Editor

ಸುಳ್ಯ: ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕ ಪದ್ಮನಾಭ ಭಟ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಸಮಗ್ರ ನ್ಯೂಸ್: ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುದೀರ್ಘ 31 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಮಾ.12 ರಂದು ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕ ಪದ್ಮನಾಭ ಭಟ್ ರವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ಮಾ.08 ರಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪದ್ಮನಾಭ ಭಟ್ ಮತ್ತು ಚಂದ್ರಾವತಿ ಪಿ. ದಂಪತಿಗಳನ್ನು ಶಾಲು ಹೊದಿಸಿ, ಫಲ-ಪುಷ್ಪ ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪದ್ಮನಾಭ ಭಟ್ ಅವರು ಮಾತನಾಡಿ ತಾನು ಸೇವೆ ಸಲ್ಲಿಸಿದ ದಿನಗಳನ್ನು ಸ್ಮರಿಸಿಕೊಂಡು

ಸುಳ್ಯ: ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕ ಪದ್ಮನಾಭ ಭಟ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ Read More »

ಭಕ್ತಾಧಿಗಳಿಗೆ ಸಿಹಿ ಸುದ್ದಿ/ ಮೇ 10 ರಂದು ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಬದರಿನಾಥ್-ಕೇದಾರನಾಥ ದೇವಾಲಯ

ಸಮಗ್ರ ನ್ಯೂಸ್: ಹನ್ನೊಂದನೇ ಜ್ಯೋತಿಲಿರ್ಂಗ ಶ್ರೀ ಕೇದಾರನಾಥ ಧಾಮದ ಬಾಗಿಲು ಈ ವರ್ಷ ಮೇ 10 ರಂದು ಬೆಳಗ್ಗೆ 7 ಗಂಟೆಗೆ ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಎಂದು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿ ಪ್ರಕಟಿಸಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ ಬದರಿನಾಥ ಧಾಮದ ಬಾಗಿಲು 6 ತಿಂಗಳ ಕಾಲ ಮುಚ್ಚಿರುತ್ತದೆ ಮತ್ತು 6 ತಿಂಗಳ ನಂತರ ತೆಪ್ರಿ ರಾಜ್ ದರ್ಬಾರ್‍ನಲ್ಲಿ ಬಾಗಿಲು ತೆರೆಯುವ ದಿನಾಂಕವನ್ನು ಘೋಷಿಸಲಾಗುತ್ತದೆ. ಇದಕ್ಕಾಗಿ ಮೊದಲಿಗೆ ಡಿಮ್ಮಿ ಧಾರ್ಮಿಕ ಕೇಂದ್ರ ಪಂಚಾಯತ್ ವತಿಯಿಂದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಿಂದ ಗಾನುಘಡ

ಭಕ್ತಾಧಿಗಳಿಗೆ ಸಿಹಿ ಸುದ್ದಿ/ ಮೇ 10 ರಂದು ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಬದರಿನಾಥ್-ಕೇದಾರನಾಥ ದೇವಾಲಯ Read More »

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ/ ಪಕ್ಷ ತೊರೆದ ಮನೀಶ್ ಖಂಡೂರಿ

ಸಮಗ್ರ ನ್ಯೂಸ್: 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಿಲೀಸ್ ಮಾಡಿದ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಂಡಿದ್ದು, ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಭುವನ್ ಚಂದ್ರ ಖಂಡೂರಿ ಅವರ ಪುತ್ರ ಮನೀಶ್ ಖಂಡೂರಿ ಪಕ್ಷ ತೊರೆದಿದ್ದಾರೆ. ಈ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವ ಮತ್ತು ಎಲ್ಲಾ ಸಂಬಂಧಿತ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ. ಯಾವುದೇ ವೈಯಕ್ತಿಕ ಲಾಭದ ನಿರೀಕ್ಷೆ ಇಲ್ಲದೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮನೀಷ್ ಬರೆದುಕೊಂಡಿದ್ದಾರೆ. 2019ರಲ್ಲಿ ಕಾಂಗ್ರೆಸ್

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ/ ಪಕ್ಷ ತೊರೆದ ಮನೀಶ್ ಖಂಡೂರಿ Read More »

ಮಹಿಳಾ ದಿನಾಚರಣೆಯಂದೇ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ

ಮಹಿಳಾ ದಿನಾಚರಣೆಯಂದೇ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ Read More »

