Editor

ನಿವೇದಿತಾ ಗೌಡ – ಚಂದನ್ ಶೆಟ್ಟಿ ಬಾಳಲ್ಲಿ ಬಿರುಕು| ವಿಚ್ಛೇದನಕ್ಕೆ ಮುಂದಾದ ದಂಪತಿ…!

ಸಮಗ್ರ ನ್ಯೂಸ್: ಬಿಗ್ ಬಾಸ್ ಖ್ಯಾತಿಯ ಚಂದನ್ ಮತ್ತು ನಿವೇದಿತಾ ಗೌಡ ಬಾಳಲ್ಲಿ ಇದೀಗ ಬಿರುಕು ಬಿಟ್ಟಿದೆ. ಹೌದು ನಿವೇದಿತಾ ಗೌಡ – ಚಂದನ್ ಶೆಟ್ಟಿ ದಂಪತಿ ಇದೀಗ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ. ಆದರೆ ಈ ಬಗ್ಗೆ ದಂಪತಿ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಕರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಲುತ್ತಿದ್ದಾರೆ ಎನ್ನಲಾಗಿದೆ. ಇಂದು ಶಾಂತಿನಗರ ಕೋರ್ಟ್ ನಲ್ಲಿ ದಂಪತಿ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 5’ ರಿಯಾಲಿಟಿ […]

ನಿವೇದಿತಾ ಗೌಡ – ಚಂದನ್ ಶೆಟ್ಟಿ ಬಾಳಲ್ಲಿ ಬಿರುಕು| ವಿಚ್ಛೇದನಕ್ಕೆ ಮುಂದಾದ ದಂಪತಿ…! Read More »

ಎಲೆಕ್ಟ್ರಾನಿಕ್ ಸಿಟಿ: ಕಿಲ್ಲರ್ ವಾಟರ್ ಟ್ಯಾಂಕರ್‌ಗೆ ಅಕ್ಕ ತಮ್ಮ ಇಬ್ಬರು ಬಲಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವಾಟರ್ ಟ್ಯಾಂಕರ್‌ಗೆ ಅಕ್ಕ ತಮ್ಮ ಇಬ್ಬರು ಬಲಿಯಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ನಡೆದಿದೆ. ವೇಗವಾಗಿ ಬಂದ ವಾಟರ್ ಟ್ಯಾಂಕರ್, ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ಮಧುಮಿತ (20), ರಂಜನ್(18) ಮೃತರು. ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿಗಳಾದ ಇವರು ಬೆಂಗಳೂರಿನ ಎಸ್ಎಸ್ಎಂಆರ್‌ವಿ ಕಾಲೇಜಿನಲ್ಲಿ ಮಧುಮಿತ ವ್ಯಾಸಂಗ ಮಾಡುತ್ತಿದ್ದಳು. ಮೊದಲ ದಿನ ಅಕ್ಕನನ್ನು ಕಾಲೇಜಿಗೆ ಬಿಟ್ಟು ಬರಲು ತಮ್ಮ ಹೋಗಿದ್ದ. ಈ ವೇಳೆ ಕಿಲ್ಲರ್ ವಾಟರ್

ಎಲೆಕ್ಟ್ರಾನಿಕ್ ಸಿಟಿ: ಕಿಲ್ಲರ್ ವಾಟರ್ ಟ್ಯಾಂಕರ್‌ಗೆ ಅಕ್ಕ ತಮ್ಮ ಇಬ್ಬರು ಬಲಿ Read More »

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ‘NDA’| ರಾಷ್ಟ್ರಪತಿ ಭೇಟಿ ಮಾಡಿದ ನಮೋ

ಸಮಗ್ರ ನ್ಯೂಸ್: ದೆಹಲಿಯಲ್ಲಿ ನಡೆದ ಎನ್ ಡಿಎ ಮೈತ್ರಿಕೂಟದ ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿ ಅವರನ್ನು ಬಿಜೆಪಿ ಮತ್ತು ಎನ್ ಡಿಎ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಇದಕ್ಕೆ ಸಂಸದೀಯ ಮಂಡಳಿ ಅನುಮೋದನೆ ಕೂಡ ನೀಡಿತ್ತು. ಈ ಬೆನ್ನಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಮೋದಿಯವರು, 3ನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರದ ಗದ್ದುಗೆಗೇರಲು ಸರ್ಕಾರದ ರಚನೆ ಸಂಬಂಧ ಹಕ್ಕು ಮಂಡನೆ ಮಾಡಿದ್ದಾರೆ. ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಸೇರಿದಂತೆ ಅದರ

