Editor

ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ಮರ್ಲೆನಾ ರಾಜೀನಾಮೆ

ಸಮಗ್ರ ನ್ಯೂಸ್: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹೀನಾಯವಾಗಿ ಸೋಲನಭುವಿಸಿದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ಮರ್ಲೇನಾ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರನ್ನು ಭೇಟಿಯಾದ ನಿರ್ಗಮಿತ ಸಿಎಂ ಆತಿಶಿ ಮರ್ಲೇನಾ ಬಳಿಕ ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲನುಭವಿಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 27 ವರ್ಷಗಳ ಬಳಿಕ ಬಿಜೆಪಿ ದೆಹಲಿ ಗದ್ದುಗೆ ಏರಲಿದೆ.

ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ಮರ್ಲೆನಾ ರಾಜೀನಾಮೆ Read More »

ಪತ್ನಿಯ ಅನಾರೋಗ್ಯದಿಂದ ಸಂಕಷ್ಟಕ್ಕೀಡಾದ ಪದ್ಮಶ್ರೀ ಮಹಾಲಿಂಗ ನಾಯ್ಕ

ಸಮಗ್ರ ನ್ಯೂಸ್: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರು ಪತ್ನಿಯ ಅನಾರೋಗ್ಯದಿಂದ ಸಂಕಷ್ಟಕ್ಕೀಡಾಗಿದ್ದಾರೆ. ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲಾಗದೆ ಪರದಾಡುತ್ತಿದ್ದಾರೆ. ಸುರಂಗ ಕೊರೆದು ಜಮೀನಿಗೆ ನೀರು ಹಾಯಿಸಿದ್ದನ್ನು ಆಧುನಿಕ ಭಗೀರಥನೆಂದು ಕರೆದು ಕೇಂದ್ರ ಸರಕಾರ “ಪದ್ಮಶ್ರೀ’ ಪ್ರಶಸ್ತಿ ಪ್ರದಾನ ಮಾಡಿತ್ತು. ಇದು ಪ್ರಗತಿಪರ ಕೃಷಿಕರಾಗಿ ದೇಶದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾದ ಅವರು ಕೃಷ್ಯುತ್ಪತ್ತಿಯಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ಇದೀಗ ಅವರ ಪತ್ನಿ ಏಕಾಏಕಿ ತಲೆಯ ನರದ ಸಮಸ್ಯೆಗೆ ಒಳಗಾಗಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಹೆಚ್ಚಿನ

ಪತ್ನಿಯ ಅನಾರೋಗ್ಯದಿಂದ ಸಂಕಷ್ಟಕ್ಕೀಡಾದ ಪದ್ಮಶ್ರೀ ಮಹಾಲಿಂಗ ನಾಯ್ಕ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದೈನಂದಿನ ಜೀವನದಲ್ಲಿ ರಾಶಿಗಳ ಪ್ರಭಾವ ಮಹತ್ವದ್ದು. ಪ್ರತಿಯೊಂದು ಘಟನೆಗಳಿಗೂ ರಾಶಿಗಳ ಪ್ರಭಾವ ಕಾರಣ ಎಂಬುದು ಶಾಸ್ತ್ರ ನಂಬಿಕೆ. ಈ ಹಿನ್ನಲೆಯಲ್ಲಿ 2025ರ ಫೆಬ್ರವರಿ 9ರ ಭಾನುವಾರದಿಂದ 15ರ ಶನಿವಾರದವರೆಗೆ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಮೇಷ ರಾಶಿ:ನಿಮ್ಮ ಕ್ರೆಡಿಟ್ ಹೆಚ್ಚಾಗುತ್ತದೆ. ಕಾರ್ಯಕ್ರಮಗಳು ಸರಾಗವಾಗಿ ನಡೆಯುತ್ತವೆ. ದೂರದ ಸ್ಥಳಗಳಿಂದ ಪ್ರಮುಖ ಮಾಹಿತಿ ದೊರೆಯಲಿದೆ. ಸ್ನೇಹಿತರ ಸಹಾಯದಿಂದ ಒಂದು ಹೆಜ್ಜೆ ಮುಂದಿಡುತ್ತೀರಿ. ಸಭೆಗಳು ಮತ್ತು ಸಮ್ಮೇಳನಗಳಲ್ಲಿ ಭಾಗವಹಿಸುತ್ತೀರಿ. ಇಲ್ಲಿಯವರೆಗೆ ಪಟ್ಟ ಶ್ರಮಕ್ಕೆ ಪ್ರತಿಫಲ ಸಿಗುತ್ತದೆ. ವಿದ್ಯಾರ್ಥಿಗಳು ಮತ್ತು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಎನ್‌ಆರ್ ಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ

ಸಮಗ್ರ ನ್ಯೂಸ್: ಕಾಫಿನಾಡಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಇದೀಗ ಮತ್ತೊಬ್ಬ ಕಾರ್ಮಿಕ ಮಹಿಳೆ ಕಾಡಾನೆ ದಾಳಿಯಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ. ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ. ವಿನೋದಾ (39) ಮೃತ ಕಾರ್ಮಿಕ ಮಹಿಳೆಯಾಗಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ಮೂಲದ ವಿನೋದಾ ಬಾಯಿ, ಕೂಲಿಗಾಗಿ ವಿಜಯನಗರ ಜಿಲ್ಲೆಯಿಂದ ತಮ್ಮ ಕುಟುಂಬದೊಂದಿಗೆ ವಲಸೆ ಬಂದಿದ್ದರು. ಇಂದು ಬೆಳಗ್ಗೆ ಕಾಫಿ ಹಣ್ಣು ಕೊಯ್ಯುವಾಗ ತೋಟದಲ್ಲಿದ್ದ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ಪರಿಣಾಮವಾಗಿ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ

ಎನ್‌ಆರ್ ಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ Read More »

ದೆಹಲಿ ವಿಧಾನಸಭಾ ಚುನಾವಣೆ| ಮೂಲೆ ಸೇರಿದ ಪೊರಕೆ; ಹ್ಯಾಟ್ರಿಕ್ ಸೊನ್ನೆ ಸುತ್ತಿದ ಕೈ| ರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಕಹಳೆ

ಸಮಗ್ರ ನ್ಯೂಸ್: 2025 ರ ದೆಹಲಿ ಚುನಾವಣೆಯ ಫಲಿತಾಂಶಗಳ ಚಿತ್ರಣ ಸ್ಪಷ್ಟವಾಗಿದೆ. 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ಬಿಜೆಪಿಯ ಬೃಹತ್ ಗೆಲುವಿನೊಂದಿಗೆ, ಆಮ್ ಆದ್ಮಿ ಪಕ್ಷದ ದೆಹಲಿ ಅಧ್ಯಾಯವು ಕೊನೆಯಾಗಿದೆ. ನವದೆಹಲಿ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ಮತ್ತು ಜಂಗ್ಪುರದಿಂದ ಮನೀಶ್ ಸಿಸೋಡಿಯಾ ಚುನಾವಣೆಯಲ್ಲಿ ಸೋತಿದ್ದಾರೆ. ಆಪ್​ಗೆ ಇರುವ ಇರುವ ಒಂದೇ ಒಂದು ಸಮಾಧಾನಕರ ವಿಚಾರವೆಂದರೆ ಮುಖ್ಯಮಂತ್ರಿ ಅತಿಶಿ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಇಲ್ಲಿಯವರೆಗಿನ ಫಲಿತಾಂಶಗಳನ್ನು ನೋಡಿದರೆ, ಬಿಜೆಪಿ 47 ಸ್ಥಾನಗಳಲ್ಲಿ ಮುನ್ನಡೆ

ದೆಹಲಿ ವಿಧಾನಸಭಾ ಚುನಾವಣೆ| ಮೂಲೆ ಸೇರಿದ ಪೊರಕೆ; ಹ್ಯಾಟ್ರಿಕ್ ಸೊನ್ನೆ ಸುತ್ತಿದ ಕೈ| ರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಕಹಳೆ Read More »

ದೆಹಲಿ ವಿಧಾನಸಭಾ ಚುನಾವಣೆ| ಮಾಜಿ ಸಿಎಂ ಕೇಜ್ರಿವಾಲ್ ಗೆ ಹೀನಾಯ ಸೋಲು

ಸಮಗ್ರ ನ್ಯೂಸ್: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಸೋಲಾಗಿದೆ ಎಂದು ತಿಳಿದುಬಂದಿದೆ. ಎಎಪಿ ನಾಯಕ ಮಾಜಿ ಸಿಎಂ ಕೇಜ್ರಿವಾಲ್ ಗೆ ಸೋಲಾಗಿದ್ದು, ದೆಹಲಿಯಲ್ಲಿ ಭಾರಿ ಮುಖಭಂಗ ಆಗಿದೆ. ದೇಶದ ಗಮನ ಸೆಳೆದ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಆಪ್ ಮೂರನೇ ಬಾರಿ ಅಧಿಕಾರಿಗಳ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿತ್ತು ಆದರೆ ಚುನಾವಣಾ ಫಲಿತಾಂಶದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ.

