Editor

ಹೋಳಿ ಹಬ್ಬದ ದಿನ ಈ ವಸ್ತುಗಳನ್ನು ದಾನ ಮಾಡಬೇಡಿ!

ಪಂಚಾಂಗದ ಪ್ರಕಾರ, ಹೋಳಿ ಹಬ್ಬವನ್ನು ಪ್ರತಿ ವರ್ಷ ಪಾಲ್ಗುಣ ಮಾಸದ ಪೂರ್ಣಿಮಾ ತಿಥಿಯಂದು ಆಚರಿಸಲಾಗುತ್ತದೆ. ಹೋಳಿಗೆ ಒಂದು ದಿನ ಮೊದಲು ಹೋಲಿಕಾ ದಹನ್ ಮಾಡಲಾಗುತ್ತದೆ. ಈ ವರ್ಷ ಹೋಲಿಕಾ ದಹನ್ ಮಾರ್ಚ್ 24 ರಂದು ಬರುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವು ಹೋಲಿಕಾ ದಹನ ಪರಿಹಾರಗಳನ್ನು ಮಾಡುವುದರಿಂದ ಜೀವನದಲ್ಲಿ ಸುಖ ಶಾಂತಿ ಸಿಗುತ್ತದೆ. ಅದರೊಂದಿಗೆ ಶುಭ ಫಲವೂ ದೊರೆಯುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಹೋಳಿಕಾ ದಹನದ ದಿನದಂದು ಅನೇಕ ರೀತಿಯ ವಸ್ತುಗಳನ್ನು ದಾನ ಮಾಡಲಾಗುತ್ತದೆ, ಆದರೆ ಕೆಲವು

ಹೋಳಿ ಹಬ್ಬದ ದಿನ ಈ ವಸ್ತುಗಳನ್ನು ದಾನ ಮಾಡಬೇಡಿ! Read More »

ತಿಂಗಳಿಗೆ 42,000 ಸಂಬಳ ಕೊಡುವ ಉದ್ಯೋಗ ನಿಮಗಾಗಿ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 26, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ತಿಂಗಳಿಗೆ 42,000 ಸಂಬಳ ಕೊಡುವ ಉದ್ಯೋಗ ನಿಮಗಾಗಿ, ಬೇಗ ಅಪ್ಲೈ ಮಾಡಿ Read More »

ರಾಹುಲ್ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಸ್ಪರ್ಧೆ

ಸಮಗ್ರ ನ್ಯೂಸ್‌: ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ಬಾರಿಯೂ ಕಾಂಗ್ರೆಸ್‌ನ ಹಾಲಿ ಸಂಸದ ರಾಹುಲ್‌ ಗಾಂಧಿ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ರಾಹುಲ್‌ ಗಾಂಧಿ ಅವರಿಗೆ ಪ್ರತಿಸ್ಪರ್ಧಿಯಾಗಿ ಕೇರಳದ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್‌ ವಯಾನಾಡು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ರಾಗಾ ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ಅಮೇಥಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ 55,120 ಮತಗಳ ಅಂತರದಿಂದ ರಾಗಾ ಸೋಲು ಕಂಡರು, ವಯನಾಡಿನಲ್ಲಿ ಜಯ

ರಾಹುಲ್ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಸ್ಪರ್ಧೆ Read More »

ತಿಂಗಳಿಗೆ 35,000 ಕೊಡ್ತಾರೆ ಈ ಜಾಬ್ ನಲ್ಲಿ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಟೆಕ್ನಿಕಲ್ ಅಸಿಸ್ಟೆಂಟ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 26, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ತಿಂಗಳಿಗೆ 35,000 ಕೊಡ್ತಾರೆ ಈ ಜಾಬ್ ನಲ್ಲಿ, ಬೇಗ ಅಪ್ಲೈ ಮಾಡಿ Read More »

ಅಬಕಾರಿ ನೀತಿ ಹಗರಣದ ವೇಳೆ ಬಳಸುತ್ತಿದ್ದ ಕೇಜ್ರಿವಾಲ್‌ ಮೊಬೈಲ್ ನಾಪತ್ತೆ

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ಉದ್ದೇಶಿತ ಅಬಕಾರಿ ನೀತಿ ಹಗರಣದ ವೇಳೆ ಬಳಕೆ ಮಾಡುತ್ತಿದ್ದ ಮೊಬೈಲ್‌ ನಾಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಕೇಜ್ರಿವಾಲ್‌ ಅವರನ್ನು ಪ್ರಶ್ನಿಸಿದರೆ, ಮೊಬೈಲ್‌ ಎಲ್ಲಿದೆ ಎಂಬುದು ಗೊತ್ತಿಲ್ಲ ಎಂಬುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಇ.ಡಿ ಮೂಲಗಳ ಪ್ರಕಾರ, ನಾಪತ್ತೆಯಾಗಿರುವ ಮೊಬೈಲ್‌ನಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಇರಬಹುದು. ಇದು ಈವರೆಗೆ ಕಾಣೆಯಾದ 171ನೇ ಸಾಧನವಾಗಿದೆ. ಪತ್ತೆಯಾಗಿರುವ

