Editor

ಉಡುಪಿ: ಆಕಸ್ಮಿಕವಾಗಿ ಮಹಿಳೆ ಬಾವಿಗೆ ಬಿದ್ದು ಮೃತ್ಯು

ಸಮಗ್ರ ನ್ಯೂಸ್‌ : ಮಹಿಳೆಯೋರ್ವರು ಆಕಸ್ಮಿಕವಾಗಿ ಮನೆ ಸಮೀಪದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪ ನಡೆದಿದೆ. ಮೃತಪಟ್ಟ ಮಹಿಳೆ ಗೌರಿ (62) ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಇವರು, ಹೊರಗಡೆ ಹೋದ ಸಂದರ್ಭ ಮನೆಯ ಹತ್ತಿರದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಆಕಸ್ಮಿಕವಾಗಿ ಮಹಿಳೆ ಬಾವಿಗೆ ಬಿದ್ದು ಮೃತ್ಯು Read More »

ವಿಟ್ಲ : ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ : ಪ್ರಕರಣ ದಾಖಲು

ಸಮಗ್ರ ನ್ಯೂಸ್‌ : ವ್ಯಕ್ತಿಯೊಬ್ಬನಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಎಂಬಲ್ಲಿ ನಡೆದಿದೆ. ನೆಟ್ಲಮುಡ್ನೂರು ಗ್ರಾಮ ಬಂಟ್ವಾಳ ನಿವಾಸಿ ನವೀನ ಶೆಟ್ಟಿ (61) ಎಂಬವರು, ಏ.೦೧ ರಂದು ರಾತ್ರಿ, ನವೀನ ಶೆಟ್ಟಿಯವರು, ಕೊರಗಪ್ಪ ಮತ್ತು ಸುಂದರ ಎಂಬವರೊಂದಿಗೆ ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಸಾರ್ವಜನಿಕ ರಸ್ತೆಯಲ್ಲಿ ಮಾತನಾಡುತ್ತಿರುವಾಗ ಆರೋಪಿ ವಸಂತ ಎಂಬಾತನು ಬಂದು ನವೀನ ಶೆಟ್ಟಿಯವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ

ವಿಟ್ಲ : ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ : ಪ್ರಕರಣ ದಾಖಲು Read More »

ಹೊಸದಿಲ್ಲಿ : ಕಾಂಗ್ರೆಸ್‌ನ 11ನೇ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಗೆ 17 ಅಭ್ಯರ್ಥಿಗಳನ್ನೊಳಗೊಂಡ ತನ್ನ 11ನೇ ಪಟ್ಟಿಯನ್ನು ಕಾಂಗ್ರೆಸ್‌ ಪಕ್ಷ ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಆಂಧ್ರ ಪ್ರದೇಶ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳ ಅಭ್ಯರ್ಥಿಗಳ ಹೆಸರುಗಳಿವೆ. ಆಂಧ್ರಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆಯಾಗಿರುವ ವೈ ಎಸ್‌ ಶರ್ಮಿಳಾ ರೆಡ್ಡಿ ಅವರನ್ನು ಕಡಪಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ಕ್ಷೇತ್ರವನ್ನು ವೈಎಸ್ಸಾರ್‌ ಕಾಂಗ್ರೆಸ್‌ ಪಕ್ಷದ ನಾಯಕ ಹಾಗೂ ಶರ್ಮಿಳಾ ಅವರ ಸೋದರ ಸಂಬಂಧಿ ಅವಿನಾಶ್‌ ರೆಡ್ಡಿ ಪ್ರತಿನಿಧಿಸುತ್ತಿದ್ದಾರೆ.

ಹೊಸದಿಲ್ಲಿ : ಕಾಂಗ್ರೆಸ್‌ನ 11ನೇ ಪಟ್ಟಿ ಬಿಡುಗಡೆ Read More »

ಹವಾಮಾನ ವರದಿ| ರಾಜ್ಯದಲ್ಲಿ ಕಾವೇರಲಿದೆ‌ ಬಿಸಿಲು| ಮುಂದಿನ 3 ತಿಂಗಳು‌ ದೇಶಾದ್ಯಂತ ಕಾಡಲಿದೆ ಬಿಸಿಗಾಳಿ, ಬಿಸಿಲ ಝಳ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಈ ನಡುವೆ ಮುಂದಿನ ಮೂರು ತಿಂಗಳು ರಣಬಿಸಿಲು ಇರಲಿದ್ದು, ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಅಂದರೆ 2ರಿಂದ 8 ದಿನಗಳ ಕಾಲ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ. ಏಪ್ರಿಲ್ ನಿಂದ ಜೂನ್ ತಿಂಗಳ ಅವಧಿಯಲ್ಲಿ ಬಯಲುಸೀಮೆಯ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಬೀಸಲಿದೆ.

