Editor

ಕೊಡಗು‌ ಜಿಲ್ಲೆಯಲ್ಲಿ ನಿಲ್ಲದ‌ ವರುಣಾರ್ಭಟ| ನಾಳೆ(ಜು.25) ಶಾಲೆ,‌ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ ( ಜು 25) ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಗುಡ್ಡಕುಸಿತ, ನೆರೆ ಅನಾಹುತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.

ಕೊಡಗು‌ ಜಿಲ್ಲೆಯಲ್ಲಿ ನಿಲ್ಲದ‌ ವರುಣಾರ್ಭಟ| ನಾಳೆ(ಜು.25) ಶಾಲೆ,‌ ಪಿಯು ಕಾಲೇಜುಗಳಿಗೆ ರಜೆ Read More »

ಧರ್ಮಸ್ಥಳ: ಹೂತಿಟ್ಟ ಶವ ಹೊರತೆಗೆಯಲು ಸ್ವಯಂಪ್ರೇರಿತವಾಗಿ ಮುಂದೆ ಬಂದ ಇಂಜಿನಿಯರ್ ಗಳು, ವಿಜ್ಞಾನಿಗಳು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಿಗೂಢವಾಗಿ ಶವ ಹೂತಿಟ್ಟ ಪ್ರಕರಣ ಸಂಬಂಧ ಹೊಸ ಬೆಳವಣಿಗೆ ನಡೆದಿದೆ. ಶವ ಹೂತ ಪ್ರಕರಣದ ತನಿಖೆಗೆ ಹಲವು ವಿಜ್ಞಾನಿಗಳು, ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ತಜ್ಞರು ತಮ್ಮ ಸೇವೆಗಳನ್ನು ಸ್ವಯಂಪ್ರೇರಿತವಾಗಿ ನೀಡಲು ಮುಂದೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ 2003ರಲ್ಲಿ ನಾಪತ್ತೆಯಾಗಿದ್ದ ಯುವತಿಯ ತಾಯಿ ಸುಜಾತಾ ಭಟ್ ಅವರನ್ನು ಸಂಪರ್ಕಿಸಿ ನ್ಯಾಯಾಲಯದ ಮುಂದಿಟ್ಟು ಅನುಮತಿ ಪಡೆಯುವಂತೆ ಮನವಿ ಮಾಡಿದ್ದಾರೆ. ಸುಜಾತ ಭಟ್ ಪರ ವಕೀಲ ಮಂಜುನಾಥ್ ಪತ್ರಿಕಾ ಹೇಳಿಕೆಯಲ್ಲಿ, ‘ಈ ತಜ್ಞರು ತಮ್ಮ ವೈಜ್ಞಾನಿಕ

ಧರ್ಮಸ್ಥಳ: ಹೂತಿಟ್ಟ ಶವ ಹೊರತೆಗೆಯಲು ಸ್ವಯಂಪ್ರೇರಿತವಾಗಿ ಮುಂದೆ ಬಂದ ಇಂಜಿನಿಯರ್ ಗಳು, ವಿಜ್ಞಾನಿಗಳು Read More »

ಜು.25ರಂದು ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಪ್ರವಾಸ

ಸಮಗ್ರ ನ್ಯೂಸ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜುಲೈ 25 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55 ಮಂಗಳೂರು ವಿಮಾನ ನಿಲ್ದಾಣ ಆಗಮನ, 8- ಸಕ್ರ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10:30 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 – ದಕ್ಷಿಣ

ಜು.25ರಂದು ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಪ್ರವಾಸ Read More »

ಉಪ್ಪಿನಂಗಡಿ: ಹಾರ್ನ್ ಹಾಕಿ ದಾರಿ‌ ಬಿಡಲು ಹೇಳಿದ್ದಕ್ಕೆ ಬಸ್ ಡ್ರೈವರ್ ಮೇಲೆ ಹಲ್ಲೆಗೈದ‌ ಬೈಕ್ ಸವಾರರು| ಇಬ್ಬರ ಮೇಲೆ ಕೇಸು ದಾಖಲು

