ದ.ಕ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆಯಿಂದ ಮಹತ್ವದ ಕ್ರಮ| ಭರತ್ ಕುಮ್ಡೇಲ್, ಮಹೇಶ್ ತಿಮರೋಡಿ ಸೇರಿ 36 ಮಂದಿಗೆ ಗಡಿಪಾರು ನೊಟೀಸ್
ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ, ಜಿಲ್ಲಾ ಪೊಲೀಸ್ ಇಲಾಖೆಯು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಆರೋಪ ಹೊತ್ತಿರುವ ಒಟ್ಟು 36 ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. ಈ ಕುರಿತು ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಗಡಿಪಾರಿಗೆ ಪ್ರಸ್ತಾಪಿಸಲಾದ ವ್ಯಕ್ತಿಗಳ ಹೆಸರು, ವಯಸ್ಸು ಹಾಗೂ […]










