Editor

ಬರ ಪರಿಹಾರ/ ಸುಪ್ರೀಂ ಮೆಟ್ಟಿಲೇರಿದ ಕರ್ನಾಟಕ ಸರ್ಕಾರ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಬರ ಪರಿಹಾರ ಪಡೆಯುವ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದೆ. ರಾಜ್ಯದ 223 ತಾಲೂಕುಗಳಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯಂತೆ 18,171 ಕೋಟಿ ರು. ಗಳ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಸುಪ್ರೀಂಕೋರ್ಟ್‍ಗೆ ಶನಿವಾರ ರಿಟ್ ಅರ್ಜಿ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರದಿಂದ ಪರಿಹಾರ ಮತ್ತು ಅನುದಾನಕ್ಕಾಗಿ ಈಗಾಗಲೇ ಹಲವು

ಬರ ಪರಿಹಾರ/ ಸುಪ್ರೀಂ ಮೆಟ್ಟಿಲೇರಿದ ಕರ್ನಾಟಕ ಸರ್ಕಾರ Read More »

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್/ ಪರೀಕ್ಷೆ ನಂತರ ಬಿಸಿಯೂಟ ಪೂರೈಕೆ

ಸಮಗ್ರ ನ್ಯೂಸ್: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪರೀಕ್ಷೆ ಬರೆಯುವ ಮಕ್ಕಳಿಗೆ ಬಿಸಿಯೂಟ ನೀಡಲು ನಿರ್ಧರಿಸಿದೆ. ರಾಜ್ಯಾದ್ಯಂತ ಮಾ.25 ರಿಂದ ಏಪ್ರಿಲ್ 10ರವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಬಿಸಿಯೂಟ ಪೂರೈಕೆ ಮಾಡಬೇಕು ಎಂದು ಹೇಳಿದೆ. ಉತ್ತಮ ಆರೋಗ್ಯ, ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯದ ಕಡೆ ಗಮನ ಇಡುವಂತೆ ಸರ್ಕಾರ ಸೂಚನೆ ನೀಡಿದೆ.

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್/ ಪರೀಕ್ಷೆ ನಂತರ ಬಿಸಿಯೂಟ ಪೂರೈಕೆ Read More »

ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ/ ವಿದೇಶಗಳಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಈರುಳ್ಳಿ ರಫ್ತನ ಮೇಲೆ ಹೇರಿರುವ ನಿರ್ಬಂಧವನ್ನು ಮುಂದಿನ ಆದೇಶದ ತನಕ ಅನಿರ್ದಿಷ್ಟಾವಧಿಗೆ ವಿಸ್ತರಿಸಿದ್ದು, ಭಾರತದ ಈ ಕ್ರಮದಿಂದಾಗಿ ಬಾಂಗ್ಲಾ, ಮಲೇಷಿಯಾ, ನೇಪಾಳ, ಯುಎಇ ಮೊದಲಾದ ರಾಷ್ಟ್ರಗಳಲ್ಲಿ ಈರುಳ್ಳಿ ದರ ಗಗನಕ್ಕೇರಿದೆ. ಕೇಂದ್ರ ಸರ್ಕಾರವು ಈ ಹಿಂದೆ 2024ರ ಮಾ.31ರ ವರೆಗೆ ಈರುಳ್ಳಿ ರಫ್ತು ನಿರ್ಬಂಧಿಸುತ್ತಿರುವುದಾಗಿ ಹೇಳಿದ್ದು, ಇದೀಗ ನಿಷೇಧ ಇನ್ನಷ್ಟು ವಿಸ್ತರಣೆಯಾಗಿದೆ. ಈ ನಿರ್ಧಾರವು ದೇಶದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಈರುಳ್ಳಿ ದರದಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ನೆರವಾಗಲಿದೆ ಎನ್ನಲಾಗಿದೆ.

ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ/ ವಿದೇಶಗಳಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ Read More »

ಚುನಾವಣೆ ಸಿದ್ಧತೆಯ ನಡುವೆಯೇ ಕೆಪಿಸಿಸಿಗೆ ನೇಮಕಾತಿ/ ಐವರು ಕಾರ್ಯಾಧ್ಯಕ್ಷರ ನೇಮಕ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಭರದ ಸಿದ್ಧತೆಯ ನಡುವೆಯೇ ಕೆಪಿಸಿಸಿಯಲ್ಲಿ ನೂತನ ನೇಮಕಾತಿಗಳು ನಡೆದಿವೆ. ತನ್ನೀರ್ ಸೇರ್, ಜಿ.ಸಿ. ಚಂದ್ರಶೇಖರ್, ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಎಐಸಿಸಿ ನೇಮಿಸಿದ್ದು, ಇದೇ ಸಂದರ್ಭ ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದೆ. ಇನ್ನು ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್. ಹನುಮಂತಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ.

ಚುನಾವಣೆ ಸಿದ್ಧತೆಯ ನಡುವೆಯೇ ಕೆಪಿಸಿಸಿಗೆ ನೇಮಕಾತಿ/ ಐವರು ಕಾರ್ಯಾಧ್ಯಕ್ಷರ ನೇಮಕ Read More »

ನೀರಿನ ಸಂಗ್ರಹಣಾ ಮಟ್ಟ ಕುಸಿತ/ ಆತಂಕ ಸೃಷ್ಟಿಸಿದ ಕೇಂದ್ರೀಯ ಜಲ ಆಯೋಗದ ವರದಿ

ಸಮಗ್ರ ನ್ಯೂಸ್: ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದಲ್ಲಿ ನೀರಿನ ಸಂಗ್ರಹಣಾ ಮಟ್ಟ ಆತಂಕಕಾರಿ ಮಟ್ಟದಲ್ಲಿ ಕುಸಿದಿದೆ ಎಂಬ ಆಘಾತಕಾರಿ ಅಂಶ ಕೇಂದ್ರೀಯ ಜಲ ಆಯೋಗವು ಬಿಡುಗಡೆ ಮಾಡುವ ವಾರದ ಬುಲೆಟಿನ್‍ನಲ್ಲಿ ಪ್ರಸ್ತಾಪವಾಗಿದೆ. ಹಿಮಾಚಲ ಪ್ರದೇಶ, ಪಂಜಾಬ್, ಮಧ್ಯಪ್ರದೇಶ, ತ್ರಿಪುರಾ, ರಾಜಸ್ಥಾನ, ಬಿಹಾರ, ಮಹಾರಾಷ್ಟ್ರ, ಉತ್ತರ ಪ್ರದೇಶ, ಗುಜರಾತ್, ಛತ್ತೀಸಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಸಹಿತ ಹಲವು ರಾಜ್ಯಗಳಲ್ಲಿಯೂ ಇದೇ ಸ್ಥಿತಿ ಇದೆ ಎಂದು ಆಯೋಗ ತಿಳಿಸಿದೆ. ದೇಶದಲ್ಲಿರುವ 150 ಪ್ರಮುಖ ಜಲಾಶಯಗಳಲ್ಲಿ

ನೀರಿನ ಸಂಗ್ರಹಣಾ ಮಟ್ಟ ಕುಸಿತ/ ಆತಂಕ ಸೃಷ್ಟಿಸಿದ ಕೇಂದ್ರೀಯ ಜಲ ಆಯೋಗದ ವರದಿ Read More »

ಹವಾಮಾನ ವರದಿ| ಮಾ. 25ರವರೆಗೆ ಕರಾವಳಿ, ಮಲೆನಾಡಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ. ನಾಳೆ (ಮಾರ್ಚ್ 25) ಬೆಳಗ್ಗೆ 8.30ರ ತನಕದ ಮಳೆ ಮುನ್ಸೂಚನೆ ಪ್ರಕಾರ, ರಾಜ್ಯದ ವಿವಿಧೆಡೆ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗಬಹುದು. ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡಗಳಲ್ಲಿ,

