Editor

ದ್ವಾರಕೀಶ್ ವಿಧಿವಶದ ಹಿನ್ನೆಲೆ ನಾಳೆ ಬೆಳಗ್ಗೆ ಒಂದು ಶೋ ಬಂದ್

ಸಮಗ್ರ ನ್ಯೂಸ್: ಕನ್ನಡದ​ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು ನಿಧನ ಹೊಂದಿದ್ದಾರೆ. ಎಲೆಕ್ಟ್ರಾನಿಕ್​ ಸಿಟಿಯ ಸ್ವಗೃಹದಲ್ಲಿ ಗಣ್ಯರು ಬಂದು ಅಂತಿಮ ನಮನ ಸಲ್ಲಿಸುತ್ತಾರೆ. “ತಾಯಿ ಹಾಗೂ ತಂದೆ ಏಕ ದಿನ ಇಹಲೋಕ ತ್ಯಜಿಸಿದ್ದಾರೆ. ತಾಯಿ ಅಂಬುಜ ಏಪ್ರಿಲ್ 16 2021 ರಂದು ಮುಂಜಾನೆ 9.45 ಕ್ಕೆ ಸಾವನ್ನಪ್ಪಿದ್ದರು. ತಂದೆ ಏಪ್ರಿಲ್ 16 2024 ಇಂದು ಮುಂಜಾನೆ 9.45 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ” ಎಂದು ದ್ವಾರಕೀಶ್ ಪುತ್ರ ಯೋಗಿ ಹೇಳಿದ್ದಾರೆ. ಇದು ನಿಜಕ್ಕೂ ಆಶ್ಚರ್ಯಕರ

ದ್ವಾರಕೀಶ್ ವಿಧಿವಶದ ಹಿನ್ನೆಲೆ ನಾಳೆ ಬೆಳಗ್ಗೆ ಒಂದು ಶೋ ಬಂದ್ Read More »

ಉಡುಪಿ : ಏ. 17ರಿಂದ ಉಡುಪಿ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ -ಯಶ್ ಪಾಲ್ ಸುವರ್ಣ

ಸಮಗ್ರ ನ್ಯೂಸ್‌ : ರಾಷ್ಟೀಯ ಹೆದ್ದಾರಿ 66 ಉಡುಪಿ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯ ಒಂದು ಭಾಗ ಪೂರ್ಣಗೊಂಡಿದ್ದು ಏಪ್ರಿಲ್ 17 ರಿಂದ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಈ ಹಿಂದಿನ ರಾಷ್ಟೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಸಂತೆಕಟ್ಟೆಯಲ್ಲಿ ನಿತ್ಯ ವಾಹನ ದಟ್ಟಣೆಯಿಂದ ನಿತ್ಯ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆಯವರು ಆದ್ಯತೆಯ ಮೇರೆಗೆ ಅಂಡರ್ ಪಾಸ್ ಕಾಮಗಾರಿ ಮಂಜೂರು ಮಾಡಿ ಇದೀಗ ಸುಗಮ ಸಂಚಾರಕ್ಕೆ ಅವಕಾಶ

ಉಡುಪಿ : ಏ. 17ರಿಂದ ಉಡುಪಿ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ -ಯಶ್ ಪಾಲ್ ಸುವರ್ಣ Read More »

ಮಂಗಳೂರಿನಲ್ಲಿ ಮೋದಿಯವರು ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿರುವುದು ಬಿಜೆಪಿಯ ಗಿಮಿಕ್: ಸೊರಕೆ

ಸಮಗ್ರ ನ್ಯೂಸ್‌ : ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡದೆ, ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿರುವುದು ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಪ್ರಶ್ನೆಯೊಂದಕ್ಕೆ ಈ ಪ್ರತಿಕ್ರಿಯೆ ನೀಡಿದ ಅವರು, 2013ರಲ್ಲಿ ಚುನಾವಣಾ ಪೂರ್ವದಲ್ಲಿ ವಿದೇಶದಲ್ಲಿರುವ ಕಪ್ಪು ಹಣ ತರುವುದಾಗಿ ಸುಳ್ಳು ಭರವಸೆ ನೀಡಿದಂತೆ, ನಾರಾಯಣ ಗುರುಗಳ ಮೂರ್ತಿಗೆ

ಮಂಗಳೂರಿನಲ್ಲಿ ಮೋದಿಯವರು ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿರುವುದು ಬಿಜೆಪಿಯ ಗಿಮಿಕ್: ಸೊರಕೆ Read More »

ಛತ್ತೀಸ್ ಗಡ: ನಕ್ಸಲ್ ಮತ್ತು ಸೈನಿಕರ ನಡುವೆ ಚಕಮಕಿ| ಎನ್ ಕೌಂಟರ್ ‌ಗೆ ಹಲವು ಮಾವೋವಾದಿಗಳು ಬಲಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಪ್ರಾರಂಭವಾಗುವ ಮೂರು ದಿನಗಳ ಮೊದಲು ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್’ನಲ್ಲಿ ಹಲವು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಎನ್ಕೌಂಟರ್ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಐಕೆ ಎಲೆಸೆಲಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಕಳೆದ ತಿಂಗಳು ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲಿ ಒಬ್ಬ ಮಾವೋವಾದಿ ಸಾವನ್ನಪ್ಪಿದ್ದು, ಭದ್ರತಾ ಪಡೆಗಳು ಬಂದೂಕು, ಕೆಲವು ಸ್ಫೋಟಕಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿವೆ.

