Editor

ಅಪ್ರಾಪ್ತ ಸಹೋದರಿಯನ್ನು ಗರ್ಭಿಣಿಯನ್ನಾಗಿಸಿದ ಸಹೋದರರು| ಪೈಶಾಚಿಕ ಕೃತ್ಯ ಎಸಗಿದವರ ಬಂಧನ

ಸಮಗ್ರ ನ್ಯೂಸ್: ತಮ್ಮ 14 ವರ್ಷದ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಸಹೋದರರನ್ನು ಉತ್ತರಪ್ರದೇಶದ ಗಾಜೀಯಾಬಾದ್ ಪೊಲೀಸರು ಬಂಧಿಸಿದ್ದಾರೆ. ತಿಲಾ ಮೋರ್ಹ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಭಾನುವಾರ ಸಹೋದರರನ್ನು ಬಂಧಿಸಲಾಗಿದೆ. ದೂರಿನ ಪ್ರಕಾರ ಇಬ್ಬರು ಸಹೋದರರು ತಮ್ಮ ಸಹೋದರಿ 8 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಕಳೆದ ಒಂದು ವರ್ಷದಿಂದ ಆಕೆಯನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದು, ಈ ಕಾರಣದಿಂದ ಆಕೆ ಗರ್ಭಿಣಿಯಾಗಿದ್ದಳು. ಶನಿವಾರ ಅಪ್ರಾಪ್ತ ಬಾಲಕಿಗೆ ಹೊಟ್ಟೆನೋವು […]

ಅಪ್ರಾಪ್ತ ಸಹೋದರಿಯನ್ನು ಗರ್ಭಿಣಿಯನ್ನಾಗಿಸಿದ ಸಹೋದರರು| ಪೈಶಾಚಿಕ ಕೃತ್ಯ ಎಸಗಿದವರ ಬಂಧನ Read More »

ಹವಾಮಾನ ವರದಿ| ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡದಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗಲಿದ್ದು, ಮೇ 24ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಲಿದೆ. ಯಲ್ಲಾಪುರ, ಎಚ್​ಡಿಕೋಟೆ, ಕೊಳ್ಳೇಗಾಲ, ಸಿರಾ, ಯುಗಟಿಯಲ್ಲಿ ಹೆಚ್ಚು ಮಳೆಯಾಗಿದೆ. ಹೊನ್ನಾವರ, ದೇವನಹಳ್ಳಿ, ಶ್ರವಣಬೆಳಗೊಳ, ಭಾಗಮಂಡಲ, ಕಿರವತ್ತಿ, ಮಂಗಳೂರು, ಹಗರಿಬೊಮ್ಮನಹಳ್ಳಿ, ಹೊಸದುರ್ಗಾ, ಚನ್ನರಾಯಪಟ್ಟಣ, ಶಿವಮೊಗ್ಗ, ದಾವಣಗೆರೆ,

ಹವಾಮಾನ ವರದಿ| ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ Read More »

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಟಿಸಿ ಕೊಟ್ಟಿಲ್ಲವೆಂದು ಬೇಸರದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೊನ್ನೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಬಂದಿದ್ದು ಈತ ಉತ್ತೀರ್ಣನಾಗಿದ್ದ. ಇವನು ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆದರೆ ಆತ್ಮಹತ್ಯೆ  ಮಾಡಿಕೊಂಡಿದ್ದಾನೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ನಿತಿನ್‌ ಆಚಾರಿ, ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದ. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬೈದಿದ್ದರಿಂದ ಬೇಸರಗೊಂಡು ಡೆತ್ ನೋಟ್

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ Read More »

ಇಬ್ರಾಹಿಂ ರೈಸಿ ನಿಧನ/ ಇರಾನ್ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಮೊಖರ್ ನೇಮಕ

