Editor

ಉಡುಪಿ : ಕಾಪು ಪಿಲಿಕೋಲ ಸಂಪನ್ನ- ಓರ್ವನನ್ನು ಸ್ಪರ್ಶಿಸಿದ ಪಿಲಿ

ಸಮಗ್ರ ನ್ಯೂಸ್‌ : ಇತಿಹಾಸ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ ಸಂಪನ್ನಗೊಂಡಿತು. ಎರಡು ತಾಸಿನ ಬಣ್ಣಗಾರಿಕೆಯ ಬಳಿಕ ಅಬ್ಬರದೊಂದಿಗೆ ಪಂಜರದೊಳಗಿಂದ ಹೊರಗೆ ಬಂದ ಪಿಲಿಚಂಡಿ ದೈವವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದು, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿ ನೆಡಲಾಗಿದ್ದ ಬಂಟ ಕಂಬವನ್ನೇರಿ ಜೀವಂತ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಮುಂದೆ ಗ್ರಾಮ ಭೇಟಿಗೆ ತೆರಳುವುದು ಸಂಪ್ರದಾಯವಾಗಿದೆ. ಕರಾವಳಿಯಲ್ಲಿ ಹಲವು ಬಗೆಯ ಭೂತಾರಾಧನೆಗಳಿವೆ. ಆದರೆ ಹುಲಿಕೋಲದಂತಹ […]

ಉಡುಪಿ : ಕಾಪು ಪಿಲಿಕೋಲ ಸಂಪನ್ನ- ಓರ್ವನನ್ನು ಸ್ಪರ್ಶಿಸಿದ ಪಿಲಿ Read More »

ಮಡಿಕೇರಿ: 2 ವರ್ಷದ ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಐದು ಕಳ್ಳರ ಬಂಧನ

ಸಮಗ್ರ ನ್ಯೂಸ್: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಲೂರು ಗ್ರಾಮದ ಚನ್ನಂಗಿ ನಿವಾಸಿ ತಂಗಚ್ಚನ್ ಕೆ.ಕೆ ಎಂಬುವರ ಮನೆಗೆ 2022ರ ಜೂನ್ 8 ರಂದು ರಾತ್ರಿ 8:30 ಸಮಯದಲ್ಲಿ ಅಪರಿಚಿತ ಮುಸುಕುದಾರಿ ವ್ಯಕ್ತಿಗಳು ತಂಗಚ್ಚನ್ ಅವರ ಮನೆಗೆ ಪ್ರವೇಶಿಸಿ ತಂಗಚ್ಚನ್ ಹಾಗೂ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಅಂದಾಜು ಎರಡು ಲಕ್ಷ ರೂಪಾಯಿ ಹಾಗೂ ಪತ್ನಿಯ ಕುತ್ತಿಗೆಯಲ್ಲಿದ್ದ ಎಂಟು ಗ್ರಾಂ ಚಿನ್ನದ ಸರ ಕಿತ್ತುಕೊಂಡು ಹೋಗಿರುವ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮಡಿಕೇರಿ: 2 ವರ್ಷದ ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಐದು ಕಳ್ಳರ ಬಂಧನ Read More »

ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದ ತಮಿಳಿ ನಟಿ ಜ್ಯೋತಿಕಾ

ಸಮಗ್ರ ನ್ಯೂಸ್‌ : ತಮಿಳಿನ ನಟಿ ಜ್ಯೋತಿಕಾ ರಾಜ್‌ಕುಮಾರ್ ರಾವ್ ನಿರ್ದೇಶನದ ಹಿಂದಿ ‘ಶ್ರೀಕಾಂತ್’ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಸೂರ್ಯ ಪತ್ನಿ ಜ್ಯೋತಿಕಾ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದ್ದಾರೆ. ಸಂದರ್ಶಕರು, ಈ ಬಾರಿ ಏಕೆ ವೋಟ್ ಮಾಡಲು ಬರಲಿಲ್ಲ? ಎಂದು ಜ್ಯೋತಿಕಾಗೆ ಕೇಳಿದ್ದರು. ಆಗ ನಾನು ಪ್ರತಿ ವರ್ಷ ವೋಟ್ ಮಾಡುತ್ತೇನೆ ಎಂದಿದ್ದಾರೆ. ನಂತರ ಮತದಾನ ಪ್ರತಿ ವರ್ಷ ನಡೆಯಲ್ಲ ಎಂದು ಸಂದರ್ಶಕರು ಹೇಳಿದರು. ಇದನ್ನು

ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದ ತಮಿಳಿ ನಟಿ ಜ್ಯೋತಿಕಾ Read More »

ಕರಾವಳಿಯಲ್ಲಿ ಬಿಸಿಲ ಝಳಕ್ಕೆ ಬಸ್ ಗಾಜು ಪುಡಿಪುಡಿ| ದಿಢೀರ್ ಹೃದಯಾಘಾತದಿಂದ 6 ಮಂದಿ ಸಾವು| ಕಾದು ಕೆಂಡವಾದ ಕಡಲ ನಗರಿ!!

