Editor

ಸುಳ್ಯ: ಫೆ.1 ಮತ್ತು 2ರಂದು ವಳಲಂಬೆ ಜಾತ್ರೆ

ಸಮಗ್ರ ನ್ಯೂಸ್: ಸುಳ್ಯದ ಗುತ್ತಿಗಾರು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ. 1 ಮತ್ತು 2ರಂದು ಜಾತ್ರೋತ್ಸವ ಮತ್ತು ದೈವಗಳ ನೇಮೋತ್ಸವ ನಡೆಯಲಿದೆ. ಫೆ. 1ರಂದು ಬೆಳಿಗ್ಗೆ ಗಂಟೆ 8-00ಕ್ಕೆ-ಗಣಪತಿ ಹೋಮ, 9-00ಕ್ಕೆ – ಏಕಾದಶ ರುದ್ರಾಭಿಷೇಕ, 12-00ಕ್ಕೆ – ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಸಂಜೆ 6-00ರಿಂದ 7-00ರ ವರೆಗೆ ದೈವಗಳ ಭಂಡಾರ ತೆಗೆಯುವುದು, ಮತ್ತು ಚೆಂಡೆವಾದನ, ರಾತ್ರಿ ಗಂಟೆ 7-30ಕ್ಕೆ – ಮಹಾಪೂಜೆ ಮತ್ತು ಅನ್ನಸಂತರ್ಪಣೆ, 8-00ಕ್ಕೆ – ದೇವರ ಉತ್ಸವ

ಸುಳ್ಯ: ಫೆ.1 ಮತ್ತು 2ರಂದು ವಳಲಂಬೆ ಜಾತ್ರೆ Read More »

ಫೆ.29ರಿಂದ ಪೇಟಿಎಂ ವಹಿವಾಟಿಗೆ RBI ನಿರ್ಬಂಧ

ಸಮಗ್ರ ನ್ಯೂಸ್: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಗೆ ಆರ್‌ಬಿಐ ನಿರ್ಬಂಧ ವಿಧಿಸಿದೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದ್ದು, ಫೆಬ್ರವರಿ 29 ರ ನಂತರ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಠೇವಣಿಗಳನ್ನು ಸ್ವೀಕರಿಸದಂತೆ ಸೂಚಿಸಲಾಗಿದೆ. ಫೆಬ್ರವರಿ 29, 2024 ರ ನಂತರ ಯಾವುದೇ ಗ್ರಾಹಕರ ಖಾತೆ, ಪ್ರಿಪೇಯ್ಡ್ ಉಪಕರಣಗಳು, ವ್ಯಾಲೆಟ್‌ಗಳು ಮತ್ತು ಫಾಸ್ಟ್‌ಟ್ಯಾಗ್‌ಗಳಲ್ಲಿ ಠೇವಣಿ ಅಥವಾ ಟಾಪ್-ಅಪ್‌ಗಳನ್ನು ಸ್ವೀಕರಿಸದಂತೆ ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ Paytm ಪಾವತಿಗಳನ್ನು ನಿರ್ಬಂಧಿಸಿದೆ. ಫೆಬ್ರವರಿ 29, 2024 ರ ನಂತರ ಯಾವುದೇ ಬಡ್ಡಿ,

ಫೆ.29ರಿಂದ ಪೇಟಿಎಂ ವಹಿವಾಟಿಗೆ RBI ನಿರ್ಬಂಧ Read More »

ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ರೆ ಸಾಕು, ಲಕ್ಷಗಟ್ಟಲೆ ಹಣ ಗಳಿಸಬಹುದು!

ಸಮಗ್ರ ನ್ಯೂಸ್: ಇಂದಿನ ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಬಿಟ್ಟರೆ ಒಂದು ಇಂಚು ಕೂಡ ಕದಿಯಲು ಯಾರಿಂದಲೂ ಸಾಧ್ಯವಿಲ್ಲ. ಮೊಬೈಲ್ ಮಾಯೆ ಜನರನ್ನು ಸ್ವಲ್ಪ ಕಾಲ ತನ್ನ ಹಿಡಿತದಲ್ಲಿ ಇಟ್ಟುಕೊಂಡಿರುವುದಕ್ಕೆ ಇದೇ ಸಾಕ್ಷಿ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಮೊಬೈಲ್ ಬೇಕು ಎನ್ನುವ ಆಸೆ ಹೆಚ್ಚಿದೆ. ನೀವು ಸ್ವಲ್ಪ ಸಮಯದವರೆಗೆ ನಿಮ್ಮ ಮೊಬೈಲ್ ಫೋನ್‌ನಿಂದ ದೂರವಿರಲು ಸಾಧ್ಯವಾದರೆ, ನೀವು ಐಸ್ಲ್ಯಾಂಡಿಕ್ ಮೊಸರು ಕಂಪನಿಯ ಸವಾಲನ್ನು ಸ್ವೀಕರಿಸಬಹುದು. ಡಿಜಿಟಲ್ ಡಿಟಾಕ್ಸ್ ಪ್ರೋಗ್ರಾಂ ಅನ್ನು ನಡೆಸುತ್ತಿರುವ ಮೊಸರು ಬ್ರ್ಯಾಂಡ್ ಸ್ಮಾರ್ಟ್‌ಫೋನ್ ಇಲ್ಲದೆ

ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ರೆ ಸಾಕು, ಲಕ್ಷಗಟ್ಟಲೆ ಹಣ ಗಳಿಸಬಹುದು! Read More »

ಕನ್ನಡ ನಾಮಫಲಕ ಸುಗ್ರೀವಾಜ್ಞೆ ವಾಪಸ್

ಸಮಗ್ರ ನ್ಯೂಸ್: ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ. ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್‌ ಸ್ಪಷ್ಟಪಡಿಸಿದ್ದಾರೆ. ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ ನಿಗದಿಯಾಗಿದೆ. ಅಧಿವೇಶನದಲ್ಲೇ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆಯುವಂತೆ ಸರ್ಕಾರಕ್ಕೆ ಸೂಚಿಸಿ ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್‌ ಮಾಧ್ಯಮ ಪ್ರಕಟಣೆ

ಕನ್ನಡ ನಾಮಫಲಕ ಸುಗ್ರೀವಾಜ್ಞೆ ವಾಪಸ್ Read More »

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆಗೆ ಅವಕಾಶ| ಬಹುದೊಡ್ಡ ಗೆಲುವು ಕಂಡ ಹಿಂದೂಪರ ಹೋರಾಟಗಾರರು

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿಯಲ್ಲಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಈ ಮೂಲಕ ಹಿಂದುಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಈ ನಡುವೆ ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ.

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆಗೆ ಅವಕಾಶ| ಬಹುದೊಡ್ಡ ಗೆಲುವು ಕಂಡ ಹಿಂದೂಪರ ಹೋರಾಟಗಾರರು Read More »

ಬಿಗ್ ಬಾಸ್ ವಿನ್ನರ್ ರೋಡ್ ಶೋ | ಅಭಿಮಾನಿಗಳಿಂದ ರೋಡ್ ಬ್ಲಾಕ್

ಸಮಗ್ರ ನ್ಯೂಸ್: ಕಿರುತೆರೆ ಇತಿಹಾಸದಲ್ಲೇ ಅತೀ ದೊಡ್ಡ ಶೋ ಬಿಗ್ ಬಾಸ್ ಕನ್ನಡ ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಮುಕ್ತಾಯವಾಗಿದೆ. ಕನ್ನಡದಲ್ಲಿ ಕಾರ್ತಿಕ್ ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ, ಹಿಂದಿಯಲ್ಲಿ ಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಟ್ರೋಫಿ ಪಡೆದಿದ್ದಾರೆ. ಬಿಗ್ ಬಾಸ್ ನಿಂದ ಬಂದ ನಂತರ ಮುನಾವರ್ ಫಾರೂಕಿ ಅವರ ರೋಡ್ ಶೋ ಮಾಡಿದ್ದು, ಲಕ್ಷಾಂತರ ಅಭಿಮಾನಿಗಳು ಅದಕ್ಕೆ ಭಾಗಿಯಾಗಿದ್ದಾರೆ. ಮುನಾವರ್ ಅವರನ್ನು ಸ್ವಾಗತಿಸುವುದಕ್ಕಾಗಿಯೇ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಸಿಡಿಸಲಾಗಿದೆ. ಗಂಟೆಗಟ್ಟಲ್ಲೇ ರಸ್ತೆಯಲ್ಲಿ ಬ್ಲಾಕ್

ಬಿಗ್ ಬಾಸ್ ವಿನ್ನರ್ ರೋಡ್ ಶೋ | ಅಭಿಮಾನಿಗಳಿಂದ ರೋಡ್ ಬ್ಲಾಕ್ Read More »

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್| ರಾಜ್ಯದ ಹಲವೆಡೆ ದಾಳಿ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷಾ ಅವರ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ,ಸಂಬಂಧಿಕರ ಮನೆಗಳು, ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ,

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್| ರಾಜ್ಯದ ಹಲವೆಡೆ ದಾಳಿ Read More »