ದೆಹಲಿ ವಿಧಾನಸಭಾ ಚುನಾವಣೆ| ಮಾಜಿ ಸಿಎಂ ಕೇಜ್ರಿವಾಲ್ ಗೆ ಹೀನಾಯ ಸೋಲು Read More »

ಸ್ಯಾಂಡಲ್ ವುಡ್ ನಟ ಗಿರಿ ದಿನೇಶ್ ಇನ್ನಿಲ್ಲ

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ನವಗ್ರಹ’ ಸಿನಿಮಾದಲ್ಲಿ ‘ಶೆಟ್ಟಿ’ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಹೃದಯಾಘಾತದಿಂದ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿತು. ಏಕಾಏಕಿ ಕುಸಿದು ಬಿದ್ದ ಗಿರಿ ದಿನೇಶ್ ಅವರನ್ನು ಕೂಡಲೆ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಗಿರಿ ದಿನೇಶ್ ನಿಧನರಾಗಿದ್ದಾರೆ. ಗಿರಿ ದಿನೇಶ್ ಅವರು ನವಗ್ರಹ, ವಜ್ರ ಹಾಗೂ ‘ಚಮ್ಕಾಯ್ಸಿ ಚಿಂದಿ ಉಡಾಯ್ಸಿ’ ಚಿತ್ರಗಳಲ್ಲಿ

ಸ್ಯಾಂಡಲ್ ವುಡ್ ನಟ ಗಿರಿ ದಿನೇಶ್ ಇನ್ನಿಲ್ಲ Read More »

ದೆಹಲಿ ವಿಧಾನಸಭಾ ಚುನಾವಣೆ| ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಸಮಗ್ರ ನ್ಯೂಸ್: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ. ಬಿಗಿ ಭದ್ರತೆಯ ನಡುವೆ 19 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ಇನ್ನು ಕಲ್ಕಾಜಿ ಕ್ಷೇತ್ರದ ಎಎಪಿ ಅಭ್ಯರ್ಥಿಯೂ ಆಗಿರುವ ದೆಹಲಿ ಸಿಎಂ ಅತಿಶಿಯವರು ಮಹಾರಾಣಿ ಬಾಗ್‌ನಲ್ಲಿರುವ ಮೀರಾಬಾಯಿ ಡಿಎಸ್‌ಇಯು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ. ಮತ ಎಣಿಕೆ ಕೇಂದ್ರದಲ್ಲೇ ತೀವ್ರ ಆತಂಕಕ್ಕೆ ಒಳಗಾಗಿರುವ ಅತಿಶಿಯವರು ಪದೇ ಪದೇ ಅಧಿಕಾರಿಗಳಿಂದ ಮಾಹಿತಿ

ದೆಹಲಿ ವಿಧಾನಸಭಾ ಚುನಾವಣೆ| ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ Read More »

ಅಪ್ರಾಪ್ತೆ ಮೇಲೆ ದೌರ್ಜನ್ಯ ಆರೋಪ| ಮಾಜಿ ಸಿಎಂ ಬಿಎಸ್ ವೈಗೆ ನಿರಾಳ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠವು ತೀರ್ಪು ಪ್ರಕಟಿಸಿದ್ದು, ನ್ಯಾ.ಎಂ ನಾಗಪ್ರಸನ್ನ ಅವರು ಬಿ ಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದರು. ವಿಚಾರಣೆ ಆರಂಭವಾದ ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ

ಅಪ್ರಾಪ್ತೆ ಮೇಲೆ ದೌರ್ಜನ್ಯ ಆರೋಪ| ಮಾಜಿ ಸಿಎಂ ಬಿಎಸ್ ವೈಗೆ ನಿರಾಳ Read More »

ನಟ ಸೋನುಸೂದ್ ಗೆ ಬಂಧನ ಭೀತಿ

ಸಮಗ್ರ ನ್ಯೂಸ್: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪಂಜಾಬ್ನ ಲುಧಿಯಾನದ ಕ್ರಿಮಿನಲ್ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ. 10 ಲಕ್ಷ ರೂ.ಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹೇಳಲು ಕರೆಸಲಾಗಿದ್ದ ಸೂದ್ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಲುಧಿಯಾನದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ರಮಣ್ಪ್ರೀತ್ ಕೌರ್ ಈ ವಾರಂಟ್ ಹೊರಡಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಸೋನು ಸೂದ್ ಅವರಿಗೆ ಸಮನ್ಸ್ (ಗಳು) ಅಥವಾ ವಾರಂಟ್ (ಗಳು) ನೀಡಲಾಗಿದೆ, ಆದರೆ ಅವರು ಹಾಜರಾಗಲು ವಿಫಲರಾಗಿದ್ದಾರೆ

ನಟ ಸೋನುಸೂದ್ ಗೆ ಬಂಧನ ಭೀತಿ Read More »