ಹವಾಮಾನ ವರದಿ| ಮಾ. 25ರವರೆಗೆ ಕರಾವಳಿ, ಮಲೆನಾಡಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಶೋಭಕೃತ್ ನಾಮ ಸಂವತ್ಸರದ ಉತ್ತರಾಯಣ ಶಿಶಿರ ಋತು ಫಾಲ್ಗುಣ ಮಾಸದ ಶುದ್ಧ ಅಷ್ಟಮಿಯಿಂದ ಚತುರ್ದಶಿಯವರೆಗೂ. ಈ ವಾರದ ಚಂದ್ರನ‌ ಸಂಚಾರ ಮೃಗಶಿರಾ ನಕ್ಷತ್ರದ ದಿಂದ ಪೂರ್ವಾಫಾಲ್ಗುಣಿ ವರೆಗೆ. ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ಮಾರ್ಚ್ 17ರಿಂದ ಮಾರ್ಚ್ 23ರ ವರೆಗೆ ಹೊಸ ಯೋಜನೆಗಳು, ಶಿಕ್ಷಣ, ವಿದೇಶ ಪ್ರವಾಸ, ಹಣಕಾಸು, ಆಸ್ತಿ-ಅಂತಸ್ತು ವಿಚಾರದಲ್ಲಿ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ನೋಡೋಣ ಬನ್ನಿ… ಮೇಷ ರಾಶಿ:ಈ

ದ್ವಾದಶ ರಾಶಿಗಳ ವಾರಭವಿಷ್ಯ Read More »

ತುಮಕೂರಿನಲ್ಲಿ ಮೂವರ ಅಮಾನುಷ ಹತ್ಯೆ| ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹ

ಸಮಗ್ರ ನ್ಯೂಸ್: ತುಮಕೂರಿನ ಕುಚ್ಚಂಗಿ ಕೆರೆಯಲ್ಲಿ ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎಸ್‌ಡಿಪಿಐ ಕಾರ್ಯಕರ್ತ ಶಾಹುಲ್ ಉಜಿರೆ ಸೇರಿದಂತೆ ಮೂವರು ಯುವಕರನ್ನು ಅಮಾನುಷ ರೀತಿಯಲ್ಲಿ ಕೊಲೆ ನಡೆಸಿದ ಘಟನೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ರವರು ತೀವ್ರ‌‌ ಆತಂಕ ವ್ಯಕ್ತಪಡಿಸಿದ್ದು, ಪೋಲಿಸ್ ಇಲಾಖೆ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ

ತುಮಕೂರಿನಲ್ಲಿ ಮೂವರ ಅಮಾನುಷ ಹತ್ಯೆ| ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹ Read More »

ಬಿಸಿಲ‌ ಬೇಗೆಗೆ ತಂಪೆರೆದ‌ ವರುಣ| ಸುಳ್ಯ, ಕಡಬ ತಾಲೂಕಿನ ಹಲವೆಡೆ ಉತ್ತಮ ಮಳೆ

ಸಮಗ್ರ ನ್ಯೂಸ್: ಹಲವು ದಿನಗಳಿಂದ‌ ಸೆಕೆಯಿಂದ ತತ್ತರಿಸಿದ್ದ‌ ಕರಾವಳಿಗೆ ಕಳೆದೆರಡು ದಿನಗಳಿಂದ‌ ಮಳೆಯ‌ ಸಿಂಚನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಲವೆಡೆ ಮತ್ತು‌ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ಕಡೆಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಮೋಡದ ವಾತಾವರಣ ಕಂಡುಬಂದಿತ್ತು ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿತ್ತು. ಸುಳ್ಯ, ಕಡಬ ತಾಲೂಕಿನ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ, ಮರ್ಕಂಜ, ಎಲಿಮಲೆ, ಸಂಪಾಜೆ, ಅರಂತೋಡು, ಹರಿಹರ ಪಲ್ಲತ್ತಡ್ಕ, ಪಂಬೆತ್ತಾಡಿ ಸೇರಿದಂತೆ ವಿವಿಧ

ಬಿಸಿಲ‌ ಬೇಗೆಗೆ ತಂಪೆರೆದ‌ ವರುಣ| ಸುಳ್ಯ, ಕಡಬ ತಾಲೂಕಿನ ಹಲವೆಡೆ ಉತ್ತಮ ಮಳೆ Read More »

ಮಾ.25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಶುರು

ಸಮಗ್ರ ನ್ಯೂಸ್: 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ಯು ಮಾ.25ರಿಂದ ಪ್ರಾರಂಭವಾಗುತ್ತಿದ್ದು, ರಾಜ್ಯಾದ್ಯಂತ 2,750 ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ. 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದು, ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಮಾ.25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಶುರು Read More »