Editor

ಮಹಾರಾಷ್ಟ್ರ : ಮನೆಯಲ್ಲಿ ಬೆಂಕಿ ಅವಘಡ: 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ

ಸಮಗ್ರ ನ್ಯೂಸ್ : ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 3 ವರ್ಷದ ಮಗು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮನೆಯಲ್ಲಿ ಏಳು ಮಂದಿ ವಯಸ್ಕರು ಹಾಗೂ 2–3 ಮಕ್ಕಳು ಇದ್ದರು. ಸಿಲಿಂಡರ್‌ ಬ್ಲಾಸ್ಟ್‌ನಿಂದ ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಸದಾಫ್ ಇರ್ಫಾನ್ ಶೇಖ್ (3) ಮೃತಪಟ್ಟರೆ, ರಿಜ್ವಾನ್ ಖಾನ್ (40), ರೆಹಾನ್ ಶೇಖ್ (17), ಆದಿಲ್ ಖಾನ್ (10), ಫೈಜಾನ್ […]

ಮಹಾರಾಷ್ಟ್ರ : ಮನೆಯಲ್ಲಿ ಬೆಂಕಿ ಅವಘಡ: 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ Read More »

ಕೋವಿಡ್ ಲಸಿಕೆ ಪಡೆದವರು ಪ್ರಿಡ್ಜ್ ನೀರು ಐಸ್ ಕ್ರೀಂ ಸೇವಿಸಬಾರದು| ತಪ್ಪು ಮಾಹಿತಿ ಸುತ್ತೋಲೆ ಹೊರಡಿಸಿದ ಕಾಲೇಜುಗಳಿಗೆ ನೋಟೀಸ್

ಸಮಗ್ರ ನ್ಯೂಸ್: ಕೋವಿಡ್ ನಿಯಂತ್ರಣಕ್ಕಾಗಿ ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್ ಹೃದಯಾಘಾತವಾಗಿ ಹಲವು ಅಡ್ಡಪರಿಣಾಮಗಳು ಉಂಟಾಗಲಿದ್ದು, ಆದ್ದರಿಂದ ಫ್ರಿಡ್ಜ್ ನೀರು, ಆಹಾರ ಸೇವನೆ ಮಾಡಬೇಡಿ ಎಂದು ಸುದ್ದಿ ಹಬ್ಬಿಸಿದ ನಗರದ ಸಿದ್ದರಾಮಯ್ಯ ಲಾ ಕಾಲೇಜು ಹಾಗೂ ಜಚನಿ ಪ್ರಥಮ ದರ್ಜೆ ಕಾಲೇಜುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಿಂದ ನೋಟಿಸ್ ನೀಡಿದೆ. ಕೋವಿಡ್‌ಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್‌ ಹೃದಯಾಘಾತ, ರಕ್ತ ಹೆಪ್ಪುಗಟ್ಟುವುದು ಸೇರಿ ಹಲವು ರೀತಿಯ ಅಡ್ಡಪರಿಣಾಮಗಳು ಉಂಟಾಗಲಿದ್ದು, ಈ ಹಿನ್ನೆಲೆ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್

ಕೋವಿಡ್ ಲಸಿಕೆ ಪಡೆದವರು ಪ್ರಿಡ್ಜ್ ನೀರು ಐಸ್ ಕ್ರೀಂ ಸೇವಿಸಬಾರದು| ತಪ್ಪು ಮಾಹಿತಿ ಸುತ್ತೋಲೆ ಹೊರಡಿಸಿದ ಕಾಲೇಜುಗಳಿಗೆ ನೋಟೀಸ್ Read More »

ಮೈಸೂರು: ಚಲಿಸುತ್ತಿದ್ದ ಬಸ್ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ

ಸಮಗ್ರ ನ್ಯೂಸ್ : ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬಗಳು ಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬಸ್ನಲ್ಲಿ ಮಹಿಳೆಯರು, ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ವಯೋವೃದ್ಧರು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ವಿದ್ಯುತ್ ಕಂಬಗಳು ಬಿದ್ದಿದೆ. ಈ ವೇಳೆ ತಕ್ಷಣ ಸಾರ್ವಜನಿಕರು ಕರೆಂಟ್ ಕಟ್ ಮಾಡಿದ್ದಾರೆ. ಅದೃಷ್ಟವಶಾತ್ ಕರೆಂಟ್ ಕಟ್ ಆಗಿದ್ದ ಕಾರಣ ಪ್ರಯಾಣಿಕರು ಬಚಾವ್ ಆಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮೈಸೂರು: ಚಲಿಸುತ್ತಿದ್ದ ಬಸ್ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ Read More »

ಕೋವಿಶೀಲ್ಡ್ ಹಾಕಿಸಿಕೊಂಡವರು ತಂಪು ಪಾನೀಯ ಸೇವಿಸಬಾರದೇ? ವೈರಲ್ ಆಗಿರುವ ಪೋಸ್ಟರ್ ನ ಕುರಿತು ಆರೋಗ್ಯ ಇಲಾಖೆ ನೀಡಿದ ಸ್ಪಷ್ಟನೆ ಏನು?

