Editor

ಸುಳ್ಯ: ರಬ್ಬರ್ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ|

ಸಮಗ್ರ ನ್ಯೂಸ್: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ಮಾಡಿ ತೀವ್ರ ಗಾಯಗೊಳಿಸಿದ ಘಟನೆ ಸುಳ್ಯ ತಾಲೂಕಿನ ದುಗಲಡ್ಕ ಕೂಟೇಲಿನಲ್ಲಿ ಫೆ.22 ರಂದು ನಡೆದಿದೆ. ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪಾರ್ ಆಗಿರುವ ಪದ್ಮಾವತಿ ಅವರು ಇಂದು ಮುಂಜಾನೆ ದುಗಲಡ್ಕ ಸೆಕ್ಷನಿ‌ನ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಪೊದೆಯಲ್ಲಿದ್ದ ಕಾಡುಹಂದಿ ಏಕಾಏಕಿ ಧಾಳಿ ನಡೆಸಿದೆ. ಕಾಡು ಹಂದಿಯ ದಾಳಿಯಿಂದ ಮಹಿಳೆಯ ಬೆನ್ನು ಮತ್ತಿತರೆಡೆಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಸುಳ್ಯ ಸರಕಾರಿ

ಸುಳ್ಯ: ರಬ್ಬರ್ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ| Read More »

ಅಳಿವಿನಂಚಿನ ಅಪರೂಪದ ಮೌಸ್ ಡೀರ್ ಪತ್ತೆ

ಸಮಗ್ರ ನ್ಯೂಸ್: ನೀವು ಚಿರತೆಯನ್ನು ಹೋಲುವ ಬೆಕ್ಕನ್ನು ನೋಡಿರಬಹುದು. ಆದರೆ ಜಿಂಕೆ ಮರಿಯ ತದ್ರೂಪಿಯಂತೆ ತೋರುವ ಬೇರೊಂದು ಪ್ರಾಣಿಯನ್ನು ಕಂಡಿದ್ದೀರಾ? ಹಾಗಾದ್ರೆ ಈ ವಿಡಿಯೋದಲ್ಲಿರುವ ಪುಟ್ಟ ಪ್ರಾಣಿಯನ್ನು ನೋಡಿ. ಇದು ಅಳಿಲು ಮರಿ ಅಥವಾ ಇಲಿ ಮರಿ ಅಥವಾ ಜಿಂಕೆ ಮರಿ ಆಗಿರಬಹುದು ಎಂದು ನೀವು ಯೋಚಿಸಿದಲ್ಲಿ ನಿಮ್ಮ ಊಹೆ ತಪ್ಪು. ಸುಂಟಿಕೊಪ್ಪ ಸಮೀಪದ ಹೊರೂರು ಕಾಫಿ ಬೆಳೆಗಾರರಾದ ಪಿ.ಸಿ. ಮೋಹನ್ ರವರಿಗೆ ಸೇರಿದ ಗ್ರೀನ್ ಫೀಲ್ಡ್ ಎಸ್ಟೇಟ್ ನಲ್ಲಿ ನೆನ್ನೆ ದಿನ ಬೆಳಗ್ಗೆ ಆಚನಾಕಾಗಿ ಕಾರ್ಮಿಕರ

ಅಳಿವಿನಂಚಿನ ಅಪರೂಪದ ಮೌಸ್ ಡೀರ್ ಪತ್ತೆ Read More »

ವುಮೆನ್ಸ್ ಪ್ರೀಮಿಯರ್ ಲೀಗ್ ನಾಳೆ ಆರಂಭ/ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ

