Editor

“ನಾವಂತೂ ಪ್ರಜ್ವಲ್ ಪರ ನಿಲ್ಲೋದಿಲ್ಲ”| ಸೆಕ್ಸ್ ಪ್ರಕರಣ ಕುರಿತು ಅಮಿತ್ ಶಾ ಮಹತ್ವದ ಹೇಳಿಕೆ

ಸಮಗ್ರ ನ್ಯೂಸ್: ಸದ್ಯ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಹೇಳಿಕೆ ನೀಡಿದ್ದಾರೆ. ನಾವು ದೇಶದ ಮಾತೃಶಕ್ತಿ, ನಾರಿ ಶಕ್ತಿ ಜೊತೆಗೆ ನಿಂತಿದ್ದೇವೆ. ರೇವಣ್ಣ, ಪ್ರಜ್ವಲ್ ವಿರುದ್ಧದ ಆರೋಪ ಆಧಾರರಹಿತ, ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಮಹಿಳೆಯರ ಮೇಲಿನ ಅಪಮಾನ ಸಹಿಸುವುದಿಲ್ಲ, ನಾವು ಪ್ರಜ್ವಲ್ ಪರ ನಿಲ್ಲೋದಿಲ್ಲ, ಎಂದು ಹೇಳಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ ವಿಚಾರವಾಗಿ ಕಾಂಗ್ರೆಸ್ ವಿರುದ್ಧ […]

“ನಾವಂತೂ ಪ್ರಜ್ವಲ್ ಪರ ನಿಲ್ಲೋದಿಲ್ಲ”| ಸೆಕ್ಸ್ ಪ್ರಕರಣ ಕುರಿತು ಅಮಿತ್ ಶಾ ಮಹತ್ವದ ಹೇಳಿಕೆ Read More »

ರಾಯಣ್ಣ ಬ್ರಿಗೇಡ್ ಮತ್ತೆ ಆರಂಭ/ ಸುಳಿವು ನೀಡಿದ ಈಶ್ವರಪ್ಪ

ಸಮಗ್ರ ನ್ಯೂಸ್: ಹಿಂದುಳಿದವರಿಗೆ, ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪ್ರಾರಂಭಿಸಿದ್ದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅಮಿತ್ ಶಾ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಬೇಕು ಅಂತ ಹೇಳಿದ್ದಕ್ಕೆ ಮರು ಮಾತನಾಡದೆ ನಿಲ್ಲಿಸಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಈಗ ಇದ್ದಿದ್ದರೆ ಹಿಂದುಳಿದವರಿಗೆ ನ್ಯಾಯ ಸಿಗುತ್ತಿತ್ತೇನೋ. ನಾನು ಯಾವಾಗಲೂ ಹಿರಿಯರ ಮಾತು ಮೀರಿರಲಿಲ್ಲ ಹೀಗಾಗಿ ಕೈಬಿಟ್ಟೆ. ನಾನು ಆವಾಗಲೇ ಅವರ ಮಾತು ಮೀರಿದ್ದರೆ ಸರಿ ಹೋಗುತಿತ್ತು. ಹೀಗೆ ಹೇಳುವ ಮೂಲಕ ಕೆಎಸ್

ರಾಯಣ್ಣ ಬ್ರಿಗೇಡ್ ಮತ್ತೆ ಆರಂಭ/ ಸುಳಿವು ನೀಡಿದ ಈಶ್ವರಪ್ಪ Read More »

