Editor

43,000 ಸಂಬಳ ತಿ0ಗಳಿಗೆ! ಈಗಲೇ ಅಪ್ಲೈ ಮಾಡಿ ಈ ಜಾಬ್ ಗೆ

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ (ನ್ಯೂರೋ ಇಮೇಜಿಂಗ್​) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಕೂಡಲೇ ತಮ್ಮ ರೆಸ್ಯೂಮ್​ನ್ನು ಈ ಕೆಳಗೆ ನೀಡಲಾಗಿರುವ ಇ-ಮೇಲ್ ವಿಳಾಸಕ್ಕೆ ಕಳುಹಿಸಿ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ

43,000 ಸಂಬಳ ತಿ0ಗಳಿಗೆ! ಈಗಲೇ ಅಪ್ಲೈ ಮಾಡಿ ಈ ಜಾಬ್ ಗೆ Read More »

ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ – ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಲರ್ ಕಾಟನ್‌ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲರ್ ಕಾಟನ್‌ ಕ್ಯಾಂಡಿಯಲ್ಲಿ ಹಲವು ವಿಷಕಾರಿ ಅಂಶಗಳು ಒಳಗೊಂಡಿರುವುದರಿಂದ ಅವುಗಳನ್ನು ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಲರ್‌ ಬಳಸದೇ ಇರುವ ಕಾಟನ್‌ ಕ್ಯಾಂಡಿಗೆ ಅವಕಾಶ ನೀಡಲಾಗಿದ್ದು, ಗೋಬಿ ಮಂಚೂರಿಯನ್‌ ತಯಾರಿಕೆಯಲ್ಲಿಯೂ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ. ಯಾವುದೇ ರೀತಿಯ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಆಹಾರ ಸುರಕ್ಷತೆ

ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ – ಸಚಿವ ದಿನೇಶ್ ಗುಂಡೂರಾವ್ Read More »

ಬಿಡದಿಯ ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆ

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬುವವರು ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಬಲರಾಮ್ ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಿನ್ನೆಯಷ್ಟೇ ಮಹಾ ಶಿವರಾತ್ರಿಯ ಅಮಾವಾಸ್ಯೆ ಮುಗಿದಿದೆ. ರಾಮನಗರದ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ಬಲರಾಮ್ ಎಂಬ ವ್ಯಕ್ತಿ ರಾತ್ರಿ ವೇಳೆ ಸ್ಮಶಾನದಲ್ಲಿ ಪೂಜೆ ಮಾಡಿದ್ದು ಇದನ್ನು ಗಮನಿಸಿದ ಗ್ರಾಮಸ್ಥರು

ಬಿಡದಿಯ ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆ Read More »

ಆಸ್ಕರ್ ವೇದಿಕೆಗೆ ಬೆತ್ತಲಾಗಿ ಬಂದ ರೆಸ್ಲಿಂಗ್ ಸ್ಟಾರ್ ಜಾನ್ ಸೆನಾ!! ಒಂದು ಲಕೋಟೆಯಿಂದ ‘ಮರ್ಯಾದೆ’ ಮುಚ್ಚಿಕೊಂಡ ನಿರೂಪಕ!

ಸಮಗ್ರ ನ್ಯೂಸ್: 96ನೇ ಸಾಲಿನ ಅಕಾಡೆಮಿ ಪ್ರಶಸ್ತಿ ಮಾರ್ಚ್ 10ರಂದು ನಡೆದಿದೆ. 2024ನೇ ಸಾಲಿನ ಆಸ್ಕರ್ ಪ್ರಶಸ್ತಿ ಮಾರ್ಚ್ 10ರಂದು ಲಾಸ್ ಎಂಜಲೀಸ್‌ನಲ್ಲಿರುವ (Oscars 2024) ಹಾಲಿವುಡ್‌ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆದಿದ್ದು, ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಮಾರ್ಚ್ 11ರಂದು ಭಾರತದಲ್ಲಿ ಪ್ರಸಾರ ಕಂಡಿದೆ. ಜಾನ್ ಸೆನಾ ಅವರು ಅತ್ಯುತ್ತಮ ವಸ್ತ್ರ ವಿನ್ಯಾಸವನ್ನು ಪ್ರಸ್ತುತಪಡಿಸಲು ವೇದಿಕೆಯ ಮೇಲೆ ಬೆತ್ತಲಾಗಿ ಬಂದರು. ಇವರ ಅವತಾರ ಕಂಡು ನೆರೆದಿದ್ದ ಪ್ರೇಕ್ಷಕರು ಒಂದು ಕ್ಷಣ ಮೂಕಸ್ಮಿತರಾಗಿದ್ದಾರೆ. ಅತ್ಯುತ್ತಮ ವಸ್ತ್ರ ವಿನ್ಯಾಸಕ್ಕಾಗಿ ಪ್ರಶಸ್ತಿಯನ್ನು ನೀಡಲು, ಜಾನ್ ಸೆನಾ

