Editor

ಬೆಳಗಾವಿ: ಆಸ್ತಿ ವಿಚಾರವಾಗಿ ಮಾತಿನ ಚಕಮಕಿ| ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್:ಆಸ್ತಿ ವಿಚಾರವಾಗಿ ಅಣ್ಣನ ಮಗನಿಂದ ದಬದಬಹಟ್ಟಿ ಗ್ರಾಮದ ಕೇಶವ ಬೋಸಲೆ ಅವರ ಕೊಲೆ ಮಾಡಿದ ಘಟನೆ ಮೇ. 9ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಖಂಡೊಬಾ ಬೋಸಲೆ ಅನ್ನುವ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಹಲವು ವರ್ಷಗಳಿಂದ ಜಮೀನಿನ ಸಲುವಾಗಿ ಚಿಕ್ಕಪ್ಪ ಹಾಗೂ ಯುವಕನ ಜೊತೆ ಜಗಳ ನಡೆಯುತ್ತಲೆ ಇತ್ತು. ಮೇ.9ರಂದು ಇಬ್ಬರು ಕೂಡಿ ಕೊಕಟನೂರ ಹೊರವಲಯದಲ್ಲಿ ಮದ್ಯ ಸೇವನೆ ಮಾಡಿದ್ದಾರೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು […]

ಬೆಳಗಾವಿ: ಆಸ್ತಿ ವಿಚಾರವಾಗಿ ಮಾತಿನ ಚಕಮಕಿ| ಕೊಲೆಯಲ್ಲಿ ಅಂತ್ಯ Read More »

ಬಸ್ ನಿಲ್ದಾಣದಲ್ಲಿ ಅರೆನಗ್ನವಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆ

ಸಮಗ್ರ ನ್ಯೂಸ್: ಬಸ್ ನಿಲ್ದಾಣದಲ್ಲಿ ಅರೆನಗ್ನವಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಇದು ಚಿಕ್ಕಮಗಳೂರು ಜಿಲ್ಲೆಯ ಕಡೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಅರೇ ನಗ್ನನಾಗಿದ್ದ ಅಬ್ರಾಡ್ ಪ್ರಜೆ, ಬರೀ ಮೈಯಲ್ಲಿ ಸೊಂಟಕ್ಕೆ ಪ್ಲಾಸ್ಟಿಕ್ ಚೀಲ ಸುತ್ತಿಕೊಂಡು ನಗರದಾದ್ಯಂತ ಓಡಾಟ ನಡೆಸಿದ್ದಾನೆ. ಆತನನ್ನು ಹಿಡಿಯಲು ಪೊಲೀಸರು ಹರಸಾಹಸ ನಡೆಸಿದ್ದು, ಅರ್ಧ ಗಂಟೆಯಲ್ಲಿ ಸರ್ಕಾರಿ ಬಸ್ ನಿಲ್ದಾಣವನ್ನ 3 ಸುತ್ತು ಓಡಿಸಿದ್ದಾನೆ, ಕೊನೆಗೆ ಆತನನ್ನು ಹಿಡಿದರು, ಆತ ಪರ್ಷಿಯನ್​ ಭಾಷೆ ಮಾತನಾಡುತ್ತಿದ್ದ. ಈ ಹಿನ್ನಲೆ ಆತನ

ಬಸ್ ನಿಲ್ದಾಣದಲ್ಲಿ ಅರೆನಗ್ನವಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆ Read More »

ಜೈಲಲಿರುವ ರೇವಣ್ಣಗೆ ಮತ್ತೆ ಸಂಕಷ್ಟ| ಮೂರು ದಿನ ಯಾರಿಗೂ ಇಲ್ಲ ರೇವಣ್ಣ ಭೇಟಿ ಅವಕಾಶ

ಸಮಗ್ರ ನ್ಯೂಸ್: ಕಿಡ್ನ್ಯಾಪ್ ಕೇಸ್​ನಲ್ಲಿ ಜೈಲು ಸೇರಿರುವ ಎಚ್​.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರೇವಣ್ಣಗೆ ಸರಿಯಾಗಿ ನಿದ್ರೆ ಇಲ್ಲದೆ, ಆಹಾರ ಸೇವಿಸದೆ ಚಿಂತೆಯಿಂದ ಹೈರಾಣಾಗಿ ಹೋಗಿದ್ದಾರೆ. ಇದರ ಮಧ್ಯೆ ಜೈಲರಿರುವ ರೇವಣ್ಣ ಅವರನ್ನು ಇಂದಿನಿಂದ ಮೂರು ದಿನಗಳ ಕಾಲ ಕುಟುಂಬಸ್ಥರಿಗೆ, ಸಂಬಂಧಿಕರಿಗೆ ಭೇಟಿಗೆ ಅವಕಾಶವಿಲ್ಲ. ಆಪ್ತರ ಭೇಟಿಯಿಂದ ತನ್ನ ನೋವನ್ನು ಹೇಳಿಕೊಂಡು ಮನಸ್ಸು ಹಗುರ ಮಾಡಿಕೊಳ್ಳುತ್ತಿದ್ದ ರೇವಣ್ಣ ಅವರಿಗೆ ಇದೀಗ ಸರ್ಕಾರಿ ರಜೆ ಅಡ್ಡಿಯಾಗಿದೆ. ಇಂದಿನಿಂದ ಮೂರು ದಿನ ಸರ್ಕಾರಿ ರಜೆ

