Editor

ಕರ್ನಾಟಕದ ಮೀನುಗಾರಿಕಾ ಬೋಟ್ ವಶ|25 ಲಕ್ಷ ರೂ. ದಂಡ

ಸಮಗ್ರ ನ್ಯೂಸ್ : ಕಾಸರಗೋಡು ಜಿಲ್ಲೆಯ ಸಮುದ್ರ ಕಿನಾರೆಯಲ್ಲಿ ರಾತ್ರಿ ವೇಳೆ ಅನಧಿಕೃತವಾಗಿ ಮೀನುಗಾರಿಕೆ ನಡೆಸುತ್ತಿದ್ದ ಕರ್ನಾಟಕದ ಯಾಂತ್ರೀಕೃತ ಬೋಟನ್ನು ಕುಂಬಳೆ-ಬೇಕಲ- ಅಳಿತ್ತಲ ಕರಾವಳಿ ಪೊಲೀಸ್ ಠಾಣೆಗಳ ಪೊಲೀಸರು ಮತ್ತು ಮರೈನ್ ಎನ್‌ಫೋರ್ಸ್ಮೆಂಟ್ ವಿಭಾಗ ಸಂಯುಕ್ತವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ವಶಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಬೋಟ್‌ಗೆ 25 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಕರ್ನಾಟಕದ ಮೀನುಗಾರಿಕಾ ಬೋಟ್ ವಶ|25 ಲಕ್ಷ ರೂ. ದಂಡ Read More »

ಕಟಪಾಡಿ: ಚಾಲಕನ ನಿರ್ಲಕ್ಷ್ಯದಿಂದ ಮೋರಿಗೆ ಬಿದ್ದ ಕಾರು

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮೋರಿಗೆ ಬಿದ್ದು, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಮಾ.9ರ ಶನಿವಾರ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಹೆದ್ದಾರಿಯ ಪಶ್ಚಿಮ ಪಾಶ್ರ್ವದ ಹೆದ್ದಾರಿಗೆ ಧುಮುಕಿದ್ದು ಬಳಿಕ ಹೆದ್ದಾರಿ ಬದಿಯ ಮೋರಿಗೆ ಬಿದ್ದಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನ ಅಥವಾ ಜನ ಸಂಚಾರವಿಲ್ಲದ ಕಾರಣ

ಕಟಪಾಡಿ: ಚಾಲಕನ ನಿರ್ಲಕ್ಷ್ಯದಿಂದ ಮೋರಿಗೆ ಬಿದ್ದ ಕಾರು Read More »

ಕಾಂಗ್ರೆಸ್ ಹಣಕಾಸಿನ ವಿಚಾರದಲ್ಲಿ ವಿಫಲ: ಪ್ರತಾಪ್ ಸಿಂಹ ನಾಯಕ್

ಸಮಗ್ರ ನ್ಯೂಸ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ 5 ಖಾತ್ರಿ ಯೋಜನೆಗಳ ಅನುಷ್ಠಾನಕ್ಕೆ ಆದಾಯ ತರುವ ಕ್ರಮಗಳನ್ನು ಹೊರತುಪಡಿಸಿದರೆ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ನೀಡುವುದಿಲ್ಲ ಎಂದು ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಹೇಳಿದರು. ಅವರು ಮಾರ್ಚ್ 8 ರಂದು ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಯಕ್, ಕಾಂಗ್ರೆಸ್ ಹಣಕಾಸಿನ ವಿಚಾರದಲ್ಲಿ ವಿಫಲವಾಗಿದೆ ಮತ್ತು ಅಧಿಕಾರಕ್ಕೆ ಬರಲು ಐದು ಭರವಸೆಗಳನ್ನು ಘೋಷಿಸಿದೆ. ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಯಕ್ರಮಗಳಿಗೆ ಹಣ ಮಂಜೂರು ಮಾಡಿಲ್ಲ ಎಂದರು.

ಕಾಂಗ್ರೆಸ್ ಹಣಕಾಸಿನ ವಿಚಾರದಲ್ಲಿ ವಿಫಲ: ಪ್ರತಾಪ್ ಸಿಂಹ ನಾಯಕ್ Read More »