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ‘NDA’| ರಾಷ್ಟ್ರಪತಿ ಭೇಟಿ ಮಾಡಿದ ನಮೋ Read More »

ಸಚಿವರಾಗ್ತರಾ ಕುಮಾರಸ್ವಾಮಿ? ಸ್ಪಷ್ಟನೆ ನೀಡಿದ ಮಂಡ್ಯ ಸಂಸದ

ಸಮಗ್ರ ನ್ಯೂಸ್: ಎಚ್.ಡಿ. ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ ನಂತರ ಮಂತ್ರಿಸ್ಥಾನದ ಆಕಾಂಕ್ಷಿ ಎನ್ನುವ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ನನಗೆ ಮಂತ್ರಿ ಸ್ಥಾನ ಬೇಕೆಂದು ನಾನು ಒತ್ತಡ ಹಾಕುವುದಿಲ್ಲ. ನರೇಂದ್ರ ಮೋದಿ ನಾಯಕತ್ವದಲ್ಲಿ ಮತ್ತೆ ಸರ್ಕಾರ ಮುಂದುವರಿಯಲಿದೆ. ಸಚಿವ ಸ್ಥಾನದ ಬಗ್ಗೆ ನನಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದರೂ ಸ್ಥಳೀಯ ಪಕ್ಷಗಳಿಗೆ ಸಹ ಖಾತೆ ನೀಡುತ್ತಾರೆ. ನಮ್ಮಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯವಿದೆ, ಅದನ್ನು ಮಾಡುತ್ತೇನೆ ಎಂದು

ಸಚಿವರಾಗ್ತರಾ ಕುಮಾರಸ್ವಾಮಿ? ಸ್ಪಷ್ಟನೆ ನೀಡಿದ ಮಂಡ್ಯ ಸಂಸದ Read More »

ಅತಂತ್ರ ಲೋಕಸಭೆ/ ಬಿಜೆಪಿಗೆ ಬಹುಮತಕ್ಕೆ ಬೇಕಾಗಿದ್ದುದು 6.26 ಲಕ್ಷ ಮತ

ಸಮಗ್ರ ನ್ಯೂಸ್: 18ನೇ ಲೋಕಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿಯೊಂದ ನಿರ್ಮಾಣವಾಗಿದ್ದು, 240 ಸ್ಥಾನಗಳಿಸಿರುವ ಬಿಜೆಪಿ ಬಹುಮತಕ್ಕೆ ಅಗತ್ಯವಾದ 272 ಸ್ಥಾನ ತಲುಪಲು 32 ಸ್ಥಾನಗಳ ಕೊರತೆ ಎದುರಿಸುತ್ತಿದೆ. ಅಚ್ಚರಿಯ ವಿಷಯವೆಂದರೆ ಬಿಜೆಪಿಗೆ ಬಹುಮತಕ್ಕೆ ಕೇವಲ 6.26 ಲಕ್ಷಮತಗಳ ಕೊರತೆಯಾಗಿದೆ. ಕರ್ನಾಟಕದ ಕಲಬುರಗಿ ಹಾಗೂ ದಾವಣಗೆರೆಯೂ ಸೇರಿದಂತೆ ದೇಶದ ವಿವಿಧ ರಾಜ್ಯಗಳ 33 ಕ್ಷೇತ್ರಗಳಲ್ಲಿ ಬಿಜೆಪಿ ಕೂದಲೆಳೆ ಅಂತರದಲ್ಲಿ ಸೋತಿದೆ. ಅಂತಹ ಕ್ಷೇತ್ರಗಳಲ್ಲಿ ಇನ್ನು ಕೇವಲ 6,26,311 ಮತಗಳನ್ನು ಪಡೆದುಕೊಂಡಿದ್ದರೆ ಬಿಜೆಪಿ ಏಕಾಂಗಿಯಾಗಿ ಮ್ಯಾಜಿಕ್ ಸಂಖ್ಯೆ(272) ತಲುಪಬಹುದಾಗಿತ್ತು. ಬಿಜೆಪಿಯು

