Editor

ಸುರತ್ಕಲ್: ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಸೋಮವಾರ(ಜು.೭) ಮಧ್ಯಾಹ್ನ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ನಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ. ವರದಿಯ ಪ್ರಕಾರ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನ ಮಾಡಲು ಹೋಗುತ್ತಿದ್ದಾಗ ಹೃದಯಾಘಾತದಿಂದ ಹಠಾತ್ತನೆ ಕುಸಿದು ಬಿದ್ದಿದ್ದಾನೆ. ಅಸ್ಗರ್ ಅಲಿಯ ನಾಲ್ವರು ಮಕ್ಕಳಲ್ಲಿ ಅಫ್ತಾಬ್ […]

ಸುರತ್ಕಲ್: ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ Read More »

ರಾಜ್ಯದಲ್ಲಿ ಒಂದೇ ದಿನ 11ಮಂದಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಮುಂದುವರಿದಿದ್ದು ನಿನ್ನೆ ಜು.7ರಂದು ಬರೋಬ್ಬರಿ 11 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತುಮಕೂರಿನಲ್ಲಿ ಹೃದಯಾಘಾತಕ್ಕೆ ಮೂವರು ಬಲಿಯಾಗಿದ್ದಾರೆ. ತುಮಕೂರಿನ ಹನುಮಂತಪುರದ ನಿವಾಸಿಗಳಾದ ಜಯಂತ್ (31) ಹಾಗೂ ಶ್ರೀಧರ್ (52) ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಯಂತ್‌ಗೆ ಮನೆಯಲ್ಲಿ ಮಲಗಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಶ್ರೀಧರ್ ಟೀ ಕುಡಿದು ಮನೆಯಲ್ಲಿ ಕುಳಿತಿದ್ದಾಗ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕು

ರಾಜ್ಯದಲ್ಲಿ ಒಂದೇ ದಿನ 11ಮಂದಿ ಹೃದಯಾಘಾತದಿಂದ ಸಾವು Read More »

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಚ್ಚಿಬೀಳಿಸುವ ವರದಿಯೊಂದನ್ನು ಆರೋಗ್ಯ ಇಲಾಖೆ ರಿಲೀಸ್‌ ಮಾಡಿದ್ದು, ಒಂದಲ್ಲ ಎರಡಲ್ಲ ಬರೊಬ್ಬರಿ ನಾಲ್ಕು ಸಾವಿರ ಮಕ್ಕಳು ದೃಷ್ಟಿ ದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಅಂದತ್ವ ನಿವಾರಣ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಭಯಾನಕ ಮಾಹಿತಿ ಪತ್ತೆಯಾಗಿದೆ. ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಕ್ಕಳು ದೃಷ್ಟಿ ದೋಷದ ಸಮಸ್ಯೆ ಇದ್ದು, ಸುಮಾರು 4398 ಮಕ್ಕಳಿಗೆ ಗಂಭೀರ ದೃಷ್ಟಿ ದೋಷದ

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!! Read More »

ಬಂಟ್ವಾಳ: ಮದುವೆ ನಿರಾಕರಿಸಿದ ಪ್ರಿಯತಮೆಯ ಇರಿದು ನೇಣಿಗೆ ಶರಣಾದ ಯುವಕ

ಸಮಗ್ರ ನ್ಯೂಸ್: ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಗೆ ಚಾಕುವಿನಿಂದ ಇರಿದು, ಆಕೆ ಮೃತಪಟ್ಟಳೆಂದು ಭಾವಿಸಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘೋರ ಘಟನೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿ ಇಂದು(ಜೂ.7) ನಡೆದಿದೆ. ಫರಂಗಿಪೇಟೆ ನಿವಾಸಿ ಕುಮಾರಿ ದಿವ್ಯಾ ಯಾನೆ ದೀಕ್ಷಿತಾ (26) ಹಲ್ಲೆಗೊಳಗಾದ ಯುವತಿಯಾಗಿದ್ದು, ಕೋಡ್ಮನ್ ಗ್ರಾಮದ ನಿವಾಸಿ ಸುಧೀರ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ದಿವ್ಯಾ ಮತ್ತು ಸುಧೀರ್ ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇತ್ತೀಚಿನ ಕೆಲವು ತಿಂಗಳುಗಳಿಂದ ಇಬ್ಬರ ನಡುವೆ ಮನಸ್ತಾಪ

