Editor

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ|ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ವಿರುದ್ದ ಕಾಂಗ್ರೆಸ್ ದೂರು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ಸುಳ್ಳು, ಪ್ರಚೋದನಾಕಾರಿ ಪೋಸ್ಟನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಹಿನ್ನಲೆಯಲ್ಲಿ ಕೊಡಗು ಕಾಂಗ್ರೆಸ್ ನಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಕೊಡಗು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರು ದಾಖಲೆಗಳೊಂದಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಬಿಜೆಪಿ ರಾಜ್ಯ ಸಮಿತಿಯ ಪಧಾಧಿಕಾರಿಯಮುನಾ ಚಂಗಪ್ಪ ಅಲಿಯಾಸ್ ಯಮುನಾ ಅಕ್ಕಮ್ಮ ಪತಿ ಚಂಗಪ್ಪ ಎಂ.ಎಸ್ ರವರು ಮಾ.17 ರಂದು ತಮ್ಮ

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ|ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ವಿರುದ್ದ ಕಾಂಗ್ರೆಸ್ ದೂರು Read More »

ಸೀನಿಯರ್ ಮ್ಯಾನೇಜರ್​​ ಹುದ್ದೆಗೆ ಆಹ್ವಾನ, ಇಲ್ಲಿದೆ ಮಾಹಿತಿ

ಸಮಗ್ರ ಉದ್ಯೋಗ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ನೋಡಿ ಅವಕಾಶ. ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ಮ್ಯಾನೇಜರ್​​ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ:ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ,

ಸೀನಿಯರ್ ಮ್ಯಾನೇಜರ್​​ ಹುದ್ದೆಗೆ ಆಹ್ವಾನ, ಇಲ್ಲಿದೆ ಮಾಹಿತಿ Read More »

ಪರಿಸರ ಸ್ನೇಹಿ ಚುನಾವಣೆ/ ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ ಮುಂದಾದ ಆಯೋಗ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯನ್ನು ಪರಿಸರ ಸ್ನೇಹಿಯಾಗಿಸಲು ಚುನಾವಣಾ ಆಯೋಗ ಟೊಂಕಕಟ್ಟಿದ್ದು, ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ, ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಒತ್ತು ನೀಡುವ ಜೊತೆಗೆ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗೆ ಕಡಿವಾಣ, ಕಾರ್ ಪೂಲಿಂಗ್‍ಗೆ ಉತ್ತೇಜನ ಸೇರಿ ಹಲವು ಕ್ರಮಗಳಿಗೆ ಮುಂದಾಗಿದೆ. ಇದರ ಜೊತೆಗೆ, ಪರಿಸರ ಸ್ನೇಹಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳೂ ಸಾಥ್ ನೀಡಬೇಕು ಎಂದೂ ಅವರು ಕೋರಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಪ್ರತಿ ಕಾರ್ಯಕ್ರಮಗಳೂ ಆದಷ್ಟು ಪರಿಸರ ಸ್ನೇಹಿಯಾಗಿರಬೇಕು ಎಂಬುದು ಆಯೋಗದ

ಪರಿಸರ ಸ್ನೇಹಿ ಚುನಾವಣೆ/ ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ ಮುಂದಾದ ಆಯೋಗ Read More »

ಯಂಗ್ ಪ್ರೊಫೆಶನಲ್ ಜಾಬ್ ಗೆ ಹೈರಿಂಗ್! ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಣ್ಣಿನ ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಯಂಗ್ ಪ್ರೊಫೆಶನಲ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 18, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಣ್ಣಿನ ಸಮೀಕ್ಷೆ ಮತ್ತು ಭೂ

ಯಂಗ್ ಪ್ರೊಫೆಶನಲ್ ಜಾಬ್ ಗೆ ಹೈರಿಂಗ್! ಈಗಲೇ ಅರ್ಜಿ ಸಲ್ಲಿಸಿ Read More »

