Editor

ಎಸ್ಎಸ್ಎಲ್ ಸಿ‌ ಫಲಿತಾಂಶ| 625/625; ಈಕೆ ರಾಜ್ಯಕ್ಕೆ ಟಾಪರ್| ಯಾರಿವಳು ಬಾಲೆ!?

ಸಮಗ್ರ ನ್ಯೂಸ್: ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರು 625ಕ್ಕೆ 625 ಅಂಕಗಳನ್ನು ಪಡೆದು ಇಡೀ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಬನಶಂಕರಿಯ ಹೋಲಿ ಚೈಲ್ಡ್ ಇಂಗ್ಲೀಷ್ ಪ್ರೌಢಶಾಲೆಯ ಮೇಧಾ ಶೆಟ್ಟಿ 624 ಅಂಕ ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ತುಮಕೂರಿನ ಶಿರಾದ ಶ್ರೀವಾಸವಿ ಇಂಗ್ಲೀಷ್ ಪ್ರೌಢಶಾಲೆಯ ಹರ್ಷಿತಾ ಡಿಎಂ, ಚಿನ್ಮಯ್ (ದಕ್ಷಿಣ ಕನ್ನಡ) ಸಿದ್ದಾಂತ್ (ಚಿಕ್ಕೊಡಿ ), ದರ್ಶನ್ […]

ಎಸ್ಎಸ್ಎಲ್ ಸಿ‌ ಫಲಿತಾಂಶ| 625/625; ಈಕೆ ರಾಜ್ಯಕ್ಕೆ ಟಾಪರ್| ಯಾರಿವಳು ಬಾಲೆ!? Read More »

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ| ಉಡುಪಿ ಪ್ರಥಮ, ದ.ಕ ದ್ವಿತೀಯ

ಸಮಗ್ರ ನ್ಯೂಸ್: 2023-24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ಪ್ರಥಮ ಸ್ಥಾನವನ್ನು ಶೇಕಡ 94 ರೊಂದಿಗೆ ಪಡೆದುಕೊಂಡಿದೆ. ದ. ಕನ್ನಡ ಜಿಲ್ಲೆಗೆ ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದೆ. ಅದು ಶೇ 92.12 ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಗೆ ಕೊನೆ ಸ್ಥಾನ ಪಡೆದುಕೊಂಡಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದ್ದಾರೆ. ಓರ್ವ ವಿದ್ಯಾರ್ಥಿನಿ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ| ಉಡುಪಿ ಪ್ರಥಮ, ದ.ಕ ದ್ವಿತೀಯ Read More »

ಕಿರುತೆರೆ ನಟಿ ಜ್ಯೋತಿ ರೈಯವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯಲ್ಲಿ ಮಿಂಚಿ ಸುದ್ದಿಯಾಗಿ ಬಳಿಕ ತೆಲುಗು ಇಂಡಸ್ಟ್ರಿಯಲ್ಲಿ ಸದ್ದು ಮಾಡುತ್ತಿರುವ ಜ್ಯೋತಿ ರೈ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ ಹಾಟ್ ಹಾಟ್ ಫೋಟೋಗಳ ಮೂಲಕವೇ ಸದ್ದು ಮಾಡುತ್ತಿರುವ ನಟಿಯದ್ದು ಎನ್ನಲಾದ ಅಶ್ಲೀಲ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜ್ಯೋತಿ ರೈ ಅವರದ್ದು ಎನ್ನಲಾದ ಖಾಸಗಿ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಲು ಆರಂಭಿಸಿದೆ. ಅವರ ಈ ಫೋಟೋಗಳು ಪಕ್ಕದ ಆಂಧ್ರದಲ್ಲೂ ಸಖತ್‌ ಸದ್ದು ಮಾಡಿವೆ. ತೆಲುಗುವಿನಲ್ಲಿ ಗುಪ್ಪೆದ್ದಂತಾ ಮನಸು

ಕಿರುತೆರೆ ನಟಿ ಜ್ಯೋತಿ ರೈಯವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ Read More »

ಚಕ್ರವರ್ತಿ ಸೂಲಿಬೆಲೆ ಸಾರಥ್ಯದ ನಮೋ ಬ್ರಿಗೇಡ್ ಮುಕ್ತಾಯ!

