Editor

ಕೊಲೊಂಬೊ: ಕಾರ್ ರೇಸ್ ವೇಳೆ ಅಪಘಾತ|ಏಳು ಮಂದಿ ಸಾವು

ಸಮಗ್ರ ನ್ಯೂಸ್ : ಮೋಟಾರ್ ಕಾರ್ ರೇಸಿಂಗ್ ವೇಳೆ ಅಪಘಾತ ಸಂಭವಿಸಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದು, 23 ಜನ ಗಾಯಗೊಂಡ ಘಟನೆ ಶ್ರೀಲಂಕಾದ ಉವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 8 ವರ್ಷದ ಬಾಲಕ ಹಾಗೂ ನಾಲ್ವರು ಟ್ರ್ಯಾಕ್ ಸಹಾಯಕರು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ದೀಯತಲಾವದ ಸೆಂಟ್ರಲ್ ಹಿಲ್ ರೆಸಾರ್ಟ್ನಲ್ಲಿ ನಡೆದ ರೇಸ್ನಲ್ಲಿ ಕಾರೊಂದು ಟ್ರ್ಯಾಕ್ನಿಂದ ಪಲ್ಟಿಯಾಗಿ ಪ್ರೇಕ್ಷಕರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 23 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ […]

ಕೊಲೊಂಬೊ: ಕಾರ್ ರೇಸ್ ವೇಳೆ ಅಪಘಾತ|ಏಳು ಮಂದಿ ಸಾವು Read More »

ಹುಬ್ಬಳ್ಳಿ : ನೇಹಾ ತಂದೆಯನ್ನು ತಬ್ಬಿಕೊಂಡು ಕಣ್ಣೀರು ಹಾಕಿದ ಡಾ. ವಿಜಯ ಸಂಕೇಶ್ವರ

ಸಮಗ್ರ ನ್ಯೂಸ್‌ : ನೇಹಾ ಹಿರೇಮಠ‌ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ, ನೇಹಾ ಮನೆಗೆ ಡಾ.ವಿಜಯ ಸಂಕೇಶ್ವರ ಭೇಟಿ ನೀಡಿದ್ದು, ನೇಹಾ ತಂದೆ ನಿರಂಜನಯ್ಯ ಹಿರೇಮಠ ಸಂಕೇಶ್ವರ ಅವರನ್ನು ತಬ್ಬಿಕೊಂಡು ಕಣ್ಣೀರು ಹಾಕಿದರು. ಇನ್ನು ನೇಹಾ ಮನೆಗೆ ಭೇಟಿ ನೀಡಿ‌ದ ಸಂಕೇಶ್ವರ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನೇಹಾ ತಂದೆ ತಾಯಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ‌ ಹೇಳಿ ಧೈರ್ಯ ತುಂಬಿದರು.

ಹುಬ್ಬಳ್ಳಿ : ನೇಹಾ ತಂದೆಯನ್ನು ತಬ್ಬಿಕೊಂಡು ಕಣ್ಣೀರು ಹಾಕಿದ ಡಾ. ವಿಜಯ ಸಂಕೇಶ್ವರ Read More »

ಉಡುಪಿ : ಬಿಜೆಪಿ ಬೆಂಬಲಿಸಿದರೆ ಜನರಿಗೆ ಚೆಂಬೇ ಗತಿ- ರಮೇಶ್ ಕಾಂಚನ್ ಟೀಕೆ

ಸಮಗ್ರ ನ್ಯೂಸ್‌ : ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಕಾಂಗ್ರೆಸ್ ಭವನದ ಎದುರು ಇಂದು ಚೆಂಬು ಹಿಡಿದುಕೊಂಡು ಪ್ರತಿಭಟನೆ ನಡೆಸಲಾಯಿತು. ಆ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರವನ್ನು ಕೈಗೊಳ್ಳಲಾಯಿತು. ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ವಿಭಿನ್ನ ರೀತಿಯಲ್ಲಿ ಅಭಿಯಾನವನ್ನು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದರು. ಉಡುಪಿ ಬ್ಲಾಕ್ ನ 133 ಬೂತ್ ಗಳಲ್ಲಿ ಕೂಡ ಪ್ರಚಾರಕ್ಕೆ ಹೋಗುವ ಕಾರ್ಯಕರ್ತರು ಈ ವಿಭಿನ್ನ ಅಭಿಯಾನದ ಮೂಲಕ ಮತಪ್ರಚಾರ