ಬಂಟ್ವಾಳ: ಮದುವೆ ನಿರಾಕರಿಸಿದ ಪ್ರಿಯತಮೆಯ ಇರಿದು ನೇಣಿಗೆ ಶರಣಾದ ಯುವಕ Read More »

ರೇಣುಕಾ‌ಸ್ವಾಮಿ ಕೊಲೆ ಪ್ರಕರಣದ ರೀತಿಯ ಘಟನೆ| 17ವರ್ಷದ ಬಾಲಕಿ ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಪ್ರಿಯಸಿಗೆ ಯುವಕನೊಬ್ಬ ಅಶ್ಲೀಲ ಮೆಸೇಜ್ ಕಳಿಸಿದ್ದಾನೆಂದು ಆತನನ್ನು ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಂಧಿತ ಎಲ್ಲಾ ಆರೋಪಿಗಳನ್ನು ಜಾಮಿನಿನ ಮೇಲೆ ಬಿಡುಗಡೆ ಮಾಡಿದ್ದು, ಇನ್ನು 17 ವರ್ಷದ ಬಾಲಕಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 17 ವರ್ಷದ ಬಾಲಕಿಯನ್ನು ಅರೆಸ್ಟ್ ಮಾಡಿದ್ದಾರೆ.

ರೇಣುಕಾ‌ಸ್ವಾಮಿ ಕೊಲೆ ಪ್ರಕರಣದ ರೀತಿಯ ಘಟನೆ| 17ವರ್ಷದ ಬಾಲಕಿ ಅರೆಸ್ಟ್ Read More »

ಭಾರೀ ಮಳೆ ಹಿನ್ನಲೆ| ಕೊಡಗು ಜಿಲ್ಲೆ ಶಾಲಾ ಕಾಲೇಜುಗಳಿಗೆ ಜು .7ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆ- ಬಿರುಗಾಳಿ ಇರುವ ಹಿನ್ನೆಲೆ ಜುಲೈ 7 ರಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ

ಭಾರೀ ಮಳೆ ಹಿನ್ನಲೆ| ಕೊಡಗು ಜಿಲ್ಲೆ ಶಾಲಾ ಕಾಲೇಜುಗಳಿಗೆ ಜು .7ರಂದು ರಜೆ ಘೋಷಣೆ Read More »

ಪುತ್ತೂರು: ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೌರ್ಜನ್ಯ ನಡೆಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಪುರುಷೋತ್ತಮ (43) ಹಾಗೂ ರಾಮಚಂದ್ರ (38) ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತ ಬಾಲಕನ ತಂದೆ ನೀಡಿದ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ಅಪ್ರಾಪ್ತರು ಒಂದೇ ಧರ್ಮಕ್ಕೆ ಸೇರಿದವರು. ಘಟನೆಯ ಸಂಬಂಧ ಬಾಲಕನ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಮಗ ಮತ್ತು ಬಾಲಕಿಗೆ ಇಬ್ಬರು

ಪುತ್ತೂರು: ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್ Read More »