ಆಸ್ಕರ್ ವೇದಿಕೆಗೆ ಬೆತ್ತಲಾಗಿ ಬಂದ ರೆಸ್ಲಿಂಗ್ ಸ್ಟಾರ್ ಜಾನ್ ಸೆನಾ!! ಒಂದು ಲಕೋಟೆಯಿಂದ ‘ಮರ್ಯಾದೆ’ ಮುಚ್ಚಿಕೊಂಡ ನಿರೂಪಕ! Read More »

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ : ಬೆಂಬಲಿಗರಿಂದ ಆಕ್ರೋಶ

ಸಮಗ್ರ ನ್ಯೂಸ್ : ಲೋಕಸಭೆ ಚುನಾವಣೆಯು ಸಮೀಪಿಸುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ಗಾಗಿ ದೊಡ್ಡ ಸಮರವೇ ನಡೆಯುತ್ತಿದೆ. ಇದೀಗ ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿಯೂ ಮೂಡಿದೆ. ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿಯ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎಂದು ಬಿಜೆಪಿ ಪಾಳಯದಲ್ಲಿಯೇ ಅಪಸ್ವರ ಕೇಳಿ ಬರುತ್ತಿದೆ. ಆದರೆ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿಸಲು ಪ್ರಯತ್ನಿಸುತ್ತಿರುವವರು ಯಾರು ಎಂಬ

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ : ಬೆಂಬಲಿಗರಿಂದ ಆಕ್ರೋಶ Read More »

ಕೋಟದ ವ್ಯಕ್ತಿ ಕುವೈಟ್‍ನಲ್ಲಿ ಮೃತ್ಯು

ಸಮಗ್ರ ನ್ಯೂಸ್ : ಕೋಟದ ಕೋಡಿ ಕನ್ಯಾಣ ಗ್ರಾಮದ ದಿ| ಜಿ.ಕೆ. ಹಸನಬ್ಬ ಅವರ ಪುತ್ರ ಜಲಾಲ್ (55) ಮಾ. 9ರಂದು ಸಂಜೆ ಕುವೈಟ್‍ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲಿದ್ದು, ಮಗಳ ಮದುವೆಗಾಗಿ ಇನ್ನು ಹತ್ತು ದಿನದಲ್ಲಿ ಊರಿಗೆ ಬರುವ ತಯಾರಿಯಲ್ಲಿದ್ದರು. ಆದರೆ ಈ ನಡುವೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಷಯ ತಿಳಿದ ಮನೆಯವರ ರೋಧನ ಮುಗಿಲು ಮುಟ್ಟಿದೆ. ಸೋಮವಾರ ಮೃತದೇಹ ತಾಯ್ನಾಡಿಗೆ ತಲುಪಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಕೋಟದ ವ್ಯಕ್ತಿ ಕುವೈಟ್‍ನಲ್ಲಿ ಮೃತ್ಯು Read More »

ಧರ್ಮಸ್ಥಳ: ನೇತ್ರಾವತಿ ಸೇತುವೆ ಬಳಿ ಅಪರಿಚಿತ ಶವ ಪತ್ತೆ

ಸಮಗ್ರ ನ್ಯೂಸ್: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವವೊಂದು ಪತ್ತೆಯಾಗಿದೆ. ಧರ್ಮಸ್ಥಳ ಠಾಣಾಧಿಕಾರಿ ಅನಿಲ್‌ ಕುಮಾರ್‌ ಕರೆ ಮಾಡಿ ತಿಳಿಸಿದ ಕೂಡಲೇ ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ಸ್ಪಂದಿಸಿ ಶವವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಠಾಣೆಯ ಆರಕ್ಷಕರಾದ ಸಾಮ್ಯುವೆಲ್‌ ಹಾಗೂ ಧರ್ಮಪಾಲ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ: ನೇತ್ರಾವತಿ ಸೇತುವೆ ಬಳಿ ಅಪರಿಚಿತ ಶವ ಪತ್ತೆ Read More »

ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ| ಸಂಸದ ಪ್ರತಾಪ್ ಸಿಂಹಗೆ ಕೋಕ್| ಅಭ್ಯರ್ಥಿ ರೇಸ್ ನಲ್ಲಿ ಒಡೆಯರ್!?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿದ್ದಂತೆ ಕರ್ನಾಟಕದ ಹಾಲಿ ಬಿಜೆಪಿ ಸಂಸದರು ಟಿಕೆಟ್ ಗಾಗಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಮುಂದುವರೆಸುತ್ತಿದ್ದಾರೆ. ಆದರೆ, ಈ ಬಾರಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದರಾದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಸಿಗುವುದು ಅನುಮಾನವಾಗಿದೆ. ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಚಾಲ್ತಿಯಲ್ಲಿರುವುದರಿಂದಲೇ ಈ ಬಾರಿ, ಮೈಸೂರು – ಕೊಡಗು ಸಂಸದ ಪ್ರತಾಪ್ ಸಿಂಹರಿಗೆ ಟಿಕೆಟ್ ನಿರಾಕರಿಸಲಾಗುತ್ತದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತವರು ಜಿಲ್ಲೆ ಪ್ರತಿಷ್ಠೆ ಕ್ಷೇತ್ರವಾಗಿದೆ.

ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ| ಸಂಸದ ಪ್ರತಾಪ್ ಸಿಂಹಗೆ ಕೋಕ್| ಅಭ್ಯರ್ಥಿ ರೇಸ್ ನಲ್ಲಿ ಒಡೆಯರ್!? Read More »

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ – ನಾಲ್ವರು ಗಂಭೀರ

ಸಮಗ್ರ ನ್ಯೂಸ್ : ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ದಿದ್ದ ವೇಳೆ ಎದುರಿಗೆ

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ – ನಾಲ್ವರು ಗಂಭೀರ Read More »

ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳ ಮೇಲೆ ಭಾರೀ ರಿಯಾಯಿತಿ! ಬೇಗ ಶೋ ರೂಮ್ ಗೆ ಹೋಗಿ

ನೀವು ಎಲೆಕ್ಟ್ರಿಕ್ ಕಾರು ಖರೀದಿಸಲು ಯೋಚಿಸುತ್ತಿದ್ದರೆ, ಇದೀಗ ಸರಿಯಾದ ಸಮಯ. ಟಾಟಾ ಮೋಟಾರ್ಸ್ ರಿಯಾಯಿತಿ ಕೊಡುಗೆಗಳನ್ನು ನೋಡೋಣ. ಮಾರುತಿ ಸುಜುಕಿ ಕಾರುಗಳಿಗೆ ಹೋಲಿಸಿದರೆ ಟಾಟಾ ಮೋಟಾರ್ಸ್ ಕಾರುಗಳು ಪ್ರಯಾಣಿಕರ ಸುರಕ್ಷತೆಯ ವಿಷಯದಲ್ಲಿ ಮುಂದಿವೆ. ಆದ್ದರಿಂದ, ಜನರು ಈ ಕಂಪನಿಯ ಕೊಡುಗೆಗಳನ್ನು ಆಸಕ್ತಿಯಿಂದ ನೋಡುತ್ತಿದ್ದಾರೆ. ಇತ್ತೀಚೆಗೆ ಈ ಕಂಪನಿಯು ಎಲೆಕ್ಟ್ರಿಕ್ ವಾಹನಗಳ ಮೇಲೆ ಕೆಲವು ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದೆ. 2023 ರ ಮಾದರಿಗಳ ಜೊತೆಗೆ, ನೆಕ್ಸಾನ್ ಮತ್ತು ಟಿಯಾಗೊದ 2024 EV ಮಾದರಿಗಳಲ್ಲಿಯೂ ಸಹ ಕೊಡುಗೆಗಳಿವೆ. ಟಾಟಾ ನೆಕ್ಸಾನ್

ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳ ಮೇಲೆ ಭಾರೀ ರಿಯಾಯಿತಿ! ಬೇಗ ಶೋ ರೂಮ್ ಗೆ ಹೋಗಿ Read More »