ಮಾಲಿನ್ಯ ನಿಯಂತ್ರಣ/ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶ

ಸಮಗ್ರ ನ್ಯೂಸ್: ಪರಿಸರ ಸಂರಕ್ಷಣೆ ದೃಷ್ಟಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲೆ, ತಾಲೂಕುಗಳಲ್ಲಿನ ಮಂಡಳಿಯ ಅಧಿಕಾರಿಗಳು ವಾಣಿಜ್ಯ ಉದ್ದಿಮೆಗಳ ಮೇಲೆ ನಿಗಾವಹಿಸಿ, 2023-24ನೇ ಸಾಲಿನಲ್ಲಿ ನಿಯಮ ಉಲ್ಲಂಘಿಸಿದ 131 ಉದ್ದಿಮೆಗಳ ಸ್ಥಗಿತಕ್ಕೆ ಹಾಗೂ ಕ್ರಮಕ್ಕೆ ಆದೇಶಿಸಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಡಿರುವ ಆದೇಶದಲ್ಲಿರುವಂತೆ ಬೆಂಗಳೂರಿನಲ್ಲಿನ ಉದ್ದಿಮೆಗಳ ಸಂಖ್ಯೆಯೇ ಹೆಚ್ಚಿದೆ. 131ರ ಪೈಕಿ 100ಕ್ಕೂ ಹೆಚ್ಚಿನ ಉದ್ದಿಮೆಗಳು ಬೆಂಗಳೂರಿನದ್ದಾಗಿವೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹೆಚ್ಚಿವೆ. ಅಲ್ಲದೆ, ಅವುಗಳು ಹೆಚ್ಚಿನ ಪ್ರಮಾಣದಲ್ಲಿ ಮಾಲಿನ್ಯ ನಿಯಂತ್ರಣ

ಮಾಲಿನ್ಯ ನಿಯಂತ್ರಣ/ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶ Read More »

ಪ್ರತಿ ವರ್ಷ ಎನ್‍ಸಿಆರ್‍ಟಿ ಪಠ್ಯ ಪುಸ್ತಕ ಪರಿಷ್ಕರಣೆ/ ಕೇಂದ್ರ ಶಿಕ್ಷಣ ಇಲಾಖೆ ಸಲಹೆ

ಸಮಗ್ರ ನ್ಯೂಸ್: ಕೇಂದ್ರ ಶಿಕ್ಷಣ ಇಲಾಖೆಯು, ಶಿಕ್ಷಣದಲ್ಲಿ ನಿರಂತರ ಬದಲಾವಣೆಯ ಕಾರಣಕ್ಕಾಗಿ ಪ್ರತಿ ವರ್ಷ ಎನ್‍ಸಿಆರ್‍ಟಿ ಪಠ್ಯ ಪುಸ್ತಕವನ್ನು ಪರಿಷ್ಕರಿಸಿ, ಹೊಸ ವಿಚಾರಗಳನ್ನು ಸೇರಿಸಲು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಗೆ ಸಲಹೆ ನೀಡಿದೆ. ಹಿಂದಿನಿಂದಲೂ ಎನ್‍ಸಿಆರ್‍ಟಿ ಪಠ್ಯ ಕ್ರಮದಲ್ಲಿ ಕಾಲಕಾಲಕ್ಕೆ ಪಠ್ಯಪುಸ್ತಕ ಪರಿಷ್ಕರಣೆಯಂತಹ ಪದ್ಧತಿ ಇರಲಿಲ್ಲ. ಆದರೆ ಇದೀಗ ಕಾಲ ವೇಗಗತಿಯಲ್ಲಿ ಬದಲಾವಣೆ ಹೊಂದುತ್ತಿದ್ದು, ಪಠ್ಯಪುಸ್ತಕದಲ್ಲಿ ಬದಲಾವಣೆ ತರುವುದು ಅವಶ್ಯಕವೆಂದು ಇಲಾಖೆ ಹೇಳಿದೆ. ಒಮ್ಮೆ ಮುದ್ರಿಸಿದ ಪುಸ್ತಕವನ್ನು ಸುದೀರ್ಘ ವರ್ಷದ ತನಕ ಇಟ್ಟುಕೊಳ್ಳುವುದು ಸೂಕ್ತವಲ್ಲ.

ಪ್ರತಿ ವರ್ಷ ಎನ್‍ಸಿಆರ್‍ಟಿ ಪಠ್ಯ ಪುಸ್ತಕ ಪರಿಷ್ಕರಣೆ/ ಕೇಂದ್ರ ಶಿಕ್ಷಣ ಇಲಾಖೆ ಸಲಹೆ Read More »

ಸುಳ್ಯ: ಮರ‌ ಕಡಿಯುತ್ತಿದ್ದ ವೇಳೆ ಅವಘಡ| ಕೊಂಬೆಯ ನಡುವೆ ಸಿಲುಕಿ ವ್ಯಕ್ತಿ ದುರ್ಮರಣ

ಸಮಗ್ರ ನ್ಯೂಸ್: ಮರ ಕಡಿಯುತ್ತಿದ್ದ ವೇಳೆ ವ್ಯಕ್ತಿಯೋರ್ವರು ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯ ನಗರದ‌ ಕುರುಂಜಿ ಗುಡ್ಡೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ಮರ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿ ಮೂಲತಃ ಕೇರ್ಪಳದವರೆಂದು ತಿಳಿದು ಬಂದಿದೆ.