ಸಮಗ್ರ ನ್ಯೂಸ್: ಬಿಸಿಲಿನ ತಾಪದಿಂದ ಕೇರಳ ರಾಜ್ಯ ರಸ್ತೆ ನಿಗಮದ ಮಲಬಾರ್ ಬಸ್ಸಿನ ಮುಂಭಾಗದ ಗಾಜು ಒಡೆದ ಪರಿಣಾಮ, ಇಬ್ಬರು ಮಕ್ಕಳು ಹಾಗೂ ಚಾಲಕ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಉರಿಮಜಲು ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಮುಂಭಾಗದ ಗಾಜು ಒಡೆದಿದೆ. ಬಸ್‌ನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಬಾಲಕರು ಹಾಗೂ ಬಸ್ ಚಾಲಕ ಗಾಯಗೊಂಡಿದ್ದಾರೆ. ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು

ಕರಾವಳಿಯಲ್ಲಿ ಬಿಸಿಲ ಝಳಕ್ಕೆ ಬಸ್ ಗಾಜು ಪುಡಿಪುಡಿ| ದಿಢೀರ್ ಹೃದಯಾಘಾತದಿಂದ 6 ಮಂದಿ ಸಾವು| ಕಾದು ಕೆಂಡವಾದ ಕಡಲ ನಗರಿ!! Read More »

ವಿಶ್ವ ನಗು ದಿನ- ಮೇ ೫

ಸಮಗ್ರ ನ್ಯೂಸ್: ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ವಿಶ್ವ ನಗು ದಿನ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. ಈ ದಿನದಂದು ಎಲ್ಲಾ ಜಾತಿ, ಧರ್ಮದ ಜನರು ಯಾವುದೇ ಮತ, ಭೇದವಿಲ್ಲದೆ, ಲಿಂಗ ಭೇದವಿಲ್ಲದೆ ವಯಸ್ಸಿನ ನಿರ್ಭಂದ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸೇರಿ ಮನ ಬಿಚ್ಚಿ ನಗುತ್ತಾರೆ. ನಿಷ್ಕಲ್ಮಶವಾಗಿ ಮತ್ತು ವ್ಯಾಪಾರೀಕರಣವಿಲ್ಲದೆ ಮನ ಬಿಚ್ಚಿ ನಕ್ಕು ವಿಶ್ವಬಾತ್ರತ್ವ, ಸಹೋದರತ್ವ ಮತ್ತು ಶಾಂತಿಯ ಸಂಕೇತ ಎಂಬಂತೆ ಎಲ್ಲರೂ ಒಟ್ಟು ಸೇರಿ ನಕ್ಕು ಮನಸ್ಸನ್ನು ಹಗುರಾಗಿಸಲು ಪ್ರಯತ್ನಿಸಲಾಗುತ್ತದೆ. ಈ ಆಚರಣೆ

ವಿಶ್ವ ನಗು ದಿನ- ಮೇ ೫ Read More »

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಈ ವಾರದ ಗೋಚಾರಫಲ

ಸಮಗ್ರ ನ್ಯೂಸ್: ದ್ವಾದಶ ರಾಶಿಗಳ ಆಧಾರದಲ್ಲಿ ಮೇ5 ರಿಂದ 11ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ವಾರ ಯಾವ ರಾಶಿಗೆ ಶುಭ?, ಯಾರಿಗೆ ಲಾಭ? ನೋಡೋಣ ಬನ್ನಿ… ಮೇಷ ರಾಶಿ:ಯಾವುದೇ ಅಡಚಣೆ ಇಲ್ಲದೆ ಕೆಲಸ ಕಾರ್ಯಗಳಲ್ಲಿ ಮುಂದುವರೆಯುವಿರಿ. ದಿನ ಕಳೆದಂತೆ ಕ್ರಮೇಣ ಪ್ರಯತ್ನಕ್ಕೆ ತಕ್ಕಂತಹ ಶುಭಫಲಗಳು ದೊರೆಯುತ್ತವೆ. ಕಷ್ಟದ ಸಂದರ್ಭದಲ್ಲಿ ಸ್ನೇಹಿತರಿಗೆ ಸಹಾಯ ಮಾಡಬೇಕಾಗುತ್ತದೆ. ಅತಿಯಾದ ಜವಾಬ್ದಾರಿಯಿಂದ ಸ್ವಂತ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಾಗದು. ಹಣಕಾಸಿನ ಕೊರತೆ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ. ಆರೋಗ್ಯದ

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಈ ವಾರದ ಗೋಚಾರಫಲ Read More »

ರೇವಣ್ಣ ಬಂಧನ ಹಿನ್ನೆಲೆ ಮಗನು ಶರಣಾಗ್ತಾನೆ| ಸಿ.ಎಸ್ ಪುಟ್ಟರಾಜು ಹೇಳಿಕೆ

ಸಮಗ್ರ ನ್ಯೂಸ್: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ‌, ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ ಕೂಡ ಭಾರತಕ್ಕೆ ಬಂದು ಪೊಲೀಸರಿಗೆ ಶರಣಾಗಲಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು

ರೇವಣ್ಣ ಬಂಧನ ಹಿನ್ನೆಲೆ ಮಗನು ಶರಣಾಗ್ತಾನೆ| ಸಿ.ಎಸ್ ಪುಟ್ಟರಾಜು ಹೇಳಿಕೆ Read More »

ಟೋಲ್ ಹಣ ಕಟ್ಟುವ ವಿಚಾರವಾಗಿ ಗಲಾಟೆ| ಟೋಲ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ

ಸಮಗ್ರ ನ್ಯೂಸ್: ಟೋಲ್ ಹಣ ಕಟ್ಟುವ ವಿಚಾರವಾಗಿ ವಾಹನ ಸವಾರರಿಂದ ಟೋಲ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನವಯುಗ ಟೋಲ್ ನಲ್ಲಿ ನಡೆದಿದೆ ಟೋಲ್ ಸಿಬ್ಬಂದಿಗೆ ಬಟ್ಟೆ ಬಿಚ್ಚಿಸಿ ತೇಜಸ್, ಶರತ್ ಎಂಬುವವರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ನಾವು ಲೋಕಲ್​ ನವರು ನಮ್ಮ ಕಾರುಗಳಿಗೆ ಟೋಲ್ ಹಣ ಕೇಳುತ್ತೀರಾ ಎಂದು ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಇಬ್ಬರನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಯ ವಿಡಿಯೋ ಟೋಲ್ ಸಿಸಿ ಕ್ಯಾಮರಾದಲ್ಲಿ

ಟೋಲ್ ಹಣ ಕಟ್ಟುವ ವಿಚಾರವಾಗಿ ಗಲಾಟೆ| ಟೋಲ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ Read More »

ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು

ಸಮಗ್ರ ನ್ಯೂಸ್: ಧಾರವಾಡ ಜಿಲ್ಲೆಯ ನವಲಗುಂದ ಠಾಣೆಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೌದು ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡುವ ಹೇಳಿಕೆ ನೀಡಿದ ಆರೋಪದಲ್ಲಿ ಸ್ವಾಮೀಜಿ ವಿರುದ್ದ ಎಫ್‌ಐಆರ್ ದಾಖಲು ಮಾಡಲಾಗಿದೆ. ಇವರು ನವಲಗುಂದ ಮಾರ್ಕೆಟ್‌ನಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶ ಚುನಾವಣೆ ಭಾಷಣದ ವೇಳೆ ಎಡವಟ್ಟು ಮಾಡಿದ್ದರು. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸ್ವಾಮೀಜಿ, ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ

ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು Read More »

ಸಾತೊಡ್ಡಿ ಜಲಪಾತ ವೀಕ್ಷಿಸಲು ಗುರುತು ಚೀಟಿ ಕಡ್ಡಾಯ/ ಪ್ರವಾಸಿಗರಿಗೆ ಸೂಚನೆ

ಸಮಗ್ರ ನ್ಯೂಸ್: ಯಲ್ಲಾಪುರ ತಾಲೂಕಿನ ಪ್ರಸಿದ್ಧ ಸಾತೊಡ್ಡಿ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಆಧಾರ ಕಾರ್ಡ, ವಾಹನದ ಲೈಸೆನ್ಸ, ಮತದಾರರ ಗುರುತಿನಚೀಟಿ ಸೇರದಂತೆ ಯಾವುದಾದರೂ ಒಂದು ಗುರುತಿನ ಚೀಟಿ ಕಡ್ಡಾಯ ಮಾಡಲಾಗಿದ್ದು, ಪ್ರವಾಸಿಗರು ಸಹಕರಿಸಬೇಕು ಎಂದು ಗ್ರಾಮ ಅರಣ್ಯ ಸಮಿತಿ . ಅಧ್ಯಕ್ಷ ನಾರಾಯಣ ಭಟ್ ಕಂಚಿನಗದ್ದೆ ವಿನಂತಿಸಿಕೊಂಡಿದ್ದಾರೆ. ಸಾತೊಡ್ಡಿ ಜಲಪಾತದಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದೆ. ಇದರಿಂದಾಗಿ ಸಾತೊಡ್ಡಿಗೆ ತೆರಳುವ ಮಾರ್ಗದ ಬಿಸಗೋಡ ಕ್ರಾಸ್‌ನಲ್ಲಿ ಅರಣ್ಯ ಇಲಾಖೆ ಹಾಗೂ ಗ್ರಾಮ

ಸಾತೊಡ್ಡಿ ಜಲಪಾತ ವೀಕ್ಷಿಸಲು ಗುರುತು ಚೀಟಿ ಕಡ್ಡಾಯ/ ಪ್ರವಾಸಿಗರಿಗೆ ಸೂಚನೆ Read More »