ಛತ್ತೀಸ್ ಗಡ: ನಕ್ಸಲ್ ಮತ್ತು ಸೈನಿಕರ ನಡುವೆ ಚಕಮಕಿ| ಎನ್ ಕೌಂಟರ್ ‌ಗೆ ಹಲವು ಮಾವೋವಾದಿಗಳು ಬಲಿ Read More »

ಜಮ್ಮು: ಬಿಜೆಪಿ ಜನರ ಹೃದಯ ಗೆದ್ದಿದ್ದು, ಕಣಿವೆಯಾದ್ಯಂತ ಕಮಲ ಅರಳುತ್ತದೆ- ಅಮಿತ್‌ ಶಾ

ಸಮಗ್ರ ನ್ಯೂಸ್‌ : ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ. ಹೀಗಾಗಿ ಕಣಿವೆಯಾದ್ಯಂತ ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕಣಿವೆಯಲ್ಲಿ ಯುವಕರ ಮೇಲೆ ನಕಲಿ ಎನ್‌ಕೌಂಟರ್‌ಗಳು ಮತ್ತು ಗುಂಡಿನ ದಾಳಿಗಳಿಗೆ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಈ ಮೂರು ಪಕ್ಷಗಳು ಕಾರಣವೆಂದು ಆರೋಪಿಸಿದ್ದಾರೆ. ಬಿಜೆಪಿಯು ಕಾಶ್ಮೀರ ಜನರ ಕಲ್ಯಾಣಕ್ಕಿಂತ, ಅಲ್ಲಿನ ನೆಲದ ಮೇಲೆ ಹೆಚ್ಚಿನ ಹಿತಾಸಕ್ತಿ ಹೊಂದಿದೆ ಎಂಬ ವಿರೋಧ

ಜಮ್ಮು: ಬಿಜೆಪಿ ಜನರ ಹೃದಯ ಗೆದ್ದಿದ್ದು, ಕಣಿವೆಯಾದ್ಯಂತ ಕಮಲ ಅರಳುತ್ತದೆ- ಅಮಿತ್‌ ಶಾ Read More »

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣ- ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು

ಸಮಗ್ರ ನ್ಯೂಸ್‌ : ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ರಮ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜೆಎನ್‌ಯು ರಿಂಗ್ ರಸ್ತೆಯಲ್ಲಿ ನಡೆದುಹೋಗುತ್ತಿದ್ದಾಗ ನಾಲ್ವರು ನನ್ನ ವಿರುದ್ಧ ಲೈಂಗಿಕತೆಗೆ ಸಂಬಂಧಿಸಿದ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಅಲ್ಲಿನ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಸಂತ್ರಸ್ಥೆಯ ಸುರಕ್ಷತೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸಂಘಟನೆಯು ಆಡಳಿತ ಮಂಡಳಿಯನ್ನು ಒತ್ತಾಯಿಸಿದೆ ಎಂಬ ಮಾಹಿತಿ

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣ- ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು Read More »

ಉಡುಪಿ: ಎ.21ರಂದು ಇನ್ಫೋಸಿಸ್ ಯಕ್ಷಗಾನ ಕೇಂದ್ರ ಲೋಕಾರ್ಪಣೆ

ಸಮಗ್ರ ನ್ಯೂಸ್‌ : ಬೆಂಗಳೂರಿನ ಇನ್ಫೋಸಿಸ್ ಫೌಂಡೇಷನ್ ಉಡುಪಿಯ ಯಕ್ಷಗಾನ ಕಲಾರಂಗದ ಮೂಲಕ ನಿರ್ಮಿಸಿದ ಇನ್ಫೋಸಿಸ್ ಫೌಂಡೇಷನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟ್ (ಐವೈಸಿ)ಯ ನೂತನ ಕಟ್ಟಡದ ಲೋಕಾರ್ಪಣೆ ಇದೇ ಬರುವ ಎ.21ರಂದು ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ತಿಳಿಸಿದ್ದಾರೆ. ಇನ್ಫೋಸಿಸ್ ಯಕ್ಷಗಾನ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ಫೋಸಿಸ್ ಫೌಂಡೇಷನ್ 15.8 ಕೋಟಿ ರೂ. ವೆಚ್ಚದಲ್ಲಿ ಈ ಕಟ್ಟಡವನ್ನು ನಿರ್ಮಿಸಿದೆ. ಕಟ್ಟಡದಲ್ಲಿ 380 ಮಂದಿ ಕುಳಿತು ವೀಕ್ಷಿಸಬಹುದಾದ