ಸಮಗ್ರ ನ್ಯೂಸ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನ ಹೊಂದಿರುವ ಹಿನ್ನಲೆಯಲ್ಲಿ ಇರಾನ್ ನ ಮೊದಲ ಉಪಾಧ್ಯಕ್ಷ ಮೊಹಮ್ಮದ್ ಮೊಖರ್ ಅವರನ್ನು ದೇಶದ ಹಂಗಾಮಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇರಾನ್ ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೋಮವಾರ ಈ ಘೋಷಣೆ ಮಾಡಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹುಸೇನ್ ಅಮಿರ್ ಬೊಲ್ಲಾಹಿಯಾನ್, ಪೂರ್ವ ಅರ್ಬೈಜಾನ್ ಪ್ರಾಂತ್ಯದ ಗವರ್ನರ್ ಮತ್ತು ಇತರ ಅಧಿಕಾರಿಗಳು ಮತ್ತು ಅಂಗರಕ್ಷಕರನ್ನು ಹೊತ್ತ ಹೆಲಿಕಾಪ್ಟರ್ ಭಾನುವಾರ

ಇಬ್ರಾಹಿಂ ರೈಸಿ ನಿಧನ/ ಇರಾನ್ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಮೊಖರ್ ನೇಮಕ Read More »

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್

ಸಮಗ್ರ ನ್ಯೂಸ್: ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ನ ಪಡೆದುಕೊಂಡ ನಂತರ ಮೊದಲ ಬಾರಿಗೆ ಭಾರತದಲ್ಲಿ ಮತದಾನ ಮಾಡಿದ್ದಾರೆ. ನಂತರ ಮಾತನಾಡಿದ ಅಕ್ಷಯ್, ಭಾರತದ ಅಭಿವೃದ್ಧಿ ಮತ್ತು ಬಲಿಷ್ಠ ರಾಷ್ಟ್ರಕ್ಕಾಗಿ ಮತದಾನ ಮಾಡಿ ಎಂದಿದ್ದಾರೆ. ಕೆನಡಾ ಪೌರತ್ವ ಪಡೆದಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇತ್ತೀಚೆಗಷ್ಟೇ ಭಾರತದ ಪೌರತ್ನ ಪಡೆದುಕೊಂಡಿದ್ದರು.

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್ Read More »

ಸಂಸತ್ ಭವನಕ್ಕೆ ಮೇ 20ರಿಂದ ಬರೋಬ್ಬರಿ 3300 ಸಿಬ್ಬಂದಿ ಭದ್ರತೆ/ ಭದ್ರತಾ ಹೊಣೆ ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲ(ಸಿಐಎಸ್‍ಎಫ್)ದ ಹೆಗಲಿಗೆ

ಸಮಗ್ರ ನ್ಯೂಸ್: ಸಂಸತ್ ಭವನಕ್ಕೆ ಈವರೆಗೆ ಭದ್ರತೆ ಒದಗಿಸುತ್ತಿದ್ದ 1400 ಸಿಆರ್‍ಪಿಎಫ್ ಸಿಬ್ಬಂದಿಯನ್ನು ಸಂಪೂರ್ಣ ಹಿಂಪಡೆದು, ಮೇ 20ರಿಂದ ಬರೋಬ್ಬರಿ 3300 ಸಿಐಎಸ್‍ಎಫ್ (ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲ) ಸಿಬ್ಬಂದಿ ಭದ್ರತೆ ಒದಗಿಸಲಿದ್ದಾರೆ. , ಹೊಸ ಹಾಗೂ ಹಳೆಯ ಸಂಸತ್ ಭವನದಲ್ಲಿ ಭಯೋತ್ಪಾದನೆ ನಿಗ್ರಹ ಚಟುವಟಿಕೆ, ಸುರಕ್ಷತಾ ತಪಾಸಣೆ ಸೇರಿದಂತೆ ಎಲ್ಲಾ ರೀತಿಯ ಭದ್ರತಾ ಜವಾಬ್ದಾರಿಯನ್ನು ಸಿಐಎಸ್‍ಎಫ್‍ಗೆ ವಹಿಸಲಾಗುತ್ತಿದೆ. ಕೆಲ ತಿಂಗಳ ಹಿಂದೆ ಸಂಸತ್ ಭವನದೊಳಗೆ ಕಿಡಿಗೇಡಿಗಳು ನುಸುಳಿ ಹೊಗೆ ಬಾಂಬ್ ಸಿಡಿಸಿದ ಪ್ರಕರಣದ ಬಳಿಕ ಭದ್ರತಾ