ಅತಂತ್ರ ಲೋಕಸಭೆ/ ಬಿಜೆಪಿಗೆ ಬಹುಮತಕ್ಕೆ ಬೇಕಾಗಿದ್ದುದು 6.26 ಲಕ್ಷ ಮತ Read More »

ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು| ಅಭ್ಯರ್ಥಿ ಲಲ್ಲುಸಿಂಗ್ ತರಾಟೆಗೈದ ಪುತ್ತೂರಿನ ಬಿಜೆಪಿ ಕಾರ್ಯಕರ್ತ

ಸಮಗ್ರ ನ್ಯೂಸ್: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಬಿಜೆಪಿ ಕಾರ್ಯಕರ್ತರಿಗೆ ಭಾರೀ ದುಃಖ ತಂದಿದ್ದು, ಪುತ್ತೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ಬಿಜೆಪಿ ಅಭ್ಯರ್ಥಿ ಲಲ್ಲುಸಿಂಗ್ ಅವರಿಗೆ ಕರೆ ಮಾಡಿ ಸರಿಯಾಗೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಯೋಧ್ಯೆ ರಾಮಮಂದಿರ ಇರುವ ಫೈಜಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಗೆ ದೂರವಾಣಿ ಕರೆ ಮಾಡಿದ ಪುತ್ತೂರಿನ ಬಿಜೆಪಿ ಕಾರ್ಯಕರ್ತ ಜಗದೀಶ್ ರೈ ಅವರು ಸರಿಯಾಗೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಸೋಲಿನ ಕಾರಣವನ್ನು ಅಭ್ಯರ್ಥಿಯಲ್ಲಿ ಪ್ರಶ್ನಿಸಿದ ಪುತ್ತೂರಿನ ಬಿಜೆಪಿ ಕಾರ್ಯಕರ್ತ, ಲೋಕಸಭಾ ಸದಸ್ಯರಾಗಿ

ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು| ಅಭ್ಯರ್ಥಿ ಲಲ್ಲುಸಿಂಗ್ ತರಾಟೆಗೈದ ಪುತ್ತೂರಿನ ಬಿಜೆಪಿ ಕಾರ್ಯಕರ್ತ Read More »

ನಕಲಿ ಆಧಾರ್ ಕಾರ್ಡ್ ತೋರಿಸಿ ಸಂಸತ್ ಗೆ ಪ್ರವೇಶಿಸಲು ಯತ್ನ| ಮೂವರನ್ನು ಬಂಧಿಸಿದ ಭದ್ರತಾ ಸಿಬ್ಬಂದಿ

ಸಮಗ್ರ ನ್ಯೂಸ್: ನಕಲಿ ಆಧಾರ್ ಕಾರ್ಡ್ ತೋರಿಸಿ ಸಂಸತ್ ಭವನ ಪ್ರವೇಶಿಸಲು ಯತ್ನಿಸಿದ ಸಂದರ್ಭದಲ್ಲಿ ಪರಿಶೀಲನೆ ನಡೆಸಿದ ಭದ್ರತಾ ಸಿಬ್ಬಂದಿ ಮೂವರನ್ನು ಬಂಧಿಸಿದ್ದಾರೆ. ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿಕೊಂಡು ಹೆಚ್ಚಿನ ಭದ್ರತೆಯ ಸಂಸತ್ತಿನ ಸಂಕೀರ್ಣಕ್ಕೆ ಪ್ರವೇಶಿಸಲು ಯತ್ನಿಸಿದ ಮೂವರು ಕಾರ್ಮಿಕರನ್ನು ಸಿಐಎಸ್‌ಎಫ್ ಸಿಬ್ಬಂದಿ ಬಂಧಿಸಿದ್ದಾರೆ. ಕಾಸಿಂ, ಮೋನಿಸ್ ಮತ್ತು ಸೋಯೆಬ್ ಎಂದು ಗುರುತಿಸಲ್ಪಟ್ಟ ಮೂವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಿಐಎಸ್‌ಎಫ್ ಹೆಚ್ಚಿನ ಪರಿಶೀಲನೆಯ ನಂತರ ಅವರ ಆಧಾರ್ ಕಾರ್ಡ್‌ಗಳು ನಕಲಿ ಎಂದು ಗೊತ್ತಾಗಿದೆ.

