Editor

ನವದೆಹಲಿ : ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ

ಸಮಗ್ರ ನ್ಯೂಸ್‌ : ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿಗೆ ಚಂಡಮಾರುತ ಹಾಗೂ ಪ್ರವಾಹ ಪರಿಹಾರವೆಂದು 275 ಕೋಟಿ ರೂ. ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ರೂ. ಹಣದ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ […]

ನವದೆಹಲಿ : ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ Read More »

ಕೋಲಾರ : ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ

ಸಮಗ್ರ ನ್ಯೂಸ್‌ : ಇವಿಎಂ‌ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ. ಅದೃಷವಶಾತ್‌ ಕ್ಯಾಂಟರ್‌ ವಾಹನದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಬ್ಬಂದಿಯಿಂದ ವಾಹನದ ಟೈರ್ ಬದಲಾಯಿಸುವ ಕಾರ್ಯ ಮುಂದುವರಿದಿದ್ದು, ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇವಿಎಂ ಇರುವ ಕ್ಯಾಂಟರ್‌ ಅನ್ನು ಸೀಲ್ ಮಾಡಿರುವುದರಿಂದ‌ ವಾಹನದ ರಿಪೇರಿಯಾದ‌ ನಂತರ ಸ್ಟ್ರಾಂಗ್

ಕೋಲಾರ : ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ Read More »

ಭಾರತೀಯ ಮೂಲದ 3 ಕಂಪೆನಿಗಳಿಗೆ ಅಮೆರಿಕ ನಿರ್ಬಂಧ

ಸಮಗ್ರ ನ್ಯೂಸ್: ಇರಾನಿಯನ್‌ ಸೇನೆ ಜೊತೆ ಅಕ್ರಮ ವ್ಯಾಪಾರ ವಹಿವಾಟು ಹೊಂದಿರುವ 12ಕ್ಕೂ ಅಧಿಕ ಕಂಪನಿಗಳು, ಹಡುಗುಗಳು ಮತ್ತು ಉದ್ಯಮಿಗಳ ಮೇಲೆ ಇದೀಗ ಅಮೆರಿಕ ನಿರ್ಬಂಧ ವಿಧಿಸಿದೆ. ಇದರಲ್ಲಿ ಭಾರತ ಮೂರು ಕಂಪನಿಗಳು ಸೇರಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಷ್ಯಾ-ಉಕ್ರೇನ್‌ ಯುದ್ಧ ಸಂದರ್ಭದಲ್ಲಿ ಈ ಕಂಪನಿಗಳು, ಹಡಗುಗಳು ಮತ್ತು ವ್ಯಕ್ತಿಗಳು ಇರಾನ್‌ನ ಮಾನವ ರಹಿತ ವೈಮಾನಿಕ ವಾಹನ- ಡ್ರೋನ್‌(UAVs) ಗಳನ್ನು ರಷ್ಯಾಗೆ ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು ಎಂದು ಅಮೆರಿಕದ ಹೇಳಿದೆ. ಇರಾನ್‌ನ ಸಾಗರೋತ್ತರ

ಭಾರತೀಯ ಮೂಲದ 3 ಕಂಪೆನಿಗಳಿಗೆ ಅಮೆರಿಕ ನಿರ್ಬಂಧ Read More »

ಪರೀಕ್ಷೆಯಲ್ಲಿ “ಜೈ ಶ್ರೀ ರಾಮ್” ಘೋಷಣೆ ಬರೆದವರು ಪಾಸ್: ಶಿಕ್ಷಕರಿಗೆ ಎದುರಾಯ್ತು ಸಂಕಷ್ಟ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ಉತ್ತರಗಳ ಬದಲು “ಜೈ ಶ್ರೀ ರಾಮ್” ಘೋಷಣೆ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಅವರೆ ಅವರೆಲ್ಲಾ ಪಾಸ್ ಆಗಿದ್ದಾರೆ. ಆದರೆ ಈಗ ಶಿಕ್ಷಕರಿಗೆ ತಲೆ ನೋವು ತಂದಿಟ್ಟಿದೆ. ಉತ್ತರ ಪತ್ರಿಕೆಯಲ್ಲಿ ಸಿನಿಮಾ ಹಾಡುಗಳು, ಮ್ಯೂಸಿಕ್‌ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದು, ಅದಕ್ಕೆ ಅಂಕಗಳನ್ನು ನೀಡುವುದಕ್ಕಾಗಿ ವಿದ್ಯಾರ್ಥಿಗಳಿಂದ ಹಣವನ್ನು ಲಂಚ ಪಡೆದ ಆರೋಪದ ಮೇಲೆ ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ

ಪರೀಕ್ಷೆಯಲ್ಲಿ “ಜೈ ಶ್ರೀ ರಾಮ್” ಘೋಷಣೆ ಬರೆದವರು ಪಾಸ್: ಶಿಕ್ಷಕರಿಗೆ ಎದುರಾಯ್ತು ಸಂಕಷ್ಟ Read More »