ಸಮಗ್ರ ನ್ಯೂಸ್: ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಕೆಎಸ್‌ಆರ್ ಟಿಸಿ ಬಸ್ ಡ್ರೈವರ್ ಮತ್ತು ಪ್ರಯಾಣಿಕ ಮೇಲೆ ಬೈಕ್ ಸವಾರರಿಬ್ಬರು ಹಲ್ಲೆ ಮಾಡಿದ ಘಟನೆ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ಚಾಲಕ ರಿಯಾಜ್ ಅಹಮ್ಮದ್ ಎಂಬವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು ಕೊಡುವ ಸಲುವಾಗಿ ಹಾರ್ನ್ ಹಾಕಿದ್ದರು. ಇದರಿಂದ ಕೆರಳಿದ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡಗಟ್ಟಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿ

ಉಪ್ಪಿನಂಗಡಿ: ಹಾರ್ನ್ ಹಾಕಿ ದಾರಿ‌ ಬಿಡಲು ಹೇಳಿದ್ದಕ್ಕೆ ಬಸ್ ಡ್ರೈವರ್ ಮೇಲೆ ಹಲ್ಲೆಗೈದ‌ ಬೈಕ್ ಸವಾರರು| ಇಬ್ಬರ ಮೇಲೆ ಕೇಸು ದಾಖಲು Read More »

ಭಾರೀ ಮಳೆ ಹಿನ್ನೆಲೆ| ಇಂದು(ಜು.24) ಕಡಬ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಮುಂಜಾಗ್ರತಾ ಕ್ರಮವಾಗಿ ಕಡಬ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.24ಕ್ಕೆ ರಜೆ ಘೋಷಣೆ ಮಾಡಿ ಕಡಬ ತಹಸೀಲ್ದಾ‌ರ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಮೂಡಬಿದಿರೆ, ಮಂಗಳೂರು, ಮೂಲ್ಕಿ ತಾಲೂಕಿನಲ್ಲೂ ರಜೆ ನೀಡಲಾಗಿದೆ.

ಭಾರೀ ಮಳೆ ಹಿನ್ನೆಲೆ| ಇಂದು(ಜು.24) ಕಡಬ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಜು.25ರಂದು ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ,ಪಿಯು ಕಾಲೇಜುಗಳಿಗೆ ಜು 25ರಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಭಾರೀ ಮಳೆ‌ ಹಾಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಜು.25ರಂದು ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಇಂದು(ಜು. 24) ಆಷಾಡ (ಆಟಿ) ಅಮಾವಾಸ್ಯೆ| ಕರಾವಳಿಯ ದೇಗುಲಗಳಲ್ಲಿ ವಿಶೇಷ ಪುಣ್ಯಸ್ನಾನ

ಸಮಗ್ರ ನ್ಯೂಸ್: ಇಂದು ಆಷಾಢ ಮಾಸದ ಅಮಾವಾಸ್ಯೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ರಾಜ್ಯಾದ್ಯಂತ ಹಲವು ದೇಗುಲಗಳಲ್ಲಿ ವಿಶೇಷ ಪೂಜೆ ಪ್ರಾರ್ಥನೆ, ಪುಣ್ಯ ಸ್ನಾನಗಳು ನಡೆಯುತ್ತಿದೆ. ಕರಾವಳಿಯ ಕಾರಿಂಜೇಶ್ವರ ದೇಗುಲ, ನರಹರಿ ಪರ್ವತ, ಧರ್ಮಸ್ಥಳ ಮುಂತಾದೆಡೆ ಭಕ್ತರು ಮುಂಜಾನೆಯಿಂದಲೇ ಹರಿದು ಬರುತ್ತಿದ್ದಾರೆ. ಪ್ರಸ್ತುತ ಆಟಿ ಅಮಾವಾಸ್ಯೆ ಎನ್ನುವ ದಿನವನ್ನು ಶ್ರದ್ಧೆಯಿಂದ ಆಚರಿಸುವ ಕ್ರಮ ಪ್ರಾದೇಶಿಕವಾದದ್ದು. ನಮ್ಮ ಊರಲ್ಲಿ ಇರುವಂತಹ ಕ್ರಮ. ಇಂತಹ ಸಂದರ್ಭದಲ್ಲಿ ಕೆಲವು ಹಬ್ಬಗಳನ್ನು ಎರಡೂ ದಿನಗಳಲ್ಲಿ ಆಚರಿಸುವ ಕ್ರಮ ಇದೆ . ಆದರೆ ಅಟಿ