ಹವಾಮಾನ ವರದಿ| ರಾಜ್ಯದಲ್ಲಿ ಕಾವೇರಲಿದೆ‌ ಬಿಸಿಲು| ಮುಂದಿನ 3 ತಿಂಗಳು‌ ದೇಶಾದ್ಯಂತ ಕಾಡಲಿದೆ ಬಿಸಿಗಾಳಿ, ಬಿಸಿಲ ಝಳ Read More »

ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4 ಕೋಟಿ ವಂಚನೆ| ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗೊಂದು ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 4 ಕೋಟಿ ಹಣ ಪಡೆದು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ಹೇಳಿ ಸಿಎಂ ಹಾಗೂ ರಾಜ್ಯಪಾಲರ ನಕಲಿ ಲೆಟರ್ ಹೆಡ್ ಹಾಗೂ ನಕಲಿ ಸಹಿ ಬಳಸಿ 4 ಕೋಟಿ ಹಣ ಪಡೆದು ವಂಚನೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಿಯಾಜ್ ಅಹ್ಮದ್, ಯೂಸುಫ್, ಚಂದ್ರಪ್ಪ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಖತರ್ನಾಕ್ ಗ್ಯಾಂಗ್ ಕರ್ನಾಟಕ

ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4 ಕೋಟಿ ವಂಚನೆ| ಆರೋಪಿಗಳು ಅರೆಸ್ಟ್ Read More »

ಲೋಕಸಭಾ ಚುನಾವಣೆ/ ಚನ್ನಪಟ್ಟಣದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯ ಅಬ್ಬರದ ಪ್ರಚಾರ ಆರಂಭಗೊಂಡಿದ್ದು, ಇಂದು ರಾಜ್ಯಕ್ಕೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಸತತ ಸಭೆ, ಸಮಾವೇಶಗಳ ಬಳಿಕ ಇದೀಗ ಚನ್ನಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬೆಂಗಳೂರು ಗ್ರಾಮಂತರ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಅಮಿತ್ ಶಾ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ್ದಾರೆ.ಒಂದೂವರೆ ಕಿಲೋಮೀಟರ್ ಸಾಗಲಿರುವ ಈ ರೋಡ್‍ಶೋನಲ್ಲಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ

ಲೋಕಸಭಾ ಚುನಾವಣೆ/ ಚನ್ನಪಟ್ಟಣದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ Read More »

ನನ್ನ ನಿರ್ಧಾರ ಏ. 3ರಂದು ಪ್ರಕಟಿಸುತ್ತೇನೆ/ ಸುಮಲತಾ ಫೇಸ್ ಬುಕ್ ಪೋಸ್ಟ್

ಸಮಗ್ರ ನ್ಯೂಸ್: ಮಂಡ್ಯ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ನಿವಾಸಕ್ಕೆ ಭೇಟಿ ನೀಡಿ ಮಂಡ್ಯ ಕ್ಷೇತ್ರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ ನಂತರ ಏ.3 ರಂದು ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸುಮಲತಾ ಹೇಳಿದ್ದರು. ಈ ಬೆನ್ನಲ್ಲೇ ಸುಮಲತಾ ಫೇಸ್ ಬುಕ್ ನಲ್ಲಿ ಮತ್ತೊಂದು ಪೋಸ್ಟ್ ಮಾಡಿದ್ದು, ನಾಳೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದಿದ್ದಾರೆ. ‘ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ.ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ

ನನ್ನ ನಿರ್ಧಾರ ಏ. 3ರಂದು ಪ್ರಕಟಿಸುತ್ತೇನೆ/ ಸುಮಲತಾ ಫೇಸ್ ಬುಕ್ ಪೋಸ್ಟ್ Read More »

