Editor

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್‌ನಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮೂಲಿಕ್ಕಾರ್ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್ (19 ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಸಿಲಿಕಾನ್ ಸಿಟಿಯಲ್ಲಿ ನೀರಿಗಾಗಿ ಹಾಹಾಕಾರ: ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಬಿಜೆಪಿ ಪ್ರತಿಭಟನೆ

ಸಮಗ್ರ ನ್ಯೂಸ್: ಬೆಂಗಳೂರಿನ ನಗರದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜನರಿಗೆ ಕುಡಿಯಲು ನೀರಿಗೆ ಪರದಾಡುವ ಪರಿಸ್ಥಿತಿ ಈಗ ಬಂದೊದಗಿದೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಟ್ಯಾಂಕರ್ ಮೂಲಕ ನೀರು ಹಾಕಲಾಗುತ್ತಿದೆ. ನಗರದಲ್ಲಿ ನೀರಿನ ಸಮಸ್ಯೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಧರಣಿ ಮಾಡಲಿದೆ. ಇನ್ನೂ ಈ ವಿಚಾರವಾಗಿ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್. ಅಶೋಕ್​ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಲ್ಲಿ ನೀರಿನ ಸಮಸ್ಯೆ

ಸಿಲಿಕಾನ್ ಸಿಟಿಯಲ್ಲಿ ನೀರಿಗಾಗಿ ಹಾಹಾಕಾರ: ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಬಿಜೆಪಿ ಪ್ರತಿಭಟನೆ Read More »

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ- ಪಾದಾಚಾರಿ ಮಹಿಳೆ ಸಾವು

ಸಮಗ್ರ ನ್ಯೂಸ್ : ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಹಾಲಿನ ಡೈರಿಗೆ ಹೋಗುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಾಣಿಯೂರು ಸಮೀಪದ ಬರೆಪ್ಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಬರೆಪ್ಪಾಡಿ ನಿವಾಸಿ ನಾರಾಯಣ ಭಟ್ ಎಂಬವರ ಪತ್ನಿ ವೈಶಾಲಿ (45) ಎಂದು ಗುರುತಿಸಲಾಗಿದೆ. ತನ್ನ ಮನೆಯಿಂದ ಹಾಲಿನ ಡೈರಿಗೆಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ಗಳೆರಡು ಅಪಘಾತವಾಗಿದೆ. ಒಂದು ಬೈಕ್ ರಸ್ತೆಯಂಚಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಪಾದಾಚಾರಿ ಮಹಿಳೆ ಮೃತಪಟ್ಟಿರುವುದಾಗಿ ಮಾಹಿತಿ ತಿಳಿದು

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ- ಪಾದಾಚಾರಿ ಮಹಿಳೆ ಸಾವು Read More »

ಹೆಬ್ರಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಜರುವತ್ತು ಎಂಬಲ್ಲಿ ಶುಕ್ರವಾರ ನಡೆದಿದೆ. ಹೆಬ್ರಿ ತಾಲೂಕಿನ ಜರುವತ್ತು ನಿವಾಸಿ ಶಕುಂತಳಾ ಪೂಜಾರಿ(53) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಶಕುಂತಳಾ ಎಂಬವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದ್ದು ಈ ಹಿನ್ನಲೆಯಲ್ಲಿ ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಪಡೆಯುತ್ತಿದ್ದರೂ ಮಾನಸಿಕ ಖಿನ್ನತೆ ಕಡಿಮೆಯಾಗದ ಹಿನ್ನಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರ ಮನೆಯ ಸಮೀಪದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹೆಬ್ರಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಬಂಟ್ವಾಳ: ಕಾರು ಢಿಕ್ಕಿ- ಗಲ್ಫ್ ಉದ್ಯೋಗಿ ಮೃತ್ಯು

ಸಮಗ್ರ ನ್ಯೂಸ್ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬAಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಮೃತಪಟ್ಟವರು. ಗಲ್ಫ್ ರಾಷ್ಟçದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು. ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ ದಾರಿ ಮಧ್ಯೆ ಮುಡಿಪು ಜಂಕ್ಷನ್‌ನಲ್ಲಿ ಇಳಿದು, ಎಟಿಎಂ ಹಣ

