Editor

10 ನೇ ಕ್ಲಾಸ್ ಪಾಸ್ ಆಗಿದ್ರೆ ಸಾಕು, ಪೋಸ್ಟ್ ಆಫೀಸ್ ನಲ್ಲಿ ಕೆಲಸ ಸಿಗುತ್ತೆ!

ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 78 ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ವಯೋಮಿತಿ:ಭಾರತೀಯ

10 ನೇ ಕ್ಲಾಸ್ ಪಾಸ್ ಆಗಿದ್ರೆ ಸಾಕು, ಪೋಸ್ಟ್ ಆಫೀಸ್ ನಲ್ಲಿ ಕೆಲಸ ಸಿಗುತ್ತೆ! Read More »

ಕರಿಮಣಿ ಮಾಲೀಕ ನೀನಲ್ಲ ಎಂದಿದ್ದಕ್ಕೆ ಪತಿ ಸೂಸೈಡ್..!

ಸಮಗ್ರ ನ್ಯೂಸ್:ಇತ್ತೀಚೆಗೆ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ನಲ್ಲಿದೆ. ಎಲ್ಲರೂ ಈ ಹಾಡಿಗೆ ರೀಲ್ಸ್ ಮಾಡೋದು ಕಾಮನ್ ಅದರಂತೆ ಮಹಿಳೆಯೋಬ್ಬಳು ಇದೇ ಹಾಡಿಗೆ ರೀಲ್ಸ್​ ಮಾಡಿದ್ದಾಳೆ ಇದರಿಂದ ಮನನೊಂದ ಪತಿ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ಕುಮಾರ್‌ ಪತ್ನಿ ರೂಪಾ ಎಂಬಾಕೆ ತನ್ನ ಸೋದರಮಾವ ಹಾಗೂ ಸಹೋದರಿ ಜತೆಗೆ ಸೇರಿ ಓ ನಲ್ಲ, ನೀನಲ್ಲ.. ಕರಿಮಣಿ ಮಾಲೀಕ

ಕರಿಮಣಿ ಮಾಲೀಕ ನೀನಲ್ಲ ಎಂದಿದ್ದಕ್ಕೆ ಪತಿ ಸೂಸೈಡ್..! Read More »

ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗಿಲ್ಲ ಅವಕಾಶ

ಸಮಗ್ರ ನ್ಯೂಸ್: ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ಯುಗಾದಿ, ರಂಜಾನ್, ಕ್ರಿಸ್ಮಸ್,

ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗಿಲ್ಲ ಅವಕಾಶ Read More »

14ರ ಬಾಲಕ ಓಡಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಕುಂಬಳೆ ಪೇಟೆಯಲ್ಲಿ 14 ವಯಸ್ಸಿನ, 9ನೇ ತರಗತಿಯ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್‌ ಗುದ್ದಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಅಂಗಡಿಮೊಗರು ಪೆರ್ಲಾಡ ನಿವಾಸಿ ಮೈಕ್‌ ಆಪರೇಟರ್‌ ಅಬ್ದುಲ್ಲ ಕುಂಞಿ (60) ಅವರು ಕುಂಬಳೆ ಬಸ್‌ ನಿಲ್ದಾಣದಲ್ಲಿ ಬಸ್ಸಿನಿಂದ ಇಳಿದು ಪೇಟೆಗೆ ತೆರಳುತ್ತಿದ್ದ ವೇಳೆ ಅವರಿಗೆ ಬಾಲಕ ವೇಗವಾಗಿ ಒಡಿಸುತ್ತಿದ್ದ ಬೈಕ್‌ ಗುದ್ದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ್ದಾರೆ.

14ರ ಬಾಲಕ ಓಡಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು Read More »

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್

ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಬ್ರೇಕ್ ಹಾಕಿದೆ. ಮತದಾನ ದಿನ, ಎಣಿಕೆ‌‌ ದಿನದಂದು ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ಹೊರಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದು, 48 ಗಂಟೆ ಮುನ್ನ ಮದ್ಯ ಮಾರಾಟ ನಿರ್ಬಂಧ ಮುಂದುವರಿಯಲಿದೆ ಎಂದು ಆದೇಶಿಸಿದೆ ಮತದಾನ ಮುಕ್ತಾಯದ 48 ಗಂಟೆ

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ Read More »

ಕ್ರಿಕೆಟ್ ಪ್ರಿಯರಿಗೆ ಸಂತಸದ ಸುದ್ದಿ/ ಈ ಬಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್