ನಕಲಿ ಆಧಾರ್ ಕಾರ್ಡ್ ತೋರಿಸಿ ಸಂಸತ್ ಗೆ ಪ್ರವೇಶಿಸಲು ಯತ್ನ| ಮೂವರನ್ನು ಬಂಧಿಸಿದ ಭದ್ರತಾ ಸಿಬ್ಬಂದಿ Read More »

HSPR ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನು 5 ದಿನ ಮಾತ್ರ ಬಾಕಿ

ಸಮಗ್ರ ನ್ಯೂಸ್: ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ. ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ

HSPR ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನು 5 ದಿನ ಮಾತ್ರ ಬಾಕಿ Read More »

ಉತ್ತರಾಖಂಡ್ ಚಾರಣ ದುರಂತದಲ್ಲಿ ಸಿಲುಕಿದ 13 ಜನ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಬೆಂಗಳೂರಿಗೆ ವಾಪಸ್

ಸಮಗ್ರ ನ್ಯೂಸ್: ಉತ್ತರಾಖಂಡ್ ಗೆ ಚಾರಣಕ್ಕೆಂದು ಕರ್ನಾಟಕದ 21 ಜನರು ತೆರಳಿದ್ದರು. ಈ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ಚಾರಣಿಗರು ಉತ್ತರಾಖಂಡದ ಸಹಸ್ತ್ರತಲ್‌ನಲ್ಲಿ ಅಪಾಯಕ್ಕೆ ಸಿಲುಕಿದ್ದು, ಆ ಪೈಕಿ 9 ಮಂದಿ ಮೃತಪಟ್ಟಿದ್ದರು. ಇದರಲ್ಲಿ ಬದುಕುಳಿದವರ ರಕ್ಷಣೆಗಾಗಿ ತುರ್ತು ಕಾರ್ಯಾಚರಣೆ ನಡೆಸಿ, ಮೃತಪಟ್ಟ ಕನ್ನಡಿಗರ ಶವಗಳನ್ನು ಬೆಂಗಳೂರಿಗೆ ತರುವ ಬಗ್ಗೆ ಉತ್ತರಾಖಂಡ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಕಾರ್ಯದರ್ಶಿ ಜೊತೆ ರಾಜ್ಯದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಾತುಕತೆ ನಡೆಸಿ, ಇದೀಗ

ಉತ್ತರಾಖಂಡ್ ಚಾರಣ ದುರಂತದಲ್ಲಿ ಸಿಲುಕಿದ 13 ಜನ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಬೆಂಗಳೂರಿಗೆ ವಾಪಸ್ Read More »

ಒಡಿಶಾದಲ್ಲಿ ಗೆಲುವು ಸಾಧಿಸಿದ ಬಿಜೆಪಿ/ ಅಂತ್ಯ ಕಂಡ 24 ವರ್ಷಗಳ ಪಟ್ನಾಯಕ್ ಆಡಳಿತ

ಸಮಗ್ರ ನ್ಯೂಸ್: ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಕಂಡ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಅಧಿಕಾರ ಅಂತ್ಯಗೊಂಡಿದೆ ಬುಧವಾರ ಮುಂಜಾನೆ ರಾಜ್ಯಪಾಲರಾದ ರಘುವರ್ ದಾಸ್ ಬಳಿ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ ನವೀನ್, ಪತ್ರಕರ್ತರತ್ತ ಕೈಬೀಸುತ್ತಾ ಹಿಂದಿರುಗಿದರು. 147 ಸ್ಥಾನಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 78 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿದ್ದರೆ, ಬಿಜೆಡಿ ಕೇವಲ 51 ಸ್ಥಾನಗಳಿಗೆ ಸೀಮಿತವಾಗಿದೆ.ನವೀನ್ ಪಟ್ನಾಯಕ್ ಮೊದಲ ಬಾರಿಗೆ ಮಾರ್ಚ್ 5, 2000ರಂದು

ಒಡಿಶಾದಲ್ಲಿ ಗೆಲುವು ಸಾಧಿಸಿದ ಬಿಜೆಪಿ/ ಅಂತ್ಯ ಕಂಡ 24 ವರ್ಷಗಳ ಪಟ್ನಾಯಕ್ ಆಡಳಿತ Read More »