Editor

ರಾಜಸ್ಥಾನ : ಮೋದಿ ಹೇಳಿಕೆ ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ :ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ರಾಜಸ್ತಾನದ ಬಾನಸ್ವರಾದಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಪ್ರಧಾನಿ ಮೋದಿ ಯವರು ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಅವರನ್ನು ಪಕ್ಷದಿಂದ ಉಚ್ಛಾಟನೆ ಗೊಳಿಸಲಾಗಿತ್ತು. ಇದೀಗ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಮುಕ್ತ ಪ್ರಸಾದ್‌ ನಗರ ಪೊಲೀಸ್‌ ಠಾಣಾಧಿಕಾರಿ ಧೀರೇಂದ್ರೆ ಶೆಖಾವತ್‌ ಮಾಹಿತಿ […]

ರಾಜಸ್ಥಾನ : ಮೋದಿ ಹೇಳಿಕೆ ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ Read More »

ಮುಂಬೈ : ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್‌ ಖಾನ್‌ ಪಕ್ಷದ ವಿರುದ್ಧ ಸಿಟ್ಟಾಗಿದ್ದು ನಾನು ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಮಹಾ ವಿಕಾಸ್ ಅಘಾಡಿ ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಪ್ರಚಾರದಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದು

ಮುಂಬೈ : ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌ Read More »

ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್ ವಾಹನದಲ್ಲಿ ಎರಡು ಕೋಟಿ ರೂ.ಪತ್ತೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ಯಂತ ಸನ್ನದ್ಧ ಸ್ಥಿತಿಯಲ್ಲಿರುವ ಇಲ್ಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದ 2 ಕೋಟಿ ರೂ. ಹಣವನ್ನು ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ವಶಪಡಿಸಿಕೊಂಡಿರುವುದು ವರದಿಯಾಗಿದೆ. ಮಾಜಿ ಮೇಯರ್ ವೊಬ್ಬರಿಗೆ ಸೇರಿದ ಕಾರಿನಲ್ಲಿ ಹಣ ಸಾಗಿಸುವ ಯತ್ನ ನಡೆಯುತ್ತಿತ್ತು ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು ಸಂಜೆ ವೇಳೆಗೆ ಈ ನಿಟ್ಟಿನಲ್ಲಿ ಖಚಿತ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದ್ದಾರೆ

ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್ ವಾಹನದಲ್ಲಿ ಎರಡು ಕೋಟಿ ರೂ.ಪತ್ತೆ Read More »

ಬೆಳಗಾವಿ : ಎರಡು ಕುಟುಂಬಗಳ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ – ಮಗು ಬಲಿ

ಸಮಗ್ರ ನ್ಯೂಸ್‌ : ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ. ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾರೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ. ವಿಷಯ

ಬೆಳಗಾವಿ : ಎರಡು ಕುಟುಂಬಗಳ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ – ಮಗು ಬಲಿ Read More »

ಯಾದಗಿರಿ : ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ-ಯತ್ನಾಳ್

ಸಮಗ್ರ ನ್ಯೂಸ್‌ : ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಅವರು ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದಲಿತರು ಮತ್ತು ಹಿಂದುಳಿದವರಿಗೆ ಕಾಂಗ್ರೆಸ್ ಭಾರೀ ಮೋಸ ಮಾಡಿದೆ. ಸಂವಿಧಾನದಲ್ಲಿ ಕೇವಲ ಎಸ್‍ಸಿ, ಎಸ್‍ಟಿ, ಅಲ್ಪಸಂಖ್ಯಾತರು, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಲಾಗಿದೆ. ಮುಸ್ಲಿಂ ಧರ್ಮಕ್ಕೆ ಮೀಸಲಾತಿ ಕೊಡಲು ಬರುವುದಿಲ್ಲ. ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೊದಲು ಮುಸ್ಲಿಂ ಮೀಸಲಾತಿ ತೆಗೆದು ಹಾಕುತ್ತೇವೆ. ಅದನ್ನು ಎಸ್‍ಸಿ,

ಯಾದಗಿರಿ : ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ-ಯತ್ನಾಳ್ Read More »

