ಬೆಳಗಾವಿ: ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಹೋರಾಟ| ರಾ.ಹೆದ್ದಾರಿ ತಡೆದು ಪ್ರತಿಭಟನೆ| ಲಾಠಿಚಾರ್ಜ್ ನಡೆಸಿದ ಪೊಲೀಸರ ಮೇಲೆ ಕಲ್ಲು ತೂರಾಟ
ಸಮಗ್ರ ನ್ಯೂಸ್: ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಬೆಳಗಾವಿಯ ಹತ್ತರಗಿ ಬಳಿ ರೈತರು ಉಗ್ರ ಸ್ವರೂಪದ ಹೋರಾಟ ನಡೆಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ದಿಢೀರ್ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತರಗಿ ಬಳಿ ಹೆದ್ದಾರಿಯಲ್ಲಿ ಬೀಡು ಬಿಟ್ಟಿರುವ ಕಬ್ಬು ಬೆಳೆಗಾರರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ಎಚ್ಚರಿಸಿದ್ದರು. ಆದರೆ ಹೆದ್ದರೈ ಬಂದ್ ಮಾಡದಂತೆ ಪೊಲೀಸರು ಪ್ರತಿಭಟನಾಕಾರರ […]