ಭಯೋತ್ಪಾದನೆ ಗೀಚುಬರಹ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ವಿರುದ್ಧ ಎನ್‍ಐಎ ಆರೋಪ ಪಟ್ಟಿ ಸಲ್ಲಿಕೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಭಯೋತ್ಪಾದಕರ ಪರ ಗೀಚುಬರಹ ಬರೆದಿದ್ದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಐಸಿಸ್ ಸಂಚು ಪ್ರಕರಣದ ಮತ್ತೊಬ್ಬ ಆರೋಪಿ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಗುರುವಾರ ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಕೇಂದ್ರೀಯ ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯು ಇತರ ಇಬ್ಬರ ವಿರುದ್ಧ ಹೆಚ್ಚುವರಿ ಆರೋಪಗಳನ್ನು ದಾಖಲಿಸಿದೆ. ತನ್ನ ಎರಡನೇ ಪೂರಕ ಚಾರ್ಜ್‍ಶೀಟ್‍ನಲ್ಲಿ, ಎನ್‍ಐಎ ಆರೋಪಿ ಅರಾಫತ್ ಅಲಿ ವಿರುದ್ಧ ಆರೋಪ ಹೊರಿಸಿದೆ ಮತ್ತು ಮೊಹಮ್ಮದ್ ಶಾರಿಕ್ ಮತ್ತು ಮಾಜ್ ಮುನೀರ್ ಅಹ್ಮದ್

ಭಯೋತ್ಪಾದನೆ ಗೀಚುಬರಹ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ವಿರುದ್ಧ ಎನ್‍ಐಎ ಆರೋಪ ಪಟ್ಟಿ ಸಲ್ಲಿಕೆ Read More »

ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ KSRTC ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್​ಆರ್​ಟಿಸಿ ಬಸ್​ನ ಫುಟ್​ ಬೋರ್ಡ್​​ನಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಡಿವೈಎಸ್​​ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಸಾವು Read More »

ಮಧ್ಯಪ್ರದೇಶದ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ

ಸಮಗ್ರ ನ್ಯೂಸ್: ಇಂದು ಮಧ್ಯ ಪ್ರದೇಶದ ಭೋಪಾಲ್​ನಲ್ಲಿರುವ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಚಿವಾಲಯ ಕಟ್ಟಡ ವಲ್ಲಭ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ವೇಗಕ್ಕೆ ದಟ್ಟವಾದ ಹೊಗೆ ಆವರಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿದ ಎಂಬ ವರದಿಯಾಗಿದೆ. ಈ ಕಟ್ಟಡದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಮಂದಿ ಸಚಿವರ ಕಚೇರಿಗಳೂ ಇಲ್ಲಿವೆ. ಕಟ್ಟಡದ ಐದನೇ ಮಹಡಿಯಲ್ಲಿ ಮುಖ್ಯಮಂತ್ರಿ ಕಚೇರಿ ಇದೆ. ಬೆಂಕಿ ಅವಘಡದ ಕಾರಣ ಹಲವು

ಮಧ್ಯಪ್ರದೇಶದ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ Read More »

ರಾಜ್ಯ ಸಭಾ ಸದಸ್ಯೆಯಾಗಿ ಸುಧಾ ಮೂರ್ತಿ/ ದೇಶದಲ್ಲೇ ಅತ್ಯಂತ ಶ್ರೀಮಂತ ಸಂಸದೆ

ಸಮಗ್ರ ನ್ಯೂಸ್: ರಾಜ್ಯ ಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಸುಧಾಮೂರ್ತಿ ದೇಶದಲ್ಲೇ ಅತ್ಯಂತ ಶ್ರೀಮಂತ ಸಂಸದೆಯಾಗಲಿದ್ದಾರೆ. ಸದ್ಯ ಅವರು 5586 ಕೋಟಿ ರು.ಮೌಲ್ಯದ ಆಸ್ತಿ ಹೊಂದಿದ್ದಾರೆ. ಇನ್ಫೋಸಿಸ್‍ನಲ್ಲಿ ಅವರಿಗೆ 3.45 ಕೋಟಿ ಷೇರು ಇದೆ. ಗುರುವಾರ ಇನ್ಫೋಸಿಸ್‍ನ ಪ್ರತಿ ಷೇರಿನ ಬೆಲೆ 1617 ರು. ಇತ್ತು. ಅದರ ಆಧಾರದಲ್ಲಿ ಸುಧಾ ಅವರ ಒಟ್ಟು ಆಸ್ತಿ 5586 ಕೋಟಿ ರು. ಆಗಲಿದೆ. ಇನ್ನು ಇನ್ಫೋಸಿಸ್‍ನಲ್ಲಿ ಸಂಸ್ಥಾಪಕ ನಾರಾಯಣ ಮೂರ್ತಿ 2691 ಕೋಟಿ ರು. ಮೌಲ್ಯದ 1.66

ರಾಜ್ಯ ಸಭಾ ಸದಸ್ಯೆಯಾಗಿ ಸುಧಾ ಮೂರ್ತಿ/ ದೇಶದಲ್ಲೇ ಅತ್ಯಂತ ಶ್ರೀಮಂತ ಸಂಸದೆ Read More »