ಸಮಗ್ರ ನ್ಯೂಸ್: ವುಮೆನ್ಸ್ ಪ್ರೀಮಿಯರ್ ಲೀಗ್ ನಾಳೆಯಿಂದ ಶುರು ಆಗಲಿದ್ದು, ಈಗಾಗಲೇ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ. ಈ ಬಾರಿ ಟೂರ್ನಿಯ ಉದ್ಘಾಟನೆಗೆ ಬಾಲಿವುಡ್ ನಟ ಶಾರುಖ್‍ಖಾನ್ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಒಟ್ಟಾರೆ ಐದು ತಂಡಗಳು ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ. ಮೊದಲ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುಂಬೈ ಇಂಡಿಯನ್ಸ್-ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮೊದಲ ಪಂದ್ಯ ಆಡಲಿವೆ. ಮಾರ್ಚ್ 17 ರಂದು ಫೈನಲ್ ಪಂದ್ಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ನಾಳೆ ಆರಂಭ/ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ Read More »

ವೇಣೂರಿನ ಭಗವಾನ್ ಶ್ರೀಬಾಹುಬಲಿ ಸ್ವಾಮಿಗೆ ಇಂದಿನಿಂದ ಮಹಾಮಸ್ತಕಾಭಿಷೇಕ

ಸಮಗ್ರ ನ್ಯೂಸ್: ಇಂದಿನಿಂದ ಒಂಬತ್ತು ದಿನಗಳ ಕಾಲ ಜಗತ್ತಿನ ಏಕೈಕ ಮಂದಸ್ಮಿತ ಬಾಹುಬಲಿ ಏಕಶಿಲಾ ಮೂರ್ತಿಯಾದ ವೇಣೂರಿನ ಭಗವಾನ್ ಶ್ರೀಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಹನ್ನೆರಡು ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನೆರವೇರಲಿದ್ದು, ಒಂಬತ್ತು ದಿನಗಳು ಜಲಾಭಿಷೇಕ, ಕಷಾಯ, ಕಲ್ಕಚೂರ್ಣ, ಅರಿಶಿಣ, ಶ್ರೀಗಂಧ, ಅಷ್ಟಗಂಧ, ಹಾಲು, ಎಳನೀರು ಹಾಗೂ ಕೇಸರಿ ದ್ರವ್ಯಗಳಿಂದ ಅಭಿಷೇಕ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ಮಸ್ತಕಾಭಿಷೇಕ ನಡೆಯಲಿದ್ದು, ಇಡೀ ಜಗತ್ತೇ ಈ ಸಂಭ್ರಮವನ್ನು ಎದುರು ನೋಡುತ್ತದೆ.

ವೇಣೂರಿನ ಭಗವಾನ್ ಶ್ರೀಬಾಹುಬಲಿ ಸ್ವಾಮಿಗೆ ಇಂದಿನಿಂದ ಮಹಾಮಸ್ತಕಾಭಿಷೇಕ Read More »

Aadhar Card ಇದ್ಯಾ? ಹಾಗಾದ್ರೆ ಈ ವಿಷಯಗಳು ನಿಮಗೆ ಗೊತ್ತಿರಲೇಬೇಕು

ಸಮಗ್ರ ನ್ಯೂಸ್: ಭಾರತದ ಪ್ರತಿಯೊಬ್ಬ ನಾಗರಿಕರಿಗೂ ನೀಡಲಾಗುವ ಒಂದು ಅನನ್ಯ ಸಂಖ್ಯೆ ಮತ್ತು ಗುರುತಿನ, ವಿಳಾಸದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಆಧಾರ್‌ ಕಾರ್ಡ್‌ ಮೂಲಕವೂ ಸ್ಕ್ಯಾಮ್‌ಗಳು ನಡೆಯುತ್ತಿವೆ ಅನ್ನೋದು ಗೊತ್ತೇ ಇದೆ. ಬೇರೆಯವರು ನಮ್ಮ ಆಧಾರ್‌ ಕಾರ್ಡ್‌ ಅನ್ನು ದುರುಪಯೋಗಪಡಿಸಿಕೊಂಡು ಕೆಲವು ವಂಚನೆಗಳಲ್ಲಿ ತೊಡಗಿರುವ ಸಾಧ್ಯತೆಗಳು ಸಹ ಇರುತ್ತವೆ. ಆದ್ದರಿಂದ ಕಳೆದ ಆರು ತಿಂಗಳಲ್ಲಿ ನಿಮ್ಮ ಕಾರ್ಡ್ ಅನ್ನು ಎಲ್ಲಿ ಬಳಸಲಾಗಿದೆ ಎಂಬುದನ್ನು ಒಳಗೊಂಡಂತೆ ನಿಮ್ಮ ಆಧಾರ್ ಕಾರ್ಡ್ ಕುರಿತು ಎಲ್ಲಾ ವಿವರಗಳನ್ನು ಪರಿಶೀಲಿಸಲು ಭಾರತ ಸರ್ಕಾರ

