ಪ್ರಜ್ವಲ್ ರೇವಣ್ಣ ಬಳಿ ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರ ಪೋಟೋಗಳಿತ್ತು| ಕೋರ್ಟ್ ನಲ್ಲಿ ಸಾಕ್ಷ್ಯ ನುಡಿದ ಡ್ರೈವರ್ ಕಾರ್ತಿಕ್
ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಾರಿನ ಚಾಲಕ ಕಾರ್ತಿಕ್ ಸೋಮವಾರ(ಮೇ.26) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ 2000ಕ್ಕೂ ಹೆಚ್ಚು ಮಹಿಳೆಯರ ಛಾಯಾಚಿತ್ರಗಳು ಮತ್ತು ಸುಮಾರು 40-50 ವೀಡಿಯೊಗಳು ಇದ್ದವು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ವಲ್ ರೇವಣ್ಣ ತನ್ನ ಮೊಬೈಲ್ ಫೋನ್ ಅನ್ನು ಕಾರಿನಲ್ಲಿಯೇ ಬಿಟ್ಟು ಜಯನಗರದ ಗೆಳತಿ ಮನೆಯೊಳಗೆ ಹೋಗಿದ್ದ. ನನಗೆ […]









