Editor

ಹಿರಿಯ ಸಾಹಿತಿ ಹೆಚ್.ಎಸ್ ವೆಂಕಟೇಶ ಮೂರ್ತಿ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್‌ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ.80 ವರ್ಷ ವಯಸ್ಸಿನ ಎಚ್‌ಎಸ್‌ವಿ ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಚ್.ಎಸ್. […]

ಹಿರಿಯ ಸಾಹಿತಿ ಹೆಚ್.ಎಸ್ ವೆಂಕಟೇಶ ಮೂರ್ತಿ ಇನ್ನಿಲ್ಲ Read More »

ಭಾರೀ ಮಳೆ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್; ಭಾರೀ ಮಳೆಯ ಹಿನ್ನೆಲೆ ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮೇ.30ರ ಇಂದು ರಜೆ ಘೋಷಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮಕ್ಕಳು ಸೇರಿದಂತೆ ಜನ ಸಾಮಾನ್ಯರು ನದಿ, ಹಳ್ಳ ಕೊಳ್ಳ ಸಮುದ್ರ ತೀರದತ್ತ ಹೋಗದಂತೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ಭಾರೀ ಮಳೆ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಜೈಶ್ ಎ ಮೊಹಮ್ಮದ್ ಸಂಘಟನೆ ಹೆಸರಲ್ಲಿ ಪುತ್ತೂರಿನ ಹಿಂದೂ ಮುಖಂಡನಿಗೆ ಕೊಲೆ ಬೆದರಿಕೆ

ಸಮಗ್ರ ನ್ಯೂಸ್: ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಬಾಷೆಯಲ್ಲಿ ವಾಟ್ಸ್‌ಅಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರಿಗೆ ಈ ಬೆದರಿಕೆ ಬಂದಿದ್ದು, ಬೆದರಿಕೆ ಆಡಿಯೋದಲ್ಲಿ ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ, ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ, ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ, ಆದರೆ

ಜೈಶ್ ಎ ಮೊಹಮ್ಮದ್ ಸಂಘಟನೆ ಹೆಸರಲ್ಲಿ ಪುತ್ತೂರಿನ ಹಿಂದೂ ಮುಖಂಡನಿಗೆ ಕೊಲೆ ಬೆದರಿಕೆ Read More »

ಐಪಿಎಲ್ ಕ್ರಿಕೆಟ್| ಫೈನಲ್ ಗೆ ಲಗ್ಗೆ‌ ಇಟ್ಟ ಆರ್ ಸಿಬಿ

ಸಮಗ್ರ ನ್ಯೂಸ್: ಐಪಿಎಲ್‌ ಪಂದ್ಯಾವಳಿಯ ಗುರುವಾರ ನಡೆದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಅವರದ್ದೇ ನೆಲದಲ್ಲಿ ಸೋಲುಣಿಸಿ ಅತ್ಯಮೋಘ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಬಿಗಿ ದಾಳಿಗೆ ನಲುಗಿದ ಪಂಜಾಬ್‌ ಕಿಂಗ್ಸ್‌ 101 ರನ್ ಗಳ ಸಣ್ಣ ಮೊತ್ತಕ್ಕೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಆರ್ ಸಿಬಿ 10 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 106

ಐಪಿಎಲ್ ಕ್ರಿಕೆಟ್| ಫೈನಲ್ ಗೆ ಲಗ್ಗೆ‌ ಇಟ್ಟ ಆರ್ ಸಿಬಿ Read More »

ಮಂಗಳೂರಿನಲ್ಲಿ ಸರಣಿ ಹತ್ಯೆ| ಹಿರಿಯ ಪೊಲೀಸ್ ಅಧಿಕಾರಿಗಳ ಎತ್ತಂಗಡಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ನಡೆದ‌ ಸರಣಿ ಹತ್ಯೆ ಹಿನ್ನಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ರನ್ನು ವರ್ಗಾವಣೆಗೊಳಿಸಿದ್ದು ಅವರ ಸ್ಥಾನಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಿಸಲಾಗಿದೆ. ದ.ಕ ಜಿಲ್ಲಾ ಎಸ್ ಪಿ ಯತೀಶ್ ರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಎಸ್ ಪಿಯಾಗಿ ಅರುಣ್ ಅವರನ್ನು ನೇಮಿಸಲಾಗಿದೆ. ಉಡುಪಿ ನೂತನ ಕಮಿಷನರ್ ಆಗಿ ಹರಿರಾಮ್ ಶಂಕರ್ ರನ್ನು ನೇಮಿಸಿ ಆದೇಶಿಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಪೊಲೀಸ್

ಮಂಗಳೂರಿನಲ್ಲಿ ಸರಣಿ ಹತ್ಯೆ| ಹಿರಿಯ ಪೊಲೀಸ್ ಅಧಿಕಾರಿಗಳ ಎತ್ತಂಗಡಿ Read More »

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಬಂಧಿತ ಆರೋಪಿಗಳ ವಿವರ ಬಹಿರಂಗಪಡಿಸಿದ ‌ಪೊಲೀಸರು