ಉಡುಪಿ : ಬಿಜೆಪಿ ಬೆಂಬಲಿಸಿದರೆ ಜನರಿಗೆ ಚೆಂಬೇ ಗತಿ- ರಮೇಶ್ ಕಾಂಚನ್ ಟೀಕೆ Read More »

ಕೋಲಾರ : ಈ ದೇಶದ ಶನಿ ಮೋದಿ-ರಮೇಶ್ ಕುಮಾರ್

ಸಮಗ್ರ ನ್ಯೂಸ್‌ : ಈ ದೇಶಕ್ಕೆ ಹಿಡಿದಿರುವ ಶನಿ ಎಂದರೆ ಅದು ಮೋದಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಅವರು ಕೋಲಾರದಲ್ಲಿ ಮಾತನಾಡಿ, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು. ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾ ಗಾಂಧಿ ಕೂತಿದ್ದ ಸೀಟಲ್ಲಿ ಬಂದು ಕೂತುಬಿಟ್ಟೆ. ಎಲ್ಲಾ ಜಾತಿ ಜನಾಂಗದವರಿಗೆ ಆತ್ಮಸ್ಥೈರ್ಯ ತುಂಬಿದ್ದರು ಇಂದಿರಾ ಗಾಂಧಿ. ಎಂತಹವರ ಜಾಗಕ್ಕೆ ಎಂತಹವರು ಬಂದು ಕೂತಿದ್ದಾನೆ. ಸಂತೆಯಲ್ಲಿ ಹಾವಾಡಿಗ ಸುಳ್ಳು ಹೇಳೋದು ಕೇಳಿದ್ದೇವೆ. ಪ್ರಧಾನಿ ಸುಳ್ಳು

ಕೋಲಾರ : ಈ ದೇಶದ ಶನಿ ಮೋದಿ-ರಮೇಶ್ ಕುಮಾರ್ Read More »

‘ಕಲ್ಕಿ 2898 ಎಡಿ’ ಚಿತ್ರದ ಅಮಿತಾಭ್ ಬಚ್ಚನ್ ಪೋಸ್ಟರ್ ರಿಲೀಸ್‌

ಸಮಗ್ರ ನ್ಯೂಸ್‌ : ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಬಿಗ್ ಬಿ ಲುಕ್ ಹೇಗಿರಲಿದೆ ಎಂಬ ಕುತೂಹಲ ಮನೆ ಮಾಡಿತ್ತು. ಇದೀಗ ಚಿತ್ರತಂಡ ಅಮಿತಾಭ್ ಪಾತ್ರದ ಪೋಸ್ಟರ್ ರಿಲೀಸ್ ಮಾಡಿದೆ. ಕಲ್ಕಿ ಸಿನಿಮಾದಲ್ಲಿ ಬಿಗ್ ಬಿ ಪಾತ್ರದ ಪೋಸ್ಟರ್ ರಿವೀಲ್ ಮಾಡುವ ಮೂಲಕ ನಿರೀಕ್ಷೆ ಹುಟ್ಟಿಸಿದ್ದಾರೆ. ದೇವಸ್ಥಾನದ ಎದುರು ಬಿಗ್ ಬಿ ಕುಳಿತಿದ್ದು, ಕಣ್ಣಿಗೆ ಸೂರ್ಯ ಕಿರಣ ಬಿದ್ದಿದೆ. ಮೈತುಂಬಾ ಬಟ್ಟೆ

‘ಕಲ್ಕಿ 2898 ಎಡಿ’ ಚಿತ್ರದ ಅಮಿತಾಭ್ ಬಚ್ಚನ್ ಪೋಸ್ಟರ್ ರಿಲೀಸ್‌ Read More »

ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ 60,000 ಸಂಬಳ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕ್ಲಿನಿಕಲ್ ಸೈಕಾಲಜಿಸ್ಟ್​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ

ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ 60,000 ಸಂಬಳ! Read More »

ಧಾರವಾಡ : 25 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿವೆ-ಚುನಾವಣಾಧಿಕಾರಿ ದಿವ್ಯ ಪ್ರಭು