ಸಮಗ್ರ ನ್ಯೂಸ್: ಚಕ್ರವರ್ತಿ ಸೂಲಿಬೆಲೆಯ ಸಾರಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ. ನಮೋಬ್ರಿಗೇಡ್ 2.O ಇಷ್ಟು ದಿನ ಮೋದಿ ಪ್ರಧಾನಿಯಾಗಲು ಏನೇನು ಪ್ರಯತ್ನ ಮಾಡಬಹುದೋ, ಆ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ರಾಜಕೀಯಕ್ಕಾಗಿ ಅಷ್ಟೇ ಬ್ರಿಗೇಡ್ ನಡೆಸಲು ಇಷ್ಟವಿಲ್ಲವೆಂದು, ಚುನಾವಣೆ ಮುಗಿದ ಬಳಿಕವೇ, ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಜೂನ್ 25ಕ್ಕೆ ನಮೋ ಬ್ರಿಗೇಡ್ ಲಾಂಚ್ ಆಗಿತ್ತು. ಬಳಿಕ ರಾಜ್ಯದ ಹಲವು ಜಿಲ್ಲೆಗಳಿಗೆ ನಾನೇ ಹೋಗಿ ಬೈಠಕ್‌ಗಳನ್ನು ಮಾಡಿದ್ದೇನೆ.

ಚಕ್ರವರ್ತಿ ಸೂಲಿಬೆಲೆ ಸಾರಥ್ಯದ ನಮೋ ಬ್ರಿಗೇಡ್ ಮುಕ್ತಾಯ! Read More »

ಮೈಸೂರಿನಲ್ಲಿದೆ ಸರ್ಕಾರಿ ಉದ್ಯೋಗ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮೇ 19, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ

ಮೈಸೂರಿನಲ್ಲಿದೆ ಸರ್ಕಾರಿ ಉದ್ಯೋಗ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ Read More »

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗಾಗಿ ಅವಕಾಶ

ಸಮಗ್ರ ಉದ್ಯೋಗ: ಟೆಕ್ಸ್​ಟೈಲ್ಸ್​ ಕಮಿಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಪ್ರಾಜೆಕ್ಟ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಟೆಕ್ಸ್​ಟೈಲ್ಸ್​ ಕಮಿಟಿ ನೇಮಕಾತಿ ಅಧಿಸೂಚನೆ

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗಾಗಿ ಅವಕಾಶ Read More »

ಬೆಂಗಳೂರಿನ ಕಾವೇರಿ ಚಿತ್ರಮಂದಿರ ಇನ್ನೂ ನೆನಪು ಮಾತ್ರ| 50 ವರ್ಷ ಪೂರೈಸಿ ಇದೀಗ ನೆಲಸಮ

ಸಮಗ್ರ ನ್ಯೂಸ್: ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಒಂದಾದ ಜನಪ್ರಿಯ ‘ಕಾವೇರಿ’ ಚಿತ್ರಮಂದಿರ ನೆಲಸಮ ಆಗಿದೆ. ಸತತ 50 ವರ್ಷಗಳ ಇತಿಹಾಸ ಹೊಂದಿರುವ ಈ ಥಿಯೇಟರ್​ನಲ್ಲಿ ಹಲವಾರು ಸಿನಿಮಾಗಳು ಸೂಪರ್​ ಹಿಟ್​ ಆಗಿದ್ದವು. ಆದರೆ ಅದೆಲ್ಲವೂ ಇನ್ನೂ ನೆನಪು ಮಾತ್ರ. ಸರಿಯಾದ ಬಿಸ್ನೆಸ್​ ಇಲ್ಲದ ಕಾರಣ ಈ ಚಿತ್ರಮಂದಿರವನ್ನು ಮುಚ್ಚಲಾಗಿದೆ. ಕೊರೊನಾ ಲಾಕ್​ಡೌನ್​ ಬಳಿಕ ನಿರೀಕ್ಷಿತ ಪ್ರಮಾಣದಲ್ಲಿ ಜನರು ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬ ಕಾರಣದಿಂದ ‘ಕಾವೇರಿ’ ಚಿತ್ರಮಂದಿರವನ್ನು ನಡೆಸುವುದು ಮಾಲಿಕರಿಗೆ ಕಷ್ಟ ಆಯಿತು. ಹಾಗಾಗಿ ಚಿತ್ರಮಂದಿರವನ್ನು ಕೆಡವಿ ಆ ಜಾಗದಲ್ಲಿ

ಬೆಂಗಳೂರಿನ ಕಾವೇರಿ ಚಿತ್ರಮಂದಿರ ಇನ್ನೂ ನೆನಪು ಮಾತ್ರ| 50 ವರ್ಷ ಪೂರೈಸಿ ಇದೀಗ ನೆಲಸಮ Read More »

ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್‌ ಅವರಿಗೆ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಭೀಮಣ್ಣ ನಾಯ್ಕ್ ಸೇರಿ ಅವರ ಜೊತೆಯಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ನಗರಸಭೆ ಪೌರಾಯುಕ್ತ ಕಾಂತರಾಜ ಜತೆ ಶಾಸಕ ಬುಧವಾರ ತೆರಳಿದ್ದರು. ಈ ವೇಳೆ ಸಮೀಪದಲ್ಲಿದ್ದ ಗೂಡಿನ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಶಾಸಕ ಭೀಮಣ್ಣ ನಾಯ್ಕ್‌, ಪೌರಾಯುಕ್ತ ಕಾಂತರಾಜ, ಸದಸ್ಯ ಖಾದರ್ ಆನವಟ್ಟಿ ಮತ್ತಿತರರು

ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ| ಆಸ್ಪತ್ರೆಗೆ ದಾಖಲು Read More »

ಕರ್ನಾಟಕದಲ್ಲಿ ಪದವಿ ತರಗತಿ ಮೂರು ವರ್ಷಕ್ಕಷ್ಟೇ ಸೀಮಿತ| ಎನ್ಇಪಿ ಶಿಫಾರಸು ಕೋರ್ಸ್ ರದ್ದುಪಡಿಸಿದ‌ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಸಾರ್ವಜನಿಕ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮವನ್ನು ಶಿಫಾರಸು ಮಾಡಿದ ಎನ್‌ಇಪಿ – 2020 ಅನ್ನು ಕರ್ನಾಟಕ ಸರ್ಕಾರ ಬುಧವಾರ ರದ್ದುಗೊಳಿಸಿದೆ. 2024-25ರ ಶೈಕ್ಷಣಿಕ ವರ್ಷಕ್ಕೆ ಮೂರು ವರ್ಷಗಳ ಪದವಿ ಕಾರ್ಯಕ್ರಮವನ್ನು ಮತ್ತೆ ಪರಿಚಯಿಸಲಾಗಿದೆ. ಎನ್‌ಇಪಿ ಪ್ರಕಾರ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮವನ್ನು ಮುಂದುವರಿಸುವಲ್ಲಿ ಸ್ಪಷ್ಟತೆಯ ಕೊರತೆಯ ಬಗ್ಗೆ ವಿದ್ಯಾರ್ಥಿಗಳು ಮತ್ತು ಕಾಲೇಜುಗಳು ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹೊಸ ಬದಲಾವಣೆ ಮಾಡಲಾಗಿದೆ. ಪ್ರೊಫೆಸರ್ ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ

ಕರ್ನಾಟಕದಲ್ಲಿ ಪದವಿ ತರಗತಿ ಮೂರು ವರ್ಷಕ್ಕಷ್ಟೇ ಸೀಮಿತ| ಎನ್ಇಪಿ ಶಿಫಾರಸು ಕೋರ್ಸ್ ರದ್ದುಪಡಿಸಿದ‌ ರಾಜ್ಯ ಸರ್ಕಾರ Read More »

ಕಡಿಮೆ ಬೆಲೆಗೆ ಬೊಲೆರೋ ಆಸೆ ತೋರಿಸಿ ಚಾಲಕನಿಗೆ 131500 ರೂ. ಪಂಗನಾಮ! ನಕಲಿ ಯೋಧನ ಹೆಸರಿನಲ್ಲಿ ಆನ್ ಲೈನ್ ಟೋಪಿ!!

ಸಮಗ್ರ ನ್ಯೂಸ್: ಖತರ್ನಾಕ್ ಚೋರನೊಬ್ಬ ಚಾಲಕನಿಗೆ ಕಡಿಮೆ ಬೆಲೆಗೆ ಐಷಾರಾಮಿ ಬೊಲೆರೋ ವಾಹನ ಮಾರಾಟ ಮಾಡುವುದಾಗಿ ಆಮಿಷವೊಡ್ಡಿ ಹಣ ಪಡೆದು ಚಳ್ಳೆಹಣ್ಣು ತಿನ್ನಿಸಿರುವ ದೋಖಾ ಪ್ರಕರಣ ಬೆಳಕಿಗೆ ಬಂದಿದೆ.   ಯಾರದ್ದೋ ಬೊಲೆರೋ ತೋರಿಸಿದ್ದ ವಂಚಕ!ಸುಂಟಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ವಿ.ಆರ್. ಸುರೇಶ್ ಎಂಬುವವರಿಗೆ ಏ. 30ರಂದು ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ, ನನ್ನ ಹೆಸರು ರಮೇಶ್, ಭಾರತೀಯ ಸೇನೆಯ  ಪಾರ್ಸೆಲ್ ವಿಭಾಗ ಬೆಂಗಳೂರಿನಲ್ಲಿ ಡ್ಯೂಟಿ ಮಾಡಿಕೊಂಡಿದ್ದೇನೆ. ನನಗೆ ಜಮ್ಮು ಕಾಶ್ಮೀರಕ್ಕೆ ಟ್ರಾನ್ಸ್ ಫರ್ ಆಗಿದೆ.  ನನ್ನತ್ತಿರ ಬೊಲೆರೋ

ಕಡಿಮೆ ಬೆಲೆಗೆ ಬೊಲೆರೋ ಆಸೆ ತೋರಿಸಿ ಚಾಲಕನಿಗೆ 131500 ರೂ. ಪಂಗನಾಮ! ನಕಲಿ ಯೋಧನ ಹೆಸರಿನಲ್ಲಿ ಆನ್ ಲೈನ್ ಟೋಪಿ!! Read More »