ಸುಳ್ಯ: ಮರ‌ ಕಡಿಯುತ್ತಿದ್ದ ವೇಳೆ ಅವಘಡ| ಕೊಂಬೆಯ ನಡುವೆ ಸಿಲುಕಿ ವ್ಯಕ್ತಿ ದುರ್ಮರಣ Read More »

ಸುಳ್ಯ: ಸಾವಿನಲ್ಲೂ ಜೊತೆಯಾದ ಸಹೋದರರು!!

ಸಮಗ್ರ ನ್ಯೂಸ್: ಅಣ್ಣ ನಿಧನರಾದ ವಿಷಯ ತಿಳಿದು‌ ತಮ್ಮ ಕೂಡಾ ಕುಸಿದು ಬಿದ್ದು ಮೃತಪಟ್ಟ ಮನಕಲಕುವ ಘಟನೆಯೊಂದಕ್ಕೆ ಸುಳ್ಯ ತಾಲೂಕಿನ ಅರಂತೋಡು ಸಾಕ್ಚಿಯಾಗಿದೆ. ಅರಂತೋಡು ಗ್ರಾಮದ ನಿವಾಸಿ ಅಬ್ದುಲ್ಲ ರವರು (82) ರವರು ಅಸೌಖ್ಯದಿಂದ ಇಂದು (ಎ.30) ಮುಂಜಾನೆ ನಿಧನರಾದರು. ಈ ವಿಷಯ ತಿಳಿಯುತಿದ್ದಂತೆ ಸಹೋದರ ಉದಯನಗರದ ನಿವಾಸಿ ಮಹಮ್ಮದ್ (76) ಅವರು ಮನೆಯಲ್ಲಿ ಕುಸಿದುಬಿದ್ದರು. ಮನೆಯವರು ತಕ್ಷಣ ಮಹಮ್ಮದ್ ರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬಂದರಾದರೂ ಆ ವೇಳೆಗೆ ಮಹಮ್ಮದ್ ರವರು ಮೃತಪಟ್ಟರೆಂದು ತಿಳಿದುಬಂದಿದ್ದು ಸಹೋದರರು

ಸುಳ್ಯ: ಸಾವಿನಲ್ಲೂ ಜೊತೆಯಾದ ಸಹೋದರರು!! Read More »

ಪತಂಜಲಿಯ 14 ಉತ್ಪನ್ನಗಳ ಪರವಾನಗಿ ರದ್ದು/ ಸುಪ್ರೀಂ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದ ಉತ್ತರಾಖಂಡ ಸರ್ಕಾರ

ಸಮಗ್ರ ನ್ಯೂಸ್: ಯೋಗ ಗುರು ಬಾಬಾ ರಾಮ್‍ದೇವ್ ಅವರ ಪತಂಜಲಿ ಕಂಪನಿಯ ಆರ್ಯುವೇದ ಉತ್ಪನ್ನಗಳ ವಿವಾದಾತ್ಮಕ ಜಾಹೀರಾತುಗಳನ್ನು ಎದುರಿಸಿದ ನಂತರ, ಇದೀಗ 14 ಉತ್ಪನ್ನಗಳ ಪರವಾನಗಿಯನ್ನು ರದ್ದುಗೊಳಿಸಲು ಉತ್ತರಾಖಂಡ ಸರ್ಕಾರ ನಿರ್ಧರಿಸಿದೆ. ಈ ಕುರಿತು ಸೋಮವಾರ ಸುಪ್ರೀಂ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಪತಂಜಲಿ ಗ್ರೂಪ್‍ನ ಭಾಗವಾಗಿರುವ ದಿವ್ಯ ಫಾರ್ಮಸಿ ದೃಷ್ಟಿ ಐ ಡ್ರಾಪ್’, ‘ಸ್ವಾಸರಿ ಗೋಲ್ಡ್’, ‘ಸ್ವಾಸರಿ ವಟಿ’, ‘ಬೋನ್‍ಚೋಂ’, ‘ಸ್ವಾಸರಿ ಪ್ರವಾಹಿ’, ‘ಸ್ವಾಸರಿ ಅವಲೇಹ್’, ‘ಮುಕ್ತಾ ವಟಿ ಎಕ್ಷ್ಮಾ ಪವರ್’, ‘ಲಿಪಿಡೋಮ್’, ‘ಬಿಪಿ ಗ್ರಿಟ್’, ‘ಮಧುಗ್ರಿಟ್’,

