Editor

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರಹಿಮಾನ್ ಶವಯಾತ್ರೆ| ಬಿ.ಸಿ ರೋಡ್ ನಗರದಲ್ಲಿ ಸ್ವಯಂಪ್ರೇರಿತ ಬಂದ್

ಸಮಗ್ರ ನ್ಯೂಸ್: ಬಂಟ್ವಾಳದ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಖಂಡಿಸಿ ಬಿ.ಸಿ ರೋಡ್ ನಲ್ಲಿ ಸ್ವಯಂಪ್ರೇರಿತ ಬಂದ್ ಮಾಡಲಾಗಿದೆ. ಮುಸ್ಲಿಮ್ ಸಮುದಾಯದ ಹಲವರು ಬಿ.ಸಿ ರೋಡ್, ಫರಂಗಿಪೇಟೆ ಸೇರಿದಂತೆ ಹಲವು ಕಡೆ ತಮ್ಮ ವ್ಯಾಪಾರ, ವಹಿವಾಟನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತವಾಗಿ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ದೇರಳಕಟ್ಟೆ ಯೆನೆಪೊಯ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿಯೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದು ಇಂದು ಮುಂಜಾನೆ ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ […]

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರಹಿಮಾನ್ ಶವಯಾತ್ರೆ| ಬಿ.ಸಿ ರೋಡ್ ನಗರದಲ್ಲಿ ಸ್ವಯಂಪ್ರೇರಿತ ಬಂದ್ Read More »

ಅರೆಸ್ಟ್ ಆಗಿದ್ದ ಶರಣ್ ಪಂಪ್ವೆಲ್ ಗೆ ಜಾಮೀನು; ಬಿಡುಗಡೆ

ಸಮಗ್ರ ನ್ಯೂಸ್: ನಿನ್ನೆ(ಮೇ.27) ಸಂಜೆ ಅರೆಸ್ಟ್ ಆಗಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ದಿನ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಮತ್ತು ನಿನ್ನೆ ನಡೆದ ಕೊಲೆ ಹಿನ್ನೆಲೆ ಉಂಟಾದ ಮುಸ್ಲಿಂ ಮುಖಂಡರ ಆಕ್ರೋಶ ಹಿನ್ನೆಲೆಯಲ್ಲಿ ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದರು. ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಶರಣ್ ಪಂಪ್‌ವೆಲ್ ಬಂಧನ

ಅರೆಸ್ಟ್ ಆಗಿದ್ದ ಶರಣ್ ಪಂಪ್ವೆಲ್ ಗೆ ಜಾಮೀನು; ಬಿಡುಗಡೆ Read More »

ಮಾಣಿಲ: ಉಚಿತ ಪುಸ್ತಕ ‌ವಿತರಣೆ ಮತ್ತು ಸನ್ಮಾನ

ಸಮಗ್ರ ನ್ಯೂಸ್: ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಮೇ.27 ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾತೃಭೂಮಿ ಯುವ ವೇದಿಕೆಯ ಅಧ್ಯಕ್ಷರಾದ ಜಿತೇಶ್ ಕುಮಾರ್ ದಂಡೆಪ್ಪಾಡಿ ಅವರು ವಹಿಸಿದರು. ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಹತ್ತನೇ ತರಗತಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮವನ್ನು ಗಣ್ಯರ ಸಮ್ಮುಖದಲ್ಲಿ ನಡೆಯಿತು. ಸನ್ಮಾನ ಸಮಾರಂಭವನ್ನು ಉದ್ಘಾಟಿಸಿದ ಸಾಮಾಜಿಕ ಕಾರ್ಯಕರ್ತರು,

ಮಾಣಿಲ: ಉಚಿತ ಪುಸ್ತಕ ‌ವಿತರಣೆ ಮತ್ತು ಸನ್ಮಾನ Read More »

ಮಂಗಳೂರು: ಮಿಸೆಸ್ ಇಂಡಿಯಾ 6 ಫಿನಾಲೆ| ಗೆದ್ದೋರು ಯಾರು? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್, ಪಾತ್ ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಲೇಡಿಸ್ ಸಲೂನ್ ಸಹಯೋಗದಲ್ಲಿ ಎಡ್ಜ್ 9 ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 6ನೇ ಆವೃತ್ತಿಯ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಇತ್ತೀಚೆಗೆ ಉಳಾಯಿಬೆಟ್ಟು ಪೆರ್ಮಂಕಿಯ ಆಸ್ಕರ್ ಕ್ಲಬ್‌ನಲ್ಲಿ ನಡೆಯಿತು. ಮಿಸೆಸ್ ವಿಭಾಗದಲ್ಲಿ ತಶ್ಮಾ ಚೇತನ್ ಗೆಲುವನ್ನು ಸಾಧಿಸಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಕಿರೀಟವನ್ನು ತಮ್ಮದಾಗಿಸಿಕೊಂಡರು. ಐಸಿರಿ ರೈ ಪ್ರಥಮ ರನ್ನರ್ ಅಪ್, ಶಕುಂತಲಾ ನಾಯಕ್

