನರೇಂದ್ರ ಮೋದಿ ಅವರು ಸಂಜೆ 7.15ಕ್ಕೆ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಸಂಸದರು ಮೋದಿ ಸಂಪುಟದ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಹೀಗಾಗಿ ಸಚಿವರಾಗುವ ಸಂಸದರಿಗೆ ಕರೆ ಮಾಡಿ ಮಾಹಿತಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ. ಅದರಲ್ಲೂ ಪ್ರಮುಖವಾಗಿ ಕರ್ನಾಟಕದ ಐವರಿಗೆ ಮೋದಿ ಸಂಪುಟದಲ್ಲಿ ಅವಕಾಶ ಸಿಕ್ಕಿದೆ ಎಂದು ತಿಳಿದುಬಂದಿದೆ. ಮುಖ್ಯವಾಗಿ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್, ಎಚ್.ಡಿ ಕುಮಾರಸ್ವಾಮಿಗೆ ಈ ಬಾರಿ

‘ನಮೋ’ 3.0 ಸರ್ಕಾರದಲ್ಲಿ ರಾಜ್ಯದ ಐವರಿಗೆ ಮಂತ್ರಿ ಸ್ಥಾನ…! Read More »