ಜುಲೈ 14 ಮತ್ತು 15ರಂದು VIP ದರ್ಶನ ರದ್ದು/ ತಿರುಮಲ ತಿರುಪತಿ ದೇವಸ್ಥಾನಂ (TTD) ಪ್ರಕಟನೆ

ಸಮಗ್ರ ನ್ಯೂಸ್‌: ಪವಿತ್ರ ಆಣಿವಾರ ಆಸ್ಥಾನಂ ಪರ್ವದಿನದ ಹಿನ್ನೆಲೆಯಲ್ಲಿ ಜುಲೈ 14 ಮತ್ತು 15ರಂದು ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ರಮುಖ ಬದಲಾವಣೆಗಳನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಪ್ರಕಟಿಸಿದೆ. ಈ ಎರಡು ದಿನಗಳಲ್ಲಿ ಸಾಮಾನ್ಯ ಭಕ್ತರಿಗೆ ನಿರ್ದಿಷ್ಟವಾದ VIP ಬ್ರೇಕ್ ದರ್ಶನವನ್ನು ರದ್ದುಗೊಳಿಸಲಾಗಿದ್ದು, ಪ್ರೋಟೋಕಾಲ್ ಗಣ್ಯರನ್ನು ಹೊರತುಪಡಿಸಿ ಯಾವುದೇ ಶಿಫಾರಸು ಪತ್ರಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ. ಜುಲೈ 15ರಂದು ದೇವಸ್ಥಾನದಲ್ಲಿ ನಡೆಯಲಿರುವ ಕೋಯಿಲ್ ಆಳ್ವಾರ್ ತಿರುಮಂಜನಂ ಎಂಬ ವಿಶೇಷ ಶುದ್ದೀಕರಣ ಕ್ರಮಕ್ಕೆ ಪೂರ್ವಭಾವಿಯಾಗಿ ಈ

ಜುಲೈ 14 ಮತ್ತು 15ರಂದು VIP ದರ್ಶನ ರದ್ದು/ ತಿರುಮಲ ತಿರುಪತಿ ದೇವಸ್ಥಾನಂ (TTD) ಪ್ರಕಟನೆ Read More »

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌/ ಐದು ಆ್ಯಪ್​ಗಳಲ್ಲಿ ಸಿಗಲಿದೆ ಟಿಕೆಟ್‌

ಸಮಗ್ರ ನ್ಯೂಸ್‌: ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮವು ಒಎನ್​​ಡಿಸಿ (ಓಪನ್‌ ನೆಟ್‌ವರ್ಕ್‌ ಫಾರ್‌ ಡಿಜಿಟಲ್‌ ಕಾಮರ್ಸ್‌) ಮೂಲಕ ಐದು ಆ್ಯಪ್‌ಗಳಲ್ಲಿ ನಮ್ಮ ಮೆಟ್ರೋದ ಟಿಕೆಟ್‌ ಸೌಕರ್ಯ ಕಲ್ಪಿಸಲಿದೆ. ಮೆಟ್ರೋ ಪ್ರಯಾಣಿಕರು ಸುಲಭವಾಗಿ ಟಿಕೆಟ್‌ ಖರೀದಿಸಲು ಮೆಟ್ರೋ ಟಿಕೆಟ್ ಅನ್ನು ಮೈಲ್ಸ್ ಆ್ಯಂಡ್ ಕಿಲೋಮೀಟರ್ ಟುಮ್ಯಾಕೋ, ರೆಡ್ ಬಸ್, ಔಟ್ ಪಾಥ್, ಹೈವೇ ಡಿಲೈಟ್ ಸೇರಿ ಒಟ್ಟು ಐದು ಆ್ಯಪ್​​ಗಳ ಮೂಲಕ ಖರೀದಿಸಬಹುದಾಗಿದೆ. ಈ ಆ್ಯಪ್​ಗಳು ಮೆಟ್ರೋ ಟಿಕೆಟ್ ಬುಕ್ ಮಾಡಿದರೆ, ಶೇ 20-30 ರಷ್ಟು

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌/ ಐದು ಆ್ಯಪ್​ಗಳಲ್ಲಿ ಸಿಗಲಿದೆ ಟಿಕೆಟ್‌ Read More »

4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿರೋಧ

ಸಮಗ್ರ ನ್ಯೂಸ್‌: ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿದೆ. ಕನ್ನಡವನ್ನು ಬದಿಗಿಡಲಾಗುತ್ತಿರುವ ಈ ಉಪಕ್ರಮವನ್ನು ಕೆಡಿಎ ಒಪ್ಪುವುದಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಇತರ ಭಾಷೆಗಳನ್ನು ಕಲಿಯುವುದು ತಪ್ಪಲ್ಲ, ಆದರೆ ಈ ಪ್ರಕ್ರಿಯೆಯಲ್ಲಿ ಕನ್ನಡವನ್ನು ಬದಿಗಿಡುವುದು

4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿರೋಧ Read More »