Editor

ಕೇಂದ್ರೀಯ ವಿದ್ಯಾಲಯದ ಆರ್ ಟಿ ಇ ಸೀಟುಗಳಿಗೆ ಅರ್ಜಿ ಆಹ್ವಾನ/ ಏಪ್ರಿಲ್15 ಕೊನೆಯ ದಿನ

ಸಮಗ್ರ ನ್ಯೂಸ್: ಕೇಂದ್ರೀಯ ವಿದ್ಯಾಲಯದಲ್ಲಿರುವ ಶೇ.25 ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏ.15 ಕೊನೆಯ ದಿನವಾಗಿದೆ. ಕೇಂದ್ರೀಯ ವಿದ್ಯಾಲಯದಲ್ಲಿನ 5 ಕಿಮೀ ವ್ಯಾಪ್ತಿಯಲ್ಲಿನ ಅಭ್ಯರ್ಥಿಗಳು ಹಾಗೂ ಬಿಪಿಎಲ್ ಕಾರ್ಡುದಾರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆkvsanghathan.nic.in ಅಥವಾ kvonlineadmission.kvs.gov.in ಸಂಪರ್ಕಿಸಬಹುದು.

ಕೇಂದ್ರೀಯ ವಿದ್ಯಾಲಯದ ಆರ್ ಟಿ ಇ ಸೀಟುಗಳಿಗೆ ಅರ್ಜಿ ಆಹ್ವಾನ/ ಏಪ್ರಿಲ್15 ಕೊನೆಯ ದಿನ Read More »

ಜಬಲಪುರದಲ್ಲಿ‌ ಮೋದಿ‌ ರೋಡ್ ಶೋ/ ಕುಸಿದ ವೇದಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಎ. 7ರಂದು ಮಧ್ಯಪ್ರದೇಶದ ಜಬಲಪುರದಲ್ಲಿ ಆಯೋಜಿಸಿದ್ದರು ಪ್ರಧಾನಿ ಮೋದಿ ಬಹತ್ ರೋಡ್ ಶೋ ವೇಳೆ ವೇದಿಕೆ ಕುಸಿದು ಕೆಲವರಿಗೆ ಗಾಯಗಳಾಗಿವೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ವೇದಿಕೆಗೆ ಸೇರಿದ ಕಾರಣ ವೇದಿಕೆ ಕುಸಿದು ಬಿದ್ದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರ ರೋಡ್

ಜಬಲಪುರದಲ್ಲಿ‌ ಮೋದಿ‌ ರೋಡ್ ಶೋ/ ಕುಸಿದ ವೇದಿಕೆ Read More »

ತಮಿಳುನಾಡಿನಲ್ಲಿ ಜೆ ಪಿ‌ ನಡ್ಡಾ ರೋಡ್ ಶೋಗೆ ಅನುಮತಿ ನಿರಾಕರಣೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮಿಳುನಾಡಿನ ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ರೋಡ್ ಶೋಗೆ ಅನುಮತಿ ನಿರಾಕರಿಸಲಾಗಿದೆ. ಏಪ್ರಿಲ್ 19ರಂದು ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದೆ . ಇದರ ಜೊತೆಗೆ ಸಮಯಪುರಂ ದೇವಸ್ಥಾನದ ಪುಷ್ಪಾರ್ಚನೆ ಸಮಾರಂಭ ಮತ್ತು ಸಂಚಾರ ದಟ್ಟಣೆ ಮುಂದಿಟ್ಟುಕೊಂಡು ಪೊಲೀಸರು ಜೆ.ಪಿ ನಡ್ಡಾ ಅವರ ರೋಡ್ ಶೋಗೆ ಅನುಮತಿ ನಿರಾಕರಿಸಿದ್ದಾರೆ. ಇನ್ನುತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ರೋಡ್ ಶೋ ನಡೆಸಲು ಅನುಮತಿ ಸಿಗದ ಹಿನ್ನೆಲೆಯಲ್ಲಿ ಪೊಲೀಸ್