ಸಮಗ್ರ ನ್ಯೂಸ್: ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀ‌ರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದು ವರದಿ ಆಗುತ್ತಿದೆ. ಆದರೆ ಕೋವಿಶೀಲ್ಡ್ ಲಸಿಕೆ ಪರಿಣಾಮಗಳ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಈ ಕುರಿತಂತೆ ಆರೋಗ್ಯ ಇಲಾಖೆಯು ಸಮಯೋಚಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀ‌ರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದು ವರದಿ ಆಗುತ್ತಿದೆ. ಆದ ಕಾರಣ ಆರೋಗ್ಯ ಇಲಾಖೆಯು

ಕೋವಿಶೀಲ್ಡ್ ಹಾಕಿಸಿಕೊಂಡವರು ತಂಪು ಪಾನೀಯ ಸೇವಿಸಬಾರದೇ? ವೈರಲ್ ಆಗಿರುವ ಪೋಸ್ಟರ್ ನ ಕುರಿತು ಆರೋಗ್ಯ ಇಲಾಖೆ ನೀಡಿದ ಸ್ಪಷ್ಟನೆ ಏನು? Read More »

ಕೃಷಿಹೊಂಡದಲ್ಲಿ ಮುಳುಗಿ ಯುವಕ ಸಾವು| ತಂಗಿಯ ಮೊಬೈಲ್ ನಲ್ಲಿ ಸೆರೆಯಾಯ್ತು ಸಾವಿನ ಕೊನೆ ಕ್ಷಣ

ಸಮಗ್ರ ನ್ಯೂಸ್: ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ನಾಗನಾಳ ಎಂಬಲ್ಲಿ ನಡೆದಿದೆ. ಮೊನ್ನೆ ಬುಧವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್ ಗೌಡ (26) ಮೃತ ದುರ್ದೈವಿ. ಗೌತಮ್‌ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗನಾಳ ಗ್ರಾಮಕ್ಕೆ ಆಗಮಿಸಿದ್ದ. ಕುಟುಂಬದವರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ. ಒಂದು ಬದಿ ಮಕ್ಕಳಿಬ್ಬರು ಈಜುತ್ತಿದ್ದರು. ಈ ಕಡೆ ತಂಗಿಗೆ ಮೊಬೈಲ್‌ನಲ್ಲಿ ಕೊಟ್ಟು ಈಜುವುದನ್ನು ವಿಡಿಯೊ

ಕೃಷಿಹೊಂಡದಲ್ಲಿ ಮುಳುಗಿ ಯುವಕ ಸಾವು| ತಂಗಿಯ ಮೊಬೈಲ್ ನಲ್ಲಿ ಸೆರೆಯಾಯ್ತು ಸಾವಿನ ಕೊನೆ ಕ್ಷಣ Read More »

ಮತದಾನಕ್ಕೆ ವಿಶೇಷ ರೈಲು/ ಮೈಸೂರು-ತಾಳಗುಪ್ಪ-ಮೈಸೂರು ನಡುವೆ ಸಂಚರಿಸಲಿದೆ ರೈಲು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಬೆಂಗಳೂರು ಮಾರ್ಗವಾಗಿ ಮೈಸೂರು-ತಾಳಗುಪ್ಪ-ಮೈಸೂರು ನಡುವೆ ಒಂದು ದಿನ ಮಾತ್ರ ವಿಶೇಷ ರೈಲು ಸಂಚರಿಸಲಿದೆ. ರೈಲು (ಸಂಖ್ಯೆ 07373) ಮೇ 6ರಂದು ರಾತ್ರಿ 10.30ಕ್ಕೆ ಮೈಸೂರಿನಿಂದ ಹೊರಟು ಮಾರನೇ ದಿನ ಬೆಳಗ್ಗೆ 9 ಗಂಟೆಗೆ ತಾಳಗುಪ್ಪ ತಲುಪಲಿದೆ. ಇದೇ ರೈಲು (ಸಂಖ್ಯೆ 07374) ಮೇ 7 ರಂದು ಸಂಜೆ 6.30ಕ್ಕೆ ತಾಳಗುಪ್ಪದಿಂದ ಹೊರಟು ಬೆಳಗಿನ ಜಾವ 4 ಗಂಟೆಗೆ ಮೈಸೂರು ತಲುಪಲಿದೆ. ಈ ರೈಲು ಬೆಂಗಳೂರು, ತುಮಕೂರು, ಬೀರೂರು ಮಾರ್ಗವಾಗಿ

ಮತದಾನಕ್ಕೆ ವಿಶೇಷ ರೈಲು/ ಮೈಸೂರು-ತಾಳಗುಪ್ಪ-ಮೈಸೂರು ನಡುವೆ ಸಂಚರಿಸಲಿದೆ ರೈಲು Read More »