ಉಡುಪಿ: ಎ.21ರಂದು ಇನ್ಫೋಸಿಸ್ ಯಕ್ಷಗಾನ ಕೇಂದ್ರ ಲೋಕಾರ್ಪಣೆ Read More »

ನಾಳೆ ಕರ್ನಾಟಕಕ್ಕೆ ರಾಹುಲ್ ಗಾಂಧಿ, ನಟ ಪವನ್ ಕಲ್ಯಾಣ್ ಎಂಟ್ರಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಅಬ್ಬರ ಜೋರಾಗಿ ನಡೆಯುತ್ತಿದೆ. ಆಯಾ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಸ್ಟಾರ್‌ ನಾಯಕರು, ಸಿನಿಮಾ ಹೀರೋಗಳು ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಆಂಧ್ರಪ್ರದೇಶದ ಜನಸೇನಾ ಪಕ್ಷದ ನಾಯಕ, ಖ್ಯಾತ ನಟ ಪವನ್ ಕಲ್ಯಾಣ್‌ ಎಂಟ್ರಿ ಕೊಡಲಿದ್ದಾರೆ. ನಾಳೆ ರಾಹುಲ್‌ ಗಾಂಧಿ ಮೊದಲು ಮಂಡ್ಯಕ್ಕೆ ಆಗಮಿಸಲಿದ್ದು, ಪಕ್ಷ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3

ನಾಳೆ ಕರ್ನಾಟಕಕ್ಕೆ ರಾಹುಲ್ ಗಾಂಧಿ, ನಟ ಪವನ್ ಕಲ್ಯಾಣ್ ಎಂಟ್ರಿ Read More »

ಲೋಕಸಭಾ ಚುನಾವಣೆ/ ಸಕ್ಕರೆ ನಾಡಲ್ಲಿ ಕುಮಾರಸ್ವಾಮಿ ಪ್ರಚಾರ ಶುರು

ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಇಂದಿನಿಂದ ಅಖಾಡಕ್ಕಿಳಿದಿದ್ದಾರೆ. ಮಂಡ್ಯದಲ್ಲಿ ಇಂದಿನಿಂದ ಚುನಾವಣಾ ಸಭೆ ನಡೆಸುವ ಮೂಲಕ ಎಚ್‍ಡಿಕೆ ಮತ ಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಅವರು ಸಚಿವರು, ಸಂಸದರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಗ್ರಾಮಗಳಲ್ಲಿ ಸುಡು ಬಿಸಿಲನ್ನೂ ಲೆಕ್ಕಿಸದೆ ಬಿರುಸಿನ ಪ್ರಚಾರ ನಡೆಸಿದರು. ಇದೇ ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಇಷ್ಟು ದಿನ ಮೌನ ವಹಿಸಿದ್ದರು, ಇಂದಿನಿಂದ ಮಂಡ್ಯ ಕ್ಷೇತ್ರದಲ್ಲಿ ಮತ ಹುಡುಕಾಟ ಆರಂಭಿಸಿದ್ದಾರೆ.

ಲೋಕಸಭಾ ಚುನಾವಣೆ/ ಸಕ್ಕರೆ ನಾಡಲ್ಲಿ ಕುಮಾರಸ್ವಾಮಿ ಪ್ರಚಾರ ಶುರು Read More »

ವಿಜಯಪುರ : ರಾಹುಲ್‌ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕು ಎಂದ ಸಿ.ಟಿ. ರವಿ

ಸಮಗ್ರ ನ್ಯೂಸ್‌ : ರಾಹುಲ್‌ ಗಾಂಧಿ ಹೆಸರು ಹೇಳಿದರೆ ಬರುವಷ್ಟು ಸೀಟ್ ಬರಲ್ಲಾ ಎಂಬುದು ಅವರಿಗೆ ಗೊತ್ತಿದೆ. ರಾಹುಲ್ ಗಾಂಧಿ ಈ ಬಾರಿ‌ ಅಧಿಕ ಮುಸ್ಲಿಂರಿರುವ ಕೇರಳ ಕಡೆ ಹೋಗಿದ್ದಾರೆ. ಕಾಂಗ್ರೆಸ್ ನೆಲೆ ಹುಡುಕಲು ಪಾಕಿಸ್ತಾನದಲ್ಲಿ ಹುಡುಕಬೇಕಾಗುತ್ತದೆ. ಭಾರತದಲ್ಲಿ ಹಿಂದೂ ಮೆಜಾರಿಟಿ ಇದೆ. ಅದಕ್ಕೆ ಅವರು ಗೆದ್ದಾಗೆಲ್ಲಾ ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಮೈನಾರಿಟಿ ಅವರು ಇಲ್ಲಾ. ರಾಹುಲ್‌ ಗಾಂಧಿ ಅವರು ಪಾಕಿಸ್ತಾನದಲ್ಲಿ‌ ನೆಲೆ ಹುಡುಕಿಕೊಳ್ಳಬಹುದು ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದರು. ಅವರು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ

ವಿಜಯಪುರ : ರಾಹುಲ್‌ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕು ಎಂದ ಸಿ.ಟಿ. ರವಿ Read More »