Editor

ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಐದು ಮಂದಿಗೆ ಗಾಯ, ಓರ್ವ ಗಂಭೀರ

ಸಮಗ್ರ ನ್ಯೂಸ್ : ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿದ್ದು, ಒಟ್ಟು ಐದು ಮಂದಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ಸುರಂಗ ಮಾರ್ಗದ ಕೆಲಸದ ವೇಳೆ ಏಕಾಏಕಿ ಏರ್ ಬ್ಲಾಸ್ಟ್ ಸಂಭವಿಸಿದೆ. ಈ ವೇಳೆ ಒಂದು ಬದಿಯಲ್ಲಿ ಮಣ್ಣು ಕುಸಿದಿದೆ. ಘಟನೆಯಲ್ಲಿ ಉಸಿರಾಟದ ಸಮಸ್ಯೆಯಿಂದ ನಿತ್ರಾಣಗೊಂಡು ಸುರಂಗದಲ್ಲೇ ಸಿಲುಕಿದ್ದ ಕಾರ್ಮಿಕರನ್ನ ಕೂಡಲೇ ರಕ್ಷಿಸಲಾಗಿದೆ. ಐವರು ಕಾರ್ಮಿಕರಿಗೆ ಗಾಯಗಳಾಗಿದೆ. ಓರ್ವ ಕಾರ್ಮಿಕನ ಮೇಲೆ ಕಲ್ಲುಗಳು ಬಿದ್ದಿದ್ದು ಸ್ಥಿತಿ ಗಂಭೀರವಾಗಿದೆ.

ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಐದು ಮಂದಿಗೆ ಗಾಯ, ಓರ್ವ ಗಂಭೀರ Read More »

ವಿಜಯಪುರ : 4 ನೇ ಸೆಟ್ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಿಗಜಿಣಗಿ

ಸಮಗ್ರ ನ್ಯೂಸ್‌ : ರಾಜ್ಯದಲ್ಲಿ 2 ನೇ ಹಂತದಲ್ಲಿ‌ ನಡೆಯುವ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಶುಕ್ರವಾರ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ ಅವರು ಬಿಜೆಪಿ ಮಾಜಿ ಶಾಸಕರು ಹಾಗೂ ಮಹಿಳಾ ಮುಖಂಡರೊಂದಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ಎರಡು ಸೆಟ್ ನಾಮಪತ್ರ ಸಲ್ಲಿಸಿದರು. ಸಂಸದ ರಮೇಶ ಜಿಗಜಿಣಗಿ ಅವರು ಈಗಾಗಲೇ ಏ.16 ರಂದು ಬೃಹತ್ ಶೋಭಾಯಾತ್ರೆ ಮೂಲಕ‌ ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಹಾಗೂ ಮುಖಂಡರೊಂದಿಗೆ ತೆರಳಿ ಅಂದು

ವಿಜಯಪುರ : 4 ನೇ ಸೆಟ್ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಿಗಜಿಣಗಿ Read More »

ರಾಜ್ಯವನ್ನು ಬೆಚ್ಚಿ ಬೀಳಿಸುತ್ತಿರುವ ಸಾಲು ಸಾಲು ಮರ್ಡರ್ ಕೇಸ್| ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದ ಸಿಎಂ

ಸಮಗ್ರ ನ್ಯೂಸ್: ಸಾಲು ಸಾಲು ಕೊಲೆ ಪ್ರಕರಣಗಳು ನಡೆಯುತ್ತಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಚುನಾವಣೆ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಒಂದೇ ದಿನದಲ್ಲಿ 12 ಕೊಲೆ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಡಿಜಿ & ಐಜಿಪಿ, ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಸೂಚಿದ್ದಾರೆ. ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು. ಆರೋಪಿಗಳ ವಿರುದ್ಧ ನಿರ್ಧಾಕ್ಷಿಣ್ಯ

ರಾಜ್ಯವನ್ನು ಬೆಚ್ಚಿ ಬೀಳಿಸುತ್ತಿರುವ ಸಾಲು ಸಾಲು ಮರ್ಡರ್ ಕೇಸ್| ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದ ಸಿಎಂ Read More »

