Editor

ಉಳ್ಳಾಲ: ಸ್ಕೂಟರ್ ಡಿಕ್ಕಿ : ಸಹ ಸವಾರ ಮೃತ್ಯು

ಸಮಗ್ರ ನ್ಯೂಸ್ : ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರ್ಗೆ ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿ ಅಹಮ್ಮದ್ ನಿಷಾಧ್ (22)ಮೃತ ಯುವಕ. ನಿಷಾಧ್ ಇಂದು ಮುಂಜಾನೆ ನಾಲ್ಕು ಗಂಟೆಯ ವೇಳೆ ಸಯ್ಯದ್ ಹಫೀಝ್ ಎಂಬವರೊಂದಿಗೆ ಸ್ಕೂಟರಲ್ಲಿ ಸಹಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ ಬಂದು […]

ಉಳ್ಳಾಲ: ಸ್ಕೂಟರ್ ಡಿಕ್ಕಿ : ಸಹ ಸವಾರ ಮೃತ್ಯು Read More »

ಹವಾಮಾನ ವರದಿ| ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ| ಮೇ.18 ಮತ್ತು 19ರಂದು ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಹವಾಮಾನ ವರದಿ| ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ| ಮೇ.18 ಮತ್ತು 19ರಂದು ಭಾರೀ ಮಳೆ ಸಾಧ್ಯತೆ Read More »

ಪುಣೆ: ಪನೀರ್ ಬಿರಿಯಾನಿಯಲ್ಲಿ ಚಿಕನ್ ಪೀಸ್ ಕೊಟ್ಟ ಜೊಮ್ಯಾಟೊ

ಸಮಗ್ರ ನ್ಯೂಸ್ : ಜೊಮ್ಯಾಟೊದಿಂದ ಆರ್ಡರ್ ಮಾಡಿದ ಪನೀರ್ ಬಿರಿಯಾನಿಯಲ್ಲಿ ಚಿಕನ್ ಪೀಸ್ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಕರವೇನಗರದ ನಿವಾಸಿ ಪಂಕಜ್ ಶುಕ್ಲಾ ಎಂಬ ವ್ಯಕ್ತಿ ಎಕ್ಸ್ನಲ್ಲಿ ವಿಡಿಯೋ ಸಮೇತ ಪೋಸ್ಟ್ವೊಂದನ್ನು ಮಾಡಿದ್ದು, ಇದೀಗ ಈ ವಿಚಾರ ಎಲ್ಲೆಡೆ ವೈರಲ್ ಆಗುತ್ತಿದೆ. ಜೊಮ್ಯಾಟೊದಲ್ಲಿ ಪಿಕೆ ಬಿರಿಯಾನಿ ಹೌಸ್ನಿಂದ ಪನೀರ್ ಬಿರಿಯಾನಿ ಆರ್ಡರ್ ಮಾಡಿದ್ದರು. ಆರ್ಡರ್ ಬಂದಂತೆ ಅದನ್ನು ತೆರೆದು ನೋಡಿದಾಗ ಅದರಲ್ಲಿ ಪನೀರ್ ಜೊತೆಗೆ ಚಿಕನ್ ಪೀಸ್ಗಳೂ ಮಿಕ್ಸ್ ಆಗಿದ್ದು ಕಂಡು ಬಂದಿದೆ. ತಕ್ಷಣ

ಪುಣೆ: ಪನೀರ್ ಬಿರಿಯಾನಿಯಲ್ಲಿ ಚಿಕನ್ ಪೀಸ್ ಕೊಟ್ಟ ಜೊಮ್ಯಾಟೊ Read More »

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ಸಮಗ್ರ ನ್ಯೂಸ್: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲಾಗಿ, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಈಜಲು ತೆರಳಿದ್ದ ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು. ಇವರೆಲ್ಲ ಮುತ್ತಿಗೆ ಗ್ರಾಮದವರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ. ಇತ್ತ ಬದುಕುಳಿದ ಓರ್ವ

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು Read More »

ಮೈಸೂರು: ನಮಗೆ ಒಂದು ತೊಟ್ಟು ವಿಷ ಕೊಟ್ಟು ಬಿಡಿ ಎಂದು ಗ್ರಾಮ ತೊರೆಯಲು ಮುಂದಾದ ಗ್ರಾಮಸ್ಥರು

ಸಮಗ್ರ ನ್ಯೂಸ್ : ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತದೆ. ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ಸರಿಯಾದ ಚರಂಡಿ ವ್ಯವಸ್ಥೆ ಇಲ್ಲ. ನಮ್ಮ ಸಮಸ್ಯೆಯನ್ನು ಬಗೆಹರಿಸಿ ಇಲ್ಲದಿದ್ದರೆ ನಮಗೆ ಒಂದು ತೊಟ್ಟು ವಿಷ ಕೊಟ್ಟು ಬಿಡಿ ಎಂದು ಗ್ರಾಮಸ್ಥರು ಗ್ರಾಮವನ್ನು ತೊರೆಯಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದ ಹೊಸ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ನಿವಾಸಿಗಳು ಪರಿತಪಿಸುತ್ತಿದ್ದಾರೆ. ಶಾಸಕ ದರ್ಶನ್

