Editor

ಮೈತ್ರಿಗೆ ಟಾಟಾ ಹೇಳಿದ ಆಮ್ ಆದ್ಮಿ/ 2025ರ ವಿಧಾನ ಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿದು ಬಿಜೆಪಿ ಮಿತ್ರ ಪಕ್ಷಗಳ ನೆರವಿನಿಂದ ರಚಿಸುವ ತಯಾರಿಯಲ್ಲಿದ್ದರೆ ಇನ್ನೊಂದೆಡೆ ಇಂಡಿಯಾ ಮೈತ್ರಿ ಕೂಟದಿಂದ ಆಮ್ ಆದ್ಮಿ ಪಕ್ಷ ಹೊರಬಂದಿದೆ. 2025ರ ವಿಧಾನಸಭಾ ಚುನಾವಣೆಗೆ ಆಪ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ ಎಂದು ಆಪ್ ಸಚಿವ ಗೋಪಾಲ್ ರೈ ಘೋಷಣೆ ಮಾಡಿದ್ದಾರೆ. ಲೋಕಸಭಾ ಚುನಾವಣೆಗಾಗಿ ವಿಪಕ್ಷಗಳು ಒಗ್ಗಟ್ಟಾಗಿ ಹೋರಾಟ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಆಮ್ ಆದ್ಮಿ ಪಾರ್ಟಿ ಲೋಕಸಭಾ ಚುನಾವಣೆಗಾಗಿ ಮಾಡಿದ ಮೈತ್ರಿಗೆ ಸಂಪೂರ್ಣ ಬೆಂಬಲ ನೀಡಿ […]

ಮೈತ್ರಿಗೆ ಟಾಟಾ ಹೇಳಿದ ಆಮ್ ಆದ್ಮಿ/ 2025ರ ವಿಧಾನ ಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧೆ Read More »

ಮುಕ್ತಾಯಗೊಂಡ ಚುನಾವಣೆ/ ತೆರವಾಯಿತು ನೀತಿ ಸಂಹಿತೆ

ಸಮಗ್ರ ನ್ಯೂಸ್: ದೇಶದಲ್ಲಿ ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯಗಳಲ್ಲಿ ನಡೆದ ವಿಧಾನಸಬಾ ಚುನಾವಣೆ ಮುಕ್ತಾಯವಾಗಿದ್ದು, ಈ ಹಿನ್ನೆಲೆ ಮಾರ್ಚ್ 16 ರಂದು ಜಾರಿಗೆ ತರಲಾಗಿದ್ದ ಮಾದರಿ ನೀತಿ ಸಂಹಿತೆಯನ್ನು ಇಂದು ತೆರವುಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಲೋಕಸಭಾ ಚುನಾವಣೆ ಮತ್ತು ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ, ಆಂಧ್ರ ಪ್ರದೇಶ ರಾಜ್ಯಗಳಿಗೆ ಇದೇ ವೇಳೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಹೀಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮಾದರಿ ನೀತಿ ಸಂಹಿತೆಯನ್ನು ಅಂತ್ಯಗೊಳಿಸಲಾಗಿದೆ ಎಂದು ಚುನಾವಣಾ

ಮುಕ್ತಾಯಗೊಂಡ ಚುನಾವಣೆ/ ತೆರವಾಯಿತು ನೀತಿ ಸಂಹಿತೆ Read More »