ಅಬಕಾರಿ ನೀತಿ ಹಗರಣದ ವೇಳೆ ಬಳಸುತ್ತಿದ್ದ ಕೇಜ್ರಿವಾಲ್‌ ಮೊಬೈಲ್ ನಾಪತ್ತೆ Read More »

ಟ್ರಕ್‌ನಡಿಗೆ ಸಿಲುಕಿ ಭಾರತೀಯ ವಿದ್ಯಾರ್ಥಿನಿ ಲಂಡನ್ ನಲ್ಲಿ ಸಾವು

ಸಮಗ್ರ ನ್ಯೂಸ್‌ : ಭಾರತೀಯ ಮೂಲದ 33 ವರ್ಷದ ವಿದ್ಯಾರ್ಥಿನಿ ಲಂಡನ್ ನಲ್ಲಿ ಓದುತ್ತಿದ್ದು, ತನ್ನ ಮನೆಗೆ ಸೈಕ್ಲಿಂಗ್ ಮಾಡುತ್ತಿದ್ದಾಗ ಟ್ರಕ್ ಅಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇತ್ತೀಚೆಗೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಪಿಎಚ್‌ಡಿ ಮಾಡುತ್ತಿದ್ದ ಗುರುಗ್ರಾಮ್‌ನ ಮೂಲದವರಾಗಿದ್ದು, ನಿವೃತ್ತ ಲೆಫ್ಟಿನೆಂಟ್ ಜನರಲ್ ಎಸ್‌ಪಿ ಕೊಚ್ಚರ್ ಪುತ್ರಿಯಾಗಿರುವ ಚೀಸ್ತಾ ಕೊಚ್ಚರ್ ಎಂದು ಗುರುತಿಸಲಾಗಿದೆ. ಇವರು ಈ ಹಿಂದೆ ಸಾರ್ವಜನಿಕ ನೀತಿ ಥಿಂಕ್-ಧನ್ಯವಾದ NITI ಆಯೋಗ್‌ನೊಂದಿಗೆ ಕೆಲಸ ಮಾಡುತ್ತಿದ್ದರು. ಅಪಘಾತ ಸಂಭವಿಸಿದಾಗ ಚೀಸ್ತಾ

ಟ್ರಕ್‌ನಡಿಗೆ ಸಿಲುಕಿ ಭಾರತೀಯ ವಿದ್ಯಾರ್ಥಿನಿ ಲಂಡನ್ ನಲ್ಲಿ ಸಾವು Read More »

ಮಂಗಳೂರು: ಅಕ್ರಮ ಗೋಸಾಗಾಟ- ಬಜರಂಗದಳ ಕಾರ್ಯಕರ್ತರಿಂದ ತಡೆ

ಸಮಗ್ರ ನ್ಯೂಸ್: ಕಾರಿನಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಸಂಘಟನೆಯ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಸ್ಥಳದಲ್ಲೇ ಬಿಟ್ಟು ತಂಡ ಪರಾರಿಯಾದ ಘಟನೆ ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ನಡೆದಿದೆ. ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದ್ದು ಅದರ ಕಾಲುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಲಾಗಿತ್ತು. ಕಬಕದ ಬಜರಂಗದಳ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ

ಮಂಗಳೂರು: ಅಕ್ರಮ ಗೋಸಾಗಾಟ- ಬಜರಂಗದಳ ಕಾರ್ಯಕರ್ತರಿಂದ ತಡೆ Read More »

ಕ್ಷಿಪ್ರ ರಾಜಕೀಯ ಬೆಳವಣಿಗೆ| ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಘರ್ ವಾಪಸಿ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ತಮ್ಮ ಮಾತೃಪಕ್ಷವಾದ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಜನಾರ್ದನ ರೆಡ್ಡಿಗೆ ಬಿಜೆಪಿ ಪಕ್ಷದ ಬಾವುಟ ನೀಡಿ ವಿಜಯೇಂದ್ರ ಸ್ವಾಗತ ಕೋರಿದರು.ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ,