ಮೈಸೂರು: ನಮಗೆ ಒಂದು ತೊಟ್ಟು ವಿಷ ಕೊಟ್ಟು ಬಿಡಿ ಎಂದು ಗ್ರಾಮ ತೊರೆಯಲು ಮುಂದಾದ ಗ್ರಾಮಸ್ಥರು Read More »

ವಿಜಯಪುರ : ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದ ಪಾಪಿ ತಾಯಿ

ಸಮಗ್ರ ನ್ಯೂಸ್ : ಮಹಿಳೆಯೊಬ್ಬಳು ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆ ಮೃತಪಟ್ಟ ನವಜಾತ ಶಿಶುವನ್ನು ಪ್ಲಾಸ್ಟಿಲ್ ಹಾಳೆಯಲ್ಲಿ ಸುತ್ತಿ ಚರಂಡಿಗೆ ಎಸೆದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾಳೆ. ಶಿಶುವನ್ನು ಗಮನಿಸಿದ ಗ್ರಾಮಸ್ಥರು ಚರಂಡಿಯಿಂದ ಗಂಡು ಮಗುವನ್ನು ಮೇಲಕ್ಕೆತ್ತಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಮುದ್ದೇಬಿಹಾಳ ಪೊಲೀಸರು ತಾಯಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ವಿಜಯಪುರ : ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದ ಪಾಪಿ ತಾಯಿ Read More »

ಲಕ್ನೋ : ಉಚಿತ ಪಡಿತರ ಜನರ ತೆರಿಗೆ ಹಣದಿಂದ ನೀಡಲಾಗುತ್ತಿದೆ: ಮಾಜಿ ಸಿಎಂ ಮಾಯಾವತಿ

ಸಮಗ್ರ ನ್ಯೂಸ್ : ಬಿಜೆಪಿ ಮತ್ತು ಅದರ ಕಂಪನಿಯ ಜನರು ಬಡವರಿಗೆ ಸ್ವಲ್ಪ ಪಡಿತರವನ್ನು ನೀಡಿ ಚುನಾವಣಾ ಲಾಭವನ್ನು ಪಡೆದುಕೊಳ್ಳಲು ಬಯಸುತ್ತಿದ್ದಾರೆ ಎಂದು ಬಿಎಸ್ಪಿ ಅಧಿನಾಯಕಿ, ಮಾಜಿ ಸಿಎಂ ಮಾಯಾವತಿ ಕಿಡಿಕಾರಿದ್ದಾರೆ. ಅವರು, ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಬಡವರಿಗೆ ಉಚಿತ ಪಡಿತರ ಬಿಜೆಪಿ ಅಥವಾ ಸರ್ಕಾರದಿಂದ ನೀಡುತ್ತಿಲ್ಲ. ಬದಲಿಗೆ ಇದು ಜನರು ಪಾವತಿಸುವ ತೆರಿಗೆ ಹಣದಿಂದ ನೀಡಲಾಗುತ್ತಿದೆ ಎಂದರು. ಮೋದಿ ಸೇರಿದಂತೆ ಬಿಜೆಪಿ ನಾಯಕರು ಪ್ರತಿ ಚುನಾವಣಾ ರ್ಯಾಲಿಯಲ್ಲಿ ಸರ್ಕಾರದ ಉಚಿತ ಪಡಿತರ ಯೋಜನೆಯ

ಲಕ್ನೋ : ಉಚಿತ ಪಡಿತರ ಜನರ ತೆರಿಗೆ ಹಣದಿಂದ ನೀಡಲಾಗುತ್ತಿದೆ: ಮಾಜಿ ಸಿಎಂ ಮಾಯಾವತಿ Read More »