ಅಸ್ರಾ ಆವಾಸ್ ಪ್ರಕರಣ/ ಮಾಜಿ ಸಚಿವ ಅಜಂ ಖಾನ್‍ಗೆ ಏಳು ವರ್ಷ ಜೈಲು ಶಿಕ್ಷೆ

ಸಮಗ್ರ ನ್ಯೂಸ್: ದೂಂಗರಪುರ ಅಸ್ರಾ ಆವಾಸ್ (ಆಶ್ರಯ) ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಸಚಿವ ಅಜಂ ಖಾನ್ ಗೆ ಏಳು ವರ್ಷ ಮತ್ತು ಇತರರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಧ್ಯಪ್ರದೇಶದ ಶಾಸಕರ ನ್ಯಾಯಾಲಯ ಐಪಿಸಿ ಸೆಕ್ಷನ್ 427, 504, 506, 447 ಮತ್ತು 120 ಬಿ ಅಡಿಯಲ್ಲಿ ತೀರ್ಪು ನೀಡಿದೆ. ಸಮಾಜವಾದಿ ಪಕ್ಷದ ಆಡಳಿತದ ಅವಧಿಯಲ್ಲಿ, ದೂಂಗರಪುರದಲ್ಲಿ ಅಸ್ರಾ ಆವಾಸ್ (ಆಶ್ರಯ) ಗಳನ್ನು ನಿರ್ಮಿಸಲಾಯಿತು, ಅಲ್ಲಿ ಕೆಲವು ಜನರು ಈಗಾಗಲೇ ಮನೆಗಳನ್ನು ಹೊಂದಿದ್ದರು. 2016

ಅಸ್ರಾ ಆವಾಸ್ ಪ್ರಕರಣ/ ಮಾಜಿ ಸಚಿವ ಅಜಂ ಖಾನ್‍ಗೆ ಏಳು ವರ್ಷ ಜೈಲು ಶಿಕ್ಷೆ Read More »

ಚುನಾವಣಾ ಬಾಂಡ್ ಪೂರ್ಣ ಮಾಹಿತಿ/ ಮಾ. 21ರ ಒಳಗೆ ಸಲ್ಲಿಸುವಂತೆ ಸುಪ್ರೀಂ ಸೂಚನೆ

ಸಮಗ್ರ ನ್ಯೂಸ್: ಚುನಾವಣಾ ಬಾಂಡ್‍ಗಳ ಬಗ್ಗೆ ಪೂರ್ಣ ಪ್ರಮಾಣ ಮಾಹಿತಿ ನೀಡದ ಎಸ್‍ಬಿಐ ಅನ್ನು ಸುಪ್ರೀಂಕೋರ್ಟ್ ಇಂದು ಮತ್ತೆ ತರಾಟೆಗೆ ತೆಗೆದುಕೊಂಡಿದ್ದು, ಯುನಿಕ್ ಅಲ್ಫಾನ್ಯೂಮರಿಕ್ ಸಂಖ್ಯೆ ಮತ್ತು ರಿಡೀಮ್ ಮಾಡಿದ ಬಾಂಡ್ ಗಳ ಸೀರಿಯಲ್ ನಂಬರ್ ಸೇರಿದಂತೆ ಚುನಾವಣಾ ಬಾಂಡ್‍ಗಳ ಅಗತ್ಯ ಎಲ್ಲಾ ವಿವರಗಳನ್ನು ಮಾ. 21ರ ಸಂಜೆ 5 ಗಂಟೆಯೊಳಗೆ ಬಹಿರಂಗಪಡಿಸುವಂತೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿ, ಎಸ್‍ಬಿಐನಿಂದ ಮಾಹಿತಿ ಪಡೆದ ತಕ್ಷಣ ಚುನಾವಣಾ ಆಯೋಗವು

ಚುನಾವಣಾ ಬಾಂಡ್ ಪೂರ್ಣ ಮಾಹಿತಿ/ ಮಾ. 21ರ ಒಳಗೆ ಸಲ್ಲಿಸುವಂತೆ ಸುಪ್ರೀಂ ಸೂಚನೆ Read More »

ಕಮಲ್‍ನಾಥ್‍ಗೆ ಶಾಕ್ ಕೊಟ್ಟ ಬೆಂಬಲಿಗರು/ ಆಪ್ತ ಸಹಾಯಕ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಕಮಲನಾಥ್ ಅವರ ಆಪ್ತ ಸಹಾಯಕ ಸೇರಿದಂತೆ ಹಲವು ಕಾರ್ಯಕರ್ತರು ಇಂದು ಭೋಪಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಕಾಂಗ್ರೆಸ್ ವಕ್ತಾರ ಸೈಯದ್ ಜಾಫರ್ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿ.ಡಿ. ಶರ್ಮಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ. ಛಿಂದ್ವಾರಾ ಮೂಲದ ಜಾಫರ್ ಅವರನ್ನು ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ಆಪ್ತ ಸಹಾಯಕ ಎಂದೇ ಪರಿಗಣಿಸಲಾಗಿತ್ತು.