ಗ್ಯಾರಂಟಿ ಜೊತೆ ಬಾಂಬ್ ಫ್ರೀ ಎಂದ ದಿವಾಕರ್ ಕೋಟ್ಯಾನ್ | ಪ್ರಕರಣ ದಾಖಲು

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳ ಜತೆಗೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿದ್ದ ಮಲ್ಪೆಯ ಗರಡಿ ಮಜಲಿನ ದಿವಾಕರ್ ಕೋಟ್ಯಾನ್ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಾಕರ್ ಕೋಟ್ಯಾನ್ ಸ್ವತಃ ತಾವೇ ಮಾಡಿರುವ ವಿಡಿಯೋದಲ್ಲಿ, ‘ಬಸ್ ಟಿಕೆಟ್, 2000ರೂ., ವಿದ್ಯುತ್ ಬಿಲ್ ಫ್ರಿ ಜೊತೆಗೆ ಈಗ ಹೊಸದಾಗಿ ಬಾಂಬ್ ಸ್ಪೋಟ ಫ್ರೀ ಕೂಡ ರಾಜ್ಯ ಸರಕಾರ ಕೊಡುತ್ತಿದೆ. ಇದಕ್ಕೂ ಏನು ಹಣ ಕೊಡಲು ಇಲ್ಲ.

ಗ್ಯಾರಂಟಿ ಜೊತೆ ಬಾಂಬ್ ಫ್ರೀ ಎಂದ ದಿವಾಕರ್ ಕೋಟ್ಯಾನ್ | ಪ್ರಕರಣ ದಾಖಲು Read More »

ಸಂತ ಜೆರೋಸಾ ಶಾಲೆಯಲ್ಲಿ ಶ್ರೀ ರಾಮನ ಅವಮಾನ ಪ್ರಕರಣ| ತನಿಖಾ ವರದಿ ಸಿದ್ಧ

ಸಮಗ್ರ ನ್ಯೂಸ್: ನಗರದ ವೆಲೆನ್ಸಿಯಾದ ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕಿಯೊಬ್ಬರು ಶ್ರೀರಾಮನ ಬಗ್ಗೆ ತೀರಾ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಕುರಿತು ತನಿಖಾಧಿಕಾರಿಗಳು ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ನಂತರ ಆ ಅಧಿಕಾರಿ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ಆಕಾಶ ಶಂಕರ್ ರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಿದ್ದು, ಡಾ.ಆಕಾಶ್ ಶಂಕರ್ ರವರು ತನಿಖೆ ನಡೆಸಿ ತನಿಖಾ ವರದಿಯನ್ನು ಇಲಾಖೆಯ ಮುಖ್ಯ

ಸಂತ ಜೆರೋಸಾ ಶಾಲೆಯಲ್ಲಿ ಶ್ರೀ ರಾಮನ ಅವಮಾನ ಪ್ರಕರಣ| ತನಿಖಾ ವರದಿ ಸಿದ್ಧ Read More »

ಮನೆಗೆ ಅನ್ಯಕೋಮಿನ ವ್ಯಕ್ತಿಯ ಅಕ್ರಮ ಪ್ರವೇಶ|ಮಹಿಳೆ, ಮಕ್ಕಳ ಮೇಲೆ ದೌರ್ಜನ್ಯ

ಸಮಗ್ರ ನ್ಯೂಸ್: ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆ ಹಾಗೂ ಮಕ್ಕಳ ಮೇಲೆ ಅನ್ಯಕೋಮಿನ ವ್ಯಕ್ತಿಯೊಬ್ಬ ದೌರ್ಜನ್ಯವೆಸಗಿರುವ ಘಟನೆಯೊಂದು ವಿಟ್ಲ ಸಮೀಪದ ಕನ್ಯಾಯ ಕಣಿಯೂರು ತಲಕ್ಕಿ ಎಂಬಲ್ಲಿ ನಡೆದಿದೆ. ಅನ್ಯಕೋಮಿನ ಯುವಕ ಸಿದ್ದಿಕ್ ಎಂದು ಗುರುತಿಸಲಾಗಿದೆ. ಈತ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಮನೆಯಲ್ಲಿರುವ ಮಂದಿಗೆ ಹಲ್ಲೆ ಮಾಡಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದ್ದು, ಈ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಖಂಡನೆ ಮಾಡಿದೆ. ವ್ಯಕ್ತಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಮನೆಗೆ ಅನ್ಯಕೋಮಿನ ವ್ಯಕ್ತಿಯ ಅಕ್ರಮ ಪ್ರವೇಶ|ಮಹಿಳೆ, ಮಕ್ಕಳ ಮೇಲೆ ದೌರ್ಜನ್ಯ Read More »

