ಸಿಎಂ ಮಂಗಳೂರಿಗೆ ಭೇಟಿ ನೀಡಿದ ಬೆನ್ನಲ್ಲೇ ಮತ್ತೋರ್ವ ಯುವಕನಿಗೆ ಚಾಕು ಇರಿತ| ನಾಲ್ವರ ತಂಡದಿಂದ ಬಂಟ್ವಾಳದಲ್ಲಿ ಕೃತ್ಯ
ಸಮಗ್ರ ನ್ಯೂಸ್: ಬಂಟ್ವಾಳದ ಪಾಣೆ ಮಂಗಳೂರಿನ ಅಕ್ಕರಂಗಡಿಯಲ್ಲಿ ತಂಡವೊಂದು ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಯುಧದಿಂದ ದಾಳಿ ನಡೆಸಿದ್ದು, ಕೈಗೆ ಗಂಭೀರ ಸ್ವರೂಪದ ಗಾಯವಾಗಿದೆ ಎನ್ನಲಾಗಿದೆ. ಮಂಗಳೂರಿಗೆ ಸಿಎಂ ಭೇಟಿ ನೀಡಿದ ಬೆನ್ನಲ್ಲೇ ಈ ಕೃತ್ಯ ನಡೆದಿರುವುದು ಆಘಾತ ಮೂಡಿಸಿದೆ. ಅಕ್ಕರಂಗಡಿ ನಿವಾಸಿ ಹಮೀದ್ ಯಾನೆ ಅಮ್ಮಿ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ರಸ್ತೆ ಬದಿ ನಿಂತಿದ್ದ ವೇಳೆ ಬೈಕಿನಲ್ಲಿ ಬಂದ ನಾಲ್ವರ ತಂಡ ದಾಳಿ ನಡೆಸಿದೆ ಎನ್ನಲಾಗಿದೆ. ಹಮೀದ್ ಅವರು ಪೈಂಟಿಂಗ್ […]