ಸಮಗ್ರ ನ್ಯೂಸ್: ಮೇ 27 ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೇ 29 ರಂದು(ಗುರುವಾರ) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ ಪೂಜಾರಿ(21),ಬಂಟ್ವಾಳದ ಅಮ್ಮುಂಜೆ ಗ್ರಾಮದ ಪ್ರಥ್ವಿರಾಜ್ ಜೋಗಿ (21) ಮತ್ತು ಅಮ್ಮುಂಜೆ ಗ್ರಾಮದ ಚಿಂತನ್ ಬೆಳ್ಚಡ (19) ಎಂದು ಗುರುತಿಸಲಾಗಿದೆ. ಮೂವರನ್ನು ಬಂಟ್ವಾಳದ ಕಳ್ಳಿಗೆ

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಬಂಧಿತ ಆರೋಪಿಗಳ ವಿವರ ಬಹಿರಂಗಪಡಿಸಿದ ‌ಪೊಲೀಸರು Read More »

ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾಗಳು ಬ್ಯಾನ್| ಸಚಿವ ಶಿವರಾಜ್ ತಂಗಡಗಿ ಪತ್ರ

ಸಮಗ್ರ ನ್ಯೂಸ್: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ನಿಷೇಧಿಸುವಂತೆ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಕನ್ನಡದ ಹಲವು ಚಿತ್ರಗಳಲ್ಲಿ ಕಮಲ್‌ ಹಾಸನ್‌ ಅವರು ನಟನೆ

ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾಗಳು ಬ್ಯಾನ್| ಸಚಿವ ಶಿವರಾಜ್ ತಂಗಡಗಿ ಪತ್ರ Read More »

ರಹಿಮಾನ್ ಕೊಲೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ- ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಸುಹಾಸ್‌ ಶೆಟ್ಟಿ ಒಬ್ಬ ರೌಡಿಶೀಟರ್‌ ಆಗಿದ್ದ. ಎರಡು ಕೊಲೆ ಆರೋಪದಲ್ಲಿ ಭಾಗಿಯಾಗಿದ್ದ. ಅಂಥವನ ಕೊಲೆಯಾಗಿದೆ. ಇದಕ್ಕೆ ಪ್ರತೀಕಾರ ಎಂಬಂತೆ ಬಂಟ್ವಾಳದಲ್ಲಿ ಅಬ್ದುಲ್‌ ರಹಿಮಾನ್‌ ಕೊಲೆಯಾಗಿದೆ, ಮತ್ತೋರ್ವನಿಗೆ ಗಾಯಗಳಾಗಿವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂತಹ ಪ್ರತೀಕಾರ ನಡೆದರೆ ಬದುಕುವುದು ಕಷ್ಟವಾಗುತ್ತದೆ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಬಂ ಧಿಸುತ್ತಾರೆ. ಪೊಲೀಸರ ತನಿಖೆಯ ಅನಂತರವೇ ಎಲ್ಲವೂ ತಿಳಿಯಲಿದೆ. ದ.ಕ. ಜಿಲ್ಲೆಯಲ್ಲಿ ಕೋಮುವಾದದ ಕೆಟ್ಟ ವಾತಾವರಣ

ರಹಿಮಾನ್ ಕೊಲೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ- ದಿನೇಶ್ ಗುಂಡೂರಾವ್ Read More »

ಚಿಕ್ಕಮಗಳೂರು: ಪ್ರೀತಿಸಿದ ಪತ್ನಿಯನ್ನು ಹತ್ಯೆಗೈದ ಪತಿ ಬಂಧನ

ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದು ಬಳಿಕ ನಾಪತ್ತೆಯಾಗಿದ್ದ ಆರೋಪಿ ಪತಿಯನ್ನು ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧಿಸಿದ್ದಾರೆ. ಅವಿನಾಶ್ (32) ಬಂಧಿತ ಆರೋಪಿಯಾಗಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿತ್ತು. 4 ವರ್ಷದ ಹಿಂದೆ ಅವಿನಾಶ್ ಮತ್ತು ಕೀರ್ತೀ ಪ್ರೀತಿಸಿ ಮದುವೆಯಾಗಿದ್ದರು ಆದರೆ ಬುಧವಾರ ಮಧ್ಯಾಹ್ನ ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು ಬಳಿಕ ಕೋಪಗೊಂಡ ಪತಿ ಚಾಕುವಿನಿಂದ ಹತ್ತು ಬಾರಿ ಇರಿದು ಸ್ಥಳದಿಂದ ಪರಾರಿಯಾಗಿದ್ದ, ಘಟನೆ ಸಂಬಂಧ

ಚಿಕ್ಕಮಗಳೂರು: ಪ್ರೀತಿಸಿದ ಪತ್ನಿಯನ್ನು ಹತ್ಯೆಗೈದ ಪತಿ ಬಂಧನ Read More »

ರಾಜ್ಯಾದ್ಯಂತ ಇಂದಿನಿಂದ ಶಾಲಾರಂಭ| ಮಕ್ಕಳ ಸ್ವಾಗತಕ್ಕೆ ತಯಾರಾಗಿದೆ ಶಾಲಾ ಶಿಕ್ಷಣ ಇಲಾಖೆ

ಸಮಗ್ರ ನ್ಯೂಸ್: ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪುನರಾರಂಭವಾಗುತ್ತಿದೆ. ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಇಂದುರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ

ರಾಜ್ಯಾದ್ಯಂತ ಇಂದಿನಿಂದ ಶಾಲಾರಂಭ| ಮಕ್ಕಳ ಸ್ವಾಗತಕ್ಕೆ ತಯಾರಾಗಿದೆ ಶಾಲಾ ಶಿಕ್ಷಣ ಇಲಾಖೆ Read More »