ಕಮಲ್‍ನಾಥ್‍ಗೆ ಶಾಕ್ ಕೊಟ್ಟ ಬೆಂಬಲಿಗರು/ ಆಪ್ತ ಸಹಾಯಕ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆ Read More »

ಶಾಸಕರನ್ನು ಅನರ್ಹತೆ/ ಸ್ಪೀಕರ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಿರಾಕರಣೆ

ಸಮಗ್ರ ನ್ಯೂಸ್: ಹಿಮಾಚಲ ಪ್ರದೇಶದ ವಿಧಾನ ಸಭಾಧ್ಯಕ್ಷರು, 6 ಮಂದಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‍ನನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ನಿರಾಕರಿಸಿದೆ. ಈ ಕುರಿತಂತೆ 4 ವಾರಗಳಲ್ಲಿ ಪ್ರತಿಕ್ರಿಯೆ ಕೇಳಿ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇದರ ಜೊತೆಗೆ ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಬಾಕಿ ಇರುವಾಗ, ಅನರ್ಹ ಶಾಸಕರು ವಿಧಾನಸಭೆಯ ಕಾರ್ಯ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಶಾಸಕರನ್ನು ಅನರ್ಹತೆ/ ಸ್ಪೀಕರ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಿರಾಕರಣೆ Read More »

ಶಿವಮೊಗ್ಗ: ಜನರ ಮಧ್ಯದಿಂದ ವೇದಿಕೆಗೆ ಬಂದ ಮೋದಿ

ಸಮಗ್ರ ನ್ಯೂಸ್: ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಇಂದು ಜನರ ಗುಂಪಿನ ಮಧ್ಯದಿಂದ ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ಕೈ ಬೀಸುತ್ತಾ ಮುಖ್ಯವೇದಿಕೆಗೆ ಬಂದು ಹೊಸ ಸಂಪ್ರದಾಯಕ್ಲೆ ನಾಂದಿ ಹಾಡಿದರು. ನರೇಂದ್ರ ಮೋದಿ ಅಕ್ಕಪಕ್ಕದಲ್ಲಿ ನಿಂತು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ ಜನರಿಗೆ ನಮಸ್ಕರಿಸಿದರು. ಈ ವೇಳೆ ಬಿಜೆಪಿ ಹಾಗೂ ಪ್ರಧಾನಿ ಮೋದಿ ಗುಣಗಾನ ಮಾಡುವ ಡಿ.ಜೆ ಸಂಗೀತದ ಅಬ್ಬರ ಸಭೆಯಲ್ಲಿ ಅನುರಣಿಸಿತು. ಪ್ರಧಾನ ವೇದಿಕೆಯ ಹಿಂಬದಿಯ

ಶಿವಮೊಗ್ಗ: ಜನರ ಮಧ್ಯದಿಂದ ವೇದಿಕೆಗೆ ಬಂದ ಮೋದಿ Read More »

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಅಯೋಮಯ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ವಿಭಾಗೀಯ ಪೀಠ

ಸಮಗ್ರ ನ್ಯೂಸ್: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿತ್ತು. ಈ ಹಿಂದೆ ಹೈಕೋರ್ಟ್‌ ಏಕ ಸದಸ್ಯ ಪೀಠ ಈ ತರಗತಿಗಳ ಬೋರ್ಡ್‌ ಪರೀಕ್ಷೆಯನ್ನು ರದ್ದು ಪಡಿಸಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಅದಾದ ಬಳಿಕ ವಿಚಾರಣೆ

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಅಯೋಮಯ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ವಿಭಾಗೀಯ ಪೀಠ Read More »