ಉಡುಪಿ : ಕಾರಿಗೆ ಬೈಕ್ ಢಿಕ್ಕಿ ಸವಾರ ಮೃತ್ಯು

ಸಮಗ್ರ ನ್ಯೂಸ್ : ಬೈಕೊಂದು ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಬೈಕ್ ಸವಾರ. ಇವರು ಮಾ.7ರಂದು ಮಧ್ಯರಾತ್ರಿ ವೇಳೆ ಬೈಕಿನಲ್ಲಿ ನಿಟ್ಟೂರು ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಹೋಗುತ್ತಿದ್ದು, ಅತೀವೇಗದಿಂದ ಚಲಾಯಿಸಿದ ಪರಿಣಾಮ ಬೈಕ್, ಶೋರೂಮಿನ ಎದುರುಗಡೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಇದರ ಪರಿಣಾಮ

ಉಡುಪಿ : ಕಾರಿಗೆ ಬೈಕ್ ಢಿಕ್ಕಿ ಸವಾರ ಮೃತ್ಯು Read More »

ಉಡುಪಿ ಚಿಕ್ಕಮಗಳೂರಿನಲ್ಲಿ ನನ್ನ ಟಿಕೆಟ್ ತಪ್ಪಿಸಲು ಪಿತೂರಿ– ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್: ಉಡುಪಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಗೋಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಸ್ಪೋಟಕ ಮಾಹಿತಿಯನ್ನು ನೀಡಿದ್ದು, ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿ ನಮ್ಮ ಬಗ್ಗೆ ವಿರೋಧ ವ್ಯಕ್ತವಾದರೆ ಕೇಂದ್ರದ ನಾಯಕರು ನಾವು ಮಾಡಿರುವ ಕೆಲಸದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಾರೆ ಅದು ನನಗೆ ಅನುಕೂಲವಾಗುತ್ತೆ ಎಂದ ಅವರು ಇಲ್ಲವಾದರೆ

ಉಡುಪಿ ಚಿಕ್ಕಮಗಳೂರಿನಲ್ಲಿ ನನ್ನ ಟಿಕೆಟ್ ತಪ್ಪಿಸಲು ಪಿತೂರಿ– ಶೋಭಾ ಕರಂದ್ಲಾಜೆ Read More »

ಗೋಬಿ ಪ್ರಿಯರಿಗೆ ಬಿಗ್ ಶಾಕ್…! ಬ್ಯಾನ್ ಆಗುತ್ತಾ ಗೋಬಿ, ಕಾಟನ್ ಕ್ಯಾಂಡಿ?

ಸಮಗ್ರ ನ್ಯೂಸ್: ಗೋಬಿ ಹಾಗೂ ಕಾಟನ್ ಕ್ಯಾಂಡಿ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಎದುರಾಗಿದೆ. ಗೋವಾದಲ್ಲಿ ಗೋಬಿ ಬ್ಯಾನ್ ಹಿನ್ನೆಲೆ ರಾಜ್ಯದಲ್ಲೂ ಬ್ಯಾನ್ ಆಗುವ ಸಾಧ್ಯತೆ ಇದೆ. ಇಗಾಗಲೇ ರಾಜ್ಯದಲ್ಲಿ ಟೆಸ್ಟಿಂಗ್ ನಡೆಯುತ್ತಿದೆ. ಗೋಬಿ ತಯಾರಿಕೆಯಲ್ಲಿ ಬಳಸುವ ರುಚಿಕಾರಕ, ಕೃತಕ ಬಣ್ಣ, ಕಡಿಮೆ ಬೆಲೆಯ ಸಾಸ್ ಆರೋಗ್ಯದ ಬೆಲೆ ಪರಿಣಾಮ ಬೀರುತ್ತಿದೆ. ಈ ಹಿತ ದೃಷ್ಟಿಯಿಂದ ಆಹಾರ ಸುರಕ್ಷತೆ, ಗುಣಮಟ್ಟ ಆಯುಕ್ತಾಲಯದಿಂದ ಪರೀಕ್ಷೆ ನಡೆಸಲಾಗಿದೆ. ಗೋಬಿ ಪರೀಕ್ಷೆಯಲ್ಲಿ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದೆ. ಕ್ಯಾನ್ಸರ್ ತಂದೊಡ್ಡುವ ಅಂಶಗಳು

ಗೋಬಿ ಪ್ರಿಯರಿಗೆ ಬಿಗ್ ಶಾಕ್…! ಬ್ಯಾನ್ ಆಗುತ್ತಾ ಗೋಬಿ, ಕಾಟನ್ ಕ್ಯಾಂಡಿ? Read More »