Editor

ಉಡುಪಿ : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಸೋಲು ನಿಶ್ಚಿತ: ಎ.ಎಸ್. ಪಾಟೀಲ್‌ ನಡಹಳ್ಳಿ

ಸಮಗ್ರ ನ್ಯೂಸ್‌ : ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ರೈತಪರ ಯೋಜನೆಗಳನ್ನು ಕಾಂಗ್ರೆಸ್‌ ನೇತೃತ್ವದ ಸರ್ಕಾರ ರದ್ದುಗೊಳಿಸುವ ಮೂಲಕ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್‌ ನಡಹಳ್ಳಿ ಆರೋಪಿಸಿದರು. ಉಡುಪಿಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಹಾಲಿನ ಪ್ರೋತ್ಸಾಹ ಧನವನ್ನು ₹7ಕ್ಕೆ ಹೆಚ್ಚಿಸುವುದಾಗಿ ಹೇಳಿತ್ತು. ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದ ₹5

ಉಡುಪಿ : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಸೋಲು ನಿಶ್ಚಿತ: ಎ.ಎಸ್. ಪಾಟೀಲ್‌ ನಡಹಳ್ಳಿ Read More »

ನವದೆಹಲಿ: ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ವಕ್ತಾರ ಗೌರವ್ ವಲ್ಲಭ್

ಸಮಗ್ರ ನ್ಯೂಸ್‌ : ನಾಯಕ ಮತ್ತು ವಕ್ತಾರ ಪ್ರೊ.ಗೌರವ್ ವಲ್ಲಭ್ ಅವರು ಕಾಂಗ್ರೆಸ್ ನಡೆಯ ಬಗ್ಗೆ ಅಸಮಾಧಾನ ಉಂಟಾಗಿ ಪಕ್ಷಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ವಲ್ಲಭ್ ಅವರು, ಕಾಂಗ್ರೆಸ್ ಪಕ್ಷ ಸಾಗುತ್ತಿರುವುದರ ಬಗ್ಗೆ ನನಗೆ ಸಮಾಧಾನವಿಲ್ಲ, ಪಕ್ಷಕ್ಕೆ ದಿಕ್ಕು ತೋಚದಂತಾಗಿದೆ, ಅಲ್ಲದೆ ಸನಾತನ ವಿರೋಧಿ ಘೋಷಣೆಗಳನ್ನು ಕೂಗಲು ಸಾಧ್ಯವಿಲ್ಲ, ಜತೆಗೆ ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ಬೆಳಗ್ಗೆ ಮತ್ತು ಸಂಜೆ ನಿಂದಿಸಲು ಸಾಧ್ಯವಿಲ್ಲ. ಹೀಗಾಗಿ ನನ್ನ ಹುದ್ದೆ ಮತ್ತು

ನವದೆಹಲಿ: ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ವಕ್ತಾರ ಗೌರವ್ ವಲ್ಲಭ್ Read More »

ಬೆಳ್ತಂಗಡಿ : ಗೋದಾಮಿಗೆ ನುಗ್ಗಿ 1.35 ಲಕ್ಷ ರೂ. ಮೌಲ್ಯದ ಅಡಿಕೆ ಕಳವು

ಸಮಗ್ರ ನ್ಯೂಸ್:‌ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 1.35 ಲಕ್ಷ ರೂ. ಮೌಲ್ಯದ ಅಡಿಕೆ ಕಳವುಗೈದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಪಂಥ ಎಂಬಲ್ಲಿ ನಡೆದಿದೆ. ತಣ್ಣೀರುಪಂಥ ನಿವಾಸಿ ಅಬ್ದುಲ್ ಹಕೀಂ ಎಂಬವರು ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. ಎ.2ರಂದು ಸಂಜೆಯ ವೇಳೆ ಸುಲಿಯದ ಅಡಿಕೆಯನ್ನು 75 ಗೋಣಿ ಚೀಲಗಳಲ್ಲಿ ತುಂಬಿಸಿ ಮನೆ ಸಮೀಪವೇ ಇರುವ ಗೋದಾಮಿನಲ್ಲಿ ಇಟ್ಟು ಬೀಗ ಹಾಕಿದ್ದರು. ಎ 3ರಂದು ಬೆಳಗ್ಗೆ ನೋಡಿದಾಗ ಗೋದಾಮಿನ ಬಾಗಿಲು ತುಂಡಾಗಿ ಬಿದ್ದಿರುವುದು

ಬೆಳ್ತಂಗಡಿ : ಗೋದಾಮಿಗೆ ನುಗ್ಗಿ 1.35 ಲಕ್ಷ ರೂ. ಮೌಲ್ಯದ ಅಡಿಕೆ ಕಳವು Read More »