ಬಿಹಾರ : ಮದುವೆ ಮನೆಯಲ್ಲಿ ಪತ್ನಿ ಡಾನ್ಸ್‌ | ಬೇಸರಗೊಂಡು ಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಿಹಾರದ ಬದಾರಿಯಾದಲ್ಲಿ ನಡೆದಿದೆ. ಬಹುಲಾ ಗ್ರಾಮದ ನಿವಾಸಿ 35 ವರ್ಷದ ಗೋಪಾಲ್‌ ಸಿಂಗ್‌, ರಸೂಲ್‌ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ ಮಹೇಂದ್ರ ನಾಥ್‌ ಹಾಲ್ಟರ್‌ ರೈಲು ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗೋಪಾಲ್‌ ಸಿಂಗ್‌ ಬೇನತ್‌ ಗ್ರಾಮದಲ್ಲಿ ತನ್ನ ಪತ್ನಿಯ ಸಹೋದರನ ಮದುವೆ ಸಮಾರಂಭಕ್ಕೆ ಹೋಗಿದ್ದರು. ಈ ವೇಳೆ ಸಂಭ್ರಮದಲ್ಲಿ ಡಾನ್ಸ್‌ ಮಾಡುತ್ತಿದ್ದ ಪತ್ನಿಯನ್ನು ನೋಡಿ

ಬಿಹಾರ : ಮದುವೆ ಮನೆಯಲ್ಲಿ ಪತ್ನಿ ಡಾನ್ಸ್‌ | ಬೇಸರಗೊಂಡು ಪತಿ ಆತ್ಮಹತ್ಯೆ Read More »

ಅಮೆರಿಕಾದಲ್ಲಿ ಭೀಕರ ಕಾರು ಅಪಘಾತ| ಭಾರತದ ಮೂವರು ಮಹಿಳೆಯರು ಮೃತ್ಯು

ಸಮಗ್ರ ನ್ಯೂಸ್‌ : ಅಮೆರಿಕಾದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ SUV ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿದೆ. ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ

ಅಮೆರಿಕಾದಲ್ಲಿ ಭೀಕರ ಕಾರು ಅಪಘಾತ| ಭಾರತದ ಮೂವರು ಮಹಿಳೆಯರು ಮೃತ್ಯು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಪ್ರಕಾರ ಈ ವಾರದ ಭವಿಷ್ಯ ನೀಡಲಾಗಿದೆ, ಈ ವಾರ ಏಪ್ರಿಲ್ 27ರಿಂದ ಮೇ 4 ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ: ಮೇಷ ರಾಶಿ:ಮೇ ತಿಂಗಳ ಮೊದಲ‌ ವಾರ ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಶುಭವಿದೆ. ನಿಮ್ಮ ರಾಶಿಯಲ್ಲಿ ಉಚ್ಚನಾಗಿ ರವಿ ಇರುವುದು ನಿಮಗೆ ಶುಭ.‌ ವ್ಯಾವಹಾರಿಕವಾದ ಪ್ರಗತಿ ಇರುವುದು. ದ್ವಿತೀಯ ರಾಶಿಗೆ ಗುರುವಿನ ಪ್ರವೇಶವು ಆಗಲಿದೆ. ಸಂಪತ್ತಿನ ಸಮೃದ್ಧಿಯು ಸಿಗಲಿದೆ. ಸಂಪತ್ತು ಸಿಗುವ ಕಡೆ ನಿಮ್ಮ‌ ಪ್ರಯಾಣ ಇರಲಿದೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಹಾಸನ: ಪೆನ್ ಡ್ರೈವ್, ಅಶ್ಲೀಲ ವಿಡಿಯೋ ಪ್ರಕರಣ| ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪೆನ್‌ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಲು‌ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ

ಹಾಸನ: ಪೆನ್ ಡ್ರೈವ್, ಅಶ್ಲೀಲ ವಿಡಿಯೋ ಪ್ರಕರಣ| ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ Read More »

ಬೀದರ್ : ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ- ಈಶ್ವರ ಖಂಡ್ರೆ

ಸಮಗ್ರ ನ್ಯೂಸ್‌ : ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು, ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ರಾಜ್ಯದಲ್ಲಿ ಬರದಿಂದ ಆಗಿರುವ ಬೆಳೆ ನಷ್ಟಕ್ಕೆ ಹಾಗೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಪರಿಹಾರ

ಬೀದರ್ : ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ- ಈಶ್ವರ ಖಂಡ್ರೆ Read More »