ದೀಪಾವಳಿಗೆ ಮಳೆರಾಯನ ಅಡ್ಡಿ| ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆ ಸಂಭವ
ಸಮಗ್ರ ನ್ಯೂಸ್: ದೀಪಾವಳಿ ಸಂಭ್ರಮದಲ್ಲಿರುವ ಕರ್ನಾಟಕ ಮಂದಿಗೆ ಮಳೆರಾಯ ಅಡ್ಡಿಯಾಗಿದ್ದಾನೆ. ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ರಾಜ್ಯಕ್ಕೆ ಮಳೆ ಅಲರ್ಟ್ ನೀಡಿದೆ. ಬೆಂಗಳೂರು ಸೇರಿದಂತೆ 23 ಜಿಲ್ಲೆಗಳಿಗೆ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು ಇದರ ಪರಿಣಾಮ ರಾಜ್ಯದ ಚಾಮರಾಜನಗರ, ಕೊಡಗು, ಮಂಡ್ಯ, ರಾಮನಗರ, ಉತ್ತರಕನ್ನಡ, ಮಂಗಳೂರು, ಉಡುಪಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಂಗಳೂರು ಜಿಲ್ಲೆಗಳ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ.
ದೀಪಾವಳಿಗೆ ಮಳೆರಾಯನ ಅಡ್ಡಿ| ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆ ಸಂಭವ Read More »










