Editor

ಚಂಡಿಗಢ : ಮನೆಯ ಶ್ವಾನ ನಾಪತ್ತೆ- ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ನಿನ್ನೆ ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಳು ಶ್ವಾನ ನಾಪತ್ತೆಯಾಗಿದೆ ಎಂದು ಕೆಲವು ದಿನಗಳಿಂದ ಆಕೆ ಕೊರಗುತ್ತಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. […]

ಚಂಡಿಗಢ : ಮನೆಯ ಶ್ವಾನ ನಾಪತ್ತೆ- ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ Read More »

ಬೀದರ್ : ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದ ಸುರ್ಜೇವಾಲಾ

ಸಮಗ್ರ ನ್ಯೂಸ್‌ : ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ‌ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ‌ ಸರ್ಕಾರದ‌ ಡಿಎನ್‌ಎ ಕರ್ನಾಟಕ ಮತ್ತು ಕನ್ನಡಿಗರ ವಿರೋಧಿ‌ ಆಗಿದೆ. ಬರ ಪರಿಹಾರ ಮತ್ತು ನೀರಾವರಿ ಯೋಜನೆಗಳಿಗೆ ಅನುದಾನ ನೀಡದ ಮೋದಿ ಸರ್ಕಾರ ಕರ್ನಾಟಕದ‌ ಜನರ‌ ವಿರುದ್ಧ ದ್ವೇಷ‌ ಸಾಧಿಸುತ್ತಿದೆ. ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಖಾಲಿ ಚೊಂಬು ಪ್ರದರ್ಶನ ಮಾಡಿ

ಬೀದರ್ : ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದ ಸುರ್ಜೇವಾಲಾ Read More »

ಚಾಮರಾಜನಗರ : ಸುನೀಲ್ ಬೋಸ್ ೧ ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ-ಮಾಜಿ ಶಾಸಕ ಆರ್ ನರೇಂದ್ರ

ಸಮಗ್ರ ನ್ಯೂಸ್ : ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು ಮಾಜಿ ಶಾಸಕ ಆರ್ ನರೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ 1, 61,644 ಮತಗಳು ಚಲಾವಣೆಯಾಗಿದೆ. ಈ ಪೈಕಿ ಕಾಂಗ್ರೆಸ್ ಪಕ್ಷಕ್ಕೆ ಹನೂರು ವಿಧಾನಸಭಾ ಕ್ಷೇತ್ರ ಒಂದರಲ್ಲಿ 20 ರಿಂದ 25 ಸಾವಿರದವರೆಗೆ ಹೆಚ್ಚಿನ ಅಂತರದಲ್ಲಿ ಸಿಗಲಿದೆ.

ಚಾಮರಾಜನಗರ : ಸುನೀಲ್ ಬೋಸ್ ೧ ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ-ಮಾಜಿ ಶಾಸಕ ಆರ್ ನರೇಂದ್ರ Read More »

ವಿಜಯಪುರ: ರಥೋತ್ಸವದ ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸಾವು, ಓರ್ವ ಗಂಭೀರ ಗಾಯ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆ ಇಂದು ನಡೆಯಿತು. ಈ ಜಾತ್ರೆಯ ರಥೋತ್ಸವ ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ. ಇಂದು ಸಂಜೆ ಗೋಧೋಳಿ ಮುಹೂರ್ತದಲ್ಲಿ ಶ್ರೀ ಸಿದ್ದಲಿಂಗ ಮಹರಾಜರ ರಥೋತ್ಸವ ನಡೆದಿದ್ದು, ಸಾವಿರಾರು ಜನರು ಭಾಗಿಯಾಗಿದ್ದರು. ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ರವಾನೆ

ವಿಜಯಪುರ: ರಥೋತ್ಸವದ ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸಾವು, ಓರ್ವ ಗಂಭೀರ ಗಾಯ Read More »

ಚಂಡೀಗಢ : ಸೈಕಲ್ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್ವರೆಗೆ ಎಳೆದೊಯ್ದ ಡ್ರೈವರ್

