Editor

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಶೇ.81.15 ರಷ್ಟು ಮಂದಿ ಉತ್ತೀರ್ಣ| ದ.ಕ ಪ್ರಥಮ, ಉಡುಪಿ‌ ದ್ವಿತೀಯ

ಸಮಗ್ರ ನ್ಯೂಸ್: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. 2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಶೇ.81.15 ರಷ್ಟು ಮಂದಿ ಉತ್ತೀರ್ಣ| ದ.ಕ ಪ್ರಥಮ, ಉಡುಪಿ‌ ದ್ವಿತೀಯ Read More »

ಈದ್ ಉಲ್ ಫಿತರ್ ಹಿನ್ನಲೆ| ದ.ಕ ಜಿಲ್ಲೆಯಲ್ಲಿ ಎ.10ಕ್ಕೆ ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ ನ್ಯೂಸ್: ಈದುಲ್ ಫಿತ್‌ರ್ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಏ.10) ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಏ.11ರಂದು ಇದ್ದ ಸಾರ್ವತ್ರಿಕ ರಜೆಯನ್ನು ಏ.10ರಂದು ನೀಡಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಕರ್ನಾಟಕ ಸರಕಾರವು 2024ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ: 11-04-2024 ರಂದು ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿತ್ತು. ಏ. 9 ರಂದು ಚಂದ್ರ ದರ್ಶನವಾಗಿರುವುದರಿಂದ ಎ.11ರ ಬದಲಾಗಿ ದಿನಾಂಕ: ಏ.10 ಬುಧವಾರರಂದು ರಜೆ ಘೋಷಿಸಲು

ಈದ್ ಉಲ್ ಫಿತರ್ ಹಿನ್ನಲೆ| ದ.ಕ ಜಿಲ್ಲೆಯಲ್ಲಿ ಎ.10ಕ್ಕೆ ಸಾರ್ವತ್ರಿಕ ರಜೆ ಘೋಷಣೆ Read More »

ಲೋಕಸಭಾ ಚುನಾವಣೆ/ ‘ಎಐ’ ಹೇಳುತ್ತಿದೆ ರಾಜಕೀಯ ಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷಿಗಳು ಗ್ರಹಗತಿಗಳ ಆಧಾರದಲ್ಲಿ ಚುನಾವಣೆಯ ಸಮಯದಲ್ಲಿ ಇದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿಯುವ ಸಂಪ್ರದಾಯ ಇದೆ. ಆದರೆ ಈ ಬಾರಿಯ ಲೋಕಸಭೆ ಅಖಾಡದಲ್ಲಿ ಏನಾಗಲಿದೆ ಎಂಬುದನ್ನು ಎಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ತನ್ನಲ್ಲಿ ಅಡಕವಾದ ಡೇಟಾಗಳ ಮೂಲಕ ಭವಿಷ್ಯ ನುಡಿಯುತ್ತಿದೆ. ಈ ಹಿಂದೆ ನಡೆದ ಬೆಳವಣಿಗೆ ಹಾಗೂ ಸದ್ಯ ನಡೆಯುತ್ತಿರುವ ಬೆಳವಣಿಗೆಗಳ ಡೇಟಾ ಪರಿಷ್ಕರಿಸಿ ಎಐ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಬರಬಹುದು ಎಂದು ಭವಿಷ್ಯ ನುಡಿಯುತ್ತಿದೆ. ಇದಲ್ಲದೆ, ಚುನಾವಣೆಯಲ್ಲಿ

ಲೋಕಸಭಾ ಚುನಾವಣೆ/ ‘ಎಐ’ ಹೇಳುತ್ತಿದೆ ರಾಜಕೀಯ ಭವಿಷ್ಯ Read More »

ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ

ಸಮಗ್ರ ನ್ಯೂಸ್‌ : ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಮತ್ತೆ ಕಿರುತೆರೆಗೆ ಕಾಲಿಟ್ಟಿದ್ದಾರೆ.ಸೂಪರ್ ಸ್ಟಾರ್ ಆಗಿ ಮಿಂಚಲು ಮಲೆನಾಡಿನ ಬೆಡಗಿ ದಿವ್ಯಾ ಸಜ್ಜಾಗಿದ್ದು, ಹೊಸ ಪ್ರೋಮೋ ಮೂಲಕ ನಟಿ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ನಿನಗಾಗಿ’ ಎಂಬ ಸೀರಿಯಲ್ ಮೂಲಕ ಮತ್ತೆ ಟಿವಿ ಪರದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದಿವ್ಯಾ ಉರುಡುಗ ಅವರು ರಚನಾ ಪಾತ್ರದಲ್ಲಿ ನಟಿಸಲಿದ್ದಾರೆ. ಸ್ಟಾರ್ ಆಗಿ ಮಿಂಚುತ್ತಿರುವ ಸಿನಿಮಾ ನಾಯಕಿಯ ಕಥೆಯನ್ನು ಹೇಳೋಕೆ ಹೊರಟಿದ್ದಾರೆ. ಸಿನಿಮಾ ಸ್ಟಾರ್ ಆಗಿರುವ ರಚನಾ ಬಾಳಿನ

ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ Read More »

ನವದೆಹಲಿ: ಅಭ್ಯರ್ಥಿಯ ಆಸ್ತಿಯ ವಿವರ ತಿಳಿಯುವ ಹಕ್ಕು ಮತದಾರನಿಗೆ ಇಲ್ಲ;ಸುಪ್ರೀಂ

ಸಮಗ್ರ ನ್ಯೂಸ್‌ : ಅಭ್ಯರ್ಥಿಯ ಪ್ರತಿಯೊಂದು ಆಸ್ತಿಯನ್ನು ತಿಳಿಯುವ ಹಕ್ಕು ಮತದಾರನಿಗೆ ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧ ಪಡದ ಸಂಗತಿಯಲ್ಲಿ ಅಭ್ಯರ್ಥಿ ತಮ್ಮ ಖಾಸಗಿತನವನ್ನು ಕಾಪಾಡಿಕೊಳ್ಳುವ ಹಕ್ಕು ಇರುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ. ಅರುಣಾಚಲಪ್ರದೇಶದ ತೇಜು ವಿಧಾನಸಭಾ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದಿದ್ದ ಕಾರಿಖೋಕ ಕ್ರಿ ಅವರ ಶಾಸಕ ಸ್ಥಾನವನ್ನು ಕೋರ್ಟ್ ಎತ್ತಿಹಿಡಿದಿದೆ. ಸರಿಯಾಗಿ ಆಸ್ತಿ ಘೋಷಣೆ ಮಾಡಿಲ್ಲವೆಂದು ಕಾರಿಖೋ ಕ್ರಿ ಅವರ ಶಾಸಕ ಸ್ಥಾನವನ್ನು ಅಸಿಂಧು

ನವದೆಹಲಿ: ಅಭ್ಯರ್ಥಿಯ ಆಸ್ತಿಯ ವಿವರ ತಿಳಿಯುವ ಹಕ್ಕು ಮತದಾರನಿಗೆ ಇಲ್ಲ;ಸುಪ್ರೀಂ Read More »

ಉತ್ತರಾಖಂಡ: ವಾಹನ 150 ಅಡಿ ಆಳದ ಕಣಿವೆಗೆ ಬಿದ್ದು 8 ಜನ ಸಾವು

ಸಮಗ್ರ ನ್ಯೂಸ್‌ : ವಾಹನವೊಂದು 150 ಅಡಿ ಆಳದ ಕಣಿವೆಗೆ ಬಿದ್ದು ಏಳು ನೇಪಾಳಿ ಪ್ರಜೆಗಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಘಟನೆ ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ಬೆತಲ್ಘಾಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ನೇಪಾಳಿ ಪ್ರಜೆಗಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ರಾಜ್ಯ ವಿಪತ್ತು ನಿರ್ವಹಣ ತಂಡ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಮೂವರು ಗಾಯಳುಗಳನ್ನು ರಕ್ಷಣೆ ಮಾಡಿ, ಎಂಟು ಮೃತದೇಹಗಳನ್ನು ಹೊರತೆಗೆದಿದೆ. ಗಾಯಾಳುಗಳನ್ನು

ಉತ್ತರಾಖಂಡ: ವಾಹನ 150 ಅಡಿ ಆಳದ ಕಣಿವೆಗೆ ಬಿದ್ದು 8 ಜನ ಸಾವು Read More »

ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ| ಮಗುವಿನೊಂದಿಗೆ ಪೋಟೋ ಹಂಚಿಕೊಂಡ ನಟಿ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ನಟಿ ಅದಿತಿ ಪ್ರಭುದೇವ ಅವರು ತಾಯಿಯಾಗುತ್ತಿರುವ ವಿಷಯ ಎಲ್ಲರಿಗೂ ತಿಳಿದಿರುವಂತಹದು. ಆದ್ರೆ ಇದೀಗ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದಾರೆ ಎಂಬ ವಿಚಾರವನ್ನು ಸ್ವತಃ ಅದಿತಿ ಪ್ರಭುದೇವ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ ಪೋಟೋಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆ ಪೋಸ್ಟ್ ನಲ್ಲಿ ಹೆಣ್ಣು ಮಗುವಿನ ಪುಟ್ಟ ಕೈಯನ್ನು ಅದಿತಿ ಅವರು ಶೇರ್​ ಮಾಡಿಕೊಂಡಿದ್ದಾರೆ. ಈಗ ಎಲ್ಲರಿಂದ ಶುಭಾಶಯದ ಮಹಾಪೂರವೆ ಹರಿದು ಬರುತ್ತಿದೆ. ಆದ್ರೆ ಅದಿತಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ| ಮಗುವಿನೊಂದಿಗೆ ಪೋಟೋ ಹಂಚಿಕೊಂಡ ನಟಿ Read More »

ಉಡುಪಿ:ಡಿವೈಡರ್ ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು|ಓರ್ವ ಮೃತ್ಯು;ಇಬ್ಬರು ಗಂಭೀರ

ಸಮಗ್ರ ನ್ಯೂಸ್‌ : ಚಾಲಕ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಮಾಹಿತಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಭಕ್ತರು ಪ್ರಯಾಣಿಸುತ್ತಿದ್ದ ಟೊಯೋಟಾ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ-ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರ ಸಮೀಪದ ಕೆಎಸ್‌ಆರ್‌ಟಿಸಿ

ಉಡುಪಿ:ಡಿವೈಡರ್ ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು|ಓರ್ವ ಮೃತ್ಯು;ಇಬ್ಬರು ಗಂಭೀರ Read More »

ನವದೆಹಲಿ: ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್‌ : ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಪುತ್ರಿ ಕವಿತಾ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಏಪ್ರಿಲ್ 23ರವರೆಗೆ ವಿಸ್ತರಿಸಿದೆ. ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯವು ಇಂದು ಆದೇಶಿಸಿದ್ದು, ಈ ಕುರಿತು ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ. ಕವಿತಾ ನ್ಯಾಯಾಲಕ್ಕೆ ಹಾಜರುಪಡಿಸಲು ಹೋಗುವ ವೇಳೆ ಈ ರೀತಿ ಪ್ರತಿಕ್ರಿಯಿಸಿ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ವಿರೋಧ ಪಕ್ಷದ

ನವದೆಹಲಿ: ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ Read More »

ದಾವಣಗೆರೆ: ಅತ್ತೆ, ಮಾವನ ಸಿಟ್ಟಿಗೆ ಅಡಿಕೆ ಮರ ಕಡಿದು ಹಾಕಿದ ಸೊಸೆ!

ಸಮಗ್ರ ನ್ಯೂಸ್‌ : ಸೊಸೆಯೊಬ್ಬಳು ತನ್ನ ಅತ್ತೆ, ಮಾವನ ಮೇಲಿನ ಕೋಪದಿಂದ ಅಡಿಕೆ ಮರಗಳನ್ನೇ ಕಡಿದು ಹಾಕಿದ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ರೂಪಾ ಕುಮಾರಸ್ವಾಮಿ ಅಡಿಕೆ ಮರಗಳನ್ನು ಕಡಿದು ಹಾಕಿದ ಆರೋಪಿ ಸೊಸೆ. ಚಿದಾನಂದ ಸ್ವಾಮಿ ಹಾಗೂ ಶಿವನಾಗಮ್ಮ ದಂಪತಿಗೆ ಮೂವರು ಪುತ್ರರಿದ್ದಾರೆ. ಹಿರಿಯ ಪುತ್ರ ಕುಮಾರಸ್ವಾಮಿಗೆ ರೂಪಾಳೊಂದಿಗೆ ಮದುವೆ ಮಾಡಿಸಲಾಗಿತ್ತು. ಆದರೆ ಮದುವೆಯಾದ ಬಳಿಕ ರೂಪಾ, ಹಲವಾರು ಬಾರಿ ಆಸ್ತಿಯಲ್ಲಿ ಪಾಲು ಕೇಳಿತ್ತಿದ್ದಳು. ಅಲ್ಲದೇ ಮಾವ ಚಿದಾನಂದಸ್ವಾಮಿ ಬಳಿ 8 ಲಕ್ಷ

ದಾವಣಗೆರೆ: ಅತ್ತೆ, ಮಾವನ ಸಿಟ್ಟಿಗೆ ಅಡಿಕೆ ಮರ ಕಡಿದು ಹಾಕಿದ ಸೊಸೆ! Read More »