ಜೈಲಲಿರುವ ರೇವಣ್ಣಗೆ ಮತ್ತೆ ಸಂಕಷ್ಟ| ಮೂರು ದಿನ ಯಾರಿಗೂ ಇಲ್ಲ ರೇವಣ್ಣ ಭೇಟಿ ಅವಕಾಶ Read More »

ಪುತ್ತೂರು: ಯುವಕ ಅನುಮಾನಾಸ್ಪದ ಸಾವು| ತಾಯಿ ಸೇರಿ ಮೂವರನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಪುತ್ತೂರಿನ ಬೆಟ್ಟಂಪಾಡಿಯ ಪಾರೆ ಎಂಬಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಚೇತನ್ (33) ಸಾವನ್ನಪ್ಪಿದ ಯುವಕ. ಚೇತನ್ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಮೃತನ ತಾಯಿ ಪೋಲೀಸರಿಗೆ ತಿಳಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಮೃತದೇಹ ನೋಡಿ ಅನುಮಾನಗೊಂಡ ಪೋಲೀಸರು, ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಜೊತೆಗೆ ಮೃತನ ತಾಯಿ ಉಮಾವತಿ ಸೇರಿದಂತೆ ಮೂವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಈತ ಮೇ.09ರ ರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್, ತಾಯಿ ಜೊತೆ ಜಗಳವಾಡಿ ಮನೆ ಪಕ್ಕದ

ಪುತ್ತೂರು: ಯುವಕ ಅನುಮಾನಾಸ್ಪದ ಸಾವು| ತಾಯಿ ಸೇರಿ ಮೂವರನ್ನು ಬಂಧಿಸಿದ ಪೊಲೀಸರು Read More »

ಮಡಿಕೇರಿ: ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ| ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಸಮಗ್ರ ನ್ಯೂಸ್ : ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಓರ್ವನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರೋಷನ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. 2018ರಿಂದ 2023ರ ವರೆಗೆ ಏರ್ ಟೆಲ್ ಸಿಮ್ ಡಿಸ್ಟ್ರಿಬ್ಯುಟರ್ ಆಗಿದ್ದ ಈತ ನಂತರ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಆಗಿದ್ದಾನೆ. ವಂಚನೆ ಬೆಳಕಿಗೆ ಬಂದಿದ್ದು ಹೇಗೆ?ಇತ್ತೀಚಿಗೆ ಕೇರಳದ ವ್ಯಕ್ತಿಯೊಬ್ಬರು

ಮಡಿಕೇರಿ: ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ| ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ Read More »

ಬೆಳಗಾವಿ: ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ| ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಸಮಗ್ರ ನ್ಯೂಸ್ : ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿಯ ನ್ಯೂ ಗಾಂಧಿನಗರದಲ್ಲಿ ನಡೆದಿದೆ. ಘಟನೆಯಲ್ಲಿ ಒಂದು ಮಗುವಿಗೆ ಗಂಭೀರ ಗಾಯವಾಗಿದ್ದು, ಗಂಭೀರ ಗಾಯಗೊಂಡ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾವುದೇ ಕ್ರಮಕೈಗೊಳ್ಳದ ಮಹಾನಗರ ಪಾಲಿಕೆ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿ ನ್ಯೂ ಗಾಂಧಿನಗರ ಹಾಗೂ ಉಜ್ವಲ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದೆ. ಒಂದೂವರೆ ತಿಂಗಳ ಹಿಂದೆ 10ಕ್ಕಿಂತ ಹೆಚ್ಚು ಜನರ ಮೇಲೆ ನಾಯಿಗಳು ಕಚ್ಚಿದ್ದವು. ಎಲ್ಲೆಂದರಲ್ಲಿ ಗುಂಪು

ಬೆಳಗಾವಿ: ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ| ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ Read More »

ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ

ಸಮಗ್ರ ನ್ಯೂಸ್ : ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7 ಗಂಟೆಗೆ ತೆರೆದರೆ, ಗಂಗೋತ್ರಿ ದೇವಾಲಯವು ಮಧ್ಯಾಹ್ನ 12.20 ತೆರೆಯುತ್ತದೆ. ಮೇ 12 ರಂದು ಬೆಳಗ್ಗೆ 6 ಗಂಟೆಗೆ ಉತ್ತರಾಖಂಡದ ಚಾರ್ಧಾಮ್ ಯಾತ್ರೆಯ ಭಾಗವಾಗಿರುವ ಬದರಿನಾಥ್ ಅನ್ನು ತೆರೆಯಲಿದೆ. 6 ತಿಂಗಳಿಗೆ ಒಮ್ಮೆ ತೆರೆಯುವ ಈ ಯಾತ್ರಾ ಸ್ಥಳಗಳಿಗೆ ದೇಶ-ವಿದೇಶಗಳಿಂದ ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗೂ ಬದರಿನಾಥ್ ಹೀಗೆ

ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ Read More »

ಬಳ್ಳಾರಿ: ಜಿಂದಾಲ್ನ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ಸಮಗ್ರ ನ್ಯೂಸ್ : ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ. ಮೃತರನ್ನು ಭುವನಹಳ್ಳಿಯ ಜಡೆಪ್ಪ(23), ಬೆಂಗಳೂರಿನ ಸುಶಾಂತ್(25), ಚೆನ್ನೈನ ಶಿವಮಹದೇವ(23) ಎಂದು ಗುರುತಿಸಲಾಗಿದೆ. ಪೈಪ್ ಜೋಡಣೆ ಕೆಲಸ ಪರಿಶೀಲನೆ ಮಾಡುತ್ತಿದ್ದಾಗ ಬೃಹತ್ ಪೈಪ್ನಲ್ಲಿ ಇದ್ದಕ್ಕಿದ್ದಂತೆ ಬಂದ ನೀರಿನಲ್ಲಿ ಕೊಚ್ಚಿಹೋಗಿ ದೊಡ್ಡ ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಸಂಡೂರು ಡಿವೈಎಸ್ಪಿ ಪ್ರಸಾದ್ ಗೋಖಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗುರುವಾರ ಸಂಜೆ

ಬಳ್ಳಾರಿ: ಜಿಂದಾಲ್ನ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು Read More »

ಮೈಸೂರು: “ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್| ಸಂಸದ ಪ್ರತಾಪ್ ಸಿಂಹ ಖಂಡನೆ

ಸಮಗ್ರ ನ್ಯೂಸ್ : ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ ಶ್ರೀರಾಮ ಹಾಡು ಕೋಲಾಹಲ ಸೃಷ್ಟಿಸಿದ್ದು, ಶ್ರೀಹರ್ಷ ಹಾಡಿದ ಈ ಹಾಡಿನಿಂದ ಕಾರ್ಯಕ್ರಮದಲ್ಲಿ ಗಲಾಟೆ ಶುರುವಾಗಿದೆ. ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದ ಹಿಂದೂ ವಿದ್ಯಾರ್ಥಿಗೆ ಥಳಿಸಿದ ಘಟನೆ ನಡೆದಿದೆ. ಇದರ ಫೋಟೋ ಹಾಗೂ ವಿಡಿಯೋವನ್ನು ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಹಿಂದೂ ವಿದ್ಯಾರ್ಥಿಯ ಮೇಲೆ ಹಲ್ಲೆ ಖಂಡಿಸಿದ್ದಾರೆ. ನಿನ್ನೆ ಮೈಸೂರಿನ ಸಂತ

ಮೈಸೂರು: “ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್| ಸಂಸದ ಪ್ರತಾಪ್ ಸಿಂಹ ಖಂಡನೆ Read More »

ಕೊಪ್ಪಳ: ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ. ಈರಪ್ಪ ಕುರಿ (55) ಮೃತ ಕುರಿಗಾಯಿ. ಕುರಿಗಳಿಗೆ ಗಿಡದ ಸೊಪ್ಪು ಕತ್ತರಿಸಿ ಹಾಕುವಾಗ ನಡೆದ ಈ ಅವಘಡ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಿಂಡ್ ಪವರ್ ವಿರುದ್ದ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಮೃತ ದೇಹ ಪೊಲೀಸರಿಗೆ ಹಸ್ತಾಂತರಿಸದೇ ಕಂಪನಿಯ ವಿರುದ್ದ ಪ್ರತಿಭಟನೆ ಮಾಡಿದ್ದಾರೆ. ಪ್ರಕರಣ ಕುಕನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಪ್ಪಳ: ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು Read More »