ತಮಿಳುನಾಡಿನಲ್ಲಿ ಜೆ ಪಿ‌ ನಡ್ಡಾ ರೋಡ್ ಶೋಗೆ ಅನುಮತಿ ನಿರಾಕರಣೆ Read More »

ಮಡಿಕೇರಿ:ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ: ಯದುವೀರ್‌

ಸಮಗ್ರ ನ್ಯೂಸ್‌ : ನಿಮ್ಮೆಲ್ಲರ ಮನೆ ಮಗನಂತೆ ಕೆಲಸ ಮಾಡಲು ಸಿದ್ಧನಿದ್ದೇನೆ, ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕು. ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಅವರು ಭಾನುವಾರ ಕೊಡಗಿನ ಹಲವೆಡೆಗಳಲ್ಲಿ ಬಿರುಬಿಸಿಲಿನಲ್ಲೂ ಸಂಚಾರ ನಡೆಸಿ ಜನರಿಂದ ಮತ ಯಾಚಿಸುತ್ತಿದ್ದಾರೆ. ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಹತ್ತಾರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಹಗಲು-ರಾತ್ರಿ ಎನ್ನದೇ ಮತಯಾಚನೆಯಲ್ಲಿ ತೊಡಗಿದ್ದಾರೆ. ಅಂದಿನ ಕಾಲದಲ್ಲಿ ಅರಸರು

ಮಡಿಕೇರಿ:ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ: ಯದುವೀರ್‌ Read More »

ಲೋಕಸಭಾ ಚುನಾವಣೆ/ ಮಣಿಪುರದಲ್ಲಿ ಚುನಾವಣಾ ನಡೆಸುವುದು ಆಯೋಗಕ್ಕೆ ಸವಾಲು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯನ್ನು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸುಸೂತ್ರವಾಗಿ ಆಯೋಜಿಸುವುದು ಚುನಾವಣಾ ಆಯೋಗಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ‘ಸ್ಥಳಾಂತರಗೊಂಡ 24,500ಕ್ಕೂ ಹೆಚ್ಚು ಜನರು ಮತದಾನದ ಹಕ್ಕಿಗೆ ಅರ್ಹರಾಗಿದ್ದಾರೆ. ಅವರಿಗೆ ಆಶ್ರಯ ಶಿಬಿರಗಳಿಂದಲೇ ತಮ್ಮ ಮತದಾನದ ಹಕ್ಕು ಚಲಾಯಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ’ ಎಂದು ಮುಖ್ಯ ಚುನಾವಣಾಧಿಕಾರಿ ಪ್ರದೀಪ್ ಕುಮಾ‌ರ್ ಝಾ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಗಾಗಿ ರಾಜ್ಯದಲ್ಲಿ ಒಟ್ಟು 2,955 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಇವುಗಳಲ್ಲಿ ಶೇ 50ರಷ್ಟು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸ್ಥಳಾಂತರಗೊಂಡ ಜನರಿಗೆ ಮತದಾನ

ಲೋಕಸಭಾ ಚುನಾವಣೆ/ ಮಣಿಪುರದಲ್ಲಿ ಚುನಾವಣಾ ನಡೆಸುವುದು ಆಯೋಗಕ್ಕೆ ಸವಾಲು Read More »