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಸೇವಾವಧಿ ಇಂದಿಗೆ ಮುಕ್ತಾಯ

ಸಮಗ್ರ ನ್ಯೂಸ್: ನಮ್ಮ ನಾಡು ಕಂಡ ಮಹಾನ್ ವೈದ್ಯರಲ್ಲಿ ಡಾ ಮಂಜುನಾಥ ಒಬ್ಬರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ. ಎನ್. ಮಂಜುನಾಥ್ ಅವರ ಸೇವಾ ಅವಧಿ ಇಂದಿಗೆ ಮುಕ್ತಾಯವಾಗುತ್ತಿದ್ದು ಇಂದು ಅವರಿಗೆ ಕಚೇರಿಯ ಸಿಬ್ಬಂದಿ ವರ್ಗ ಭಾವಪೂರ್ಣ ವಿದಾಯ ಕೋರಿದ್ದಾರೆ. ಡಾ. ಸಿ. ಎನ್. ಮಂಜುನಾಥ್ ಅವರು 2007ರಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2023ರ ಜುಲೈನಲ್ಲಿಯೇ ಅವರ ಸೇವಾವಧಿ ಮುಕ್ತಾಯಗೊಂಡಿತ್ತು. ಆಸ್ಪತ್ರೆಯ

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಸೇವಾವಧಿ ಇಂದಿಗೆ ಮುಕ್ತಾಯ Read More »

ಬೆಂಗಳೂರಿನಲ್ಲಿ ಮಾಜಿ‌ ಪ್ರಧಾನಿ ದಿ.ರಾಜೀವ್ ಗಾಂಧಿ ಪ್ರತಿಮೆ ಅನಾವರಣಕ್ಕೆ ಸಿದ್ಧ| ರಾಜ್ಯದ ಅತೀ ದೊಡ್ಡ ಪ್ರತಿಮೆಗೆ ಬಿಜೆಪಿಯಿಂದ ವಿರೋಧ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ದಿವಂಗತ ರಾಜೀವ್‌ ಗಾಂಧಿ ಅವರ 15 ಅಡಿ ಎತ್ತರದ ಕಂಚಿನ ಪ್ರತಿಮೆ ಶೇಷಾದ್ರಿಪುರದಲ್ಲಿ ಅನಾವರಣಗೊಳ್ಳಲು ಸಿದ್ಧವಾಗಿದೆ.ರಾಜ್ಯದಲ್ಲೇ ಅತಿ ಎತ್ತರದ ರಾಜೀವ್‌ ಗಾಂಧಿ ಪ್ರತಿಮೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಲಿದೆ. ಜಂಕ್ಷನ್‌ಗಳ ಅಭಿವೃದ್ಧಿ ಯೋಜನೆಯಡಿ ಬಿಬಿಎಂಪಿ ನಗರದಲ್ಲಿ 25 ಜಂಕ್ಷನ್‌ಗಳನ್ನು ಅಭಿವೃದ್ಧಿ ಮಾಡುತ್ತಿದ್ದು, ಶೇಷಾದ್ರಿಪುರ, ಪ್ಲಾಟ್‌ಫಾರ್ಮ್‌ ರಸ್ತೆ ಹಾಗೂ ಸಂಪಿಗೆ ರಸ್ತೆ ಸೇರುವ ಜಂಕ್ಷನ್‌ನಲ್ಲಿ ‘ರಾಜೀವ್‌ ಗಾಂಧಿ ಸ್ಕ್ವೇರ್‌’ ನಿರ್ಮಿಸಲಾಗುತ್ತಿದೆ. ‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಮಾಜಿ‌ ಪ್ರಧಾನಿ ದಿ.ರಾಜೀವ್ ಗಾಂಧಿ ಪ್ರತಿಮೆ ಅನಾವರಣಕ್ಕೆ ಸಿದ್ಧ| ರಾಜ್ಯದ ಅತೀ ದೊಡ್ಡ ಪ್ರತಿಮೆಗೆ ಬಿಜೆಪಿಯಿಂದ ವಿರೋಧ Read More »

ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ| ಫೆ.1ರಂದು‌ ಮಧ್ಯಂತರ ಬಜೆಟ್ ಮಂಡನೆ

ಸಮಗ್ರ ನ್ಯೂಸ್: ಸಂಸತ್ತಿನ ಬಜೆಟ್‌ ಅಧಿವೇಶನ ಬುಧವಾರ(ಜ.31) ಆರಂಭವಾಗಲಿದ್ದು, ಲೋಕಸಭಾ ಚುನಾವಣೆಗೆ ಮುನ್ನ ಮಧ್ಯಂತರ ಬಜೆಟ್‌ ಮಂಡಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಜ್ಜಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಭಾಷಣ ಮಾಡಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಗುರುವಾರ ಮಧ್ಯಂತರ ಬಜೆಟ್‌ ಮಂಡಿಸಲಿದ್ದಾರೆ. ಈ ಬಜೆಟ್‌ನಲ್ಲಿ ದೊಡ್ಡ ಘೋಷಣೆಗಳು ಇರುವುದಿಲ್ಲ ಎಂದು ನಿರ್ಮಲಾ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ನೂತನ

ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ| ಫೆ.1ರಂದು‌ ಮಧ್ಯಂತರ ಬಜೆಟ್ ಮಂಡನೆ Read More »