ಇಂದು(ಜು. 24) ಆಷಾಡ (ಆಟಿ) ಅಮಾವಾಸ್ಯೆ| ಕರಾವಳಿಯ ದೇಗುಲಗಳಲ್ಲಿ ವಿಶೇಷ ಪುಣ್ಯಸ್ನಾನ Read More »

ಭಾರೀ ಮಳೆ ಹಿನ್ನಲೆ| ಇಂದು(ಜು.24) ಉಡುಪಿ ಜಿಲ್ಲೆ ಹಾಗೂ ದ.ಕ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜುಲೈ 24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ. ದ.ಕ

ಭಾರೀ ಮಳೆ ಹಿನ್ನಲೆ| ಇಂದು(ಜು.24) ಉಡುಪಿ ಜಿಲ್ಲೆ ಹಾಗೂ ದ.ಕ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಧರ್ಮಸ್ಥಳ ವರದಿಗಳಿಗೆ ಮಾಧ್ಯಮ ನಿರ್ಬಂಧ| ಸುಪ್ರೀಂನಲ್ಲಿ ಅರ್ಜಿ ವಿಚಾರಣೆಗೆ ನಕಾರ

ಸಮಗ್ರ ನ್ಯೂಸ್: ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿರುವ ದೂರಿಗೆ ಸಂಬಂಧಿಸಿದಂತೆ, ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಅದನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಯಾವುದೇ ‘ಮಾನಹಾನಿಕರ ವಿಷಯ’ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಬುಧವಾರ (ಜುಲೈ 23) ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠದ ಮುಂದೆ ಅರ್ಜಿದಾರರಾದ ‘ಥರ್ಡ್ ಐ ಯೂಟ್ಯೂಬ್ ಚಾನೆಲ್’ ಪರ ವಕೀಲರು ವಿಷಯ ಪ್ರಸ್ತಾಪಿಸಿದ್ದರು.

ಧರ್ಮಸ್ಥಳ ವರದಿಗಳಿಗೆ ಮಾಧ್ಯಮ ನಿರ್ಬಂಧ| ಸುಪ್ರೀಂನಲ್ಲಿ ಅರ್ಜಿ ವಿಚಾರಣೆಗೆ ನಕಾರ Read More »

ಧರ್ಮಸ್ಥಳ ಹೆಣ ಹೂತ ಪ್ರಕರಣ| ಎಸ್ಐಟಿ ತಂಡಕ್ಕೆ ಹೆಚ್ಚುವರಿ ಅಧಿಕಾರಿಗಳ ನಿಯೋಜನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡಕ್ಕೆ(ಎಸ್‌ಐಟಿ) ಅಧಿಕಾರಿಗಳನ್ನು ನಿಯೋಜನೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶಿಸಿದ್ದಾರೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿ ಭಾನುವಾರ ಸರ್ಕಾರ ಆದೇಶ ಹೊರಡಿಸಿತ್ತು. ಈ ತಂಡದಲ್ಲಿ ನೇಮಕಾತಿ ವಿಭಾಗದ ಡಿಐಜಿ

ಧರ್ಮಸ್ಥಳ ಹೆಣ ಹೂತ ಪ್ರಕರಣ| ಎಸ್ಐಟಿ ತಂಡಕ್ಕೆ ಹೆಚ್ಚುವರಿ ಅಧಿಕಾರಿಗಳ ನಿಯೋಜನೆ Read More »