ಸಮಗ್ರ ನ್ಯೂಸ್: ಕ್ರಿಕೆಟ್ ಅಭಿಮಾನಿಗಳ ನೆಚ್ಚಿನ ಐಪಿಎಲ್ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಇದೀಗ ಐಪಿಎಲ್ ಕುರಿತ ಶುಭಸುದ್ದಿಯೊಂದು ಹೊರಬಿದ್ದಿದೆ. ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಐಪಿಎಲ್ ವಿದೇಶದಲ್ಲಿ ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಆದರೆ ಇದೀಗ, ಈ ಬಾರಿ ಐಪಿಎಲ್ ಪಂದ್ಯಗಳು ನಮ್ಮ ಭಾರತದಲ್ಲೇ ನಡೆಯಲಿದೆ ಎಂದು ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರದ ಜೊತೆ ಈ ಕುರಿತು ಮಾತುಕತೆ ನಡೆಸಿದ್ದೇವೆ. ಲೋಕಸಭೆ ಚುನಾವಣೆಗೆ ವೇಳಾಪಟ್ಟಿ

ಕ್ರಿಕೆಟ್ ಪ್ರಿಯರಿಗೆ ಸಂತಸದ ಸುದ್ದಿ/ ಈ ಬಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್ Read More »

ಫೆ.18: ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಉಪ್ಪಿನಂಗಡಿಯಲ್ಲಿ ಬೃಹತ್ ಜನಾಂದೋಲನ ಸಭೆ

ಪ್ರಜಾಪ್ರಭುತ್ವ ವೇದಿಕೆ ಮತ್ತು ಸೌಜನ್ಯ ಹೋರಾಟ ಸಮಿತಿ ಉಪ್ಪಿನಂಗಡಿ ಇವುಗಳ ಸಂಯುಕ್ತಾಶ್ರಯದಲ್ಲಿ ಕು. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಫೆ. 18ರಂದು ಉಪ್ಪಿನಂಗಡಿಯಲ್ಲಿ ಬೃಹತ್ ಜನಾಂದೋಲನ ಸಭೆ ನಡೆಯಲಿದೆ. ಇಲ್ಲಿನ ಎಚ್.ಎಂ. ಅಡಿಟೋರಿಯಂನ ವಠಾರದಲ್ಲಿ ಅಪರಾಹ್ನ 3ಗಂಟೆಗೆ ಸಭೆ ನಡೆಯಲಿದ್ದು, ಕು. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಕ್ಕಾಗಿ ನ್ಯಾಯಾಂಗದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ಮರು ತನಿಖೆಗೆ ಒತ್ತಾಯಿಸಲು ಹಾಗೂ ನಿಜವಾದ ಆರೋಪಿಗಳಿಗೆ ಗಲ್ಲು ಶಿಕ್ಷೆ ಮತ್ತು ಆರೋಪಿಗಳನ್ನು

ಫೆ.18: ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಉಪ್ಪಿನಂಗಡಿಯಲ್ಲಿ ಬೃಹತ್ ಜನಾಂದೋಲನ ಸಭೆ Read More »

ಶಾಲೆ ಬಳಿ ದಾಂಧಲೆ| ಇಬ್ಬರು ಶಾಸಕರ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಮಂಗಳೂರಿನ ವೆಲೆನ್ಸಿಯಾದ ಸೇಂಟ್‌ ಜೆರೋಸಾ ಶಾಲೆಯ ಬಳಿ ಕಳೆದ ಸೋಮವಾರ ಪ್ರತಿಭಟನೆ ನಡೆಸಿದ ಸಂದರ್ಭ ‘ಜೈ ಶ್ರೀ ರಾಮ್’ ಎಂಬ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ ಹಾಗೂ ಜಿಲ್ಲೆಯಲ್ಲಿ ಶಾಂತಿ ಮತ್ತು ನೆಮ್ಮದಿಗೆ ಭಂಗ ತರಲು ಬಯಸಿದ ಆರೋಪದ ಮೇಲೆ ಶಾಸಕ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ.ವೈ.ಭರತ್‌ ಶೆಟ್ಟಿ, ವಿಶ್ವ ಹಿಂದೂ ಪರಿಷತ್‌ ಪ್ರಾಂತ ಸಹಕಾರ್ಯವಾಹ ಶರಣ್‌ ಪಂಪ್‌ವೆಲ್‌, ಪಾಲಿಕೆ ಸದಸ್ಯರಾದ ಸಂದೀಪ್‌ ಗರೋಡಿ ಮತ್ತು ಭರತ್‌ ಕುಮಾರ್‌ ಸೇರಿದಂತೆ ಹಲವರ