ಸಮಗ್ರ ನ್ಯೂಸ್‌ : ಧಾರವಾಡ ಲೋಕಸಭೆ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸ್ವೀಕೃತವಾದ ಎಲ್ಲ ನಾಮಪತ್ರಗಳ ಪರಿಶೀಲನೆ ಕಾರ್ಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ, ಅಭ್ಯರ್ಥಿಗಳ ಮತ್ತು ಸೂಚಕರ ಸಮ್ಮುಖದಲ್ಲಿ ಜರುಗಿತು. ನಾಮಪತ್ರ ಸಲ್ಲಿಸಿದ್ದ 29 ಅಭ್ಯರ್ಥಿಗಳ ಎಲ್ಲ ನಾಮತ್ರಗಳನ್ನು ಪರಿಶೀಲಿಸಿ, ಸರಿಯಾದ ದಾಖಲೆ ಸಲ್ಲಿಸದ ನಾಲ್ಕು ಅಭ್ಯರ್ಥಿಗಳ 7 ನಾಮಪತ್ರಗಳು ಹಾಗೂ ಇಬ್ಬರು ಅಭ್ಯರ್ಥಿಗಳ ತಲಾ ಒಂದು ನಾಮಪತ್ರಗಳು ತಿರಸ್ಕೃತವಾಗಿದ್ದು, 25 ಅಭ್ಯರ್ಥಿಗಳ 35 ನಾಮಪತ್ರಗಳು ಸ್ವೀಕೃತವಾಗಿವೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ

ಧಾರವಾಡ : 25 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿವೆ-ಚುನಾವಣಾಧಿಕಾರಿ ದಿವ್ಯ ಪ್ರಭು Read More »

ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ: ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ. ರಾಜ್ಯದಲ್ಲಿ ಕೊಲೆ, ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಇದೊಂದು ಕ್ರೂರ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ಮೇಲೆ ಕಿಡಿಕಾರಿದರು. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿದೆ. ಸಿದ್ದರಾಮಯ್ಯ ಅವರು ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ನ್ಯಾಯ ಕೊಡಿಸಿಲ್ಲ ಎಂದು ವಾಗ್ದಾಳಿ ಮಾಡಿದರು. ರಾಜ್ಯದಲ್ಲಿ ಇಷ್ಟು ಪ್ರಕರಣಗಳು ನಡೆದಿದೆ

ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ: ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ Read More »

ಕಲಬುರಗಿ : ನೇಹಾ ಹಿರೇಮಠ ಕೊಲೆ ಆರೋಪಿಗೆ ಗಲ್ಲಿಗೆರಿಸಿ- ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದು ನಾವು ಖಂಡಿಸುತ್ತೇವೆ. ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಅಲ್ಲಿಯವರೆಗೆ ನಮ್ಮ ಹೋರಾಟ ಅಂತ್ಯವಿಲ್ಲ ಎಂದು ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಗುನ್ನಾಪುರ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಭಾರತಿ ಗುನ್ನಾಪುರ, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚಾಗ್ತಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತ ಹೇಳಿದರು. ವಿಷ್ಯ ಇಷ್ಟೆಲ್ಲ

ಕಲಬುರಗಿ : ನೇಹಾ ಹಿರೇಮಠ ಕೊಲೆ ಆರೋಪಿಗೆ ಗಲ್ಲಿಗೆರಿಸಿ- ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ Read More »

ಕಲಬುರಗಿ: ಸಿಡಿಲು ಬಡಿದು 10 ವರ್ಷದ ಬಾಲಕ ಸಾವು

ಸಮಗ್ರ ನ್ಯೂಸ್‌ : ಸಿಡಿಲು ಬಡಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯಾದ್ಯಂತ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಸಿಡಿಲು ಸಹಿತ ಮಳೆಯಾಗಿದೆ. ಪರಿಣಾಮ ಮಹೇಶ್(10) ಬಾಲಕ ಮೃತಪಟ್ಟಿದ್ದಾನೆ. ಕೆಲಸಕ್ಕೆಂದು ಪೋಷಕರೊಂದಿಗೆ ಜಮೀನಿಗೆ ತೆರಳಿದ್ದ ಬಾಲಕ ಮಳೆ ಬಂತು ಎಂದು ವಾಪಸ್ ಬಂದಿದ್ದಾರೆ. ಈ ವೇಳೆ ಬಂಡಿಯಲ್ಲಿ ಕುಳಿತಿದ್ದ ಬಾಲಕನಿಗೆ ಸಿಡಿಲು ಬಡಿದಿದೆ. ಪರಿಣಾಮ ಬಾಲಕ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು

ಕಲಬುರಗಿ: ಸಿಡಿಲು ಬಡಿದು 10 ವರ್ಷದ ಬಾಲಕ ಸಾವು Read More »