ತಿರಸ್ಕೃತಗೊಂಡ ನಾಮ ಪತ್ರ/ ಬಿ ಎಸ್ ಪಿ ಮೈಸೂರು ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ ಉಚ್ಚಾಟನೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಬಿಎಸ್‌ಪಿ ರಾಜ್ಯಸಮಿತಿ ವತಿಯಿಂದ ನಿಯೋಜನೆಗೊಂಡಿದ್ದ ರೇವತಿರಾಜ್ ರವರ ನಾಮಪತ್ರ ತಿರಸ್ಕಾರಗೊಂಡು ಪಕ್ಷಕ್ಕೆ ಬಹಳ ಮುಜುಗರ ಮತ್ತು ಅಪಮಾನ ಉಂಟುಮಾಡಿದ ಆರೋಪದ ಮೇಲೆ ಬಿಎಸ್‌ಪಿ ಪಕ್ಷದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ ಅವರನ್ನು ಉಚ್ಚಾಟಿಸಲಾಗಿದೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ರೇವತಿರಾಜ್ ಅವರ ನಾಮಪತ್ರ ಸಲ್ಲಿಕೆ ಮತ್ತು ಚುನಾವಣೆ ಪ್ರಚಾರ ಕಾರ್ಯಗಳನ್ನು ಬಿಎಸ್‌ಪಿ ಪಕ್ಷದ ಮೈಸೂರು ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿಯವರಿಗೆ ಒಪ್ಪಿಸಿ, ಇವರನ್ನು ತಾರಾ ಪ್ರಚಾರಕರನ್ನಾಗಿಯೂ ಪಕ್ಷವು ನೇಮಕ ಮಾಡಿತ್ತು.

ತಿರಸ್ಕೃತಗೊಂಡ ನಾಮ ಪತ್ರ/ ಬಿ ಎಸ್ ಪಿ ಮೈಸೂರು ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ ಉಚ್ಚಾಟನೆ Read More »

ನವದೆಹಲಿ: ಆನ್‌ಲೈನ್ ವಂಚನೆಯಿಂದ 2 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಹನ್ನೊಂದನೇ ತರಗತಿಯ ಯುವಕ ತಾಯಿಯ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದ ವೇಳೆ ವಂಚಕರು ಆ ಮೊಬೈಲ್ ಗೆ ಲಿಂಕ್ ಕಳುಹಿಸಿ ಆತನ ತಂದೆಯ ಬ್ಯಾಂಕ್ ಅಕೌಂಟ್ನಿಂದ ಸುಮಾರು 2 ಲಕ್ಷ ರೂ. ದೋಚಿದ್ದರು. ಇದರಿಂದ ಮನನೊಂದು ಆತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ನಲಸೊಪರದ ಯುವಕ ಏಪ್ರಿಲ್ 3 ರಂದು ತನ್ನ ತಾಯಿಯ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದ. ಆ ವೇಳೆ ವಂಚಕರು ಲಿಂಕ್ ಒಂದನ್ನು ಮೊಬೈಲ್ಗೆ ಕಳುಹಿಸಿದ್ದರು. ಆತ ತಪ್ಪಿ ಆ

ನವದೆಹಲಿ: ಆನ್‌ಲೈನ್ ವಂಚನೆಯಿಂದ 2 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ Read More »

ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು;ಪೇಜಾವರ ಶ್ರೀ

ವಿಜಯಪುರ : ಸರ್ಕಾರ ಒಂದು ಕೋಮಿನ ಅಥವಾ ಗುಂಪಿನ ಸ್ವತ್ತಲ್ಲ -ಪೇಜಾವರ ಶ್ರೀ ಸಮಗ್ರ ನ್ಯೂಸ್‌ : ಸರ್ಕಾರ ಒಂದು ಕೋಮಿನ ಅಥವಾ ಗುಂಪಿನ ಸ್ವತ್ತಲ್ಲ. ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು. ಇದು ಅಧಿಕಾರದಲ್ಲಿದ್ದವರ ಕರ್ತವ್ಯವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪೇಜಾವರ ಶ್ರೀಗಳು ಹೇಳಿದರು. ಅವರು ವಿಜಯಪುರದಲ್ಲಿ ಮಾತನಾಡಿ, ನಗರ್ತ್‍ಪೇಟೆಯಲ್ಲಿ ಹನುಮಾನ್ ಚಾಲಿಸಾ ಹಾಕಿ ಹಲ್ಲೆಗೊಳಗಾದ ಮುಖೇಶ್ ಮೇಲೆ ಕೇಸ್ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ದುಷ್ಕೃತ್ಯಗಳಿಗೆ ಕೈ ಹಾಕಬಾರದು. ಎಲ್ಲಾ ಸಮಾಜಗಳನ್ನು ಒಟ್ಟಾಗಿ

ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು;ಪೇಜಾವರ ಶ್ರೀ Read More »

ವಿಜಯಪುರ: ನಮ್ಮ ಸ್ಪರ್ಧೆ ಭ್ರಷ್ಟ, ದೇಶ ವಿರೋಧಿ ಸರಕಾರದ ಜೊತೆ;ರಾಜು ಆಲಗೂರ

ಸಮಗ್ರ ನ್ಯೂಸ್‌ : ನಮ್ಮ ಹೋರಾಟ ಸರ್ವಾಧಿಕಾರಿ ಆಡಳಿತ ಹಾಗೂ ಭ್ರಷ್ಟ ಕೇಂದ್ರ ಸರಕಾರದ ವಿರುದ್ಧ ಎಂದು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹೇಳಿದರು. ದೇವರಹಿಪ್ಪರಗಿ ಮತಕ್ಷೇತ್ರದ ಹುಣಶ್ಯಾಳದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ರೈತರ ಹಿತ ಕಾಪಾಡದ ಪ್ರಧಾನಿ ಮೋದಿಯವರು ಮೊದಲ ಸಲ ಆರಿಸಿ ಬಂದ ನಂತರ ಹೇಳಿದ್ದ ಯಾವ ಮಾತನ್ನೂ ಉಳಿಸಿಕೊಂಡಿಲ್ಲ. ಅದರ ಬದಲು ಅವರು ಜನರ ಜೀವನ ಕಸಿದುಕೊಂಡಿದ್ದಾರೆ. ಹಿಂದಿನ ನಮ್ಮ ಕೆಟ್ಟ ದಿನಗಳೇ ಒಳ್ಳೆಯದಾಗಿದ್ದವು ಎಂದು ಹೇಳಿದರು.

ವಿಜಯಪುರ: ನಮ್ಮ ಸ್ಪರ್ಧೆ ಭ್ರಷ್ಟ, ದೇಶ ವಿರೋಧಿ ಸರಕಾರದ ಜೊತೆ;ರಾಜು ಆಲಗೂರ Read More »

ನಂಜನಗೂಡು: ತಾಂಡವಪುರ ಚೆಕ್ ಪೋಸ್ಟ್ ನಲ್ಲಿ ಒಂದು ಲಕ್ಷ ರೂ. ಹಣ ಸೀಜ್

ಸಮಗ್ರ ನ್ಯೂಸ್‌ : ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ತಾಂಡವಪುರ ಚೆಕ್ ಪೋಸ್ಟ್ ನಲ್ಲಿ ಮಹಾರಾಷ್ಟ್ರ ಮೂಲದ ವ್ಯಕ್ತಿ ಒಬ್ಬ ಕಾರಿನಲ್ಲಿ ಯಾವುದೇ ದಾಖಲೆಗಳು ಇಲ್ಲದೆ ಸುಮಾರು ಒಂದು ಲಕ್ಷ ರು ಹಣವನ್ನು ತೆಗೆದುಕೊಂಡು ಹೋಗುತ್ತಿದ್ದರು.ಈ ವೇಳೆ ಚುನಾವಣಾ ಅಧಿಕಾರಿಗಳು ತಪಾಸಣೆ ಮಾಡುವ ವೇಳೆ

ನಂಜನಗೂಡು: ತಾಂಡವಪುರ ಚೆಕ್ ಪೋಸ್ಟ್ ನಲ್ಲಿ ಒಂದು ಲಕ್ಷ ರೂ. ಹಣ ಸೀಜ್ Read More »