ಹುಬ್ಬಳ್ಳಿ : ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ : ಪ್ರಲ್ಹಾದ್‌ ಜೋಶಿಯವರಲ್ಲಿ ನೇಹಾ ತಂದೆ ಮನವಿ

ಸಮಗ್ರ ನ್ಯೂಸ್‌ : ಮಗಳು ನೇಹಾ ಕಗ್ಗೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ನೀಡಿ, ದಯವಿಟ್ಟು ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ, ಮಕ್ಕಳ ಅಮೂಲ್ಯ ಜೀವ ಉಳಿಸಿಕೊಡಿ, ಇದು ನಿಮ್ಮಿಂದ ಮಾತ್ರವೇ ಸಾಧ್ಯ ಸರ್, ಪ್ಲೀಸ್. ಹಂತಕನಿಗೆ ಕಠಿಣ ಶಿಕ್ಷೆ ಕೊಡಿಸಿ” ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ ಬಳಿ ಕೊಲೆಯಾದ ನೇಹಾ ಹಿರೇಮಠ ಅವರ ತಂದೆ ನಿರಂಜನ್‌ ಹಿರೇಮಠ ಮನವಿ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ಕ್ಯಾಂಪಸ್‌ನಲ್ಲೇ ಹೀಗೆ ಹತ್ಯೆ ನಡೆದರೆ ಹಿಂದೂ ಹೆಣ್ಣು

ಹುಬ್ಬಳ್ಳಿ : ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ : ಪ್ರಲ್ಹಾದ್‌ ಜೋಶಿಯವರಲ್ಲಿ ನೇಹಾ ತಂದೆ ಮನವಿ Read More »

ಮೈಸೂರು : ಮೋದಿ ಪರ ಹಾಡು ಬರೆದ ಯುವಕನ ಮೇಲೆ ಮುಸ್ಲಿಮರಿಂದ ಹಲ್ಲೆ

ಸಮಗ್ರ ನ್ಯೂಸ್‌ : ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ನಡೆದಿದೆ. ರೋಹಿತ್ ಹಲ್ಲೆಗೆ ಒಳಗಾದ ಯುವಕ. ಈ ಸಂಬಂಧ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ರೋಹಿತ್‌ ದೂರು ನೀಡಿದ್ದು, ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ನಾನು ಕಳೆದ ವಾರ ಮೋದಿ ಕುರಿತಾಗಿ ಸಾಂಗ್‌ ಮಾಡಿದ್ದೆ. ನಾನು ಜನರ ಜೊತೆ ಈ ಸಾಗ್‌ ತೋರಿಸಿ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡುವಂತೆ

ಮೈಸೂರು : ಮೋದಿ ಪರ ಹಾಡು ಬರೆದ ಯುವಕನ ಮೇಲೆ ಮುಸ್ಲಿಮರಿಂದ ಹಲ್ಲೆ Read More »

ಮೈಸೂರು: ಸಾಲದ ಶೂಲಕ್ಕೆ ಬಲಿಯಾದ ಉಪನ್ಯಾಸಕ- ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾವಿಗೆ ಶರಣು

ಸಮಗ್ರ ನ್ಯೂಸ್‌ : ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಿ ದಾರಿದೀಪವಾಗಬೇಕಿದ್ದ ಕಾಲೇಜು ಉಪನ್ಯಾಸಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗೇಟ್ ನಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಹದೇವಪ್ಪ ಎಂಬುವರರ ಪುತ್ರ ಮಾದಪ್ಪ 45 ವರ್ಷದ ಮೃತ ಉಪನ್ಯಾಸಕ ಎಂದು ತಿಳಿದು ಬಂದಿದೆ. ನಂಜನಗೂಡು ಪಟ್ಟಣದ ವಿ.ಎ ಲೇಔಟ್ ನಲ್ಲಿ ಸ್ವಂತ ಮನೆಯಲ್ಲಿ ವಾಸವಾಗಿದ್ದರು. ಕಳೆದ ಎರಡು ವರ್ಷಗಳ ಹಿಂದೆ ನೂತನ ಮನೆ