Aadhar Card ಇದ್ಯಾ? ಹಾಗಾದ್ರೆ ಈ ವಿಷಯಗಳು ನಿಮಗೆ ಗೊತ್ತಿರಲೇಬೇಕು Read More »

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಜಾಬ್ ಆಫರ್, ಉತ್ತಮ ಸಂಬಳ ಕೂಡ!

ಸಮಗ್ರ ಉದ್ಯೋಗ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಫೆಬ್ರವರಿ 24, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಹಾಕಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಜಾಬ್ ಆಫರ್, ಉತ್ತಮ ಸಂಬಳ ಕೂಡ! Read More »

ರಾಜ್ಯದ ಎಲ್ಲಾ ಶಾಸಕರಿಗೆ ಚಿನ್ನಲೇಪಿತ ಬ್ಯಾಡ್ಜ್ ಭಾಗ್ಯ| ಏನಿದರ ವಿಶೇಷತೆ?

ಸಮಗ್ರ ನ್ಯೂಸ್: ವಿಧಾನಸಭೆ ಸಚಿವಾಲಯದಿಂದ ರಾಜ್ಯದ ಆಡಳಿತ ಮತ್ತು ಪ್ರತಿಪಕ್ಷಗಳ ಎಲ್ಲ 224 ಶಾಸಕ, ಸಚಿವರಿಗೆ ಸರ್ಕಾರದ ಗಂಡಭೇರುಂಡ ಲಾಂಛನವುಳ್ಳ ಚಿನ್ನ ಲೇಪಿತ ಬ್ಯಾಡ್ಜ್‌ಗಳನ್ನು ವಿತರಿಸಲಾಗಿದೆ. ಬೆಂಗಳೂರಿನ ಐ ಡ್ರೀಮ್ಸ್‌ ಟ್ರೇಡ್‌ ಅಂಡ್‌ ಈವೆಂಟ್‌ ಲಿಮಿಟೆಡ್‌ ಕಂಪನಿಯಿಂದ ತಲಾ 2832 ರೂ. ನಂತೆ ಈ ಬ್ಯಾಡ್ಜ್‌ಗಳನ್ನು ಖರೀದಿ ಮಾಡಲಾಗಿದೆ. ಮುಂದಿನ ಅಧಿವೇಶನದಿಂದ ಎಲ್ಲ ಸದಸ್ಯರು ಕಡ್ಡಾಯವಾಗಿ ಈ ಬ್ಯಾಡ್ಜ್‌ ಧರಿಸಿ ಸದನಕ್ಕೆ ಹಾಜರಾಗುವಂತೆ ಸ್ಪೀಕರ್‌ ಯು.ಟಿ.ಖಾದರ್‌ ಸೂಚಿಸಿದ್ದಾರೆ. ಬುಧವಾರ ವಿಧಾನಸಭೆ ಕಾರ್ಯಕಲಾಪದ ವೇಳೆ ಈ ಬಗ್ಗೆ ಮಾಹಿತಿ

ರಾಜ್ಯದ ಎಲ್ಲಾ ಶಾಸಕರಿಗೆ ಚಿನ್ನಲೇಪಿತ ಬ್ಯಾಡ್ಜ್ ಭಾಗ್ಯ| ಏನಿದರ ವಿಶೇಷತೆ? Read More »