ವಯನಾಡಿನಲ್ಲಿ ರಾಹುಲ್ ಸ್ಪರ್ಧೆ/ ಆಕ್ಷೇಪ ವ್ಯಕ್ತಪಡಿಸಿದ ಪಿಣರಾಯಿ ವಿಜಯನ್

ಸಮಗ್ರ ನ್ಯೂಸ್: ವಯನಾಡ್ ಕ್ಷೇತ್ರದಿಂದ ಕಾಂಗ್ರೆಸ್‍ನ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಮಾಡುತ್ತಿರುವುದಕ್ಕೆ ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಜಿ ವಿಜಯನ್ ಟೀಕೆ ಮಾಡಿದ್ದು, ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ. ವಯನಾಡ್‍ನಲ್ಲಿ ಎಲ್‍ಡಿಎಫ್ ಹಾಗೂ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಸಿಪಿಐ) ರಾಷ್ಟ್ರೀಯ ನಾಯಕಿ ಅನ್ನಿ ರಾಜಾರನ್ನು ಕಣಕ್ಕೆ ಇಳಿಸಿದೆ. ‘ರಾಷ್ಟ್ರಮಟ್ಟದಲ್ಲಿ ಹೆಸರಾಂತ ಎಡ ನಾಯಕಿ ಅನ್ನಿ ರಾಜಾ ವಿರುದ್ಧ ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಮಣಿಪುರದ ವಿಷಯದಲ್ಲಿ ಬಿಜೆಪಿ

ವಯನಾಡಿನಲ್ಲಿ ರಾಹುಲ್ ಸ್ಪರ್ಧೆ/ ಆಕ್ಷೇಪ ವ್ಯಕ್ತಪಡಿಸಿದ ಪಿಣರಾಯಿ ವಿಜಯನ್ Read More »

ಬಾಂಗ್ಲಾದಲ್ಲಿ ಬಾಯ್ಕಾಟ್ ಇಂಡಿಯಾ ಅಭಿಯಾನ/ ಪ್ರಧಾನಿ ಶೇಕ್ ಹಸಿನಾ ಖಡಕ್ ತಿರುಗೇಟು

ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷ, ಸತತ 4ನೇ ಬಾರಿ ಅಧಿಕಾರಕ್ಕೆ ಏರಿದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಬಾಯ್ಕಾಟ್ ಇಂಡಿಯಾ ಅಭಿಯಾನ ಆರಂಭವಾಗಿದೆ. ಭಾರತದಿಂದ ಎಲ್ಲಾ ರೀತಿಯ ವಸ್ತುಗಳ ಆಮದು ನಿಷೇಧಿಸಬೇಕು ಎಂದು ಭಾರತ ವಿರೋಧಿ ನಿಲುವು ಹೊಂದಿರುವ ಮಾಜಿ ಪ್ರಧಾನಿ ಖಲೀದಾ ಜಿಯಾ ನೇತೃತ್ವದ ಬಿಎನ್‍ಪಿ ಸೇರಿದಂತೆ ವಿಪಕ್ಷಗಳು ಕಳೆದ ಜನವರಿಯಲ್ಲಿ ಆರಂಭಿಸಿದ್ದ ಅಭಿಯಾನ ಇದೀಗ ತೀವ್ರತೆ ಪಡೆದುಕೊಂಡಿದೆ. ಶೇಖ್ ಹಸೀನಾ ಭಾರತ ಸ್ನೇಹಿ ನಿಲುವು ಹೊಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರ ಗೆಲುವಿಗೆ ಭಾರತ ಕೂಡಾ

ಬಾಂಗ್ಲಾದಲ್ಲಿ ಬಾಯ್ಕಾಟ್ ಇಂಡಿಯಾ ಅಭಿಯಾನ/ ಪ್ರಧಾನಿ ಶೇಕ್ ಹಸಿನಾ ಖಡಕ್ ತಿರುಗೇಟು Read More »

ಲೋಕಸಭೆ ಚುನಾವಣೆ/ ಏ.6ರಂದು ಜೈಪುರ ಹಾಗೂ ಹೈದರಾಬಾದ್‍ನಲ್ಲಿ ಕಾಂಗ್ರೆಸ್‍ನ ಬೃಹತ್ ಯಾತ್ರೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಏ.5ರಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಯಾಗಲಿದ್ದು, ಏ.6ರಂದು ಜೈಪುರ ಹಾಗೂ ಹೈದರಾಬಾದ್‍ನಲ್ಲಿ ಬೃಹತ್ ಯಾತ್ರೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೈಪುರದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಲಿದ್ದಾರೆ. ಅದೇ ದಿನ ಹೈದರಾಬಾದ್‍ನಲ್ಲಿ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಕೆ.ಸಿ.ವೇಣುಗೋಪಾಲ್ ತಮ್ಮ ಟ್ವೀಟ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಲೋಕಸಭೆ ಚುನಾವಣೆ/ ಏ.6ರಂದು ಜೈಪುರ ಹಾಗೂ ಹೈದರಾಬಾದ್‍ನಲ್ಲಿ ಕಾಂಗ್ರೆಸ್‍ನ ಬೃಹತ್ ಯಾತ್ರೆ Read More »