Editor

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ

ಸಮಗ್ರ ನ್ಯೂಸ್: ಬಿಜೆಪಿಯ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2022 ರಲ್ಲಿ ಪ್ರವೀಣ್ ನೆಟ್ಟಾರನ್ನು ಬೆಳ್ಳಾರೆಯ ನೆಟ್ಟಾರು ಸಮೀಪದ ಅವರ ಅಂಗಡಿ ಬಳಿ ಹತ್ಯೆ ನಡೆಸಲಾಗಿತ್ತು.‌ ಈ ಪ್ರಕರಣದಲ್ಲಿ ಹಲವು ಆರೋಪಿಗಳನ್ನು ಎನ್ಐಎ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಅನ್ನು ಹಾಸನದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ Read More »

ನವದೆಹಲಿ: ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ- ಆರ್ಥಿಕ ಸಲಹಾ ಮಂಡಳಿ

ಸಮಗ್ರ ನ್ಯೂಸ್ : ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ, ಭಾರತ ಮತ್ತು ನೆರೆ ರಾಷ್ಟ್ರಗಳಲ್ಲಿ ಧರ್ಮದ ಆಧಾರದಲ್ಲಿ ಜನಸಂಖ್ಯೆ ಹೆಚ್ಚಳ ಆಗಿರುವ ವರದಿಯನ್ನು ಪ್ರಕಟ ಮಾಡಿದೆ. 1950 ಮತ್ತು 2015ರ ನಡುವೆ 167 ದೇಶಗಳಲ್ಲಿರುವ ಧರ್ಮಗಳನ್ನು ಅಧ್ಯಯನ ಮಾಡಿ ಜನಸಂಖ್ಯಾ ಹೆಚ್ಚಳ ಕುರಿತು ವರದಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ಮಧ್ಯೆ ಈ ವರದಿ ಮತ್ತೊಂದು

ನವದೆಹಲಿ: ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ- ಆರ್ಥಿಕ ಸಲಹಾ ಮಂಡಳಿ Read More »

ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ, 8 ಮಂದಿ ಮೃತ್ಯು

ಸಮಗ್ರ ನ್ಯೂಸ್ : ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ. ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕಾರ್ಖಾನೆ ಪರವಾನಗಿ ಪಡೆದ ಘಟಕವಾಗಿದ್ದು, ಸ್ಫೋಟಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದೆ. ಮೃತಪಟ್ಟ ಎಂಟು ಮಂದಿ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಗುರುತಿಸಲಾಗಿದೆ. ಸ್ಫೋಟದ ನಂತರ ಇಡೀ ಕಾರ್ಖಾನೆಗೆ

ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ, 8 ಮಂದಿ ಮೃತ್ಯು Read More »

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ| ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್

ಸಮಗ್ರ ನ್ಯೂಸ್ : ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಎದುರು 60 ರನ್ಗಳ ಭರ್ಜರಿ ಜಯ ಗಳಿಸಿದ್ದು, ಪ್ಲೇಆಫ್ ಹಾದಿಯನ್ನು ಸುಗಮವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಕ್ಯಾಮರೂನ್ ಗ್ರೀನ್ ಬಿರುಸಿನ ಬ್ಯಾಟಿಂಗ್ ಫಲವಾಗಿ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿತ್ತು. ಬೃಹತ್

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ| ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ Read More »

ಹಾಸನ ವಿಡಿಯೋ ಪ್ರಕರಣ| ಸುಳ್ಳು ದೂರು ನೀಡುವಂತೆ ಒತ್ತಡ

ಸಮಗ್ರ ನ್ಯೂಸ್‌ : ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ ಮಧ್ಯೆ ಅಶ್ಲೀಲ ವಿಡಿಯೋ ಕೇಸ್‌ಗೆ ಮತ್ತೊಂದು ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ದೂರು ಕೊಡಲು ಮಹಿಳೆ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದೇ ವಿಚಾರಕ್ಕೆ ರಾಷ್ಟ್ರೀಯ ಮಹಿಳಾ

ಹಾಸನ ವಿಡಿಯೋ ಪ್ರಕರಣ| ಸುಳ್ಳು ದೂರು ನೀಡುವಂತೆ ಒತ್ತಡ Read More »

ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಸಮಗ್ರ ನ್ಯೂಸ್‌ : ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ. ವಿರೂಪಾಕ್ಷ ಕೊಲೆ ಮಾಡಿದ ಹುಚ್ಚ ಪ್ರೇಮಿ. ಮೀನಾ ಕೊಲೆಯಾಗಿರುವ ಬಾಲಕಿ. ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ. ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ

ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ Read More »

ಕರ್ನಾಟಕ ಸರ್ಕಾರದಿಂದ ಜಾಬ್ ಆಫರ್, ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಡೋಲ್ಸೆಂಟ್​ ಲರ್ನಿಂಗ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್​​ಲೈನ್​ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೊಪ್ಪಳದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಹತೆ:ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಕರ್ನಾಟಕ ಸರ್ಕಾರದಿಂದ ಜಾಬ್ ಆಫರ್, ಹೀಗೆ ಅಪ್ಲೈ ಮಾಡಿ Read More »

ಪಂಚಭೂತಗಳಲ್ಲಿ ಲೀನವಾದ ಮಾಜಿ ಶಾಸಕ ವಸಂತ ಬಂಗೇರ| ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ

ಸಮಗ್ರ ನ್ಯೂಸ್: ಮೇ. 8ರಂದು ನಿಧನರಾದ ಮಾಜಿ ಶಾಸಕ ವಸಂತ ಬಂಗೇರ ಅವರ ಅಂತ್ಯ ಸಂಸ್ಕಾರ ಇಂದು ನಡೆಯಿತು. ವಸಂತ ಬಂಗೇರ ಅವರು ಜನಿಸಿದ್ದ ಕುವೆಟ್ಟು ಗ್ರಾಮದ ಕೇದೆ ಹೊಸ ಮನೆಯ ಬಳಿ ಬಿಲ್ಲವ ಸಮುದಾಯದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ವಸಂತ ಬಂಗೇರ ಅವರ ಎರಡನೇ ಪುತ್ರಿ ಬಬಿತಾ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಂತ್ಯಕ್ರಿಯೆಗೂ ಮೊದಲು ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಂಸದ ನಳೀನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ

ಪಂಚಭೂತಗಳಲ್ಲಿ ಲೀನವಾದ ಮಾಜಿ ಶಾಸಕ ವಸಂತ ಬಂಗೇರ| ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ Read More »

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಉದ್ಯೋಗವಿದೆ, ತಿಂಗಳಿಗೆ 2 ಲಕ್ಷ ಸಂಬಳ!

ಸಮಗ್ರ ಉದ್ಯೋಗ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಜುಲೈ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಹಾಕಿ. ಹುದ್ದೆಯ ಮಾಹಿತಿ:ಡೈರೆಕ್ಟರ್-2ಅಸಿಸ್ಟೆಂಟ್ ಡೈರೆಕ್ಟರ್-

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಉದ್ಯೋಗವಿದೆ, ತಿಂಗಳಿಗೆ 2 ಲಕ್ಷ ಸಂಬಳ! Read More »

ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ

ಸಮಗ್ರ ನ್ಯೂಸ್: ಅಯೋಧ್ಯೆ ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ . ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಬುಧವಾರ ಬೆಳಗ್ಗೆ ಅಯೋಧ್ಯೆಯ ರಾಮಮಂದಿರಕ್ಕೆ ತೆರಳಿದ್ದರು. ಅಲ್ಲಿ ಅವರು ಶ್ರೀರಾಮ ದೇವಾಲಯವನ್ನು ಪ್ರವೇಶಿಸಿ ಬಾಲರಾಮದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಬಳಿಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಜನವರಿಯಲ್ಲಿ ಎರಡು ಬಾರಿ ಅಯೋಧ್ಯೆಗೆ ಬಂದಿದ್ದೆ. ಅಂದಿನ ಭಾವನೆ ಇಂದಿಗೂ ಹಾಗೆಯೇ ಉಳಿದಿದೆ. ನಾನು ಅಯೋಧ್ಯೆಗೆ ಹಲವು ಬಾರಿ ಬಂದಿದ್ದೇನೆ.

ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ Read More »