ಮಂಗಳೂರು: ಶಾಲೆಯಲ್ಲಿ ಧರ್ಮ ಅವಹೇಳನ ಪ್ರಕರಣ| ಹೇಳಿಕೆ ನೀಡಿದ ವಿದ್ಯಾರ್ಥಿನಿ ತಾಯಿಗೆ ಜೀವ ಬೆದರಿಕೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂಬ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಶಾಲೆಯ ವಿದ್ಯಾರ್ಥಿನಿಯೋರ್ವರ ತಾಯಿ ಕವಿತಾ ಅವರಿಗೆ ಅಪರಿಚಿತರು ಜೀವಬೆದರಿಕೆ ಹಾಕಿರುವ ಕುರಿತಾಗಿ ಕಂಕನಾಡಿ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅಪರಿಚಿತರು ವಾಯ್ಸ ಮೆಸೇಜ್‌ಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಕವಿತಾ ಅವರು ಪೊಲೀಸರಿಗೆ ದೂರು ನೀಡಿದ್ದರು. ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದು ಕತಾರ್‌, ಸೌದಿ ಮೊದಲಾದೆಡೆಗಳಿಂದ ಬೆದರಿಕೆಗಳು ಬಂದಿರುವುದು ಗೊತ್ತಾಗಿದೆ ಎಂದು

ಮಂಗಳೂರು: ಶಾಲೆಯಲ್ಲಿ ಧರ್ಮ ಅವಹೇಳನ ಪ್ರಕರಣ| ಹೇಳಿಕೆ ನೀಡಿದ ವಿದ್ಯಾರ್ಥಿನಿ ತಾಯಿಗೆ ಜೀವ ಬೆದರಿಕೆ Read More »

ಇಂದಿನಿಂದ ಶಾಲಾ ಮಕ್ಕಳಿಗೆ ರಾಗಿ‌ಮಾಲ್ಟ್ ವಿತರಣೆ

ಸಮಗ್ರ ನ್ಯೂಸ್: ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಎನ್ನುವಂತೆ ಇಂದಿನಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಮಿಶ್ರಿತ ಹಾಲು ವಿತರಣೆ ಮಾಡಲಾಗುತ್ತಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ

ಇಂದಿನಿಂದ ಶಾಲಾ ಮಕ್ಕಳಿಗೆ ರಾಗಿ‌ಮಾಲ್ಟ್ ವಿತರಣೆ Read More »

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಯ ಸಹೋದರನ ಕೊಲೆಗೆ ಸಂಚು!?

ಸಮಗ್ರ ನ್ಯೂಸ್: ಪುತ್ತೂರು ನಗರದ ಹೊರ ವಲಯದ ಮುಕ್ರಂಪಾಡಿ ಜಂಕ್ಷನ್‌ನಲ್ಲಿ ಫೆ. 19ರಂದು ತಡರಾತ್ರಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳು, ಕಲ್ಲೇಗ ಅಕ್ಷಯ್‌ ಕೊಲೆ ಪ್ರಕರಣದ ಆರೋಪಿಯೋರ್ವನ ಸಹೋದರನನ್ನು ಕೊಲ್ಲಲು ಸಂಚು ರೂಪಿಸಿದ ಅಂಶ ಬೆಳಕಿಗೆ ಬಂದಿದೆ. ಕಿಶೋರ್‌ ಪೂಜಾರಿ ಕಲ್ಲಡ್ಕ, ಮನೋಜ್‌, ಆಶಿಕ್‌ ಮತ್ತು ಸನತ್‌ ಕುಮಾರ್‌ ಬಂಧಿತರು. ಈ ಪೈಕಿ ಕಿಶೋರ್‌ ಪೂಜಾರಿಯು ಕೊಲೆ ಪ್ರಕರಣವೊಂದರಲ್ಲಿ ಜೈಲಿನಲಿದ್ದು, ಕೆಲವು ದಿನಗಳ ಹಿಂದೆಯಷ್ಟೇ ಜಾಮೀನಿ ನಲ್ಲಿ ಬಿಡುಗಡೆ ಗೊಂಡಿದ್ದ. ಆರೋಪಿ ಗಳು

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಯ ಸಹೋದರನ ಕೊಲೆಗೆ ಸಂಚು!? Read More »