ಸಮಗ್ರ ನ್ಯೂಸ್‌ : ಸೈಕಲ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ನಡೆದಿದೆ. ಹರಿಯಾಣದ ಕರ್ಮ್‌ಗಢ್ ಗ್ರಾಮದ ಗುರ್ನಾಮ್ ಸಿಂಗ್ (50) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೋಟಾ ಗ್ರಾಮದಿಂದ ತಮ್ಮ ಹಳ್ಳಿಗೆ ರಸ್ತೆ ಮೂಲಕ ಸೈಕಲ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್ ವಾಹನ ಮೊದಲು ಡಿಕ್ಕಿ ಹೊಡೆದಿದೆ. ವ್ಯಕ್ತಿಯನ್ನು ಎಳೆದುಕೊಂಡು ಹೋಗುವುದನ್ನು ಹಿಂದೆ ಬರುತ್ತಿದ್ದ ಟ್ರಕ್ನಲ್ಲಿದ್ದವರು ನೋಡಿದ್ದರು. ಪಿಕಪ್ ವಾಹನವನ್ನು

ಚಂಡೀಗಢ : ಸೈಕಲ್ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್ವರೆಗೆ ಎಳೆದೊಯ್ದ ಡ್ರೈವರ್ Read More »

ಪೌರಕಾರ್ಮಿಕರ ನೇಮಕಾತಿ/ ಮೇ 15ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್: ಚುನಾವಣೆಯ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಿ ಬಿಬಿಎಂಪಿ ಅಧಿಸೂಚನೆ ಹೊರಡಿಸಿದೆ. 11,307 ಪೌರಕಾರ್ಮಿಕರ ನೇಮಕಾತಿಗೆ ಮಾರ್ಚ್‍ನಲ್ಲಿ ಅರ್ಜಿ ಆಹ್ವಾನಿಸಿದ್ದ ಬಿಬಿಎಂಪಿಯು ಏ.15ರವರೆಗೆ ಕಾಲಾವಕಾಶ ನೀಡಿತ್ತು. ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಹಾಗೂ ಆಡಳಿತಾತ್ಮಕ ಕಾರಣ ನೀಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಲಾಗಿದೆ. ಬಿಬಿಎಂಪಿಯ 14,980 ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಸರ್ಕಾರ ಹೇಳಿದ್ದು, ಇದೀಗ ಮೊದಲ ಹಂತದಲ್ಲಿ ಬಿಬಿಎಂಪಿಯ

ಪೌರಕಾರ್ಮಿಕರ ನೇಮಕಾತಿ/ ಮೇ 15ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಚಾಮರಾಜನಗರದಲ್ಲಿ ಇವಿಎಂ ಧ್ವಂಸ ಪ್ರಕರಣ: 33 ಮಂದಿ ಬಂಧನ

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಚುನಾವಣೆ ದಿನ ಇವಿಎಂ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್​​ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧ ಈವರೆಗೂ 33 ಮಂದಿಯನ್ನು ಬಂಧಿಸಿದ್ದೇವೆ ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ, ಇಂಡಿಗನತ್ತ ಗ್ರಾಮದಲ್ಲಿ ಒಂದು KSRP ತುಕಡಿ, ಡಿಎಆರ್ ತುಕಡಿ ನಿಯೋಜನೆ ಮಾಡುವ ಮೂಲಕ ಪೊಲೀಸ್ ಬಿಗಿ ಬಂದೋಬಸ್ತ್​ ಒದಗಿಸಲಾಗಿದೆ ಎಂದು

ಚಾಮರಾಜನಗರದಲ್ಲಿ ಇವಿಎಂ ಧ್ವಂಸ ಪ್ರಕರಣ: 33 ಮಂದಿ ಬಂಧನ Read More »

ಸುಬ್ರಹ್ಮಣ್ಯ: ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ಟೇಬಲ್ ಫ್ಯಾನ್ ಕೊಡುಗೆ