ಶಾಲೆ ಬಳಿ ದಾಂಧಲೆ| ಇಬ್ಬರು ಶಾಸಕರ ಮೇಲೆ ಎಫ್ಐಆರ್ Read More »

ಜನಸಾಮಾನ್ಯರಿಗೆ ಹೊರೆಯಾದ‌ ಮುದ್ರಾಂಕ ಶುಲ್ಕ| ದುಪ್ಪಟ್ಟು ದರಕ್ಕೆ ಕಂಗಾಲಾದ ಜನ|

ಸಮಗ್ರ ನ್ಯೂಸ್: ಬರದಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿ ರೈತರು ಕಂಗಾಲಾಗಿರುವ ನಡುವೆಯೇ ರಾಜ್ಯ ಸರ್ಕಾರ ಮುದ್ರಾಂಕ ಶುಲ್ಕ ಹೆಚ್ಚಿಸಿರುವುದು ರೈತ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ವಿವಿಧ ಸರ್ಕಾರಿ ಯೋಜನೆಗಳಿಗೆ ಮತ್ತು ಕೃಷಿ ಚಟುವಟಿಕೆಗೆ ಅಗತ್ಯವಿರುವ ಮುಚ್ಚಳಿಕೆ ಪತ್ರ, ಪ್ರಮಾಣಪತ್ರ, ವಿವಿಧ ರೀತಿಯ ಬಾಂಡ್​ಗಳನ್ನು ಖರೀದಿಸಲು ದುಪ್ಪಟ್ಟು ಹಣ ಪಾವತಿಸುವ ಅನಿವಾರ್ಯ ರೈತರಿಗೆ ಎದುರಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಲು ಸರ್ಕಾರ ಹಲವು ಸ್ಟ್ಯಾಂಪ್ ದರಗಳ ಏರಿಕೆ ಮಾಡಿದ್ದರ ಪರಿಣಾಮ ರೈತರು ಆರ್ಥಿಕ ಸಂಕಷ್ಟಕ್ಕೆ

ಜನಸಾಮಾನ್ಯರಿಗೆ ಹೊರೆಯಾದ‌ ಮುದ್ರಾಂಕ ಶುಲ್ಕ| ದುಪ್ಪಟ್ಟು ದರಕ್ಕೆ ಕಂಗಾಲಾದ ಜನ| Read More »

ಓ ನಲ್ಲ, ನೀ ನಲ್ಲ, ಕರಿಮಣಿ ಮಾಲೀಕ ನೀನಲ್ಲ| 25 ವರ್ಷಗಳ ನಂತರ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಲು ಕಾರಣ ಈ ಯುವಕ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾದಲ್ಲಿ ಕರಿಮಣಿ ಮಾಲೀಕ ನೀನಲ್ಲಾ ಸಾಂಗ್ ಇವತ್ತಿಗೆ ಸಾಕಷ್ಟು ಟ್ರೆಂಡ್ ಆಗಿದ್ದು ಪ್ರತಿಯೋಬ್ಬರ ಬಾಯಲ್ಲೇ ಕೇಳಲಿ ‘ಏನಿಲ್ಲಾ… ಏನಿಲ್ಲಾ….’ ಇಂದೊಂದೇ ಹಾಡು. ಹಾಗಿದ್ರೇ ಇದು ಯಾಕೆ ಇತ್ತೀಚಿನ ದಿನಗಳಲ್ಲಿ ಟ್ರೆಂಡ್ ಆಗಿದೆ.? ಸ್ಯಾಂಡಲ್‌ವುಡ್‌ನ ನಟ ಉಪ್ಪಿ ಉಪೇಂದ್ರ ಹಾಗೂ ನಟಿ ಪ್ರೇಮಾ ಅಭಿನಯದ ಸೂಪರ್ ಹಿಟ್ ಸಾಂಗ್ ಇದು. 1999ರಲ್ಲಿ ತೆರೆ ಕಂಡ ‘ಉಪೇಂದ್ರ’ ಸಿನಿಮಾದ ಈ ಹಾಡು 25 ವರ್ಷಗಳ ನಂತರ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಲು ಶುರುವಾಗಿದೆ. ಇದಕ್ಕೆ

ಓ ನಲ್ಲ, ನೀ ನಲ್ಲ, ಕರಿಮಣಿ ಮಾಲೀಕ ನೀನಲ್ಲ| 25 ವರ್ಷಗಳ ನಂತರ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಲು ಕಾರಣ ಈ ಯುವಕ Read More »