ಪತಂಜಲಿಯ 14 ಉತ್ಪನ್ನಗಳ ಪರವಾನಗಿ ರದ್ದು/ ಸುಪ್ರೀಂ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದ ಉತ್ತರಾಖಂಡ ಸರ್ಕಾರ Read More »

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಮನೆಗಳು, ರಸ್ತೆಗಳಿಗೂ ಹಾನಿ

ಸಮಗ್ರ ನ್ಯೂಸ್‌ : ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಕಳೆದ 48 ಗಂಟೆಗಳಿಂದ ಧಾರಕಾರ ಮಳೆಯಾಗುತ್ತಿದ್ದು, ಪೂಂಚ್‌ನ ಮಂಡಿ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದ ಭೂಕುಸಿತ ಉಂಟಾಗಿ ಹಲವಾರು ಮನೆಗಳು ಹಾನಿಗೊಳಗಾಗಿವೆ. ಪೂಂಚ್ ಮತ್ತು ಉತ್ತರ ಕಾಶ್ಮೀರದ ಭಾಗಗಳಲ್ಲಿ ಸುರಿದ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದೆ. ಪರಿಣಾಮ 8 ರಿಂದ 10 ಕಟ್ಟಡಗಳು ಮತ್ತು ರಸ್ತೆಗಳಿಗೆ ಹಾನಿಯಾಗಿದೆ. ಈ ಸಂಬಂಧ ಸ್ಥಳೀಯ ನಿವಾಸಿ ಅಶ್ಫಾಕ್ ಹುಸೇನ್ ಪ್ರತಿಕ್ರಿಯಿಸಿ, ಭಾರೀ ಮಳೆಯಿಂದಾಗಿ 8 ರಿಂದ 10 ಮನೆಗಳಿಗೆ ಹಾನಿಯಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಮನೆಗಳು, ರಸ್ತೆಗಳಿಗೂ ಹಾನಿ Read More »

ವಿಜಯಪುರ : ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು

ಸಮಗ್ರ ನ್ಯೂಸ್‌ : ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ. ವೆಂಕಟೇಶ ಶರಣಪ್ಪ ಚಲವಾದಿ (16) ಮೃತ ಬಾಲಕ.ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದ ನಿವಾಸಿ. ಮೃತ ಬಾಲಕನ ಚಿಕ್ಕಪ್ಪ ರವಿ ಮದುವೆ ಬಳಿಕ ಸಂಪ್ರದಾಯದಂತೆ ನದಿಗೆ ಬಾಸಿಂಗ ಬಿಡಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಸವನಬಾಗೇವಾಡಿಯ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶವ ಹುಡುಕಾಟ ನಡೆಸಿದ್ದಾರೆ.

ವಿಜಯಪುರ : ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು Read More »

ಇಂದು ಆಯುಷ್ಮಾನ್ ಭಾರತ್ ದಿನ ಆಚರಣೆ

ಸಮಗ್ರ ನ್ಯೂಸ್‌ : ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು ಆಯುಷ್ಮಾನ್ ಭಾರತ್ ದಿನವನ್ನು ಆಚರಿಸುತ್ತದೆ. ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ ಎಂದೂ ಕರೆಯಲ್ಪಡುವ ಈ ಯೋಜನೆಯಿಂದ ಭಾರತ ಸರ್ಕಾರವು ಸುಮಾರು 50 ಕೋಟಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಅಗ್ಗದ ಮತ್ತು ಸುಲಭವಾದ ಆರೋಗ್ಯ ಸೇವೆಯನ್ನು ನೀಡುತ್ತಿದೆ. ಬಡವರಿಗೆ ಆರೋಗ್ಯ ರಕ್ಷಣೆ ಒದಗಿಸಲು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಜಾರಿ

ಇಂದು ಆಯುಷ್ಮಾನ್ ಭಾರತ್ ದಿನ ಆಚರಣೆ Read More »