ಮೈಸೂರು: ಸಾಲದ ಶೂಲಕ್ಕೆ ಬಲಿಯಾದ ಉಪನ್ಯಾಸಕ- ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾವಿಗೆ ಶರಣು Read More »

ಹೊಸದಿಲ್ಲಿ : ಎವರೆಸ್ಟ್‌ ಫಿಶ್‌ ಕರಿ ಮಸಾಲೆಯನ್ನು ಬ್ಯಾನ್‌ ಮಾಡಿದ ಸಿಂಗಾಪುರ

ಸಮಗ್ರ ನ್ಯೂಸ್‌ : ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎವರೆಸ್ಟ್‌ನ ಫಿಶ್ ಕರಿ ಮಸಾಲಾವನ್ನು ಬ್ಯಾನ್‌ ಮಾಡಲು ಸಿಂಗಾಪುರ ಆದೇಶಿಸಿದೆ. ಇದರಲ್ಲಿ ಸುರಕ್ಷಿತ ಮಿತಿಯನ್ನು ಮೀರಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇದೆ ಎಂದು ಆರೋಪಿಸಿದೆ. ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು SFA ಹೇಳಿದೆ. ಸಿಂಗಾಪುರದ ಆಹಾರ ನಿಯಮಗಳ ಅಡಿಯಲ್ಲಿ,

ಹೊಸದಿಲ್ಲಿ : ಎವರೆಸ್ಟ್‌ ಫಿಶ್‌ ಕರಿ ಮಸಾಲೆಯನ್ನು ಬ್ಯಾನ್‌ ಮಾಡಿದ ಸಿಂಗಾಪುರ Read More »

ತುಮಕೂರು : ಇವಿಎಂ ಮೇಲೆ ಅನುಮಾನ ಇದೆ ಎಂದ ಗೃಹ ಸಚಿವ ಜಿ.ಪರಮೇಶ್ವರ

ಸಮಗ್ರ ನ್ಯೂಸ್‌ : ವಿದ್ಯುನ್ಮಾನ ಮತಯಂತ್ರಗಳ ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ಕೇರಳದಲ್ಲಿ ಯಾವುದೇ ಬಟನ್‌ ಒತ್ತಿದರೂ ಬಿಜೆಪಿಗೆ ಮತ ಬಿದ್ದಿದೆ. ಬಿಜೆಪಿಯವರು ಎಲ್ಲ ಕ್ಷೇತ್ರಗಳಲ್ಲಿ ಹೀಗೆ ಮಾಡುವುದಿಲ್ಲ. ತುಂಬಾ ಬುದ್ಧಿವಂತಿಕೆಯಿಂದ ಈ ಕೆಲಸ ಮಾಡುತ್ತಾರೆ. 150-200 ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರದಲ್ಲಿ ಹ್ಯಾಕ್‌ ಮಾಡುತ್ತಾರೆ ಎಂಬ ಅನುಮಾನ ಇದೆ ಗೊಂದಲ ವ್ಯಕ್ತಪಡಿಸಿದರು.

ತುಮಕೂರು : ಇವಿಎಂ ಮೇಲೆ ಅನುಮಾನ ಇದೆ ಎಂದ ಗೃಹ ಸಚಿವ ಜಿ.ಪರಮೇಶ್ವರ Read More »