ಜಕಾರ್ತ : ವಿಮಾನದಿಂದ ಇಳಿಯುತ್ತಿದ್ದಾಗ ಆಯಾತಪ್ಪಿ ಕೆಳಗೆ ಬಿದ್ದ ಸಿಬ್ಬಂದಿ

ಸಮಗ್ರ ನ್ಯೂಸ್ : ವಿಮಾನದಿಂದ ಇಳಿಯುತ್ತಿದ್ದ ಸಂದರ್ಭದಲ್ಲಿ ಸ್ಟೆಪ್ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ ಪರಿಣಾಮ ಸಿಬ್ಬಂದಿಯೊಬ್ಬರು ವಿಮಾನದಿಂದ ಕೆಳಗೆ ಬಿದ್ದ ಘಟನೆಯೊಂದು ಇಂಡೋನೇಷ್ಯಾದ ಜಕಾರ್ತ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸಾಮಾನ್ಯವಾಗಿ ವಿಮಾನದಿಂದ ಇಳಿಯಲು ಹಾಗೂ ಹತ್ತಲು ಕೃತಕ ಏಣಿಯನ್ನು ಬಳಸುತ್ತಾರೆ. ಅಂತೆಯೇ ಇಲ್ಲಿಯೂ ಏಣಿಯನ್ನು ಇಡಲಾಗಿದ್ದು, ಕೆಲ ಹೊತ್ತಿನ ಬಳಿಕ ಸಿಬ್ಬಂದಿ ಅಲ್ಲಿಂದ ತೆಗೆದಿದ್ದಾರೆ. ಇದನ್ನು ಗಮನಿಸದ ವಿಮಾನದ ಒಳಗಡೆ ಇದ್ದ ಸಿಬ್ಬಂದಿ ಇಳಿಯಲು ಯತ್ನಿಸಿದ್ದಾರೆ. ಮೆಟ್ಟಿಲು ಇದೆ ಎಂದು ಭಾವಿಸಿ ಕಾಲಿಟ್ಟಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

ಜಕಾರ್ತ : ವಿಮಾನದಿಂದ ಇಳಿಯುತ್ತಿದ್ದಾಗ ಆಯಾತಪ್ಪಿ ಕೆಳಗೆ ಬಿದ್ದ ಸಿಬ್ಬಂದಿ Read More »

ಮಾವಿನ ಹಣ್ಣು ಸವಿಯೋಣ ಬನ್ನಿ/ ಮೇ 24 ರಿಂದ ಲಾಲ್ ಬಾಗ್ ನಲ್ಲಿ ಮಾವಿನ ಮೇಳ

ಸಮಗ್ರ ನ್ಯೂಸ್: ಮೇ 24 ರಿಂದ ಜೂನ್ 10 ರವರೆಗೂ ಮಾವು ಹಾಗೂ ಹಲಸಿನ ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದ್ದು, ಲಾಲ್ ಬಾಗ್ ನಲ್ಲಿ ಮಾವಿನ ಮೇಳ ನಡೆಸುವುದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ, ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಈ ಮಾವಿನ ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಮಿಡಿ ಮಾವು ಪ್ರದರ್ಶನ

ಮಾವಿನ ಹಣ್ಣು ಸವಿಯೋಣ ಬನ್ನಿ/ ಮೇ 24 ರಿಂದ ಲಾಲ್ ಬಾಗ್ ನಲ್ಲಿ ಮಾವಿನ ಮೇಳ Read More »

ಪುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಛೆಟ್ರಿ

ಸಮಗ್ರ ನ್ಯೂಸ್: ಭಾರತದ ಪುಟ್ಬಾಲ್ ದಿಗ್ಗಜ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ್ದಾರೆ. ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಜೂನ್ 6 ರಂದು ನಡೆಯಲಿರುವ ಕುವೈತ್ ವಿರುದ್ಧ ಅಂತಾರಾಷ್ಟ್ರೀಯ ಫುಟ್ಬಾಲ್ ನಿಂದ ನಿವೃತ್ತಿಯಾಗುವುದಾಗಿ ಛೆಟ್ರಿ ಹೇಳಿದ್ದಾರೆ. 39 ವರ್ಷದ ಸುನಿಲ್ ಭಾರತ ಪರ ಇದುವರೆಗೆ 150 ಪಂದ್ಯಗಳನ್ನು ಆಡಿದ್ದಾರೆ. ಈ ಬಾರಿ 94 ಗೋಲು ಗಳಿಸಿ ಹೊಸ ದಾಖಲೆ ಬರೆದಿದ್ದಾರೆ. ಸುನಿಲ್ ಭೆಟ್ರಿ ಈಗ ಕುವೈತ್ ವಿರುದ್ಧದ ವಿಶ್ವಕಪ್ ಅರ್ಹತಾ ಪಂದ್ಯದೊಂದಿಗೆ ತಮ್ಮ ಅಂತಾರಾಷ್ಟ್ರೀಯ

ಪುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಛೆಟ್ರಿ Read More »