ಕ್ಷಿಪ್ರ ರಾಜಕೀಯ ಬೆಳವಣಿಗೆ| ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಘರ್ ವಾಪಸಿ Read More »

ಹೋಳಿ‌; ಇದು ಬಣ್ಣದೋಕುಳಿ| ಕೆಟ್ಟದ್ದನ್ನು ಸುಟ್ಟು ಇಷ್ಟವಾಗಿರೋದನ್ನು ಮೂಟೆ ಕಟ್ಟೋಣ ಬನ್ನಿ…

ಸಮಗ್ರ ನ್ಯೂಸ್: ಉತ್ಸವಗಳು, ಹಬ್ಬಗಳು ನಮ್ಮ ಧಾರ್ಮಿಕ ಮತ್ತು ಸಾಮಾಜಿಕ ಜೀವನದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿವೆ. ಕಾರಣ ಮನುಷ್ಯನು ಸಹಜವಾಗಿ ಉತ್ಸವಪ್ರಿಯನಾಗಿರುವುದು. ಈ ಸತ್ಯವನ್ನು ಮಹಾಕವಿ ಕಾಳಿದಾಸನು ತನ್ನ ಶಾಕುಂತಲ ನಾಟಕದ 6ನೇ ಅಂಕದಲ್ಲಿ ಹೀಗೆ ವ್ಯಕ್ತಪಡಿಸಿದ್ದಾನೆ: ‘ಉತ್ಸವಪ್ರಿಯಾಃ ಖಲು ಮನುಷ್ಯಾಃ.’ ಉತ್ಸವಗಳು ಮನುಷ್ಯಜೀವನದಲ್ಲಿ ಒದಗುವ ಸಂತೋಷದ ಸಂದರ್ಭಗಳು. ಬಂಧು-ಬಳಗ, ಇಷ್ಟಮಿತ್ರರು ಎಲ್ಲ ಒಂದೆಡೆ ಕಲೆತು, ಐಂದ್ರಿಯಕ ಹಾಗೂ ಮಾನಸಿಕ ಆನಂದವನ್ನು ಅನುಭವಿಸುವುದಕ್ಕಲ್ಲದೆ, ಜೀವನದ ಕಷ್ಟಕಾರ್ಪಣ್ಯಗಳನ್ನು ಮರೆಯಲೂ ಉತ್ಸವಗಳು, ಹಬ್ಬ-ಹರಿದಿನಗಳು ಕಾರಣವಾಗುತ್ತವೆ. ಮಾತ್ರವಲ್ಲ, ಅವು ನಮ್ಮ ಆಂತರ್ಯವನ್ನು

ಹೋಳಿ‌; ಇದು ಬಣ್ಣದೋಕುಳಿ| ಕೆಟ್ಟದ್ದನ್ನು ಸುಟ್ಟು ಇಷ್ಟವಾಗಿರೋದನ್ನು ಮೂಟೆ ಕಟ್ಟೋಣ ಬನ್ನಿ… Read More »

ಕಡಬ: ನದಿಗೆ ಹಾರಿದ ಯುವತಿ| ಪ್ರಾಣ ರಕ್ಷಿಸಿದ ಆಟೋ ಚಾಲಕ!

ಸಮಗ್ರ ನ್ಯೂಸ್: ನದಿಗೆ ಹಾರಿದ ಯುವತಿಯೋರ್ವಳನ್ನು ಆಟೋ ಚಾಲಕ ರಕ್ಷಿಸಿದ ಘಟನೆ ಕಡಬ ಆಲಂಕಾರು ಸಮೀಪದ ಶಾಂತಿಮೊಗರಿನಲ್ಲಿ ನಡೆದಿದೆ. ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಯುವತಿಯು ತನ್ನ ಸ್ಕೂಟಿ ನಿಲ್ಲಿಸಿ ಹಾರಿದ್ದಾಳೆ. ಈ ವೇಳೆ ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಆಕೆ ಬದುಕುಳಿದಿರುವುದಾಗಿ ವರದಿಯಾಗಿದೆ. ಇನ್ನು ಯುವತಿ ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ತಿಳಿದುಬಂದಿದೆ. ಯುವತಿಯನ್ನು ಪೊಲೀಸರು ಕಡಬ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಯುವತಿ ನದಿಗೆ ಹಾರಿರಬಹುದೆಂಬುದು ಪೊಲೀಸರ

ಕಡಬ: ನದಿಗೆ ಹಾರಿದ ಯುವತಿ| ಪ್ರಾಣ ರಕ್ಷಿಸಿದ ಆಟೋ ಚಾಲಕ! Read More »