ಕಲಬುರಗಿ : ಬಾತ್ರೂಂನಲ್ಲಿ ಕದ್ದು ಮಹಿಳೆಯ ವಿಡಿಯೋ ಚಿತ್ರೀಕರಿಸಿದ ಸೆಕ್ಯೂರಿಟಿ ಗಾರ್ಡ್: ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಸೆಕ್ಯೂರಿಟಿ ಗಾರ್ಡ್ವೊಬ್ಬ ಬಾತ್ ರೂಂನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿ ಸಿಕ್ಕಿಬಿದ್ದಿರುವ ಘಟನೆ ಕಲಬುರಗಿ ನಗರದ ರಾಮ ಮಂದಿರ ವೃತ್ತದ ಬಳಿಯಿರುವ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ವಿಶ್ವನಾಥ್ ವಿಡಿಯೋ ರೇಕಾರ್ಡ್ ಮಾಡಿ ಸಿಕ್ಕಿಬಿದ್ದ ಸೆಕ್ಯೂರಿಟಿ ಗಾರ್ಡ್. ಮಹಿಳೆ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆಗೆ ಇದ್ದಳು. ಆಕೆ ಬಾತ್ ರೂಂನಲ್ಲಿ ಇದ್ದ ವೇಳೆ ಸೆಕ್ಯೂರಿಟಿ ಗಾರ್ಡ್ ವಿಶ್ವನಾಥ್ ತನ್ನ ಸ್ಮಾರ್ಟ್ಫೋನ್ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ. ಈ ವಿಚಾರ ಮಹಿಳೆ ತಿಳಿದಿದ್ದು, ತಕ್ಷಣ ಗಂಡನಿಗೆ ಕರೆ

ಕಲಬುರಗಿ : ಬಾತ್ರೂಂನಲ್ಲಿ ಕದ್ದು ಮಹಿಳೆಯ ವಿಡಿಯೋ ಚಿತ್ರೀಕರಿಸಿದ ಸೆಕ್ಯೂರಿಟಿ ಗಾರ್ಡ್: ಪೊಲೀಸರ ವಶಕ್ಕೆ Read More »

ತಿರುವನಂತಪುರಂ : ಇರಾನ್‌ನಿಂದ ಬಿಡುಗಡೆ -ಭಾರತ ಸರ್ಕಾರಕ್ಕೆ ಧನ್ಯವಾದ: ಟೆಸ್ಸಾ ಜೋಸೆಫ್

ಸಮಗ್ರ ನ್ಯೂಸ್‌ : ಇರಾನ್‌ ವಶಪಡಿಸಿಕೊಂಡಿದ್ದ ಹಡಗಿನಿಂದ ನನ್ನ ಬಿಡುಗಡೆಗೆ ಸಹಕರಿಸಿದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದು ಸ್ವದೇಶಕ್ಕೆ ಮರಳಿದ ಟೆಸ್ಸಾ ಜೋಸೆಫ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿ ಈ ವೇಳೆ ಹಡಗಿನಲ್ಲಿದ್ದ 25 ಸಿಬ್ಬಂದಿಗಳ ಜೊತೆ ಇರಾನಿನ ಯಾರೂ ಕೆಟ್ಟದಾಗಿ ನಡೆಸಿಕೊಳ್ಳಲಿಲ್ಲ. ತಮ್ಮ ಕುಟುಂಬದ ಜೊತೆ ಸಂವಹನ ನಡೆಸಲು ವ್ಯವಸ್ಥೆ ಮಾಡಿಕೊಟ್ಟಿದ್ದರು ಎಂದು ತಿಳಿಸಿದರು. ಹಡಗಿನಲ್ಲಿ ನಾನೊಬ್ಬಳೇ ಮಹಿಳೆ ಸಿಬ್ಬಂದಿಯಾಗಿದ್ದರಿಂದ ನನ್ನನ್ನು ಬೇಗ ಬಿಡುಗಡೆ ಮಾಡಿರಬಹುದು. ಉಳಿದ ಭಾರತದ 17 ಸಿಬ್ಬಂದಿ ಶೀಘ್ರವೇ ಬಿಡುಗಡೆಯಾಗಬಹುದು. ವಿದೇಶಾಂಗ

ತಿರುವನಂತಪುರಂ : ಇರಾನ್‌ನಿಂದ ಬಿಡುಗಡೆ -ಭಾರತ ಸರ್ಕಾರಕ್ಕೆ ಧನ್ಯವಾದ: ಟೆಸ್ಸಾ ಜೋಸೆಫ್ Read More »