ಸುಳ್ಯ: ಕೆಲಸ ಕೇಳಿಕೊಂಡು ಬಂದಾವನಿಂದಲೇ ಮೊಬೈಲ್‌, ಬೈಕ್‌ ಕಳವು

ಸಮಗ್ರ ನ್ಯೂಸ್ : ಕೆಲಸ ಕೇಳಿಕೊಂಡು ಬಂದವನಿಂದ ಮೊಬೈಲ್‌, ಬೈಕ್‌ ಕಳವು ಮಾಡಿ ಪರಾರಿಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬರಾಯದ ರಿಯಾಜ್‌ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ. ರಿಯಾಜ್‌ ಅವರು ಅರಂತೋಡಿನ ಹೊಟೇಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರಲ್ಲಿಗೆ ಅವರ ಪರಿಚಯದ ಹರ್ಷಿಕೇಶ್‌ ಕೆಲಸ ಕೇಳಿಕೊಂಡು ಹೋಗಿದ್ದು, ಆತನನ್ನು ರಿಯಾಜ್‌ ಹೊಟೇಲ್‌ಗೆ ಕರೆದುಕೊಂಡು ಹೋಗಿದ್ದಾನೆ. ಮಧ್ಯಾಹ್ನ ರಿಯಾಜ್‌ ವಿಶ್ರಾಂತಿ ಪಡೆದು ಎದ್ದು ನೋಡಿದಾಗ ಹರ್ಷಿಕೇಶ್‌ ರೂಂನಲ್ಲಿ ಕಾಣಿಸಲಿಲ್ಲ. ಜೊತೆಗೆ ರಿಯಾಜ್‌

ಸುಳ್ಯ: ಕೆಲಸ ಕೇಳಿಕೊಂಡು ಬಂದಾವನಿಂದಲೇ ಮೊಬೈಲ್‌, ಬೈಕ್‌ ಕಳವು Read More »

ವಿಟ್ಲ: ಬಸ್-ಪಿಕಪ್‌ ಢಿಕ್ಕಿ; ಹಲವರಿಗೆ ಗಾಯ

ಸಮಗ್ರ ನ್ಯೂಸ್‌ : ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

ವಿಟ್ಲ: ಬಸ್-ಪಿಕಪ್‌ ಢಿಕ್ಕಿ; ಹಲವರಿಗೆ ಗಾಯ Read More »

ಉಪ್ಪಿನಂಗಡಿ: ಬಸ್, ಕಂಟೈನರ್ ನಡುವೆ ಢಿಕ್ಕಿ; ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್‌ : ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಢಿಕ್ಕಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾ. ಹೆ. 75ರ ಉಪ್ಪಿನಂಗಡಿ ಉದನೆ ಬಳಿಯ ನೇಲ್ಯಡ್ಕದಲ್ಲಿ ನಡೆದಿದೆ. ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ವರನ ಕಡೆಯವರ ಮದುವೆಯ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದಿದೆ. ಅವಘಡದಲ್ಲಿ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

ಉಪ್ಪಿನಂಗಡಿ: ಬಸ್, ಕಂಟೈನರ್ ನಡುವೆ ಢಿಕ್ಕಿ; ಹಲವು ಮಂದಿಗೆ ಗಾಯ Read More »

ಹವಾಮಾನ ವರದಿ| ಮಳೆ ನಿರೀಕ್ಷೆಯಲ್ಲಿದ್ದ ಜನತೆಗೆ ಗುಡ್ ನ್ಯೂಸ್| ಈ ದಿನಗಳಂದು ತಂಪೆರೆಯಲಿದ್ದಾನೆ ವರುಣ

ಸಮಗ್ರ ನ್ಯೂಸ್: ಬಿರುಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಮಳೆಯ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಬಿಸಿಲಿನಿಂದ ಬೆಂದ ಜನರಿಗೆ ಮುಂದಿನ ಮೂರ್ನಾಲ್ಕು ದಿನದ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತನ್ನ ವರದಿಯಲ್ಲಿ ತಿಳಿಸಿದೆ. ಹವಾಮಾನ ಇಲಾಖೆಯು ಬಿಡುಗಡೆ ಮಾಡಿರುವ ವರದಿ ಪ್ರಕಾರ, ಯುಗಾದಿ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೀದರ್‌. ಬೆಳಗಾವಿ. ಬಾಗಲಕೋಟೆ, ಹಾಸನ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಯುಗಾದಿ ವೇಳೆ

ಹವಾಮಾನ ವರದಿ| ಮಳೆ ನಿರೀಕ್ಷೆಯಲ್ಲಿದ್ದ ಜನತೆಗೆ ಗುಡ್ ನ್ಯೂಸ್| ಈ ದಿನಗಳಂದು ತಂಪೆರೆಯಲಿದ್ದಾನೆ ವರುಣ Read More »

ಮೈಸೂರು : ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡುತ್ತೇನೆ ಎಂದರೂ ಬಿಜೆಪಿಗೆ ಹೋಗುವುದಿಲ್ಲ; ಸಿದ್ದರಾಮಯ್ಯ