ಸಂಸತ್ ಭವನಕ್ಕೆ ಮೇ 20ರಿಂದ ಬರೋಬ್ಬರಿ 3300 ಸಿಬ್ಬಂದಿ ಭದ್ರತೆ/ ಭದ್ರತಾ ಹೊಣೆ ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲ(ಸಿಐಎಸ್‍ಎಫ್)ದ ಹೆಗಲಿಗೆ Read More »

ರಿಷಿ ಸುನಕ್ ದಂಪತಿಯ ಆಸ್ತಿ 651 ದಶಲಕ್ಷ ಪೌಂಡ್/ ಶ್ರೀಮಂತಿಕೆಯಲ್ಲಿ ಬ್ರಿಟನ್ ದೊರೆಯನ್ನು ಹಿಂದಿಕ್ಕಿದ ಮೂರ್ತಿ ಅಳಿಯ

ಸಮಗ್ರ ನ್ಯೂಸ್: ಭಾರತೀಯ ಮೂಲದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ, ಬೆಂಗಳೂರಿನ ಪ್ರಖ್ಯಾತ ಐಟಿ ಕಂಪನಿ ಇನ್ಫೋಸಿಸ್‍ನ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ- ಸುಧಾಮೂರ್ತಿಯವರ ಮಗಳು ಅಕ್ಷತಾ ಮೂರ್ತಿ ಅವರ ಒಟ್ಟು ಆಸ್ತಿ ಬ್ರಿಟನ್ ದೊರೆ ಚಾಲ್ರ್ಸ್‍ಗಿಂತಲೂ ಹೆಚ್ಚು ಎಂದು ಬ್ರಿಟನ್‍ನ ದ ಸಂಡೇ ಟೈಮ್ಸ್ ವರದಿ ಮಾಡಿದೆ. ದ ಸಂಡೇ ಟೈಮ್ಸ್ ಇತ್ತೀಚೆಗೆ ಬ್ರಿಟನ್‍ನ 1000 ಶ್ರೀಮಂತರು/ ಶ್ರೀಮಂತ ಕುಟುಂಬಗಳ ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಿಷಿ ಸುನಕ್ ದಂಪತಿ 651 ದಶಲಕ್ಷ ಪೌಂಡ್

ರಿಷಿ ಸುನಕ್ ದಂಪತಿಯ ಆಸ್ತಿ 651 ದಶಲಕ್ಷ ಪೌಂಡ್/ ಶ್ರೀಮಂತಿಕೆಯಲ್ಲಿ ಬ್ರಿಟನ್ ದೊರೆಯನ್ನು ಹಿಂದಿಕ್ಕಿದ ಮೂರ್ತಿ ಅಳಿಯ Read More »

5,8 ಮತ್ತು 9ನೇ ತರಗತಿ ಗುಡ್ ನ್ಯೂಸ್ ನೀಡಿದ ಸರ್ಕಾರ

ಸಮಗ್ರ ನ್ಯೂಸ್: 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆ ಕುರಿತ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿ ಇನ್ನೂ ನಿರ್ಧಾರ ಆಗದಿರುವ ಕಾರಣ, ಈಗಾಗಲೇ ಶಾಲೆಗಳಲ್ಲಿ ಮಾಸಿಕವಾಗಿ, ಅರ್ಧ ವಾರ್ಷಿಕವಾಗಿ ನಡೆಸಲಾಗಿರುವ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಅಗ್ರಿಗೇಟ್ ಮಾಡಿ ಮುಂದಿನ ತರಗತಿಗಳಿಗೆ ದಾಖಲಿಸಲು ಮುಂದಾಗಿದೆ. ಸರ್ವೋಚ್ಚ ನ್ಯಾಯಾಲಯವು 2024ರ ಏಪ್ರಿಲ್ 08ರಂದು ಪಬ್ಲಿಕ್ ಪರೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಈಗ ಈ ಸಂಬಂಧ ತೀರ್ಪು ಪ್ರಕಟವಾಗುವ ಮೂಲಕ ಪಬ್ಲಿಕ್ ಪರೀಕ್ಷೆಯ ಬಗ್ಗೆ ನಿರ್ಧಾರವಾಗಬೇಕಿದೆ. ಅಂದರೆ, 2023-24ನೇ ಸಾಲಿನ 5, 8