ಒಂದು ಘಟನೆ ಮಾಸುವ ಮುನ್ನವೇ ಮತ್ತೊಂದು ಹೀನಕೃತ್ಯ| ಸ್ವಂತ ಮಗುವನ್ನು ಕಚ್ಚಿ, ಫ್ರಿಡ್ಜ್ ನೀರು ಸುರಿದು ಚಿತ್ರಹಿಂಸೆ ನೀಡಿದ ತಾಯಿ

ಸಮಗ್ರ ನ್ಯೂಸ್: ಇತ್ತೀಚೆಗೆ ತಾಯಿಯೊಬ್ಬಳು ಮಗುವನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿತ್ತು ಆದ್ರೆ ಅದು ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದೋಗಿದೆ. ಮಹಿಳೆಯೊಬ್ಬಳು ತನ್ನ ಸ್ವಂತ ಮಗುವಿನ ಮೇಲೆ ಕ್ರೌರ್ಯ ಮೆರೆದ ಅಮಾನವೀಯ ಘಟನೆ ನಡೆದಿದೆ. ಪತಿ ಮೇಲಿನ ಕೋಪಕ್ಕೆ ಪ್ರಿಯಕರನೊಂದಿಗೆ ಸೇರಿ ತನ್ನ ಮೂರು ವರ್ಷದ ಮಗುವಿಗೆ ತಾಯಿ ಚಿತ್ರ ಹಿಂಸೆ ನೀಡಿದ ಆರೋಪ ಕೇಳಿಬಂದಿದೆ. ಆಯೇಷಾ ಎಂಬಾಕೆ ಇಮ್ರಾನ್ ಖಾನ್ ಎಂಬಾತನನ್ನು ಮದುವೆಯಾಗಿದ್ದು, ಒಂದು ಹೆಣ್ಣು ಮಗು ಜನಿಸಿದೆ.

ಒಂದು ಘಟನೆ ಮಾಸುವ ಮುನ್ನವೇ ಮತ್ತೊಂದು ಹೀನಕೃತ್ಯ| ಸ್ವಂತ ಮಗುವನ್ನು ಕಚ್ಚಿ, ಫ್ರಿಡ್ಜ್ ನೀರು ಸುರಿದು ಚಿತ್ರಹಿಂಸೆ ನೀಡಿದ ತಾಯಿ Read More »

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ|ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ

ಸಮಗ್ರ ನ್ಯೂಸ್: ನಟಿ ಮಿಲನಾ ನಾಗರಾಜ್ ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪ್ರೀತಿಸಿ 2021ರ ಫೆಬ್ರವರಿ 14ರಂದು ಮದುವೆ ಆದರು. ಮೂರು ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದು, 2024ರ ಸೆಪ್ಟೆಂಬರ್​ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮಿಲನಾ ನಾಗರಾಜ್ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಮಗುವಿನ ಶರ್ಟ್​ ಫೋಟೋನ ಹಂಚಿಕೊಂಡಿದ್ದಾರೆ. ಇದಕ್ಕೆ ‘KrissMi’ ಎಂದು ಬರೆದು ಹಾರ್ಟ್ ಮಾರ್ಕ್

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ|ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ Read More »

ಲೋಕಸಭಾ ಚುನಾವಣೆ: ಕರ್ನಾಟಕ ಸೇರಿ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣು ಗೋಪಾಲ್‌, ಅಜಯ್ ಮಕೇನ್‌, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು. ಇದರಲ್ಲಿ ಕರ್ನಾಟಕದ 7 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಖಚಿತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಶಶಿ ತರೂರ್​ ಅವರಿಗೆ ತಿರುವನಂತಪುರಂ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಲೋಕಸಭಾ ಚುನಾವಣೆ: ಕರ್ನಾಟಕ ಸೇರಿ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ Read More »