ಸುಬ್ರಹ್ಮಣ್ಯ: ಕಾಂಗ್ರೆಸ್ ಮತ್ತು ಮತದಾರರ ಕುರಿತು ಅವಹೇಳನಕಾರಿ ಸ್ಟೇಟಸ್|‌ಠಾಣೆ ಮೆಟ್ಟಿಲೇರಿತು ಪ್ರಕರಣ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಪಕ್ಷ ಹಾಗೂ ಕಾಂಗ್ರೆಸ್‌ ಮತದಾರರ ಬಗ್ಗೆ ವ್ಯಕ್ತಿಯೋರ್ವ ಅವಹೇಳನಕಾರಿ ಸ್ಟೇಟಸ್‌ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ಪೊಲೀಸ್‌ ಠಾಣೆ ಮೆಟ್ಟಲೇರಿದ ಘಟನೆ ಜೂ. 5ರಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದಲ್ಲಿ ನಡೆದಿದೆ. ಪಂಜದಲ್ಲಿ ಅಂಗಡಿ ವ್ಯವಹಾರ ನಡೆಸುತ್ತಿರುವ ವ್ಯಕ್ತಿಯೋರ್ವರು ಕಾಂಗ್ರೆಸ್‌ ಪಕ್ಷದ ಬಗ್ಗೆ ಹಾಗೂ ಕಾಂಗ್ರೆಸ್‌ ಮತದಾರರ ಬಗ್ಗೆ ಅವಹೇಳನಕಾರಿ ಸ್ಟೇಟಸ್‌ ಹಾಕಿದ್ದಾರೆಂಬ ಆರೋಪ ವ್ಯಕ್ತವಾಗಿದ್ದು, ಇದನ್ನು ಗಮನಿಸಿದ ಅಲ್ಲಿನ ಕೆಲವು ಕಾಂಗ್ರೆಸ್‌ ಮುಖಂಡರು ಅವಹೇಳನಕಾರಿ ಸ್ಟೇಟಸ್‌ ಹಾಕಿದ ವ್ಯಕ್ತಿಯ ವಿರುದ್ಧ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಕಾಂಗ್ರೆಸ್ ಮತ್ತು ಮತದಾರರ ಕುರಿತು ಅವಹೇಳನಕಾರಿ ಸ್ಟೇಟಸ್|‌ಠಾಣೆ ಮೆಟ್ಟಿಲೇರಿತು ಪ್ರಕರಣ Read More »

ಟಿ-20 ವಿಶ್ವಕಪ್| ಪಾಕಿಸ್ತಾನ ಸದೆಬಡಿದ ಅಮೇರಿಕಾ

ಸಮಗ್ರ ನ್ಯೂಸ್: ಟೆಕ್ಸಾಸ್‌ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ಹಾಗೂ ಅಮೆರಿಕ ನಡುವಿನ ರಣರೋಚಕ ಪಂದ್ಯದಲ್ಲಿ ಆತಿಥೇಯ ಅಮೆರಿಕ ತಂಡ ಸೂಪರ್​ ಓವರ್​ನಲ್ಲಿ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಗೆಲುವಿಗೆ 160 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಅಮೆರಿಕ ಕೂಡ 20 ಓವರ್​​ಗಳಲ್ಲಿ 3 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಹೀಗಾಗಿ ಪಂದ್ಯ ಸೂಪರ್​ ಓವರ್​ನತ್ತ

ಟಿ-20 ವಿಶ್ವಕಪ್| ಪಾಕಿಸ್ತಾನ ಸದೆಬಡಿದ ಅಮೇರಿಕಾ Read More »

ನೂತನ‌ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆಯಿಂದ ‘ಕಪಾಳಮೋಕ್ಷ’!!

ಸಮಗ್ರ ನ್ಯೂಸ್: ನೂತನ ಸಂಸದೆಯಾಗಿ ಆಯ್ಕೆಯಾದ ಕಂಗನಾ ರಾಣಾವತ್ ಅವರು ಭದ್ರತೆಯನ್ನು ಮೀರಿ ಮೊಬೈಲ್ ಕೈಯಲ್ಲೇ ಹಿಡಿದು ತೆರಳೋದಕ್ಕೆ ವಿಮಾನ ನಿಲ್ದಾಣದಲ್ಲಿ ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಪೇದೆಯೊಂದಿಗೆ ಕಿರಿಕ್ ತೆಗೆದಿದ್ದಾರೆ. ಆ ಬಳಿಕ ವಾಗ್ವಾದ ನಡೆದಿದೆ. ಈ ವೇಳೆಯಲ್ಲಿ ನೂತನ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆ ಕಪಾಳ ಮೋಕ್ಷ ಮಾಡಿರುವುದಾಗಿ ತಿಳಿದು ಬಂದಿದೆ. ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಸೇರಿದ ಮಹಿಳಾ

ನೂತನ‌ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆಯಿಂದ ‘ಕಪಾಳಮೋಕ್ಷ’!! Read More »

ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ರೇವಣ್ಣ ಮತ್ತೆ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಎಸ್‌ಐಟಿ ಕಸ್ಟಡಿಯಲ್ಲಿ ಇದ್ದರು, ಇದೀಗ ಮತ್ತೆ ಅವಧಿ ವಿಸ್ತರಣೆಯಾಗಿದೆ. ಇಂದಿಗೆ ಐಎಸ್ಟಿ ಕಸ್ಟಡಿ ಮುಗಿದಿದ್ದರಿಂದ ಪ್ರಜ್ವಲ್ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಪ್ರಜ್ವಲ್ ರೇವಣ್ಣ ಅವರನ್ನು ಇನ್ನಷ್ಟು ವಿಚಾರಣೆ ನಡೆಸಬೇಕಿದೆ, ಹೀಗಾಗಿ ಅವರನ್ನು ಇನ್ನಷ್ಟು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಬೇಕೆಂದು ಎಸ್ಐಟಿ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ಕೋರ್ಟ್, ಪ್ರಜ್ವಲ್ ರೇವಣ್ಣ

ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ರೇವಣ್ಣ ಮತ್ತೆ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ Read More »

ಜೂ.8 ಅಲ್ಲ 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ|ಕೇಂದ್ರ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ!

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರಮಾಡಲಿದ್ದಾರೆ ಎನ್ನಲಾಗಿದೆ. ಪ್ರಧಾನಿ ಮೋದಿ’ ಪ್ರಮಾಣವಚನ ಸ್ವೀಕಾರ ಒಂದು ದಿನ ಮುಂದಕ್ಕೆ ಹೋಗಿದ್ದು, ಜೂ.9 ಕ್ಕೆ ನಿಗದಿಯಾಗಿದೆ. ಹಾಗೂ ಸಂಸದ ಕುಮಾರಸ್ವಾಮಿ ಅವರು ಕೂಡ ಜೂ.9 ರಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಜೂ.9 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ

ಜೂ.8 ಅಲ್ಲ 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ|ಕೇಂದ್ರ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ! Read More »

ವಿಧಾನ ಪರಿಷತ್ ಚುನಾವಣೆ| 11 ಮಂದಿ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನಪರಿಷತ್ತಿಗೆ ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಯಾಗಿರುವ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಐವಾನ್ ಡಿ’ಸೋಜ, ಕೆ.ಗೋವಿಂದರಾಜ್, ಜಗದೇವ್ ಗುತ್ತೇದಾರ್, ಬಲ್ಕೀಸ್ ಬಾನು, ಎನ್.ಎಸ್.ಭೋಸರಾಜು, ಡಾ.ಯತೀಂದ್ರ, ಎ.ವಸಂತಕುಮಾರ್, ಬಿಜೆಪಿ ಪಕ್ಷದಿಂದ ಸಿ.ಟಿ.ರವಿ, ಎನ್.ರವಿಕುಮಾರ್, ಮುಳೆ ಮಾರುತಿರಾವ್ ಹಾಗೂ ಜೆಡಿಎಸ್ ಪಕ್ಷದಿಂದ ಟಿ.ಎನ್.ಜವರಾಯಿ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ| 11 ಮಂದಿ ಅವಿರೋಧ ಆಯ್ಕೆ Read More »

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ| ಸಚಿವ ಸ್ಥಾನಕ್ಕೆ‌ ಬಿ.ನಾಗೇಂದ್ರ ರಾಜೀನಾಮೆ

ಸಮಗ್ರ ನ್ಯೂಸ್: ವಾಲ್ಮೀಕಿ ಆಭಿವೃದ್ದಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರು ಸಿಎಂ ನಿವಾಸಕ್ಕೆ ತೆರಳಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. ಅಲ್ಲದೆ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಶಾಸಕರುಗಳಾದ ಕೆ.ಗೋಪಾಲಯ್ಯ , ಅಶ್ವಥ್ ನಾರಾಯಣ, ಬೈರತಿ ಬಸವರಾಜ್ , ರವಿಕುಮಾರ್ ಸೇರಿದಂತೆ ಪ್ರಮುಖ ಮುಖಂಡರ ನಿಯೋಗವು ವಿಧಾನಸೌಧದಿಂದ ರಾಜಭವನಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ| ಸಚಿವ ಸ್ಥಾನಕ್ಕೆ‌ ಬಿ.ನಾಗೇಂದ್ರ ರಾಜೀನಾಮೆ Read More »

ಪುತ್ತೂರು:ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ

ಸಮಗ್ರ ನ್ಯೂಸ್: ಮುಳಿಯ ಜ್ಯುವೆಲ್ಸ್‌ನಿಂದ ವಿಶ್ವ ಪರಿಸರ ದಿನಾಚರಣೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮದ ಮೂಲಕ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ವಿತರಣೆ ಮಾಡಲಾಯಿತು. ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಕುಮಾರ್ ಹೊಳ್ಳ ಅವರಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನಡೆಯಿತು.

ಪುತ್ತೂರು:ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ Read More »