ಸಮಗ್ರ ನ್ಯೂಸ್: ಬಿಸಿಲಿನ ಝಳ ಹೆಚ್ಚುತ್ತಿರುವ ಈ ಸಂಧರ್ಭದಲ್ಲಿ, ದಿನಕೂಲಿ ನಡೆಸಿ ಜೀವನ ಸಾಗಿಸುವ ಮನೆಗಳಲ್ಲಿನ ಅಶಕ್ತರು ಮತ್ತು ಅನಾರೋಗ್ಯಗಳಿಂದ ಬಳಲುತ್ತಿರುವ, ಕನಿಷ್ಠ ಫ್ಯಾನ್ ಹೊಂದಿರದ ಕುಟುಂಬಗಳನ್ನು ಗಮನಿಸಿದ ಬಾಳುಗೋಡು ಗ್ರಾಮದ ಕಾಂಗ್ರೆಸ್ ಸಮಿತಿಯ ಸದಸ್ಯರು ಕಡುಬಡತನದಲ್ಲಿ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ, ರೇಷನ್ ಕಾರ್ಡ್ ತಿದ್ದುಪಡಿಯಾಗದೇ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಲಕ್ಷ್ಮೀ ಯೋಜನೆಯಿಂದ ವಂಚಿತರಾದ ನಾಲ್ಕು ಮನೆಗಳನ್ನು ಗುರುತಿಸಿ ಅವರ ಮನೆಗಳಿಗೆ ಮಾನವೀಯ ನೆಲೆಯಲ್ಲಿ ಟೇಬಲ್ ಫ್ಯಾನ್ ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಬಾಳುಗೋಡು

ಸುಬ್ರಹ್ಮಣ್ಯ: ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ಟೇಬಲ್ ಫ್ಯಾನ್ ಕೊಡುಗೆ Read More »

ಬೆಳಗಾವಿ:ಚಿಕ್ಕೋಡಿಯಲ್ಲಿ ಅಣ್ಣಾಸಾಹೇಬ ಜೊಲ್ಲೇ ಗೆಲುವು ಖಚಿತ|ರಾಜ್ಯಸಭಾ‌ ಸದಸ್ಯ ಈರಣ್ಣಾ ಕಡಾಡಿ

ಸಮಗ್ರ ನ್ಯೂಸ್:ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಬಹಳಷ್ಟು ಅಭಿವೃದ್ಧಿಯಾಗಿದೆ ಇದರಿಂದ ಇದರಿಂದ ಲೋಕಾಸಭಾ ಚುಣಾವಣೆಯಲ್ಲಿ ಮತ್ತೊಮ್ಮೆ ಮೋದಿಯವರು ಪ್ರಧಾನಮಂತ್ರಿ ಆಗುತ್ತಾರೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಅವರು ಕಾಗವಾಡ ಮತಕ್ಷೇತ್ರದ ಗುಂಡೆವಾಡಿ ಮತ್ತು ಮದಭಾವಿ ಗ್ರಾಮದಲ್ಲಿ ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೋಲ್ಲೇ ಪ್ರಚಾರ ಸಭೆಯಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಅವರು ದೇಶಕ್ಕೆ ಮೋದಿ ಚಿಕ್ಕೋಡಿ ಜೋಲ್ಲೆಯ ಅವಶ್ಯಕತೆ ತುಂಬಾ ಇದೆ ಆದರಿಂದ ಎಲ್ಲರೂ ಸಹ‌ ಬಿಜೆಪಿಗೆ ಮತ

ಬೆಳಗಾವಿ:ಚಿಕ್ಕೋಡಿಯಲ್ಲಿ ಅಣ್ಣಾಸಾಹೇಬ ಜೊಲ್ಲೇ ಗೆಲುವು ಖಚಿತ|ರಾಜ್ಯಸಭಾ‌ ಸದಸ್ಯ ಈರಣ್ಣಾ ಕಡಾಡಿ Read More »

ಅಶ್ಲೀಲ ವಿಡಿಯೋ ಪ್ರಕರಣ| ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿರುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆದೇಶಿಸಿದ್ದಾರೆ. ಪ್ರಜ್ವಲ್ ರೇವಣ್ಣ ಲೈಂಗಿಕ ‌ದೌರ್ಜನ್ಯ‌ ನಡೆಸಿ ಹೆಣ್ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಈ ಕುರಿತಂತೆ ಸಂತ್ರಸ್ಥೆಯೋರ್ವರು ದೂರು ದಾಖಲಿಸಿದ್ದಾರೆ.‌ ಸದ್ಯ ತನಿಖೆಗೆ ಎಸ್ಐಟಿ‌ ರಚನೆ ಮಾಡಲಾಗಿದ್ದು, ಪ್ರಕರಣ ಗಂಭೀರ ಸ್ವರೂಪ‌ ಪಡೆದುಕೊಂಡಿದೆ.

ಅಶ್ಲೀಲ ವಿಡಿಯೋ ಪ್ರಕರಣ| ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ Read More »