ಬಂಟ್ವಾಳ: ಕಾರು ಢಿಕ್ಕಿ- ಗಲ್ಫ್ ಉದ್ಯೋಗಿ ಮೃತ್ಯು Read More »

ಬ್ಯಾಂಕ್ ನಲ್ಲಿ ಕೆಲಸ ಮಾಡುವವರಿಗೆ ಗುಡ್ ನ್ಯೂಸ್, ಹೈಕ್ ಜೊತೆಗೆ ಡಬಲ್ ವೀಕ್ ಆಫ್

ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಶುಕ್ರವಾರದಂದು ಶೇ.17 ರಷ್ಟು ವಾರ್ಷಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದು, ಇದರಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ವಾರ್ಷಿಕ ಸುಮಾರು 8,284 ಕೋಟಿ ರೂ ಹೆಚ್ಚುವರಿ ಹೊರಹೋಗುವಿಕೆಗೆ ಕಾರಣವಾಗಲಿದೆ. ನವೆಂಬರ್ 2022 ರಿಂದ ಜಾರಿಗೆ ಬರಲಿರುವ ವೇತನ ಹೆಚ್ಚಳದಿಂದ ಸುಮಾರು 8 ಲಕ್ಷ ಬ್ಯಾಂಕ್ ಉದ್ಯೋಗಿಗಳು ಪ್ರಯೋಜನ ಪಡೆಯಲಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಎಲ್ಲಾ ಬ್ಯಾಂಕ್‌ಗಳಿಗೆ ವೇತನ ಪರಿಷ್ಕರಣೆಗಾಗಿ ಒಟ್ಟು 12,449 ಕೋಟಿ ರೂ ಬಿಡುಗಡೆ

ಬ್ಯಾಂಕ್ ನಲ್ಲಿ ಕೆಲಸ ಮಾಡುವವರಿಗೆ ಗುಡ್ ನ್ಯೂಸ್, ಹೈಕ್ ಜೊತೆಗೆ ಡಬಲ್ ವೀಕ್ ಆಫ್ Read More »

ಕೊನೇ ಕ್ಷಣದ ಬದಲಾವಣೆ ನಡೆಯದಿದ್ದರೆ ನಳಿನ್ ಕುಮಾರ್ ಕಟೀಲ್‌ಗೆ ಎಂಪಿ ಟಿಕೆಟ್ ಫಿಕ್ಸ್!

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್‌ಗೆ ಮತ್ತೆ ಟಿಕೆಟ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಕೋರ್ ಕಮಿಟಿ ಸಭೆಯಲ್ಲಿ ನಳಿನ್‌ಗೆ ಮತ್ತೆ ಟಿಕೆಟ್ ಕೊಡಿಸುವ ಬಗ್ಗೆ ಪ್ರಸ್ತಾಪವಾಗಿದೆ ಎನ್ನಲಾಗಿದೆ. ಇಂದು ಸಂಜೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಕೊನೆ ಹಂತದ ಬದಲವಾಣೆ ನಡೆಯದೇ ಇದ್ದರೆ ನಳಿನ್‌ಗೆ ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಆದರೆ ಕೊನೆ ಹಂತದಲ್ಲಿ ನಾಯಕರು ಬದಲಾವಣೆ ಬಯಸಿದರೆ ಮಾತ್ರ ಹೊಸ ಮುಖಗಳಿಗೆ ಮಣೆ ಹಾಕುವ

ಕೊನೇ ಕ್ಷಣದ ಬದಲಾವಣೆ ನಡೆಯದಿದ್ದರೆ ನಳಿನ್ ಕುಮಾರ್ ಕಟೀಲ್‌ಗೆ ಎಂಪಿ ಟಿಕೆಟ್ ಫಿಕ್ಸ್! Read More »