ಸಮಗ್ರ ನ್ಯೂಸ್‌ : ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡುತ್ತೇನೆ ಎಂದರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ, ಪಂಗಡಗಳ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮತಯಾಚಿಸಿ ಮಾತನಾಡಿ, ‘ನಮಗೆ ಸೈದ್ಧಾಂತಿಕ ಸ್ಪಷ್ಟತೆ ಇದ್ದಾಗ ಮಾತ್ರ ರಾಜಕೀಯ ಶಕ್ತಿ ಬರುತ್ತದೆ. ಬಿಜೆಪಿ, ಆರ್‌ಎಸ್‌ಎಸ್‌ ಕಡೆ ಯಾರೂ ತಲೆ ಹಾಕಬಾರದು’ ಎಂದು ಕಾರ್ಯಕರ್ತರಿಗೆ ಹೇಳಿದರು. ‘ಶೂದ್ರರು, ದಲಿತರು ಹಾಗೂ ಮಹಿಳೆಯರಿಗೆ

ಮೈಸೂರು : ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡುತ್ತೇನೆ ಎಂದರೂ ಬಿಜೆಪಿಗೆ ಹೋಗುವುದಿಲ್ಲ; ಸಿದ್ದರಾಮಯ್ಯ Read More »

ಅತೀ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ದ ದಾಖಲೆ/ ಕೇಂದ್ರೀಯ ರೈಲ್ವೆ ವಲಯ ನಂ.1 ಸ್ಥಾನ

ಸಮಗ್ರ ನ್ಯೂಸ್: 2023-24ನೇ ಆರ್ಥಿಕ ವರ್ಷದಲ್ಲಿ ಭಾರತೀಯ ರೈಲ್ವೆಯ ವಿಭಾಗಗಳ ಪೈಕಿ ಅತೀ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುವ ಮೂಲಕ ಕೇಂದ್ರೀಯ ರೈಲ್ವೆ ವಲಯ ನಂ.1 ಸ್ಥಾನ ಪಡೆದುಕೊಂಡಿದೆ. ಕಳೆದ ಆರ್ಥಿಕ ವರ್ಷದಲ್ಲಿ 146.5 ಕೋಟಿ ಪ್ರಯಾಣಿಕರನ್ನು ಕರೆದೊಯ್ದಿದ್ದ ಈ ವಲಯವು, ಈ ಆರ್ಥಿಕ ವರ್ಷದಲ್ಲಿ 158.3 ಕೋಟಿ ಪ್ರಯಾಣಿಕರನ್ನು ಕರೆದೊಯ್ದಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.8 ಹೆಚ್ಚಿನ ಸಾಧನೆಯಾಗಿದೆ. ಕೇಂದ್ರೀಯ ರೈಲ್ವೆ ವಲಯವು 2023-24 ರಲ್ಲಿ ಒಟ್ಟು 7,311ಕೋಟಿ ಆದಾಯ ಗಳಿಸಿದೆ. ಕಳೆದ ವರ್ಷದ ಆದಾಯ

ಅತೀ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ದ ದಾಖಲೆ/ ಕೇಂದ್ರೀಯ ರೈಲ್ವೆ ವಲಯ ನಂ.1 ಸ್ಥಾನ Read More »

ಪೋಬ್ರ್ಸ್ ಬಿಲಿಯನೇರ್‍ಗಳ ಪಟ್ಟಿ ಬಿಡುಗಡೆ/ ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಖೇಶ್ ಅಂಬಾನಿ

ಸಮಗ್ರ ನ್ಯೂಸ್: ಪೋಬ್ರ್ಸ್ ವಿಶ್ವದ ಬಿಲಿಯನೇರ್‍ಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಪಟ್ಟಿಯಲ್ಲಿ 200 ಭಾರತೀಯರು ಸೇರಿಕೊಂಡಿದ್ದು, ಭಾರತದ ಶ್ರೀಮಂತರ ಪಟ್ಟಿಯಲ್ಲಿ ಬರೋಬ್ಬರಿ 116 ಶತಕೋಟಿ ಡಾಲರ್‍ಗಳ ಮಾಲಕರಾಗಿರುವ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅಗ್ರಸ್ಥಾನದಲ್ಲಿದ್ದಾರೆ. ಭಾರತ ಹಾಗೂ ಏಷ್ಯಾದಲ್ಲಿಯೇ ಮುಖೇಶ್ ಅಂಬಾನಿ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಇದಲ್ಲದೆ ಅವರು ಜಾಗತಿಕ ಮಟ್ಟದಲ್ಲಿಯೂ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಅಂಬಾನಿ ನಿವ್ವಳ ಮೌಲ್ಯವು 39.76% ಹೆಚ್ಚಾಗಿದ್ದು, ಅವರು 100 ಬಿಲಿಯನ್ ಡಾಲರ್ ಕ್ಲಬ್‍ನಲ್ಲಿ ಕಾಣಿಸಿಕೊಂಡ ಮೊದಲ ಭಾರತೀಯರಾಗಿದ್ದಾರೆ ಎಂದು ಪೆÇೀಟ್ರ್ಸ್

ಪೋಬ್ರ್ಸ್ ಬಿಲಿಯನೇರ್‍ಗಳ ಪಟ್ಟಿ ಬಿಡುಗಡೆ/ ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಖೇಶ್ ಅಂಬಾನಿ Read More »