ಬ್ರೌಸರ್ ನಲ್ಲಿ ಹಿಸ್ಟರಿ ಬಗ್ಗೆ ತುಂಬಾ ಭಯ ಇದ್ಯ? ಮೊದಲು ಈ ಕೆಲ್ ಮಾಡಿ ಸಾಕು

ಇತ್ತೀಚಿನ ದಿನಗಳಲ್ಲಿ ಬ್ರೌಸರ್‌ಗಳಲ್ಲಿ ಹಲವು ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಕೋಟಿಗಟ್ಟಲೆ ಬಳಕೆದಾರರ ಭದ್ರತೆ ಅಪಾಯದಲ್ಲಿದೆ ಎಂದು ಹೇಳಬಹುದು. ಈ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದಿಲ್ಲ. ಆದರೆ ಭಾರತ ಸರ್ಕಾರವು ಇವುಗಳ ಬಗ್ಗೆ ಕಾಲಕಾಲಕ್ಕೆ ತಿಳಿಸುತ್ತದೆ ಮತ್ತು ಬಳಕೆದಾರರನ್ನು ಎಚ್ಚರವಾಗಿರಿಸುತ್ತದೆ. ಮೈಕ್ರೋಸಾಫ್ಟ್ ಎಡ್ಜ್ ವೆಬ್ ಬ್ರೌಸರ್‌ನಲ್ಲಿನ ನಿರ್ಣಾಯಕ ಭದ್ರತಾ ದೋಷದ ಬಗ್ಗೆ ಈ ವಾರ ಮೈಕ್ರೋಸಾಫ್ಟ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ಮಾಹಿತಿಯನ್ನು ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್‌ಟಿ-ಇನ್) ಭದ್ರತಾ ಬುಲೆಟಿನ್‌ನಲ್ಲಿ ಬಹಿರಂಗಪಡಿಸಿದ್ದು, ಇದು ಪ್ರಮುಖ ಭದ್ರತಾ

ಬ್ರೌಸರ್ ನಲ್ಲಿ ಹಿಸ್ಟರಿ ಬಗ್ಗೆ ತುಂಬಾ ಭಯ ಇದ್ಯ? ಮೊದಲು ಈ ಕೆಲ್ ಮಾಡಿ ಸಾಕು Read More »

ನೇಹಾ ನಿವಾಸಕ್ಕೆ ಪೊಲೀಸ್ ಭದ್ರತೆ, ತಂದೆಗೆ ಗನ್ ಮ್ಯಾನ್ ವ್ಯವಸ್ಥೆ ಮಾಡಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊನ್ನೆ ಸಿಎಂ ಸಿದ್ದರಾಮಯ್ಯ ಅವರು ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಮಗಳು ನೇಹಾ ಹತ್ಯೆ ನಡೆದ ಮೇಲೆ ತಮಗೂ ಜೀವ ಬೆದರಿಕೆ ಇದೆ ಎಂದು ನೇಹಾ ತಂದೆ ನಿರಂಜನ ಹಿರೇಮಠ್‌ ಅವರು ಹೇಳಿದರು. ಈ ಹಿನ್ನೆಲೆಯಲ್ಲಿ ಅವರಿಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ಏರ್ಪಡಿಸಿದೆ. ಈ ಸಂದರ್ಭದಲ್ಲಿ ಸಿಎಂ ಬೆದರಿಕೆ ಇದ್ದರೆ ಭದ್ರತೆ ಒದಗಿಸುವುದಾಗಿ

ನೇಹಾ ನಿವಾಸಕ್ಕೆ ಪೊಲೀಸ್ ಭದ್ರತೆ, ತಂದೆಗೆ ಗನ್ ಮ್ಯಾನ್ ವ್ಯವಸ್ಥೆ ಮಾಡಿದ ರಾಜ್ಯ ಸರ್ಕಾರ Read More »

ಹಾಸನದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾರ್ಯಕರ್ತರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಹಾಸನದಲ್ಲಿ ಮತದಾನ ಪ್ರಕ್ರಿಯೆ ಮುಗಿಯುವ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಇದರಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆ.ಬಿ‌.ಪಾಳ್ಯದಲ್ಲಿ ನಡೆದಿದೆ. ಕೆ.ಬಿ.ಪಾಳ್ಯದ ಮತಗಟ್ಟೆ ಸಂಖ್ಯೆ 249ರ ಬಳಿ ಕಾಂಗ್ರೆಸ್‌ನ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಕೈ ಕಾರ್ಯಕರ್ತನನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತಗಟ್ಟೆಗೆ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಅವರ ತಾಯಿ ಅನುಪಮಾ ಮಹೇಶ್ ಭೇಟಿ ನೀಡಿದ್ದರು.

ಹಾಸನದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾರ್ಯಕರ್ತರು ಆಸ್ಪತ್ರೆಗೆ ದಾಖಲು Read More »

ಗದಗ: ಬಾಲ್ಯವಿವಾಹ ತಡೆದ ಅಧಿಕಾರಿಗಳು|ಪೋಷಕರಿಂದ ಮುಚ್ಚಳಿಕೆ ಪತ್ರ

ಸಮಗ್ರ ನ್ಯೂಸ್: ಬಾಲ್ಯ ವಿವಾಹ ಅಪರಾಧ. ಹಿಂದೆ ಈ ಅನಿಷ್ಠ ಪದ್ಧತಿ ಇತ್ತು. ಆದರೆ ಈಗ ಈ ಪದ್ಧತಿಗೆ ಬ್ರೇಕ್ ಬಿದ್ದಿದೆ. ಆದ್ರೆ ಅಲ್ಲೊಂದು ಇಲ್ಲೊಂದು ಈ ವಿಚಾರ ಬೆಳಕಿಗೆ ಬರುವುದು ಮಾತ್ರ ತಪ್ಪಿಲ್ಲ. ಹೌದು, ಇಂದು ಗದಗದಲ್ಲಿ ನಡೀತಿದ್ದ ಬಾಲ್ಯ ವಿವಾಹವೊಂದಕ್ಕೆ ಅಧಿಕಾರಿಗಳು ಭೇಟಿ ನೀಡಿ ನಿಲ್ಲಿಸಿದ್ದಾರೆ. ನಗರದ ಕರ್ನಾಟಕ ಭವನದಲ್ಲಿ ಗದಗ ತಾಲೂಕಿನ ಕೊಟುಮಚಗಿ ಗ್ರಾಮದ ಇಬ್ಬರು ಸಹೋದರರ ಮದುವೆ ನಿಶ್ಚಿಯ ಮಾಡಲಾಗಿತ್ತು. ಆದ್ರೆ, ಕಿರಿಯ ಸಹೋದರನ ಮದುವೆ ಆಗುತ್ತಿರುವ ಬಾಲಕಿಗೆ ಇನ್ನೂ 18

ಗದಗ: ಬಾಲ್ಯವಿವಾಹ ತಡೆದ ಅಧಿಕಾರಿಗಳು|ಪೋಷಕರಿಂದ ಮುಚ್ಚಳಿಕೆ ಪತ್ರ Read More »

ಮಂಡ್ಯ: ಮತ ಹಾಕಲು ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಬಂದ ಮಹಿಳೆ

ಸಮಗ್ರ ನ್ಯೂಸ್‌ : ಲಂಡನ್‌ನಿಂದ ಮಂಡ್ಯಕ್ಕೆ ಮಹಿಳೆಯೊಬ್ಬರು ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿಕೊಂಡು ಬಂದು ಮತ ಚಲಾಯಿಸಿದ ಘಟನೆ ಮಂಡ್ಯದ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋನಿಕಾ ಎಂಬಾಕೆ ಲಂಡನ್‌ನಿಂದ ಬಂದು ಕಾಳೇನ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇದೇ ವೇಳೆ ಮಾತಾನಾಡಿದ ಸೋನಿಕಾ ಎಲ್ಲೆಡೆ ಬರ ಇದೆ ನಮ್ಮ ರಾಜ್ಯ ಹಾಗೂ ದೇಶಕ್ಕೆ ಒಳ್ಳೆಯದಾಗಬೇಕು. ಮೋದಿ ನಾಯಕತ್ವದಲ್ಲಿ ದೇಶ ಮುನ್ನಡೆಯುತ್ತಿದೆ. ಹಾಗಾಗಿ ಕುಮಾರಸ್ವಾಮಿ ಅವರಿಗೆ ಮತ ಚಲಾಯಿಸಿದ್ದೀನಿ. ನೀವು

ಮಂಡ್ಯ: ಮತ ಹಾಕಲು ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಬಂದ ಮಹಿಳೆ Read More »

ಕಾರ್ಕಳ: ಕುದುರೆ ಏರಿ ಬಂದು ಮತದಾನ ಮಾಡಿದ ಯುವಕ

ಸಮಗ್ರ ನ್ಯೂಸ್ : ಯುವಕನೊಬ್ಬ ಕುದುರೆ ಏರಿ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸಿದ ಘಟನೆ ಕಾರ್ಕಳದಲ್ಲಿ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ರವರ ಜೇಷ್ಠ ಪುತ್ರ ಏಕಲವ್ಯ ಆರ್ ಕಟೀಲ್ ಇಂದು ತಾನು ಸಾಕಿದ ಕುದುರೆಯನ್ನು ಏರಿ ಬೂತ್ ನಂ 87 ಸರಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಗೆ ಬಂದು ಮತ ಚಲಾಯಿಸುದರ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದರು. ಈ ಸಂದರ್ಭದಲ್ಲಿ ಬೂತ್ ನಲ್ಲಿ ಇದ್ದ ಪಕ್ಷದ

ಕಾರ್ಕಳ: ಕುದುರೆ ಏರಿ ಬಂದು ಮತದಾನ ಮಾಡಿದ ಯುವಕ Read More »