ಮಂಗಳೂರು: ಮಿಸೆಸ್ ಇಂಡಿಯಾ 6 ಫಿನಾಲೆ| ಗೆದ್ದೋರು ಯಾರು? ಇಲ್ಲಿದೆ ಡೀಟೈಲ್ಸ್ Read More »

ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ನಟ ಅನಂತ್ ನಾಗ್

ಸಮಗ್ರ ನ್ಯೂಸ್: ದೆಹಲಿಯಲ್ಲಿ ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು. ಕನ್ನಡ ಚಿತ್ರರಂಗದಲ್ಲಿ ಸುದೀರ್ಘ ಪಯಣ ಹಾಗೂ ಅಪಾರ ಕೊಡುಗೆಗಳನ್ನು ನೀಡಿರುವ ಅನಂತ್​ ನಾಗ್​ ಅವರ ಸೇವೆಯನ್ನು ಗಮನಿಸಿದ ಕೇಂದ್ರ ಸರ್ಕಾರ, ಇದೀಗ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇದೇ ವೇಳೆ ಡಾ. ರಿಕಿ ಗ್ಯಾನ್ ಕೇಜ್ (ಕಲೆ), ಪ್ರಶಾಂತ್ ಪ್ರಕಾಶ್ (ವ್ಯಾಪಾರ ಮತ್ತು ಕೈಗಾರಿಕೆ), ಡಾ.

ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ನಟ ಅನಂತ್ ನಾಗ್ Read More »

ಹವಾಮಾನ ವರದಿ| ಜೂ.2ರವರೆಗೂ ಜೋರು ಮಳೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಜೂ.2ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮೇ

ಹವಾಮಾನ ವರದಿ| ಜೂ.2ರವರೆಗೂ ಜೋರು ಮಳೆ Read More »

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ| 15 ಮಂದಿ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ‌ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ| 15 ಮಂದಿ ವಿರುದ್ಧ ದೂರು ದಾಖಲು Read More »

ವಿಹಿಂಪ‌ ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್

ಸಮಗ್ರ ನ್ಯೂಸ್: ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ‌ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ (ಮೇ 27) ಬಂಧಿಸಿದ್ದಾರೆ. ಕದ್ರಿ ಠಾಣೆ ಪೊಲೀಸರು ಶರಣ್‌ ಪಂಪ್‌ವೆಲ್‌ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ. ಪೊಲೀಸರ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಖಂಡನೆ ವ್ಯಕ್ತಪಡಿಸಿದ್ದಾರೆ. ಠಾಣೆಗೆ ಡಿಸಿಪಿ ರವಿಶಂಕರ್ ಭೇಟಿ ನೀಡಿದರು. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು

ವಿಹಿಂಪ‌ ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್ Read More »

ದ.ಕ ಜಿಲ್ಲೆಯ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇದಾಜ್ಞೆ ಜಾರಿ

ಸಮಗ್ರ ನ್ಯೂಸ್: ಬಂಟ್ವಾಳದ ಕೊಳತ್ತಮಜಲು ಬಳಿ ನಡೆದ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ. ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಸೆಕ್ಷನ್ 163ರಂತೆ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ

ದ.ಕ ಜಿಲ್ಲೆಯ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇದಾಜ್ಞೆ ಜಾರಿ Read More »

ಬಂಟ್ವಾಳ: ಯುವಕರ ಮೇಲೆ ತಲ್ವಾರ್ ದಾಳಿ ಪ್ರಕರಣ| ಓರ್ವ ಸಾವು, ಮತ್ತೋರ್ವ ಗಂಭೀರ

ಸಮಗ್ರ ನ್ಯೂಸ್: ದುಷ್ಕರ್ಮಿಗಳ ತಂಡವೊಂದು ಇಬ್ಬರ‌ ಮೇಲೆ ತಲವಾರು ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಅಡ್ಡೂರು ಕೊಲ್ತಮಜಲು ಎಂಬಲ್ಲಿ ಮಂಗಳವಾರ ವರದಿಯಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು‌ ಇಮ್ತಿಯಾಝ್ ಎಂದು ಗುರುತಿಸಲಾಗಿದೆ. ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಅಬ್ದುಲ್ ರಹಿಮಾನ್ ಗಾಯಗೊಂಡ ಯುವಕ ಎಂದು ತಿಳಿದು ಬಂದಿದೆ. ಇಬ್ಬರೂ ಕೊಲ್ತಮಜಲು ಎಂಬಲ್ಲಿ ಪಿಕ್ ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ

ಬಂಟ್ವಾಳ: ಯುವಕರ ಮೇಲೆ ತಲ್ವಾರ್ ದಾಳಿ ಪ್ರಕರಣ| ಓರ್ವ ಸಾವು, ಮತ್ತೋರ್ವ ಗಂಭೀರ Read More »