ಬೆಳಗಾವಿ: ನಿಪ್ಪಾಣಿಯ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಶ್ರೀರಾಮ ಮಂದಿರವನ್ನು ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿದ್ದಾರೆ. ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಹಿಂದಿ ಭಾಷೆಯಲ್ಲಿ ಎರಡು ಪತ್ರಗಳು ಬಂದಿದ್ದು, ಮುಂದಿನ 20, 21 ತಾರೀಖಿನ ಒಳಗಡೆ ರಾಮ‌ ಮಂದಿರವನ್ನ ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ. ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ. ದುಷ್ಕರ್ಮಿಗಳ ಪತ್ರ ಸದ್ಯ ಸಂಚಲನ ಸೃಷ್ಟಿಸಿದು. ಆತಂಕ ಸೃಷ್ಟಿಯಾಗಿದೆ. 101 ವರ್ಷಗಳ ಇತಿಹಾಸ

ಬೆಳಗಾವಿ: ನಿಪ್ಪಾಣಿಯ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ Read More »

ಬಜಪೆ: ಶಾರದೋತ್ಸವ ನಡೆಸುತ್ತಿದ್ದ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆlಸಾರ್ವಜನಿಕರಿಂದ ವಿರೋಧ

ಸಮಗ್ರ ನ್ಯೂಸ್ : ಬಜಪೆ ಪೇಟೆಯಲ್ಲಿ ಐತಿಹಾಸಿಕ ಶಾರದೋತ್ಸವ ಸಹಿತ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದ ಸಾರ್ವಜನಿಕ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕರು ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ವಿರೋಧ ವ್ಯಕ್ತಪಡಿಸುತ್ತಿದ್ದು, ಇಂದಿರಾ ಕ್ಯಾಂಟೀನ್ ಅನ್ನು ಬೇರೆ ಸ್ಥಳದಲ್ಲಿ ನಿರ್ಮಿಸುವಂತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇಂದಿರಾ ಕ್ಯಾಂಟಿನ್‍ಗೆ ತಾಲ್ಲೂಕು ಪಂಚಾಯಿತಿಯ ಜಾಗ ತೋರಿಸಿದರು ಆ ಜಾಗ ಬೇಡ ಕೇಂದ್ರ ಮೈದಾನದ ಬದಿಯಲ್ಲೇ

ಬಜಪೆ: ಶಾರದೋತ್ಸವ ನಡೆಸುತ್ತಿದ್ದ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆlಸಾರ್ವಜನಿಕರಿಂದ ವಿರೋಧ Read More »

ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿ: ಸಫಾರಿ ಮತ್ತು ಜೀಪ್ ಸವಾರಿ ಮಾಡಿದ ನಮೋ

ಸಮಗ್ರ ನ್ಯೂಸ್: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಫಾರಿ ಮತ್ತು ಜೀಪ್ ಸವಾರಿ ಮಾಡಿದ್ದಾರೆ. ಇದು ಯುನೆಸ್ಕೋ ವಿಶ್ವ ಪಾರಂಪರಿಕ ತಾಣವಾಗಿದ್ದು, ಸೆಂಟ್ರಲ್ ಖೇರಾ ವಲಯದ ಮಿಹಿಮುಖ್ ವಲಯದಲ್ಲಿ ಮೊದಲು ಆನೆ ಸಫಾರಿ ಮಾಡಿ ಇದೇ ವಲಯದಲ್ಲಿ ಪ್ರಧಾನಿ ಜೀಪ್ ಸವಾರಿಯನ್ನು ಮಾಡಿದ್ದರು. ಎರಡು ದಿನದ ಅಸ್ಸಾಂ ಪ್ರವಾಸದಲ್ಲಿ ಪ್ರಧಾನಿ ಮೋದಿ ಇದ್ದು, ಉದ್ಯಾನದಲ್ಲಿ ಪ್ರಧಾನಿಗೆ ಉದ್ಯಾನದ ನಿರ್ದೇಶಕಿ, ಅರಣ್ಯ ಅಧಿಕಾರಿಗಳು ಸಾತ್ ನೀಡಿದ್ದರು.

ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿ: ಸಫಾರಿ ಮತ್ತು ಜೀಪ್ ಸವಾರಿ ಮಾಡಿದ ನಮೋ Read More »