ಕುಕ್ಕೆ ಸುಬ್ರಹ್ಮಣ್ಯ : ಸಿಡಿಲಾಘಾತಕ್ಕೆ ನವ ವಿವಾಹಿತ ಬಲಿ

ಸಮಗ್ರ ನ್ಯೂಸ್: ಸಿಡಿಲಿನ ಆಘಾತಕ್ಕೆ ಸಿಲುಕಿ ನವ ವಿವಾಹಿತ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಹೊಸೊಳಿಕೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಇಲ್ಲಿನ ನಿವಾಸಿ ದಿ. ಬೀರಣ್ಣ ಗೌಡ ಎಂಬವರ ಮಗ ಸೋಮಸುಂದರ (32) ಎಂದು ಗುರುತಿಸಲಾಗಿದೆ. ಇಂದು ಸಂಜೆ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸಿಡಿಲು ಸಹಿತ ಮಳೆ ಸುರಿದಿತ್ತು. ಪರ್ವತ ಮುಖಿ ಬಳಿ ಸರ್ವೀಸ್ ಸ್ಟೇಷನ್ ನಡೆಸುತ್ತಿದ್ದ ಸೋಮಸುಂದರ್ ಮಳೆ ಬರುವ ಹಿನ್ನಲೆಯಲ್ಲಿ ಅಂಗಳದಲ್ಲಿ ಹರಡಿದ್ದ ಅಡಿಕೆ ಎತ್ತಿಡಲು ತೆರಳಿದ್ದರು. ಈ ವೇಳೆ

ಕುಕ್ಕೆ ಸುಬ್ರಹ್ಮಣ್ಯ : ಸಿಡಿಲಾಘಾತಕ್ಕೆ ನವ ವಿವಾಹಿತ ಬಲಿ Read More »

ಮಲೆನಾಡು, ಘಟ್ಟ ಪ್ರದೇಶದ ಹಲವೆಡೆ ಮಳೆ| ಮಡಿಕೇರಿ, ಸುಳ್ಯ, ಮೈಸೂರಲ್ಲಿ ವರುಣ ಸಿಂಚನ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆ‌ ದ.ಕನ್ನಡದ ಅವಿಭಜಿತ ಸುಳ್ಯ ತಾಲೂಕು ಹಾಗೂ ಮಲೆನಾಡಿನ ‌ಕೆಲ ಜಿಲ್ಲೆಗಳಲ್ಲಿ ಮಳೆಯ ಸಿಂಚನವಾಗಿದೆ. ಶುಕ್ರವಾರ(ಮೇ4) ಸಂಜೆ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯ, ಸುಳ್ಯ, ಸಂಪಾಜೆ, ಮಡಿಕೇರಿ ಜಿಲ್ಲೆಯ ಕೆಲವಡೆ, ಮೈಸೂರು ನಗರ, ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ. ಮಳೆಯ ಜೊತೆಗೆ ಗುಡುಗು, ಸಿಡಿಲಿನ ಅಬ್ಬರವೂ ಜೋರಾಗಿತ್ತು. ಮಳೆಯಿಂದಾಗಿ ರಣಬಿಸಿಲಿನಿಂದ ತತ್ತರಿಸಿದ್ದ ಜನತೆ ಕೊಂಚ ನಿರಾಳವಾಗಿದ್ದಾರೆ. ಮುಂದಿನ ಕೆಲ ದಿನ ಮಲೆನಾಡು ಹಾಗೂ ದ. ಒಳನಾಡಿನ ಹಲವಡೆ ಮಳೆಯಾಗುವ ಮುನ್ಸೂಚನೆ ಇದೆ. ಕೊಡಗು,

ಮಲೆನಾಡು, ಘಟ್ಟ ಪ್ರದೇಶದ ಹಲವೆಡೆ ಮಳೆ| ಮಡಿಕೇರಿ, ಸುಳ್ಯ, ಮೈಸೂರಲ್ಲಿ ವರುಣ ಸಿಂಚನ Read More »

ಮಡಿಕೇರಿ: ಸಿಡಿಲು ಬಡಿದು ಅಸ್ಸಾಂ ಕಾರ್ಮಿಕ ಗಂಭೀರ

ಸಮಗ್ರ ನ್ಯೂಸ್: ಮನೆಯ ಹೊರಭಾಗದಲ್ಲಿ ನಿಂತಿದ್ದ ಸಂದರ್ಭ ಸಿಡಿಲು ಬಡಿದು ಅಸ್ಸಾಂ ಕಾರ್ಮಿಕ ಪ್ರಮಾತ್ ಚಿಂತಾಜನಕ ಸ್ಥಿತಿ ತಲುಪಿದ ಘಟನೆ ಮಡಿಕೇರಿ ಸಮೀಪದ ಬೆಟ್ಟಗೇರಿಯಲ್ಲಿ ನಡೆದಿದೆ. ಗರ್ಮಾನಿ (37) ಎಂಬಾತ ಮಡಿಕೇರಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಡಿಕೇರಿ: ಸಿಡಿಲು ಬಡಿದು ಅಸ್ಸಾಂ ಕಾರ್ಮಿಕ ಗಂಭೀರ Read More »

ಆರ್ಯಭಟ ರಿಸರ್ಚ್ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ಆರ್ಯಭಟ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಆರ್ಯಭಟ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ ನೇಮಕಾತಿ ಅಧಿಸೂಚನೆ

ಆರ್ಯಭಟ ರಿಸರ್ಚ್ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ! Read More »