5,8 ಮತ್ತು 9ನೇ ತರಗತಿ ಗುಡ್ ನ್ಯೂಸ್ ನೀಡಿದ ಸರ್ಕಾರ Read More »

ಕೊಡಗು: ಬೃಹತ್ ಗಾತ್ರದ ಕಾಡುಕೋಣ ಭೇಟೆ| ಓರ್ವ ಆರೋಪಿ ಬಂಧನ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಮಾದಪುರ ಸಮೀಪದ ನಂದಿಮೊಟ್ಟೆಯಲ್ಲಿ ಬೃಹತ್ ಗಾತ್ರದ ಕಾಡುಕೋಣವನ್ನು ಭೇಟೆಯಾಡಿದ ಘಟನೆ‌ ಮೇ.20 ರಂದು ನಡೆದಿದೆ. 539 ಕೆ.ಜಿ ಕಾಡುಕೋಣದ ಮಾಂಸ ಸೇರಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಎಮ್ಮೆಮಾಡು ನಿವಾಸಿ ಹ್ಯಾರಿಸ್(42),ಜೊತೆಗಿದ್ದ ಮತ್ತೊಬ್ಬ ಆರೋಪಿ ಮೂಸ ಬೆನ್ನಟ್ಟುವ ಸಂಧರ್ಭದಲ್ಲಿ ಪರಾರಿಯಾಗಿದ್ದಾನೆ. ಬಂಧಿತರಿಂದ ಎರಡು ಕತ್ತಿ ಹಾಗೂ ಪಿಕಪ್ ವಾಹನ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಡಿಕೇರಿ ವಲಯ ಅರಣ್ಯ ಅಧಿಕಾರಿಗಳು ತಡರಾತ್ರಿ ಅಪ್ಪಂಗಳದಲ್ಲಿ ವಾಹನವನ್ನು ಬೆನ್ನಟ್ಟಿ

ಕೊಡಗು: ಬೃಹತ್ ಗಾತ್ರದ ಕಾಡುಕೋಣ ಭೇಟೆ| ಓರ್ವ ಆರೋಪಿ ಬಂಧನ Read More »

ಪುತ್ತೂರು: ಕೊನೆಗೂ ಸಿಕ್ಕಿದ ಪ್ರೇತವರ| ಆಟಿ ತಿಂಗಳಲ್ಲಿ ನಡೆಯಲಿದೆ ‘ಕುಲೆ ಮದಿಮೆ’

ಸಮಗ್ರ ನ್ಯೂಸ್: ಪ್ರೇತ ವಿವಾಹಕ್ಕೆ ವರ ಬೇಕೆಂದು ಜಾಹೀರಾತು ಹಾಕಿದ ಸುದ್ದಿ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಜಾಹೀರಾತು ಹಾಕಿದ ಫಲವಾಗಿ ಪ್ರೇತವಿವಾಹಕ್ಕೆ ವರ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರೇತ ವಿವಾಹಕ್ಕೆ ಪ್ರೇತ ವಧುವಿಗೆ ಕಾಸರಗೋಡು ಸಮೀಪದ ಬಾಯಾರು ಕಡೆಯ ವರ ಈಗ ನಿಗದಿಯಾಗಿದ್ದು, ಮುಂದಿನ ಆಷಾಡ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. “ಸುಮಾರು 30 ವರ್ಷದ ಹಿಂದೆ ತೀರಿ ಹೋದಾಕೆಗೆ ಪ್ರೇತ ವರ ಸದ್ಯ ಬೇಕಾಗಿದೆ’ ಎಂದು ಪತ್ರಿಕೆಯಲ್ಲಿ ಜಾಹೀರಾತು ಹಾಕಿದ್ದನ್ನು ಗಮನಿಸಿದ

ಪುತ್ತೂರು: ಕೊನೆಗೂ ಸಿಕ್ಕಿದ ಪ್ರೇತವರ| ಆಟಿ ತಿಂಗಳಲ್ಲಿ ನಡೆಯಲಿದೆ ‘ಕುಲೆ ಮದಿಮೆ’ Read More »